Subscribe to Updates
Get the latest creative news from FooBar about art, design and business.
Author: kannadanewsnow09
ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಮಿಹಿರ್ ಶಾ ಅವರನ್ನು ಜುಲೈ 30 ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಮಿಹಿರ್ ಶಾ ಅವರ ಪೊಲೀಸ್ ಕಸ್ಟಡಿ ಮಂಗಳವಾರ (ಜುಲೈ 16) ಕೊನೆಗೊಂಡಿತ್ತು, ಅದರ ನಂತರ, ಮುಂಬೈ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಆರೋಪಿಗಳನ್ನು ಶಿವದಿ ನ್ಯಾಯಾಲಯಕ್ಕೆ ಕರೆತಂದರು, ಅವರು ಕಸ್ಟಡಿಯನ್ನು ವಿಸ್ತರಿಸಿದರು. https://twitter.com/ANI/status/1813153270770123153 https://kannadanewsnow.com/kannada/good-news-for-the-people-of-the-state-revenue-departments-anywhere-registration-system-extended-to-districts/ https://kannadanewsnow.com/kannada/ii-puc-exam-3-result-declared-heres-how-to-check-result/
ಬೆಂಗಳೂರು : ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಹಾಗೂ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ʼಎನಿವೇರ್ ನೋಂದಣಿʼ ವ್ಯವಸ್ಥೆಯನ್ನು ಆಗಸ್ಟ್ ತಿಂಗಳಿನಿಂದ ಪ್ರತಿಯೊಂದು ಜಿಲ್ಲೆಗಳಿಗೂ ವಿಸ್ತರಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸಭಾ ಅಧಿವೇಶನದ ನಡುವೆ ಮಂಗಳವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಂಬಂಧಿತ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ ಅವರು,”ಉಪ ನೋಂದಣಾಧಿಕಾರಿ ಕಚೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರಕಾರಿ ಕಚೇರಿಗಳಲ್ಲಿ ಕಾಯಿಸುವುದೂ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ವ್ಯವಸ್ಥೆ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ಆಗಸ್ಟ್ ತಿಂಗಳಿನಿಂದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂದು ಸಮಯದ ಗಡುವು ನೀಡಿದರು. ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷ ಮಾ.14 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ.…
ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಮಂಡ್ಲಿಯ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ.18ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಜುಲೈ.18ರಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಸೀಗೆಹಟ್ಟಿ, ರವಿವರ್ಮಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಆಜಾದ್ ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತ, ಇಮಾಮ್ ಬಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು.18 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್‍ಎಂ ವಿದ್ಯಾರ್ಹತೆ…
ಬೆಂಗಳೂರು : “ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬೆಸ್ಕಾಂ ಸೇರಿದಂತೆ ಬೆಂಗಳೂರು ಅಭಿವೃದ್ದಿಗೆ ಇರುವ ಪ್ರತಿ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ವಿಚಾರವಾಗಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರ ಸಭೆಯನ್ನು ಜುಲೈ 27 ರಂದು ನಡೆಸಲಾಗುವುದು”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಎಸ್. ಸುರೇಶ್ ಕುಮಾರ್, ರಾಮಮೂರ್ತಿ ಅವರ ಪ್ರಸ್ತಾವನೆಗೆ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು. ಇದಕ್ಕೂ ಮೊದಲು ಬಿಜೆಪಿ ನಾಯಕರು ಬೆಂಗಳೂರು ಅಭಿವೃದ್ದಿಗೆ ಇರುವ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಡಿಸಿಎಂ ಅವರು, “ಅಶೋಕ್, ಸುರೇಶ್ ಕುಮಾರ್ ಹಾಗೂ ರಾಮಮೂರ್ತಿ ಅವರ ಮಾತಿಗೆ ನನ್ನ ಸಹಮತವಿದೆ. ಕಳೆದ ಒಂದು ವರ್ಷದಿಂದ ಸಮನ್ವಯತೆ ಸಾಧಿಸಲು ನಾನೇ ಸಾಕಷ್ಟು ಕಸರತ್ತು ನಡೆಸಿದ್ದೇನೆ. ಇದರಲ್ಲಿ ಸಂಪೂರ್ಣ ಯಶಸ್ವಿಯಾಗಿಲ್ಲ. ಆದರೆ ಒಂದು ಹಂತಕ್ಕೆ ಸಮಸ್ಯೆ ನಿವಾರಣೆ ಮಾಡಿದ್ದೇನೆ. ಆದರೆ ಪ್ರಯತ್ನ ಮುಂದುವರೆಸಿದ್ದೇನೆ. ಪ್ರತಿಪಕ್ಷದವರು ಸಹಕಾರ ನೀಡಿದರೆ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬೆಂಗಳೂರಿನ ಕೋರ್ಟ್ ನಲ್ಲಿ ದಾಖಲಿಸಿದ್ದಂತ ಖಾಸಗಿ ದೂರಿನ ಅರ್ಜಿಯನ್ನು ಕೋರ್ಟ್ ದೂರಿನ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ದೇಶದ ಸಂಪತ್ತು ಮುಸ್ಲೀಮರಿಗೆ ಮರು ಹಂಚಿಕೆ ಆಗುತ್ತದೆ ಅಂತ ಹೇಳಿಕೆ ನೀಡಿದ್ದಾರೆ. ಇದು ದ್ವೇಷ ಭಾಷಣದ ಹೇಳಿಕೆಯಾಗಿದ್ದೂ, ಅವರ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವಂತೆ ಜಿಯಾಉರ್ ರಹಮಾನ್ ನೊಮಾನಿ ಎಂಬುವರು ಖಾಸಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆ.ಎನ್ ಶಿವಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆಯೇ ಹೊರತು, ದ್ವೇಷ ಭಾಷಣದ ಹೇಳಿಕೆಯನ್ನು ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಅಲ್ಲದೇ ದ್ವೇಷ ಭಾಷಣದ ಯಾವುದೇ ಅಂಶಗಳು ಪ್ರಧಾನಿ ಮೋದಿ ಅವರ ಹೇಳಿಕೆಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗಾಂಗ ದಾನವನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಅದೇ ಇನ್ಮುಂದೆ ಅಂಗಾಂಗ ದಾನಿಗಳಿಗೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದಂದು ಪ್ರಶಂಸನಾ ಪತ್ರ ನೀಡಿ ಗೌರವ ಸಲ್ಲಿಸೋ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ State Organ Tissue Transplant Organization (SOTTO Karnataka) ಮುಖಾಂತರ ನೀಡುವ ಮಾಹಿತಿ ಆಧರಿಸಿ ಅಂಗಾಂಗ ದಾನ ಮಾಡಿದ ದಿನಾಂಕದಿಂದ 10 ದಿನಗಳ ಒಳಗೆ ರಾಜ್ಯ ಸರ್ಕಾರದ ಪರವಾಗಿ ಅಂಗದಾನಿಯ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲು ಸರ್ಕಾರದ ಆದೇಶ ಸಂಖ್ಯೆ: ಆಕುಕ 93 ಎಫ್‌ಪಿಆರ್ 2024, ದಿನಾಂಕ:01.3.2024 ರಲ್ಲಿ ಆದೇಶಿಸಲಾಗಿದೆ ಅಂತ ತಿಳಿಸಿದ್ದಾರೆ. ಸದರಿ ಆದೇಶದನ್ವಯ ಅಂಗಾಂಗದಾನ ಮಾಡಿದ 10 ದಿನಗಳ ಒಳಗೆ ಪ್ರಾಥಮಿಕವಾಗಿ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸುವ ಬಗ್ಗೆ, ಕ್ರಮವಹಿಸುವುದು. ತದನಂತರ ಸಾರ್ವಜನಿಕ…
ಬೆಂಗಳೂರು: ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು. ಈ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ವರದಿಯ ಶಿಫಾರಸ್ಸಿನಂತೆ ಆಗಸ್ಟ್.1ರಿಂದ ಜಾರಿಗೆ ಬರುವಂತೆ ವೇತನ ಜಾರಿ ಸಂಬಂಧ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ ಜುಲೈ.22ರಂದು ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 22-07-2024ರಂದು ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 13ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಅಂತ ತಿಳಿಸಿದ್ದಾರೆ. ಜುಲೈ.22ರಂದು ನಡೆಯುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಯೋಜನೆಗಳಿಗೆ ಅನುದಾನ ಒದಗಿಸೋದಕ್ಕೆ ಅನುಮೋದನೆ ನೀಡುವುದಲ್ಲೇ, ಹಲವು ಜನಪರ ಅಭಿವೃದ್ಧಿ ಕಾರ್ಯಗಳಿಗೆ ನಿರ್ಣಯದ ಅಂಗೀಕಾರ ನೀಡುವ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/ii-puc-exam-3-result-declared-heres-how-to-check-result/ https://kannadanewsnow.com/kannada/big-update-9-dead-7-dead-2-missing-in-karwar-landslide/
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ 3ರ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ. ಇಂದಿನ ಪ್ರಕಟಿತ ದ್ವಿತೀಯ ಪಿಯುಸಿ ಪರೀಕ್ಷೆ-3ರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ. ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಿಸಲಾಗಿದೆ ಅಂತ ಹೇಳಿದ್ದಾರೆ. ಅಂದಹಾಗೇ ದ್ವಿತೀಯ ಪಿಯುಸಿ ಪರೀಕ್ಷೆ 3ಕ್ಕೆ 76,005 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾವಾರು ಪ್ರಮಾಣ ನೋಡುವುದಾದರೇ ಶೇ. 21.65% ಬಾಲಕರು ಹಾಗೂ ಶೇ.26.55% ಬಾಲಕಿಯರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರಲ್ಲಿ ಪಾಸ್ ಆಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಹೀಗೆ ಚೆಕ್ ಮಾಡಿ ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ತಾವು ಕುಳಿತಲ್ಲೇ…
ಬೆಂಗಳೂರು: ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದ್ದರು. ಈ ಕುರಿತಂತೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ವೇತನ, ಪಿಂಚಣಿಯನ್ನು ಶೇ.58ರಷ್ಟು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆ ಮಹತ್ವದ ಮಾಹಿತಿ ಮುಂದಿದೆ ಓದಿ. ಇಂದು 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹೇಳಿಕೆ ನೀಡಿದರು. 1) ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು ದಿನಾಂಕ: 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24,03,2024ರಂದು ವರದಿಯನ್ನು ಸಲ್ಲಿಸಿರುತ್ತದೆ. 2) 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ದಿನಾಂಕ: 01.07.2022ರಿಂದ…
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಐತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…