Author: kannadanewsnow09

ಚಿತ್ರುದುರ್ಗ: ಈಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ತುಂಬಾ ಕಟ್ಟು ನಿಟ್ಟಿನಿಂದ ನಡೆಸಲಾಗುತ್ತಿದೆ. ಯಾವುದೇ ನಕಲು ಮಾಡೋದಕ್ಕೆ ಅವಕಾಶ ನೀಡದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಿ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಇದರ ನಡುವೆಯೂ ನಕಲು ಮಾಡೋದಕ್ಕೆ ಅವಕಾಶ ಮಾಡಿಕೊಟ್ಟಂತ ನಾಲ್ವರು ಶಿಕ್ಷಕರನ್ನು ಚಿತ್ರದುರ್ಗದಲ್ಲಿ ಅಮಾನತುಗೊಳಿಸಿಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ಮಾಡೋದಕ್ಕೆ ಅವಕಾಶ ಮಾಡಿಕೊಟ್ಟಂತ ನಾಲ್ವರು ಶಿಕ್ಷಕರನ್ನು ಡಿಡಿಪಿಐ ರವಿಶಂಕರರೆಡ್ಡಿ ಆದೇಶಿಸಿದ್ದಾರೆ. ಚಳ್ಳಕೆರೆಯ ಮಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ, ಚಳ್ಳಕೆರೆಯ ಗೋಸಿಕೆರೆ ಶಾಲೆಯ ರಾಘವೇಂದ್ರ, ಪಿ.ಓಬನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಹಾಗೂ ಕೊರ್ಲಕುಂಟೆಯ ಹಿರಿಯ ಪ್ರಾಥಮಿಕ ಶಾಲೆಯ ಪ್ರಕಾಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿಗಳು ನಕಲು ಮಾಡುವುದನ್ನು ತಡೆಯದೇ ಅದಕ್ಕೆ ಸಹಕಾರ ನೀಡಿದಂತ ಆರೋಪ ಈ ನಾಲ್ವರು ಶಿಕ್ಷಕರ ವಿರುದ್ಧ ಕೇಳಿ ಬಂದಿದೆ. ಈ ಕಾರಣದಿಂದಾಗಿ ಡಿಡಿಪಿಐ ರವಿಶಂಕರರೆಡ್ಡಿ ಅವರು ಕರ್ತವ್ಯ ಲೋಪ, ಬೇಜವಾಬ್ದಾರಿ, ನಿರ್ಲಕ್ಷ್ಯದ ಹಿನ್ನಲೆಯಲ್ಲಿ ನಾಲ್ವರು…

Read More

ಸಾಕಷ್ಟು ಕಠಿಣ ಪರಿಶ್ರಮದ ನಂತರವೂ, ನೀವು ಕೆಲಸದಲ್ಲಿ ಯಶಸ್ಸನ್ನು ಪಡೆಯದಿದ್ದರೆ ಅಥವಾ ನಿಮ್ಮ ಕೈಯಲ್ಲಿ ಹಣ ನಿಲ್ಲಬೇಕಾದರೆ ಏನು ಮಾಡಬೇಕು..? ಹಣದ ಸಮಸ್ಯೆ ದೂರಾಗಿಸಿಕೊಳ್ಳುವುದು ಹೇಗೆ..? ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಅವರಿಂದ ತಿಳಿಯೋಣ ಬನ್ನಿ. ಈಗಿನ ಕಾಲದಲ್ಲಿ ಹಣವೇ ಮುಖ್ಯ ಎನ್ನುವುದು ವಿದ್ಯಾರ್ಥಿಗಳಿಂದ ಹಿಡಿದು ವಯಸ್ಸಾದವರವರೆಗೆ ಎಲ್ಲರಿಗೂ ಕೂಡ ಮನವರಿಕೆಯಾಗಿದೆ. ಹಣಕಾಸಿನ ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ ಕೊಡುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…

Read More

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಕಾಡುಗೊಲ್ಲ ಸಮುದಾಯವನ್ನು ಕಡೆಗಣಿಸಿದಂತ ಬಿಜೆಪಿ ಪಕ್ಷವನ್ನು ತಿರಸ್ಕರಿಸುವಂತೆ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಶಿವು ಯಾದವ್, ಕಾಡುಗೊಲ್ಲ ಜನಾಂಗಕ್ಕೆ ಕರೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2014 ರಲ್ಲಿ ಕುಲಶಾಸ್ತ್ರ ಅಧ್ಯಯನ ವರದಿ ಆಧರಿಸಿ . 2014 ರಲ್ಲಿ ಕುಲಶಾಸ್ತ್ರ ಅಧ್ಯಯನ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯದ ಕಾಡುಗೊಲ್ಲನ್ನು ಎಸ್ ಟಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಯಿತು ಎಂದಿದ್ದಾರೆ. 2014 ರಿಂದ 2024 ರ ತನಕ 10ವರ್ಷಗಳ ಕಾಲ ಕೇಂದ್ರದ ಬಿಜೆಪಿ ಸರ್ಕಾರ ಆರ್.ಜಿ.ಐ ಯಲ್ಲಿ ಇರುವ ವರದಿಯನ್ನು ST ಪೈಲ್ ಮುಟ್ಟಲಿಲ್ಲ. ಕಳೆದ ಎರಡು ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರ ನಾಯಕರು ಕಾಡುಗೊಲ್ಲರನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಭರವಸೆ ನೀಡಿ ಜನಾಂಗದ ಬಹುತೇಕ ಮತ ಪಡೆದರು ಎಂದು ಕಿಡಿಕಾರಿದರು. ಕಾಡುಗೊಲ್ಲರ ಕ್ಷೇಮಾಭಿವೃದ್ಧಿ…

Read More

ಬೆಂಗಳೂರು: ಕೇಂದ್ರಿಯ ತನಿಖಾ ಸಂಸ್ಥೆಗಳ ಕಟ್ಟಡಗಳಿಗೆ ಬಾಡಿಗೆ ಕಟ್ಟುವ ಬದಲು ಬಿಜೆಪಿ ಕಚೇರಿಯಲ್ಲೇ ಅವರಿಗೆ ಜಾಗ ಕೊಡಿ. ಕಳಂಕಿತರನ್ನು ರಕ್ಷಿಸಲು ನಿಮಗೆ ಅನುಕೂಲವಾಗುತ್ತದೆ. ಇಂತಹ ಎಲ್ಲಾ ಪ್ರಕರಣಗಳನ್ನು ಇಥ್ಯರ್ತ ಮಾಡಲು ನಿಮಗೂ ಅನುಕೂಲವಾಗುತ್ತದೆ. ಕಳಂಕಿತರನ್ನು ಸಂಪುಟದಲ್ಲಿ ಇಟ್ಟುಕೊಂಡಿರುವ ಬಿಜೆಪಿ ಅವರೇ ನಿಮಗೆ ನೈತಿಕತೆ ಇದೆಯೇ? ಎಂಬುದಾಗಿ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಕಿಡಿಕಾರಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, 2005 ರಿಂದ ಇಲ್ಲಿಯತನಕ 5 ಸಾವಿರ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ ಚಾರ್ಜ್‌ ಶೀಟ್‌ ಹಾಕಿರುವುದು 1,116 ಪ್ರಕರಣಗಳ ಮೇಲೆ ಮಾತ್ರ. ತನಿಖೆ ಮುಗಿಸಿರುವ ಪ್ರಕರಣಗಳು ಕೇವಲ 26. ಯಾವ ಕಾರಣಕ್ಕೆ ಈ ತಾರತಮ್ಯ ಮಾಡುತ್ತಿದ್ದೀರಿ ಮೋದಿ ಅವರೇ? ನೀವು ಮತ್ತು ನಿಮ್ಮ ಸರ್ಕಾರ ಯಾರನ್ನು ಕಾಪಾಡುತ್ತಿದೆ ಹೇಳುವಿರಾ? ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ಸುಪ್ರೀಂ ಕೋರ್ಟ್‌ ಇರಲಿಲ್ಲ ಎಂದಿದ್ದರೇ ಈ ದೇಶದ ಅತಿದೊಡ್ಡ ಚುನಾವಣ ಬಾಂಡ್‌ ಹಗರಣ ಬೆಳಕಿಗೆ ಬರುತ್ತಿರಲಿಲ್ಲ. ಮಾನ್ಯ ಪ್ರಧಾನಿ ಅವರೇ ಇದಕ್ಕೆ ಉತ್ತರ…

Read More

ಬೆಂಗಳೂರು: ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ವಿನ: ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ ಎಂದಿದ್ದಾರೆ. ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ…

Read More

ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1ರ ವಿಜ್ಞಾನ ವಿಷಯದ ಪರೀಕ್ಷೆ ರಾಜ್ಯಾಧ್ಯಂತ ಯಶಸ್ವಿಯಾಗಿ ನಡೆಯಿತು. ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ( SSLC Exam ) 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿ ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು ಬೆಂಗಳೂರು ಉತ್ತರದಿಂದ 47498, ಬೆಂಗಳೂರು ದಕ್ಷಿಣದಿಂದ 60548, ರಾಮನಗರ ಜಿಲ್ಲೆಯಲ್ಲಿ 12899, ಬೆಂಗಳೂರು ಗ್ರಾಮಾಂತರದಲ್ಲಿ 14162, ಚಿಕ್ಕಬಳ್ಳಾಪುರ 15675 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ತಿಳಿಸಿದೆ. ಇಂದಿನ ವಿಜ್ಞಾನ ವಿಷಯದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8,56,750 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 8,41,439 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಬಾಗಲಕೋಟೆಯ ಬಿಳಗಿಯಲ್ಲಿನ ಆದರ್ಶ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಒಟ್ಟಾರೆಯಾಗಿ 8,56,750 ಮಂದಿಯಲ್ಲಿ 8,41,439 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 15,311…

Read More

ಮೈಸೂರು: ಕೆಲ ದಿನಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೈಸೂರಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಮಾಡಿದ್ದರು. ಅದರ ಫಲವಾಗಿ ಕೊನೆಗೂ ಸಿಎಂ ಸಿದ್ಧರಾಮಯ್ಯ ಆಪರೇಷನ್ ಹಸ್ತ ಸಕ್ಸಸ್ ಆಗಿದೆ. ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ತೊರೆದು, ಧೀರಜ್ ಪ್ರಸಾದ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಡಿಸಿಎಂ ಡಿಕೆ ಶಿವಕುಮಾರ್ ಅವರು, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಗೆ ಹೂಗುಚ್ಛ ನೀಡಿ, ಕಾಂಗ್ರೆಸ್ ಪಕ್ಷದ ಶಾಲು ಹಾಕಿ, ಆತ್ಮೀಯವಾಗಿ ಬರಮಾಡಿಕೊಂಡರು. ಅಂದಹಾಗೇ ಅಳಿಯ ಧೀರಜ್ ಪ್ರಸಾದ್ ಗೆ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸೋದಕ್ಕೆ ಪ್ರಯತ್ನಿಸಿದ್ದರು. ಆದ್ರೇ ಅದು ಸಾಧ್ಯವಾಗದೇ ವಿಫಲವಾಗಿತ್ತು. ಈ…

Read More

ಬೆಂಗಳೂರು: ನಾನು ಏಪ್ರಿಲ್ 3ರಂದು ಮಂಡ್ಯ ಜಿಲ್ಲೆಗೆ ಬರುತ್ತೇನೆ. ಅಂದು ಎಲ್ಲರ ಸಭೆಯನ್ನು ನಡೆಸುತ್ತೇನೆ. ಅಂದಿನ ಬೆಂಬಲಿಗರ ಸಭೆಯಲ್ಲೇ ನನ್ನ ಮುಂದಿನ ನಿರ್ಧಾರ ಪ್ರಕಟಿಸೋದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಘೋಷಣೆ ಮಾಡಿದರು. ಇಂದು ಸುಮಲತಾ ಅಂಬರೀಶ್ ಅವರ ಜೆಪಿ ನಗರದ ನಿವಾಸದ ಬಳಿಯಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲಿಗ ಹನೆಕೆರೆ ಶಶಿ ಎಂಬುವರು ಮಾತನಾಡಿ ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದರು. ನಾವು ಅಂದು ಬೆಂಬಲ ನೀಡಿದ್ದೇವೆ. ಮುಂದೆಯೂ ಬೆಂಬಲ ನೀಡುತ್ತೇವೆ ಎಂಬುದಾಗಿ ಘೋಷಣೆ ಮಾಡಿದರು. ಈ ಬಳಿಕ ಮಾತನಾಡಿದಂತ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅವರು, ಕರ್ನಾಟಕದಲ್ಲಿ ಎಲ್ಲೇ ಹೋದ್ರೂ ಅಂಬರೀಶ್ ಅಣ್ಣನ ಮಗ ಅಂತ ಗುರುತು ಹಿಡಿಯುತ್ತಾರೆ. ಜನಾಭಿಪ್ರಾಯವಿಲ್ಲದೇ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕಳೆದ ಬಾರಿ ಚುನಾವಣೆ ಇರಬಹುದು, ಈ ಬಾರಿಯ ಚುನಾವಣೆಯಲ್ಲೂ ಹಾಗೆ. ಮಂಡ್ಯ ಜಿಲ್ಲೆಯ ನಮ್ಮ ಕುಟುಂಬವಿದ್ದಂತೆ ಎಂದರು. ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಮಂಡ್ಯ ಜಿಲ್ಲೆಯ ಅಷ್ಟು ದೂರದಿಂದ ಬಂದಿದ್ದೀರಿ. ಎಲ್ಲಾ ನನ್ನ ಅಂಬರೀಶ್ ಅಭಿಮಾನಿಗಳಿಗೆ ಕೃತಜ್ಞತೆಗಳು. ಧನ್ಯವಾದಗಳನ್ನು…

Read More

ನವದೆಹಲಿ: ಸತತ ಮೂರನೇ ಅವಧಿಗೆ ಭಾರತದಲ್ಲಿ ಅಧಿಕಾರಕ್ಕೆ ಮರಳಲು ಬಿಜೆಪಿ ಪ್ರಯತ್ನಿಸುತ್ತಿರುವುದರಿಂದ ಭಾರತೀಯ ಜನತಾ ಪಕ್ಷವು ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನೇಮಿಸಿದರೆ. ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವ್ಯಾಪಾರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿದ್ದಾರೆ. ಸುಮಾರು 97 ಕೋಟಿ ಅರ್ಹ ಭಾರತೀಯ ಮತದಾರರು ಏಪ್ರಿಲ್ 19 ರಿಂದ ಆರು ವಾರಗಳು ಮತ್ತು ಏಳು ಹಂತಗಳಲ್ಲಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಮುಂದಿನ ಸರ್ಕಾರವನ್ನು ಯಾವ ರಾಜಕೀಯ ಪಕ್ಷ ರಚಿಸುತ್ತದೆ ಎಂಬುದನ್ನು ನಿರ್ಧರಿಸಲಿದ್ದಾರೆ. 2014 ರಲ್ಲಿ ‘ಅಬ್ಕಿ ಬಾರ್ ಮೋದಿ ಸರ್ಕಾರ್’ ಮತ್ತು 2019 ರಲ್ಲಿ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಘೋಷಣೆಗಳ ನಂತರ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಹೊಸ ಪ್ರಚಾರ ಘೋಷಣೆ ‘ಅಬ್ಕಿ ಬಾರ್ 400 ಪಾರ್’ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸತತ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಲಕ್ಷ್ಮಣ ರೇಖೆ ಯಾರೂ ದಾಟುವಂತಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರೇಳದೇ ರಮೇಶ್ ಕುಮಾರ್, ಕೆ.ಹೆಚ್ ಮುನಿಯಪ್ಪ ಅವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ ಅವರು ಶನಿವಾರ ಉತ್ತರಿಸಿದ ಅವರು, ಕೋಲಾರದ ಅಭ್ಯರ್ಥಿ ಘೋಷಣೆಯಾಗಿರುವ ಬಗ್ಗೆ ಕೇಳಿದಾಗ, “ನಾನು ಮುನಿಯಪ್ಪ, ಬೇರೆ ನಾಯಕರ ಜತೆ ಚರ್ಚೆ ಮಾಡಿದ್ದು, ಎಲ್ಲರೂ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿ ಗುಂಪು ರಾಜಕೀಯಕ್ಕೆ ಅವಕಾಶವಿಲ್ಲ. ಶಿಸ್ತು ಇಲ್ಲಿ ಬಹಳ ಮುಖ್ಯ. ಯಾವುದೇ ಸಚಿವರು, ಶಾಸಕರು ಪಕ್ಷದ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಗೆಲ್ಲುವುದು ಬಿಡುವುದು ಬೇರೆ ವಿಚಾರ. ಪಕ್ಷದಲ್ಲಿ ಶಿಸ್ತು ಕಾಪಾಡಿ ರಾಜ್ಯ ಹಾಗೂ ಪಕ್ಷದ ಹಿತಕ್ಕೆ ಕೆಲಸ ಮಾಡಬೇಕು. ವಿರೋಧ ವ್ಯಕ್ತಪಡಿಸಿದ ನಾಯಕರು ಕ್ಷಮೆ ಕೇಳಿದ್ದಾರೆ, ಮುನಿಯಪ್ಪ, ಸಚಿವ ಸುಧಾಕರ್ ಸೇರಿದಂತೆ ಇತರೆ ಶಾಸಕರು, ನಾಯಕರು…

Read More