Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಶಿವಮೊಗ್ಗ: “ಒಂದು ಊರು ಅಭಿವೃದ್ಧಿಯಾಗಿದೆ ಎಂದರೆ ಅಲ್ಲಿನ ರಸ್ತೆ, ಕಟ್ಟಡಗಳಷ್ಟೇ ಸಾಲದು; ಅಲ್ಲಿನ ಶೈಕ್ಷಣಿಕ ವ್ಯವಸ್ಥೆಯೂ ಪ್ರಗತಿಯ ಮಾನದಂಡವಾಗಿರುತ್ತದೆ. ಈ ನಿಟ್ಟಿನಲ್ಲಿ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜು ಕಳೆದ ಐದು ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿದೆ,” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ, ಪ್ರಾಚಾರ್ಯ ಸತ್ಯನಾರಾಯಣ ಕೆ.ಸಿ. ಅವರ ಕುರಿತಾದ ‘ಪುರದ ಪುಣ್ಯ’ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಹಳೆಯ ವಿದ್ಯಾರ್ಥಿಯ ಹೆಮ್ಮೆ ತಮ್ಮ ವಿದ್ಯಾರ್ಥಿ ಜೀವನವನ್ನು ಸ್ಮರಿಸಿದ ಶಾಸಕರು, “ನಾನು ಈ ಕಾಲೇಜಿನ ಹಳೆಯ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಸರ್ಕಾರಿ ಜ್ಯೂನಿಯರ್ ಕಾಲೇಜು ಅನೇಕರಿಗೆ ಶೈಕ್ಷಣಿಕ ನೆಲೆ ನೀಡಿದೆ. ವಿದ್ಯಾರ್ಥಿಗಳ ಜ್ಞಾನಾಸಕ್ತಿಯನ್ನು ಹೆಚ್ಚಿಸುವಲ್ಲಿ ಈ ಸಂಸ್ಥೆಯ ಸಾರ್ಥಕ ಸೇವೆ ಅನನ್ಯವಾದುದು,” ಎಂದರು. ‘ದೊಡ್ಡಿ’ಯಿಂದ ‘ರಾಜ್ಯಕ್ಕೆ ಮಾದರಿ’ಯಾದ ಕಾಲೇಜು ಒಂದು…
ಶಿವಮೊಗ್ಗ: ದೇಶಾದ್ಯಂತ ವ್ಯಾಪಿಸುತ್ತಿರುವ ಲವ್ ಜಿಹಾದ್, ಕಾರ್ಪೋರೇಟ್ ಜಿಹಾದ್ ಹಾಗೂ ಇಸ್ಲಾಂ ಪ್ರೇರಿತ ಮತಾಂತರ ಕೃತ್ಯಗಳನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶುಕ್ರವಾರ ಸಾಗರ ನಗರದ ಹೋಟೆಲ್ ವೃತ್ತದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ‘ಎನ್.ಐ.ಎ ತನಿಖೆಗೆ ಒಪ್ಪಿಸಿ’: ಸಂತೋಷ್ ಶಿವಾಜಿ ಆಗ್ರಹ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಜರಂಗ ದಳದ ಜಿಲ್ಲಾ ಸಂಚಾಲಕ ಸಂತೋಷ್ ಶಿವಾಜಿ, “ಲವ್ ಜಿಹಾದ್, ಕಾರ್ಪೋರೇಟ್ ಜಿಹಾದ್ ಮತ್ತು ಇಸ್ಲಾಂ ಪ್ರೇರಿತ ಭಯೋತ್ಪಾದನೆಯು ದೇಶದ ಶಾಂತಿಯನ್ನು ಕದಡುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ಜಿಮ್ ಟ್ರೈನರ್ ಕೃತ್ಯ ಹಾಗೂ ನಾಸಿಕ್‌ನ ಕಾರ್ಪೋರೇಟ್ ಜಿಹಾದ್ ಪ್ರಕರಣಗಳು ಸಾವಿರಾರು ಹಿಂದೂ ಯುವತಿಯರ ಬದುಕನ್ನು ಬೀದಿಪಾಲು ಮಾಡಿವೆ. ಇಂತಹ ಗಂಭೀರ ಪ್ರಕರಣಗಳನ್ನು ಕೇಂದ್ರ ಸರ್ಕಾರವು ಎನ್.ಐ.ಎ (NIA) ತನಿಖೆಗೆ ಒಪ್ಪಿಸಬೇಕು,” ಎಂದು ಆಗ್ರಹಿಸಿದರು. ಇದೇ ವೇಳೆ ಸಾಗರದ ಜನತೆಗೆ ಮನವಿ ಮಾಡಿದ ಅವರು, “ಸ್ಥಳೀಯವಾಗಿ ಯಾವುದಾದರೂ ಹಿಂದೂ ಯುವತಿಯರು ಅಂತಹ ಸಂಚುಗಳಲ್ಲಿ ಸಿಲುಕಿಕೊಂಡಿದ್ದರೆ ತಕ್ಷಣ…
ಕೊಪ್ಪಳ: ಸಮಾಜಕ್ಕೆ ದಾರಿದೀಪವಾಗಬೇಕಾದ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಆದರೆ, ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನಲ್ಲಿ ಶಿಕ್ಷಕನೊಬ್ಬ ತನ್ನ ನೈತಿಕತೆಯನ್ನು ಗಾಳಿಗೆ ತೂರಿ, ಸ್ವಂತ ಅತ್ತೆ ಮಗಳನ್ನೇ ನಂಬಿಸಿ ಮೋಸ ಮಾಡಿದ ಘಟನೆ ಇಡೀ ಶಿಕ್ಷಕ ಸಮುದಾಯವೇ ತಲೆತಗ್ಗಿಸುವಂತೆ ಮಾಡಿದೆ. ಪ್ರೀತಿ, ದೈಹಿಕ ಬಳಕೆ ಮತ್ತು ನಿಶ್ಚಿತಾರ್ಥದ ನಂತರವೂ ಮತ್ತೊಬ್ಬಳ ಜೊತೆ ಗುಟ್ಟಾಗಿ ಮದುವೆಯಾಗಿ ನಂಬಿಕೆಗೆ ದ್ರೋಹ ಬಗೆದಿದ್ದಾನೆ ಈ ಶಿಕ್ಷಕ. ಪ್ರೀತಿಯ ಹೆಸರಲ್ಲಿ ಐದು ವರ್ಷಗಳ ಕಾಲ ಶೋಷಣೆ ಹುಲಸನಟ್ಟಿ ಮೂಲದ ಯುವತಿ ಕರೆಮ್ಮಾ ಕೊಪ್ಪಳದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ಕಾಲದಿಂದಲೂ ಬಸವರಾಜ ಹರಿಜನ್ ಎಂಬಾತನೊಂದಿಗೆ ಸಂಪರ್ಕದಲ್ಲಿದ್ದಳು. ಬಸವರಾಜ ಆಕೆಗೆ ಸ್ವಂತ ಅತ್ತೆ ಮಗನಾಗಿದ್ದರಿಂದ, ಆತನ ಮೇಲೆ ಯುವತಿಗೆ ಅಪಾರ ನಂಬಿಕೆಯಿತ್ತು. “ಸರ್ಕಾರಿ ಕೆಲಸ ಸಿಕ್ಕ ತಕ್ಷಣ ನಿನ್ನನ್ನೇ ಮದುವೆಯಾಗುತ್ತೇನೆ” ಎಂದು ನಂಬಿಸಿದ್ದ ಬಸವರಾಜ, ಕಳೆದ ಐದು ವರ್ಷಗಳಿಂದ ಆಕೆಯನ್ನು ಪ್ರೀತಿಸುವ ನಾಟಕವಾಡಿ ದೈಹಿಕವಾಗಿ ಬಳಸಿಕೊಂಡಿದ್ದ ಎನ್ನಲಾಗಿದೆ. ಅದ್ದೂರಿ ನಿಶ್ಚಿತಾರ್ಥದ ನಂತರ ಬದಲಾದ ಬುದ್ಧಿ ಇವರಿಬ್ಬರ ಸಂಬಂಧ…
ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದರು. ಶ್ವಾಸಕೋಶದ ಸೋಂಕು ಉಲ್ಬಣ ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ. ಸುಧಾಕರ್ ಅವರಿಗೆ ತದನಂತರ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಮೊದಲು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ ಕಾರಣ, ನಾಲ್ಕು ದಿನಗಳ ಹಿಂದೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಪ್ರಸ್ತುತ ಸೋಂಕು ತೀವ್ರವಾಗಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ವೈದ್ಯರೊಂದಿಗೆ ಸಿಎಂ ಸಮಾಲೋಚನೆ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಸಚಿವರ ಆರೋಗ್ಯದ ಪ್ರಗತಿ…
ಬೆಂಗಳೂರು: ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ, ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ನೇತೃತ್ವದ ನಿಯೋಗ ಕೃತಜ್ಞತೆ ಅರ್ಪಿಸಿತು. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ತಿಮ್ಮಾಪೂರರವರು ಹಾಗೂ ನೂರಾರು ದಲಿತ ಎಡ ಸಮುದಾಯದ ನಾಯಕರು, ಮೂವತ್ತು ವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕೆ ಸಿಹಿ ತಿನ್ನಿಸಿ ಧನ್ಯವಾದ ತಿಳಿಸಿದರು. ನಮ್ಮ ಒಳ ಮೀಸಲಾತಿ ಹೋರಾಟ 30-40 ವರ್ಷಗಳದ್ದು. ಹಲವು ಸರ್ಕಾರಗಳು, ಮುಖ್ಯಮಂತ್ರಿಗಳಿಂದ ಸಾಧ್ಯವಾಗದ ಕೆಲಸವನ್ನ ಸನ್ಮಾನ್ಯ ಸಿದ್ದರಾಮಯ್ಯರವರು ಮಾಡಿ ತೋರಿಸಿದ್ದಾರೆ. ಸಿದ್ದರಾಮಯ್ಯ ಸಾಹೇಬರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಸರ್ವ ಜನಾಂಗ ಒಪ್ಪುವಂತೆ ಮಾಡಿ, ಎಲ್ಲಾ ಕ್ಯಾಬಿನೆಟ್ ಸಚಿವರ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ನಮ್ಮ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಮ್ಮ ಇಡೀ ಸಮುದಾಯ ಸಿದ್ದರಾಮಯ್ಯರನ್ನ ನೆನಪಿಟ್ಟುಕೊಳ್ಳಲಿದೆ. ಇಡೀ ಸಮುದಾಯ ಅವರಿಗೆ ಕೃತಜ್ಞರಾಗಿಲಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.
ಶಿವಮೊಗ್ಗ: ಸೊರಬ ತಾಲ್ಲೂಕಿನ ಶಂಕರಿಕೊಪ್ಪ ಗ್ರಾಮದಲ್ಲಿನ ಇನಾಂ ಭೂಮಿಯನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯು ಗಂಭೀರ ಆರೋಪ ಮಾಡಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದ ದಲಿತ ಮುಖಂಡರ ಸಭೆಯಲ್ಲಿ ಮಾತನಾಡಿದ ಸಮಿತಿಯ ತಾಲ್ಲೂಕು ಸಂಚಾಲಕ ಮಹೇಶ್ ಶಕುನವಳ್ಳಿ ಅವರು, ಗ್ರಾಮದ ಸರ್ವೆ ನಂಬರ್ 3, 4, 6, 30 ಮತ್ತು 47ರಲ್ಲಿನ ಸುಮಾರು 25 ಎಕರೆ ಇನಾಂ ಭೂಮಿಯು ಬಡ ರೈತರ ಸತತ ಹೋರಾಟದ ಫಲವಾಗಿ ಅವರಿಗೆ ಲಭಿಸಿತ್ತು. ಆದರೆ, ರಮೇಶ್ ನಾಡಿಗ್ ಎಂಬ ವ್ಯಕ್ತಿ ಇದು ತನ್ನ ಸ್ವಂತ ಜಮೀನು ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ರೈತರಿಗೆ ದ್ರೋಹ ಬಗೆದಿದ್ದಾರೆ ಎಂದು ದೂರಿದ್ದಾರೆ. ಈ ಅಕ್ರಮದಲ್ಲಿ ಸಾಗರ ಉಪ ವಿಭಾಗಾಧಿಕಾರಿ (ಎಸಿ) ವಿರೇಶಕುಮಾರ್ ಅವರ ಪಾತ್ರವಿದೆ ಎಂದು ಮಹೇಶ್ ನೇರ ಆರೋಪ ಮಾಡಿದ್ದಾರೆ. ರೈತರಿಗೆ ಭೂಮಿ ಮಂಜೂರು ಮಾಡುವ ಪ್ರಕ್ರಿಯೆ ನಡೆಯುತ್ತಿದ್ದಾಗ, ನಕಲಿ ಭೂ ಮಾಲೀಕರು ನೀಡಿದ ಆಮಿಷಕ್ಕೆ ಒಳಗಾದ ಎಸಿ…
ಬೆಂಗಳೂರು: ರಾಜ್ಯದ ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ಮೊದಲನೇ ತ್ರೈಮಾಸಿಕದ ಗೌರವಧನವನ್ನು ಪಾವತಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸುದ್ದಿಯ ಮುಖ್ಯಾಂಶಗಳು: ಅನುದಾನ ಬಿಡುಗಡೆ: 2026-27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅಂದರೆ ಏಪ್ರಿಲ್‌ನಿಂದ ಜೂನ್ ತಿಂಗಳವರೆಗಿನ ಗೌರವಧನ ಪಾವತಿಗೆ ಸರ್ಕಾರ ಸಮ್ಮತಿ ಸೂಚಿಸಿದೆ. ಬಿಡುಗಡೆಯಾದ ಮೊತ್ತ: ಒಟ್ಟು ₹6300.00 ಲಕ್ಷ (ಅರವತ್ತಮೂರು ಕೋಟಿ ರೂಪಾಯಿ) ಅನುದಾನವನ್ನು ಈ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆ. ಲೆಕ್ಕ ಶೀರ್ಷಿಕೆ: ಈ ಹಣವನ್ನು ಲೆಕ್ಕ ಶೀರ್ಷಿಕೆ ‘2211-00-103-0-11-324’ ರ ಅಡಿಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಕೇವಲ ಆಶಾ ಕಾರ್ಯಕರ್ತೆಯರ ಗೌರವಧನಕ್ಕಾಗಿ ಮಾತ್ರ ಬಳಸಲು ಸೂಚಿಸಲಾಗಿದೆ. ಕಟ್ಟುನಿಟ್ಟಿನ ಸೂಚನೆಗಳು: ಸರ್ಕಾರದ ಆದೇಶದಂತೆ, ಬಿಡುಗಡೆಯಾದ ಈ ಅನುದಾನವನ್ನು ಯಾವ ಉದ್ದೇಶಕ್ಕಾಗಿ ನೀಡಲಾಗಿದೆಯೋ ಅದೇ ಉದ್ದೇಶಕ್ಕೆ (ಗೌರವಧನ ಪಾವತಿ) ಮಾತ್ರ ಬಳಸಬೇಕು. ಹಣದ ಬಳಕೆಯ ನಂತರ ನಿಯಮಾನುಸಾರ ಬಳಕೆಯ ಪ್ರಮಾಣ ಪತ್ರವನ್ನು…
ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಪ್ರಥಮ ಸೆಮಿಸ್ಟರ್ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ: ಅರ್ಜಿ ಸಲ್ಲಿಕೆಗೆ ಅರ್ಹತೆಗಳು ವಿದ್ಯಾಭ್ಯಾಸ: ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಠ ಅಂಕಗಳು: ಪರೀಕ್ಷೆಯಲ್ಲಿ ಒಟ್ಟಾರೆ ಕನಿಷ್ಠ ಶೇ. 35ರಷ್ಟು ಅಂಕಗಳನ್ನು ಪಡೆದಿರಬೇಕು. ಅರ್ಜಿ ಪಡೆಯುವ ವಿಧಾನ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ dtek.karnataka.gov.in ಅಥವಾ dtetech.karnataka.gov.in/kartechnical ಮೂಲಕ ಅರ್ಜಿ ಪಡೆಯಬಹುದು. ಅಥವಾ ಸರ್ಕಾರಿ ಪಾಲಿಟೆಕ್ನಿಕ್‌ಗಳ ಪ್ರಾಂಶುಪಾಲರಿಂದಲೂ ಅರ್ಜಿಯನ್ನು ಪಡೆದುಕೊಳ್ಳಬಹುದಾಗಿದೆ. ನೋಂದಣಿ ಶುಲ್ಕವು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 50 ರೂ. ಹಾಗೂ ಇತರರಿಗೆ 100 ರೂ. ಇರುತ್ತದೆ. ಅಗತ್ಯ ದಾಖಲಾತಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ನಂತರ ಈ ಕೆಳಗಿನ ದಾಖಲೆಗಳನ್ನು ಸಲ್ಲಿಸಬೇಕು: ಶಾಲಾ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ. ಮೂಲ ವರ್ಗಾವಣೆ ಪ್ರಮಾಣ…
ಬೆಂಗಳೂರು: ನಗರದ ಹೆಸರಘಟ್ಟದಲ್ಲಿ ಕಾಣಿಸಿಕೊಂಡಿದ್ದ H5N1 ಹಕ್ಕಿಜ್ವರದ (Avian Influenza) ಆತಂಕ ಸದ್ಯಕ್ಕೆ ದೂರವಾಗಿದ್ದು, ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ. ಕಳೆದ ಹತ್ತು ದಿನಗಳಿಂದ ನಡೆಸಲಾದ ತೀವ್ರಗತಿಯ ಕಾರ್ಯಾಚರಣೆ ಮತ್ತು ನಿಗಾವಹಿಕೆಯ ಕುರಿತು ಆರೋಗ್ಯ ಇಲಾಖೆಯು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಈ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ: ಹೆಸರಘಟ್ಟದಲ್ಲಿ ಹಕ್ಕಿಜ್ವರದ ಹತೋಟಿ: 10 ದಿನಗಳ ಯಶಸ್ವಿ ಕಾರ್ಯಾಚರಣೆ ಬೆಂಗಳೂರಿನ ಹೆಸರಘಟ್ಟದ ಮತ್ತೂರು ಗ್ರಾಮದಲ್ಲಿರುವ ರಾಜ್ಯ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಏಪ್ರಿಲ್ 14, 2026 ರಂದು ಹಕ್ಕಿಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪಶುಪಾಲನಾ ಇಲಾಖೆಗಳು ಜಂಟಿಯಾಗಿ ಕೈಗೊಂಡಿದ್ದ 10 ದಿನಗಳ ತೀವ್ರ ನಿಗಾವಹಿಕೆ ಮತ್ತು ನಿಯಂತ್ರಣ ಕಾರ್ಯಾಚರಣೆಯು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೈಗೊಂಡ ಪ್ರಮುಖ ಕ್ರಮಗಳು ತ್ವರಿತ ಪ್ರತಿಕ್ರಿಯೆ: ಭೋಪಾಲ್‌ನ ರಾಷ್ಟ್ರೀಯ ಉನ್ನತ ಭದ್ರತಾ ಪಶು ರೋಗಗಳ ಸಂಸ್ಥೆ (NIHSAD) ವರದಿ ನೀಡಿದ ತಕ್ಷಣವೇ ಜಿಲ್ಲಾ ತ್ವರಿತ ಪ್ರತಿಕ್ರಿಯಾ ತಂಡಗಳನ್ನು ನಿಯೋಜಿಸಲಾಯಿತು. ವಲಯಗಳ ವಿಂಗಡಣೆ: ಸೋಂಕು ಪತ್ತೆಯಾದ 0-3 ಕಿ.ಮೀ…
ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ನಗರ ಮತ್ತು ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ತಾವು ಬದ್ಧರಾಗಿದ್ದು, ಇದಕ್ಕಾಗಿ ವಿವಿಧ ಇಲಾಖೆಗಳಿಂದ ನೂರಾರು ಕೋಟಿ ರೂಪಾಯಿಗಳ ಅನುದಾನ ಈಗಾಗಲೇ ಬಿಡುಗಡೆಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರದ ಚಿತ್ರಣವನ್ನೇ ಬದಲಿಸುವಂತಹ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದರು. ಪ್ರಮುಖ ಯೋಜನೆಗಳು ಮತ್ತು ಅನುದಾನದ ವಿವರ: ಹೈಟೆಕ್ ರಂಗಮಂದಿರ: ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸೂಕ್ತ ವೇದಿಕೆಯ ಕೊರತೆ ನೀಗಿಸಲು ₹4.80 ಕೋಟಿ ವೆಚ್ಚದಲ್ಲಿ 900 ರಿಂದ 1000 ಆಸನಗಳ ಸಾಮರ್ಥ್ಯವಿರುವ ಅತ್ಯಾಧುನಿಕ ರಂಗಮಂದಿರ ನಿರ್ಮಿಸಲಾಗುವುದು. ಇದರ ಟೆಂಡರ್ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ. ಗಣಪತಿ ಕೆರೆ ಪಾರ್ಕ್: ಗಣಪತಿ ಕೆರೆಯ ಮೇಲ್ಭಾಗದಲ್ಲಿ ಸಾರ್ವಜನಿಕರು ಮತ್ತು ಮಕ್ಕಳಿಗಾಗಿ ₹4 ಕೋಟಿ ವೆಚ್ಚದಲ್ಲಿ ಸುಂದರವಾದ ಉದ್ಯಾನವನ (High Quality Park) ನಿರ್ಮಾಣವಾಗಲಿದೆ. ಇಲ್ಲಿ ಮ್ಯೂಸಿಕ್ ಸಿಸ್ಟಮ್…














