Subscribe to Updates
Get the latest creative news from FooBar about art, design and business.
Author: kannadanewsnow09
ಸಾಲದ ಹೊರೆಯನ್ನು ಸಹಿಸಲಾಗಲಿಲ್ಲ. ಕೆಲವರು ಊರು ಬಿಟ್ಟು ಓಡಿ ಹೋಗುವಂತಾಗಿದೆ ಎಂದು ದೂರುವುದನ್ನು ಕೇಳಿದ್ದೇವೆ. ಇಂತಹ ದೊಡ್ಡ ಸಾಲದ ಹೊರೆಯಿಂದ ನರಳುತ್ತಿರುವವರಿಗೂ ಈ ಗಣೇಶ ಪರಿಕರಂ ಪರಿಹಾರ ನೀಡಬಲ್ಲದು. ಸಾಲದ ಹೊರತಾಗಿ ಇತರ ಅಡೆತಡೆಗಳಿವೆ. ಆ ಅಡಚಣೆಯನ್ನು ಮುರಿಯಲು ಈ ಆಚರಣೆಯನ್ನೂ ಮಾಡಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳ ಓಡಾಟ ಆರಂಭಿಸಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ. ಅವುಗಳ ವಿವರ ಈ ಕೆಳಗಿನಂತಿವೆ: 1. ಎಸ್ಎಂವಿಟಿ ಬೆಂಗಳೂರು-ಪಂಢರಪುರ ನಿಲ್ದಾಣಗಳ ನಡುವೆ ವಿಷೇಶ ಎಕ್ಸ್ ಪ್ರೆಸ್ (06297/06298) ರೈಲು ಸಂಚಾರ * ರೈಲು ಸಂಖ್ಯೆ 06297 ಎಸ್ಎಂವಿಟಿ ಬೆಂಗಳೂರಿನಿಂದ ಜುಲೈ 1, 3, & 6, 2024 ರಂದು ರಾತ್ರಿ 22:00 ಗಂಟೆಗೆ ಹೊರಟು, ಮರುದಿನ ಸಾಯಂಕಾಲ 18:20 ಗಂಟೆಗೆ ಪಂಢರಪುರ ನಿಲ್ದಾಣವನ್ನು ತಲುಪಲಿದೆ. * ಪುನಃ ಇದೆ ರೈಲು (06298) ಜುಲೈ 2, 4, & 7, 2024 ರಂದು ಪಂಢರಪುರದಿಂದ ರಾತ್ರಿ 20:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ…
ಬೆಂಗಳೂರು: ಯುಜಿ ಸಿಇಟಿ-2024ರ ಪರೀಕ್ಷೆಯನ್ನು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿತ್ತು. ಈ ಬೆನ್ನಲ್ಲೇ ದಾಖಲಾತಿ ಪರಿಶೀಲನೆಗೆ ಮಹತ್ವದ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಬಿಡುಗಡೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಇಎ, ಆನ್ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ ಮಾತ್ರ ಪರಿಗಣಿಸಲಾಗಿರುತ್ತದೆ. ಯುಜಿಸಿಇಟಿ-2024 ಕ್ಕೆ ಅಭ್ಯರ್ಥಿಗಳು http://kea.kar.nic.in ಆನ್ಲೈನ್ ಅರ್ಜಿಯಲ್ಲಿ ನಮೂದಿಸಿದ SATS ಸಂಖ್ಯೆಯನ್ನು ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಮತ್ತು ಆರ್ಡಿ ಸಂಖ್ಯೆಯನ್ನು ಆಧರಿಸಿ ಮೀಸಲಾತಿ [ಎಸ್ಸಿ, ಎಸ್ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ] 371(ಜೆ), ಧಾರ್ಮಿಕ ಅಲ್ಪ ಸಂಖ್ಯಾತ, ಎನ್ಎಲ್ಸಿ ಮತ್ತು ಇತರೆ ಮಾಹಿತಿಯನ್ನು ಆಯಾ ಇಲಾಖೆಯ ವೆಬ್ಸರ್ವೀಸ್ ಮೂಲಕ ಪರಿಶೀಲನೆ ಮಾಡಲಾಗಿರುತ್ತದೆ ಎಂದಿದೆ. ಅರ್ಹತಾ ಕಂಡಿಕೆ ಇ, ಎಫ್, ಜಿ, ಹೆಚ್ ಮತ್ತು ಒ ಕ್ಲಾಸ್ಗಳಿಗೆ ಅನ್ವಯಿಸುವಂತೆ ಆಯಾ ಇಲಾಖೆಯವರು ಪರಿಶೀಲಿಸಿ ನೀಡಿದಂತೆ ಅರ್ಹತೆಯನ್ನು ಪರಿಗಣಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು…
ಬೆಂಗಳೂರು: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲಾಗುತ್ತಿದೆ. ಟಿಕೆಟ್ ದರವನ್ನು ಬಡವರು, ಮಧ್ಯಮ ವರ್ಗದ ಜನರಿಗೂ ವಂದೇ ಭಾರತ್ ರೈಲಿನಲ್ಲಿ ಓಡಾಡುವಂತೆ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂಬುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಂದೇ ಭಾರತ್ ರೈಲಿನಲ್ಲಿ ಬಡವರು, ಮಧ್ಯಮ ವರ್ಗದವರು ಓಡಾಡುವಂತೆ ಆಗಬೇಕು. ಅದಕ್ಕಾಗಿ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ನಿನ್ನೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೂ ಚರ್ಚೆ ಮಾಡಲಾಗಿದೆ ಎಂದರು. ಕರ್ನಾಟಕದಲ್ಲಿ ವಿಭಿನ್ನ ರೀತಿಯಲ್ಲಿ ರೈಲ್ವೆ ವಿಭಾಗಗಳು ಅಭಿವೃದ್ಧಿಯಾಗಲಿದ್ದಾವೆ. ಯಶವಂತಪುರ ಟು ಚನ್ನಸಂದ್ರ ನಡುವೆ 25 ಕಿಲೋ ಮೀಟರ್ ಮತ್ತು ಬೈಯ್ಯಪ್ಪನಹಳ್ಳಿ ಟು ಹೊಸೂರು ನಡುವೆ 48 ಕಿಲೋಮೀಟರ್ ಹಳಿ ಡಬ್ಲಿಂಗ್ ಯೋಜನೆಗೆ 814 ಕೋಟಿ ರೂ ವೆಚ್ಚವಾಗಲಿದೆ. ಇದಕ್ಕೆ ಕೇಂದ್ರ ಸರ್ಕಾರ ಅನುದಾನ ಮಂಜೂರು ಮಾಡಲಿದೆ ಎಂದರು. https://kannadanewsnow.com/kannada/note-kas-recruitment-preliminary-exam-rescheduled-to-august-25/ https://kannadanewsnow.com/kannada/sda-accepts-bribe-through-phonepe-in-education-ministers-constituency/
ಬೆಂಗಳೂರು: ಕೆಪಿಎಸ್ಸಿಯಿಂದ ಕರೆಯಲಾಗಿದ್ದಂತ ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.25ಕ್ಕೆ ಮರುನಿಗದಿ ಮಾಡಲಾಗಿದೆ. ಈ ಮೂಲಕ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ʼಎʼ ಮತ್ತು ʼಬಿʼ ವೃಂದದ ಒಟ್ಟು 384 ಹುದ್ದೆಗಳಿಗೆ ಜುಲೈ 21 ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25ಕ್ಕೆ ಮುಂದೂಡಲು ಕೆಪಿಎಸ್ಸಿ ನಿರ್ಧರಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕೆಪಿಎಸ್ಸಿ, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. https://twitter.com/KarnatakaVarthe/status/1806680751599206518 https://kannadanewsnow.com/kannada/dk-shivakumar-warns-of-disciplinary-action-against-those-who-make-public-statements-on-change-of-deputy-cm-cm/ https://kannadanewsnow.com/kannada/bengaluru-five-buses-of-a-private-nursing-college-gutted-in-another-fire/
ಬೆಂಗಳೂರು : ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರು ಸಿಎಂ ಬದಲಾವಣೆ ಬಗ್ಗೆ ಶನಿವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇಂದು ಇವರುಗಳು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ” ಎಂದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ನಾನು, ಸಿದ್ದರಾಮಯ್ಯ ಅವರು ಪಕ್ಷದ ಹಿತ ದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ” ಎಂದು ತಿಳಿಸಿದರು. ಹೈಕಮಾಂಡ್ ಬಳಿ ಡಿಸಿಎಂ, ಸಿಎಂ ಬದಲಾವಣೆ…
ಮಂಡ್ಯ: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡುವ ವಿಚಾರವನ್ನು ಸಚಿವ ಸಂಪುಟದ ಮುಂದೆ ಇಟ್ಟು ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇಂದು ಪತ್ರ ಬರೆದಿರುವಂತ ಅವರು, ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, 1932 ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮ್ಮೆಯಾಗಿದೆ. ಆದರೆ, ಇದೀಗ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್ ಬಿಲ್ 52.25 ಕೋಟಿ ರೂಪಾಯಿಯನ್ನು ಮನ್ನಾ…
ಬೆಂಗಳೂರು: ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 50 ಬೆಡ್ ಸಾಮರ್ಥ್ಯದ ಟ್ರಾಮಾ ಸೆಂಟರ್ ಕಾಮಗಾರಿಯನ್ನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕವನ್ನ ನೂತನವಾಗಿ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದರು. ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ ಒದಗಿಸುವ 150 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೆ.ಸಿ ಜನರಲ್ ಜನಪ್ರೀಯ ಆಸ್ಪತ್ರೆಯನ್ನಾಗಿ ರೂಪಿಸಲು ಎಲ್ಲರು ಶ್ರಮ ವಹಿಸಬೇಕು ಎಂದರು. ಕೆ.ಸಿಜನರಲ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ 66.78 ಕೋಟಿ ವೆಚ್ಚದಲ್ಲಿ 200 ಬೆಡ್ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪ್ರಾರಂಭಿಸುವ ನಿಟ್ಟಿನಲ್ಲಿ ಗುದ್ದಲಿ ಪೂಜೆಗೆ ಅಣಿ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದರು.…
ಉಡುಪಿ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೆರೆಗೆ ಎಸೆದು, ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ದುರಂತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ರೇ, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ನಂದ್ರೋಳಿ ಎಂಬಲ್ಲಿನ ಕೆರೆಯಲ್ಲಿ ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೊದಲು ಇಬ್ಬರು ಮಕ್ಕಳನ್ನು ಕೆರೆಯ ನೀರಿಗೆ ಹಾಕಿ, ತಾನು ಆತ್ಮಹತ್ಯೆಗಾಗಿ ನೀರಿಗೆ ಧುಮುಕಿದ್ದಾರೆ. ಕೆರೆಗೆ ಮಹಿಳೆಯೊಬ್ಬರು ಹಾರಿದಂತದ್ದು ಗಮನಿಸಿದಂತ ಸ್ಥಳೀಯರು ಕೂಡಲೇ ಆಕೆಯನ್ನು ರಕ್ಷಣೆ ಮಾಡಲಾಗಿದೆ. ಆದ್ರೇ ಇಬ್ಬರು ಮಕ್ಕಳು ಆ ವೇಳೆಗಾಗಲೇ ಕೆರೆಯ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/for-the-first-time-in-kmfs-history-milk-procurement-crosses-1-crore-litre-mark/ https://kannadanewsnow.com/kannada/sda-accepts-bribe-through-phonepe-in-education-ministers-constituency/
ಬೆಂಗಳೂರು: ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದ ಎರಡು ದಿನಗಳ ಬಳಿಕ, ಕೆಎಂಎಫ್ ಹೊಸ ದಾಖಲೆ ಬರೆದಿದೆ. ಅದೇ 1 ಕೋಟಿ ಲೀಟರ್ ಗಡಿಯನ್ನು ಹಾಲಿನ ಸಂಗ್ರಹಣೆಯಲ್ಲಿ ಬರೆದಿದೆ. ರಾಜ್ಯ ಸರ್ಕಾರದಿಂದ ಈ ಮಾಹಿತಿ ಹಂಚಿಕೊಂಡಿದ್ದು, ನಂದಿನಿಯಿಂದ ಹಸನಾದ ಹೈನುಗಾರಿಕೆಯನ್ನು ನಡೆಸಲಾಗುತ್ತಿದೆ. 1 ಕೋಟಿಗೂ ಹೆಚ್ಚು ಲೀಟರ್ ದಾಖಲೆಯ ಪ್ರಮಾಣದ ಹಾಲಿನ ಸಂಗ್ರಹಣವನ್ನು ಜೂನ್.28ರಂದು ಮಾಡಿದೆ ಎಂದಿದೆ. ಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಾಲಿನ ಸಂಗ್ರಹಣೆ 1 ಕೋಟಿ ಲೀಟರ್ ಜೂನ್.28, 2024ರಂದು ದಾಟಿದೆ. ರಾಜ್ಯ ಸರ್ಕಾರ ಹೈನುಗಾರಿಕೆಯ ರೈತರಿಗೆ ನೀಡಿದ ಪ್ರೋತ್ಸಾಹವೇ ಇದಕ್ಕೆ ಕಾರಣ. ರೈತರ ಬದುಕಿಗೆ ಆರ್ಥಿಕ ಚೈತನ್ಯ ತುಂಬುವುದೇ ಸರ್ಕಾರದ ಆದ್ಯತೆ ಅಂತ ತಿಳಿಸಿದೆ. https://twitter.com/KarnatakaVarthe/status/1806999429603582061 https://kannadanewsnow.com/kannada/amit-shah-pressurised-action-against-yediyurappa-in-pocso-case-explosive-details-revealed/ https://kannadanewsnow.com/kannada/sda-accepts-bribe-through-phonepe-in-education-ministers-constituency/













