Author: kannadanewsnow09

ಬೆಂಗಳೂರು: ಭಾರತ ತಂಡವು 2024ರ ಟಿ20 ವಿಶ್ವಕಪ್ ಗೆಲುವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಟೀಂ ಇಂಡಿಯಾ ಕೋಚ್ ಆಗಿರುವಂತ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಇಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.  ಭಾರತ ತಂಡವು ಟಿ20 ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಮುಖ್ಯ ಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸನ್ಮಾನಿಸುವಂತ ಮನವಿನ್ನು ಸದನದಲ್ಲಿ ಮಾಡಿದರು. ಶಾಸಕ ಸುರೇಶ್ ಕುಮಾರ್ ಅವರ ಮನವಿಗೆ ಸದನದ ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು. ಈ ಹಿನ್ನಲೆಯಲ್ಲಿ ವಿಧಾನಸಭೆಯಿಂದ ಭಾರತ ತಂಡವು ಟಿ20 ವಿಶ್ವಕಪ್ ಗೆಲುವಿಗೆ ಕಾರಣವಾದಂತ ಮುಖ್ಯ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ ಅಂತ ಸ್ಪೀಕರ್ ಯು.ಟಿ ಖಾದರ್ ಪ್ರಕಟಿಸಿದರು. ಅಂದಹಾಗೇ ಕಳೆದ ಜೂನ್.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‍ಗಳ ರೋಚಕ ಗೆಲುವು ಸಾಧಿಸಿತ್ತು. ಭಾರತ ಟಿ20 ವಿಶ್ವಕಪ್…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆಯೂ ಮಳೆ ಮುಂದುವರೆಯುವ ಮುನ್ಸೂಚನೆಯಿದೆ. ಹೀಗಾಗಿ ಸಾಗರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ ಅಂತ ಸಾಗರ ಡಿಡಿಪಿಐ ಹೆಚ್.ಕೆ ಪಾಂಡು ಅವರು ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ನಿಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು ನಾಳೆ ಸಾಗರ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ನಾಳೆ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಡಿಡಿಪಿಐ ಅವರನ್ನು ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದ್ಯಾ ಅನ್ನೋ ಬಗ್ಗೆ ವಿಚಾರಿಸಿದಾಗ, ಮಳೆಯ ಪ್ರಮಾಣವನ್ನು ಆಧರಿಸಿ ಆಯಾ ಕಾಲೇಜುಗಳ ಪ್ರಾಂಶುಪಾಲರು ರಜೆಯನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ. ಹೆಚ್ಚು ಮಳೆಯಾದ್ರೇ ಆಯಾ ಕಾಲೇಜುಗಳ ಪ್ರಾಂಶುಪಾಲರು…

Read More

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಪ್ರಿಯಾಂಕ ಬಡಾವಣೆ ಮುಖ್ಯರಸ್ತೆಯಲ್ಲಿರುವ ಹಳೆಯ ಕಂಬ ಬದಲಿಸುವ ಕಾಮಗಾರಿ ಇರುವುದರಿಂದ ಪ್ರಿಯಾಂಕ ಬಡಾವಣೆ ಮತ್ತು ಪಂಡಿತ್ ಬಡಾವಣೆಯಲ್ಲಿ ಹಾಗೂ ಘಟಕ-3ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಹಳೆ ಬೊಮ್ಮನಕಟ್ಟೆ, ಮಮತಾನಗರ, ದೇವಂಗಿ 2ನೇ ಹಂತದ ಬಡಾವಣೆ, ಪಾರ್ವತಮ್ಮ ಬಡಾವಣೆ ಹಾಗೂ ಮಹಾರಾಣಿ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು.16 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಖಾಲಿ ಇರುವ ಐಟಿಐ ಸೀಟ್‍ಗಳ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ ಸೊರಬ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯು 2024-25ನೇ ಸಾಲಿನ ಖಾಲಿ ಇರುವ ಸೀಟ್‍ಗಳ ನೇರ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಎಲೆಕ್ಟ್ರಾನಿಕ್ ಮೆಕ್ಯಾನಿಕ್-5, ಫಿಟ್ಟರ್-10, ಇನ್ಫಾರ್ಮೇಶನ್ ಮತ್ತು ಕಮ್ಯೂನಿಕೇಶನ್ ಟೆಕ್ನಾಲಜಿ ಸಿಟ್ಟಮ್ ಮೇಂಟೇನೆನ್ಸ್-24 ಹಾಗೂ ಮೆಕ್ಯಾನಿಕ್ ಮೋಟಾರ್ ವೆಹಿಕಲ್-5 ವೃತ್ತಿಗಳ 2 ವರ್ಷಗಳ…

Read More

ಬೆಂಗಳೂರು: ರಾಜ್ಯದಲ್ಲಿ ಪಶು ಇಲಾಖೆಯಲ್ಲಿ ಖಾಲಿ ಇರುವಂತ 400 ವೈದ್ಯರನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ನೇಮಕಾತಿ ಅಧಿಸೂಚನೆಯನ್ನು ಕೆಲವೇ ದಿನಗಳಲ್ಲಿ ಹೊರಡಿಸಲಾಗುತ್ತದೆ ಅಂತ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದಲ್ಲಿ ಪಶು ವೈದ್ಯರ ಕೊರತೆಯನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪಶು ಚಿಕಿತ್ಸಾಲಯಗಳಿಗೆ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1812803553129369618 https://kannadanewsnow.com/kannada/prof-h-c-boralingaiah-elected-president-of-karnataka-janapada-parishat/ https://kannadanewsnow.com/kannada/it-is-a-tragedy-that-hd-kumaraswamy-did-not-attend-all-party-meeting-and-went-to-badoota-minister-cheluvariyaswamy/

Read More

ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ.ಹಿ.ಚಿ ಬೋರಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಂತ ಆದಿತ್ಯ ನಂಜರಾಜ್ ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನಲ್ಲಿ ದಿನಾಂಕ 15-07-2024ರಂದು ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಇಲ್ಲಿಯವರೆಗೆ ಅಧ್ಯಕ್ಷರಾಗಿದ್ದ ಪ್ರೊ.ಹಿ ಶಿ ರಾಮಚಂದ್ರೇಗೌಡರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಪ್ರಸ್ತಾಪಿಸಲಾಯಿತು ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಪರಿಷತ್ತಿನ ಕಾರ್ಯಾಧ್ಯಕ್ಷರಾಗಿದ್ದ ಪ್ರೊ.ಹಿ.ಚಿ ಬೋರಲಿಂಗಯ್ಯ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/1000-village-accountants-750-surveyors-to-be-filled-minister-krishna-byre-gowda/ https://kannadanewsnow.com/kannada/it-is-a-tragedy-that-hd-kumaraswamy-did-not-attend-all-party-meeting-and-went-to-badoota-minister-cheluvariyaswamy/

Read More

ಬೆಂಗಳೂರು : ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ ರಾಯಭಾಗ ಕ್ಷೇತ್ರದ ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು ಸರ್ವೇ ಇಲಾಖೆ ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಾಜ್ಯದಲ್ಲಿ 1,000 ಗ್ರಾಮ…

Read More

ಬೆಂಗಳೂರು: ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಿಸಲಾಗುತ್ತಿದೆ ಅಂತ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಹೀಗೆ ಚೆಕ್ ಮಾಡಿ ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ತಾವು ಕುಳಿತಲ್ಲೇ ಅಂತರರ್ಜಾಲದ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ದಾಖಲಿಸಿ…

Read More

ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಡಿಡಿಪಿಐ ಹೆಚ್.ಕೆ ಪಾಂಡು ಅವರು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಾಧ್ಯಂತ ಭಾರೀ ಮಳಎಯಾಗುತ್ತಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. ಹೀಗಾಗಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಅಂತ ಡಿಡಿಪಿಎಂ ಹೇಳಿದ್ದಾರೆ. https://kannadanewsnow.com/kannada/arvind-kejriwals-bail-delhi-hc-posts-eds-plea-against-trial-court-order-granting-bail-to-august-6/ https://kannadanewsnow.com/kannada/notification-for-recruitment-of-10000-teachers-to-be-issued-soon-madhu-bangarappa/

Read More

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಸೋಮವಾರ ಮುಂದೂಡಿದೆ. ಈ ಪ್ರಕರಣದ ವಿಚಾರಣೆ ಆಗಸ್ಟ್ 6ರಂದು ನಡೆಯಲಿದೆ. ದೆಹಲಿ ಮುಖ್ಯಮಂತ್ರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು. ಕಳೆದ ವಾರ, ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿತು, ಆದರೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದರಿಂದ ಅವರು ಜೈಲಿನಲ್ಲಿದ್ದಾರೆ. ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಸುಪ್ರೀಂ ಕೋರ್ಟ್ ಆದೇಶವಿದೆ ಎಂದು ಕೇಜ್ರಿವಾಲ್ ಅವರ ವಕೀಲರು ಹೈಕೋರ್ಟ್ಗೆ ತಿಳಿಸಿದರು. ಕಳೆದ ರಾತ್ರಿ 11 ಗಂಟೆಗೆ ಇಡಿ ಮನವಿಯಲ್ಲಿ ಹೊಸ ಪ್ರತಿಕ್ರಿಯೆಯನ್ನು ಸಲ್ಲಿಸಿರುವುದರಿಂದ ಅವರಿಗೆ ಹೆಚ್ಚಿನ ಸಮಯ ಬೇಕು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.…

Read More

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರ ಕ್ರಮವಹಿಸಲಾಗಿದೆ. ಶೀಘ್ರವೇ 10,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ನಂತ್ರ, ಪ್ರಕ್ರಿಯೆ ಶುರು ಮಾಡಲಾಗುತ್ತದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತಳವಾರ್ ಸಾಬಣ್ಣ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಇದೇ ಕಾರಣಕ್ಕಾಗಿ ಫಲಿತಾಂಶ ಕೂಡ ಕುಂಠಿತಗೊಂಡಿದೆ. 19,000 ಶಿಕ್ಷಕರ ಕೊರತೆ ಕಲ್ಯಾಣ ಕರ್ನಾಟಕ ಭಾಗದಲ್ಲಿದೆ. ಇದಲ್ಲದೇ ಕೊಠಡಿಗಳ ಸಮಸ್ಯೆ ಕೂಡ ಇದೆ. ಇದನ್ನು ಕೂಡಲೇ ಸರಿ ಮಾಡಬೇಕು. ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿದರು. ಈ ಪ್ರಶ್ನೆಗೆ ಉತ್ತರಿಸಿದಂತ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷಣ ಇಲಾಖೆಯಲ್ಲಿ 50,000 ಶಿಕ್ಷಕರ ಕೊರತೆ ಇದೆ. ಈ ಹಿನ್ನಲೆಯಲ್ಲೇ 10,000 ಶಿಕ್ಷಕರ ನೇಮಕಕ್ಕೆ ಅನುಮತಿಸುವಂತೆ ಆರ್ಥಿಕ ಇಲಾಖಎಗೆ ಪತ್ರವನ್ನು ಬರೆಯಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿಸಿದ ನಂತ್ರ, ನೇಮಕಾತಿ ಪ್ರಕ್ರಿಯೆಗೆ…

Read More