Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಇಂದು ಸಾಗರದಲ್ಲಿ ಖಾಸಗಿ ಬಸ್ ಒಂದು ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿರೋ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಳೆಬಸ್ ನಿಲ್ದಾಣದ ಹತ್ತಿರ ಗಜಾನನ ಸಾರಿಗೆ ಸಂಸ್ಥೆಗೆ ಸೆರಿದ KA 15 2944 ಬಸ್ ಪ್ರಯಾಣಿಕರನ್ನು ಇಳಿಸಿದ ನಂತರದಲ್ಲಿ ಬ್ರೇಕ್ ಪೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿದೆ. ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ನಿಲ್ದಾಮದ ಬಳಿಯಲ್ಲಿ ನಿಲ್ಲಿಸಿದ್ದಂತ ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿದ್ದಾವೆ. ಇಂದು 5.50ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸರಣಿ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/railway-passengers-note-special-train-service-between-mysuru-and-bhubaneswar/ https://kannadanewsnow.com/kannada/how-is-pm-modis-horoscope-from-ugadi-here-is-the-prediction-made-by-famous-astrologers/
ಬಂಗಳೂರು: ಬೇಸಿಗೆಯಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತೆರವುಗೊಳಿಸಲು ಬೇಡಿಕೆಯ ಮೇರೆಗೆ ಮೈಸೂರು-ಭುವನೇಶ್ವರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲಾಗುವುದು. ಅವುಗಳ ಮಾಹಿತಿ ಈ ಕೆಳಗಿನಂತಿವೆ: 1. ಏಪ್ರಿಲ್ 9 ರಂದು ರೈಲು ಸಂಖ್ಯೆ 06215 ಮೈಸೂರು-ಭುವನೇಶ್ವರ ವಿಶೇಷ ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ಬೆಳಿಗ್ಗೆ 4:15 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 10:40 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. 2. ಏಪ್ರಿಲ್ 10 ರಂದು ರೈಲು ಸಂಖ್ಯೆ 06216 ಭುವನೇಶ್ವರ-ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಭುವನೇಶ್ವರದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಸಂಜೆ 07:15 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ವಿಶೇಷ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ವೈಟ್ ಫೀಲ್ಡ್, ಬಂಗಾರಪೇಟೆ, ಜೋಲಾರಪೆಟ್ಟೈ , ಕಟಪಾಡಿ, ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ತೆನಾಲಿ, ವಿಜಯವಾಡ, ಎಲೂರು, ರಾಜಮಂಡ್ರಿ, ಸಾಮಲಕೋಟೆ, ದುವ್ವಾಡ, ಕೊಟ್ಟವಲಸಾ, ವಿಜಯನಗರಂ, ಶ್ರೀಕಾಕುಳಂ ರೋಡ, ಪಾಲಸಾ, ಬ್ರಹ್ಮಪುರ ಮತ್ತು ಖುರ್ದಾ ರೋಡ ನಿಲ್ದಾಣಗಳಲ್ಲಿ ನಿಲುಗಡೆ…
ಬೆಂಗಳೂರು: ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಬರ ಪರಿಹಾರದ ವಿಷಯದಲ್ಲಿ ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದಿದ್ದಾರೆ. ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ…
ಬೆಂಗಳೂರು: BJP ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ರೂ.10,000 ಕೋಟಿ ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರ್ಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ಈ ರೀತಿ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿರಲಿಲ್ಲ ಎಂದಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಮತಯಾಚನೆ ಮಾಡಿದಂತ ವೇಳೆಯಲ್ಲಿ ಭದ್ರತಾ ವೈಫಲ್ಯಕ್ಕೆ ಕಾರಣವಾಗಿದೆ. ಗನ್ ಇಟ್ಕೊಂಡು ಬಂದಂತ ವ್ಯಕ್ತಿಯೊಬ್ಬ ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿ ತೆರಳಿರೋ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಇಂದು ಸಿಎಂ ಸಿದ್ಧರಾಮಯ್ಯ ಪ್ರಚಾರ ನಡೆಸಿದರು. ಬೆಂಗಳೂರಿನ ಭೈರಸಂದ್ರದಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಭದ್ರತಾ ವೈಫಲ್ಯವೇ ನಡೆದಿದೆ. ಸಿಎಂ ಸಿದ್ಧರಾಮಯ್ಯ ಕ್ಯಾಂಟರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ ಕ್ಯಾಂಟರ್ ಏರಿ ಬಂದಂತ ವ್ಯಕ್ತಿಯೊಬ್ಬನ ಸೊಂಟದಲ್ಲಿ ಗನ್ ಇತ್ತು ಎಂಬುದಾಗಿ ತಿಳಿದು ಬಂದಿದೆ. ಹೀಗೆ ಗನ್ ಇಟ್ಕೊಂಡು ಬಂದಂತ ವ್ಯಕ್ತಿಯೊಬ್ಬ ಸಿಎಂ ಸಿದ್ಧರಾಮಯ್ಯಗೆ ಹಾರ ಹಾಕಿ ತೆರಳಿರೋದಾಗಿ ಹೇಳಲಾಗುತ್ತಿದೆ. ಹೀಗೆ ಚುನಾವಣಾ ಪ್ರಚಾರದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಗನ್ ಇಟ್ಕೊಂಡು ಬಂದು ಹಾರ ಹಾಕಿದ ವ್ಯಕ್ತಿ ಯಾರು.?…
ಬೆಂಗಳೂರು: ಕೆಪಿಸಿಸಿ ರಾಜ್ಯ ಮಟ್ಟದ ಇಂಡಿಯಾ ಬ್ಲಾಕ್ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹಾಗೂ ಸಂಚಾಲಕರಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದೇಶ ಮಾಡಿದ್ದಾರೆ. ಅದರಲ್ಲಿ ದೇಶದ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ 2024ರ ಲೋಕಸಭಾ ಚುನಾವಣೆ ಅತ್ಯಂತ ಮಹತ್ತರ ಚುನಾವಣೆಯಾಗಿರುತ್ತದೆ ಎಂದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಪರಸ್ಪರ ಸಹಕಾರ ಮತ್ತು ಸಮನ್ವಯತೆಯೊಂದಿಗೆ ಚುನಾವಣೆಯನ್ನು ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಕರ್ನಾಟಕದ ಎರಡು ಹಂತದ ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಒಟ್ಟಾಗಿ ನಡೆಸುವ ದೃಷ್ಟಿಯಿಂದ ಕೆಳ ಹಂತದಲ್ಲಿ ಡಿಸಿಸಿ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿತ್ರ ಪಕ್ಷಗಳೊಂದಿಗೆ ಸಮನ್ವಯ ಸಮಿತಿಗಳನ್ನು ರಚಿಸಿಕೊಂಡು, ಲೋಕಸಭಾ ಚುನಾವಣೆಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೆಪಿಸಿಸಿ ನಿರ್ಧರಿಸಿದೆ…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನ್ಯೂನತೆಗಳನ್ನು ಮುಚ್ಚಿಡಲು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಆಗದೆ ಇರುವುದನ್ನು ಮುಚ್ಚಿಟ್ಟುಕೊಳ್ಳಲು ಹಾಗೂ ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಕೊಡಲು ಆಗದೆ ಇರುವುದನ್ನು ಮುಚ್ಚಿಡಲು ಕೇಂದ್ರ ಸರಕಾರದ ವಿರುದ್ಧ ಅನುದಾನ ಕೊಡುತ್ತಿಲ್ಲ ಎಂದು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆರೋಪಿಸಿದರು. ಮಂಗಳೂರಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಇವರು ಸರಕಾರದ ದುಡ್ಡಿನಲ್ಲಿ ದೆಹಲಿಯಲ್ಲಿ ಸತ್ಯಾಗ್ರಹ ಮಾಡಿದ್ದರು. ಕರ್ನಾಟಕಕ್ಕೆ ಬರಬೇಕಾದ ತೆರಿಗೆ ಪಾಲಿನ ಕುರಿತು ಕಾಂಗ್ರೆಸ್ ಪಕ್ಷದ ರಾಜ್ಯಸಭಾ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರಶ್ನೆ ಮಾಡಿದ್ದರು. ಅಂಕಿಅಂಶಗಳ ಸಹಿತ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಉತ್ತರ ಕೊಟ್ಟಿದ್ದರ ಕುರಿತು ಗಮನ ಸೆಳೆದರು. 2004ರಿಂದ 2014ರ ನಡುವಿನ ಯುಪಿಎ ಅವಧಿಯಲ್ಲಿ 83 ಸಾವಿರ ಕೋಟಿ ಹಾಗೂ 2014ರಿಂದ ಕಳೆದ…
ಬೆಂಗಳೂರು: ಇಂದು ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ ವಾಣಿ ಶಿವರಾಮ್ ಅವರು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇಂದು ಕ್ವೀನ್ಸ್ ರಸ್ತೆಯಲ್ಲಿರುವಂತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ವಾಣಿ ಶಿವರಾಮ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಇತ್ತೀಚಿಗೆ ನಿಧನರಾಗಿದ್ದ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಆಸೆಯಂತೆ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು. ಕಾಂಗ್ರೆಸ್ ಸೇರುವ ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ. ಅಂದಹಾಗೇ ಕೆ.ಶಿವರಾಮ್ ಅವರು ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೀಗ ಅವರ ಪತ್ನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. https://kannadanewsnow.com/kannada/breaking-sc-stays-hc-order-for-class-5-8-9-11-board-exams/ https://kannadanewsnow.com/kannada/important-information-for-primary-and-secondary-school-teachers-in-the-state-written-exam-for-promotion-postponed/
ಬೆಂಗಳೂರು: ಕಾಂಗ್ರೆಸ್ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮತ್ತೆ ಬಿಗ್ ಶಾಕ್ ನೀಡಿದೆ. ಅದೇ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ನೀಡಲಾಗಿತ್ತು. ಅಲ್ಲದೇ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರಕರಣ ರದ್ದುಗೊಳಿಸೋದಕ್ಕೆ ನಕಾರ ವ್ಯಕ್ತ ಪಡಿಸಿದೆ. ಅಲ್ಲದೇ ಪ್ರಕರಣ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಇದಲ್ಲದೇ ಸಿಬಿಐ ಪರ ಅಭಿಯೋಜಕರಿಗೆ ಹೈಕೋರ್ಟ್ ಸಾಕ್ಷ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. https://kannadanewsnow.com/kannada/breaking-sc-stays-hc-order-for-class-5-8-9-11-board-exams/ https://kannadanewsnow.com/kannada/breaking-aishwarya-rajinikanth-dhanush-officially-file-for-divorce/
ಬೆಂಗಳೂರು: ನಗರದಲ್ಲಿ ಘೋರ ಘಟನೆಯೊಂದು ನಡೆದಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಮಹಡಿಯ ಮೇಲಿನಿಂದ ಬಿದ್ದು, ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಹೌದು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯ ಪ್ರತಿಸ್ಠಿತ ಹೋಟೆಲ್ ನ 19ನೇ ಮಹಡಿಯಿಂದ ಬಿದ್ದು, ವ್ಯಕ್ತಿಯೊಬ್ಬ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರಿನ ಮಾಧವನಗರದಲ್ಲಿರುವಂತ ಹೋಟೆಲ್ ಮೇಲಿನ ಮಹಡಿಯಿಂದ ಬಿದ್ದು, ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದಂತ ವ್ಯಕ್ತಿಯ ಬಗ್ಗೆ ಯಾರು ಎನ್ನುವುದು ತಿಳಿದು ಬಂದಿಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಆಕಸ್ಮಾತಾಗಿ ಆಯತಪ್ಪಿ ಮಹಡಿಯಿಂದ ಕೆಳಗೆ ಬಿದ್ದಿದ್ದಾನೋ ಎಂಬುದು ತಿಳಿದು ಬಂದಿಲ್ಲ. ಈ ವಿಷಯ ತಿಳಿದು ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/breaking-sc-stays-hc-order-for-class-5-8-9-11-board-exams/ https://kannadanewsnow.com/kannada/breaking-aishwarya-rajinikanth-dhanush-officially-file-for-divorce/