Author: kannadanewsnow09

ಬೆಂಗಳೂರು: ಒಂದೆಡೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ಮತ್ತೊಂದೆಡೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಂದಿನ ಸಿಎಂ ಸಿದ್ಧರಾಮಯ್ಯ ಅವರ ತುಮಕೂರು ಪ್ರವಾಸ ರದ್ದುಗೊಂಡಿರುವುದಾಗಿ ಸಿಎಂ ಕಚೇರಿಯಿಂದ ತಿಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 07-11-2025ರಂದು ಶುಕ್ರವಾರ ಕೈಗೊಳ್ಳಲು ಉದ್ದೇಶಿಸಲಾಗಿದ್ದಂತ ತುಮಕೂರು ಜಿಲ್ಲಾ ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಲಾಗಿದೆ ಎಂಬುದಾಗಿ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಮಾಹಿತಿ ನೀಡಿದ್ದಾರೆ. https://kannadanewsnow.com/kannada/farmers-anger-flares-up-in-belgaum-stones-thrown-at-police-and-police-vehicles/ https://kannadanewsnow.com/kannada/sugarcane-growers-demands-impossible-to-meet-sugar-factory-owners-plead-with-cm/

Read More

ಬೆಂಗಳೂರು: ನಾವೇ ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ. ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯವಾದ ಮಾತಾಗಿದೆ. ಬೇಕಾದ್ರೆ ಕಷ್ಟದಲ್ಲಿರುವಂತ ನಮ್ಮ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರವೇ ತೆಗೆದುಕೊಂಡು ನಡೆಸಲಿ. ನಾವು ಮಾತ್ರ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸೋದಕ್ಕೆ ಅಸಾಧ್ಯ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿಎಂ ಮುಂದೆ ತಮ್ಮ ಕಷ್ಟದ ಅಳಲನ್ನು ಸಕ್ಕರೆ ಕಾರ್ಖಾನೆ ಮಾಲೀಕರು ತೋಡಿಕೊಂಡರು. ಉತ್ತರ ಭಾರತದ ಸಕ್ಕರೆ ಕಾರ್ಖಾನೆಗಳಿಗೆ ಹೆಚ್ಚು ಅನುಕೂಲ ಆಗುವಂತಿದೆ. ಸಕ್ಕರೆ ಉತ್ಪಾದನೆ, ಮಾರಾಟದಲ್ಲಿ ಅವರಿಗೆ ಅನುಕೂಲವಾಗ್ತಿದೆ. ದಕ್ಷಿಣ ಭಾರತದ ಕಾರ್ಖಾನೆಗಳಿಗೆ ಅನ್ಯಾಯ ಆಗುತ್ತಲೇ ಇದೆ. ಉತ್ತರ ಭಾರತದ ಕಾರ್ಖಾನೆ ಮಾಲೀಕರು ಕೇಂದ್ರದ ವಿರುದ್ಧ ಧ್ವನಿ ಎತ್ತುವುದಿಲ್ಲ. ನಾವು ಧ್ವನಿ ಎತ್ತಿಯೂ ಪ್ರಯೋಜನ ಆಗುತ್ತಿಲ್ಲ ಎಂಬುದಾಗಿ ಅಳಲು ತೋಡಿಕೊಂಡಿದ್ದಾರೆ. ಕಬ್ಬು ಬೆಳೆಗಾರರ ಕಣ್ಣೀರು ಒರೆಸಲು ನಾವು ಸಾಲ ಮಾಡಿ ಬ್ಯಾಂಕ್…

Read More

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ರಿಕ್ತರಿಂದ ಪೊಲೀಸರು, ಪೊಲೀಸ್ ವಾಹನಗಳು, ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಪಟನಾ ನಿರತ ಹಲವು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ನಡೆಸಲಾಗುತ್ತಿದ್ದಂತ ಪ್ರತಿಭಟನೆಯು, ಇಂದು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ಸಾಗುವಂತ ವಾಹನಗಳ ಮೇಲೆ ಪ್ರತಿಭಟನಾ ನಿರತರ ರೈತರು ಕಲ್ಲು ತೂರಾಟ ನಡೆಸಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇನ್ನೂ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರು, ಪೊಲೀಸ್ ವಾಹನಗಳು ಹಾಗೂ ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಉದ್ರಿಕ್ತ ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಜೊತೆಗೆ ಕಲ್ಲು ತೂರಾಟ ನಡೆಸಿದಂತ ಹಲವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು…

Read More

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ರಿಕ್ತರಿಂದ ಪೊಲೀಸ್, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಪಟನಾ ನಿರತ ಹಲವು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ನಡೆಸಲಾಗುತ್ತಿದ್ದಂತ ಪ್ರತಿಭಟನೆಯು, ಇಂದು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ಸಾಗುವಂತ ವಾಹನಗಳ ಮೇಲೆ ಪ್ರತಿಭಟನಾ ನಿರತರ ರೈತರು ಕಲ್ಲು ತೂರಾಟ ನಡೆಸಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇನ್ನೂ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸ್, ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಉದ್ರಿಕ್ತ ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಜೊತೆಗೆ ಕಲ್ಲು ತೂರಾಟ ನಡೆಸಿದಂತ ಹಲವರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿದ ನೆಪ ಇಟ್ಟುಕೊಂಡು ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು ಜೆಡಿಎಸ್ ಗಂಬೀರವಾಗಿ ಆರೋಪ ಮಾಡಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ನಗರದ ಪ್ರೀಡಮ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಸಾವಿರಾರು ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರವನ್ನು ತೆರಿಗೆ ಭಯೋತ್ಪಾದಕ ಸರ್ಕಾರ (Tax Terrorism Government) ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯದಲ್ಲಿ ಸುಳ್ಳು ಮತ್ತು ಅಭಿವೃದ್ಧಿ ಮಾರಕ ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಜನ ವಿರೋಧಿ ಕೃತ್ಯಗಳಲ್ಲಿ ನಿರಂತರವಾಗಿ ತೊಡಗಿದೆ. ಗ್ಯಾರಂಟಿಗಳಿಗೆ ವಾರ್ಷಿಕ ಕೇವಲ ₹52,000 ಕೋಟಿಯಷ್ಟೇ ಅನುದಾನ ನೀಡುತ್ತಿದ್ದರೂ,₹4,09,549 ಕೋಟಿಯಷ್ಟು ಆಯವ್ಯಯದ ಹಣವೆಲ್ಲವೂ ಗ್ಯಾರಂಟಿಗಳಿಗೆ ಹೋಗುತ್ತಿದೆ ಎಂದು ಜನರನ್ನು ನಂಬಿಸಿ ಮೋಸ ಮಾಡುತ್ತಿದೆ. ಗ್ಯಾರಂಟಿಗಳ ನೆಪದಲ್ಲಿ ಅಭಿವೃದ್ಧಿಗೆ ತಿಲಾಂಜಲಿ ಇಟ್ಟು ದರ…

Read More

ಬೀದರ್ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅವರಿಂದ ಬೆಂಗಳೂರಿನ ಬೊಬ್ಬುರಕಮ್ಮೆ ಸಭಾಭವನದಲ್ಲಿ ನಡೆದ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ವಿಪ್ರ ಸಮುದಾಯದ ಸ್ವಂತ ಉದ್ಯಮ ನಡೆಸುವವರಿಗೆ ಕಿರು ಸಾಲಯೋಜನೆಯ ಫಲಾನುಭವಿಗಳಿಗೆ ಪತ್ರ ವಿತರಿಸಿ, ಚಾಣಕ್ಯ ಆಡಳಿತ ತರಬೇತಿ ಯೋಜನೆ ಲೊಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಚಿವರು, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ನಾವೇ ಸ್ಥಾಪಿಸಿದ್ದು. ನಮ್ಮ ಸಮಾಜ ಅತ್ಯಂತ ಸ್ವಾಭಿಮಾನಿ ಸಮಾಜ. ಕಷ್ಟದಿಂದ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರು ನಮ್ಮಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮುಂದುವರೆದ ಸಮಾಜ ಎಂಬ ಹಣೆಪಟ್ಟಿ ಇದ್ದರೂ, ಬ್ರಾಹ್ಮಣ ಸಮುದಾಯದಲ್ಲಿಯೂ ಬಡವರಿದ್ದಾರೆ, ಹತ್ತಾರು ಸಮಸ್ಯೆಗಳು ಇವೆ. ಯಾರು ಏನೇ ಹೇಳಲಿ. ನಮ್ಮ ಸರ್ಕಾರ ಬ್ರಾಹ್ಮಣರ ಸಮಸ್ಯೆಗಳಿಗೆ ಸ್ಪಂದಿಸಿದ್ದೇವೆ, ಮುಂದೆ ಕೂಡ ಸ್ಪಂದಿಸುತ್ತೇವೆ ಎಂದರು. ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರದ ಉದ್ದೇಶ ಎಲ್ಲ ಸಮಾಜ ಬೆಳಗಬೇಕು ಎಂಬುದಾಗಿದೆ. ಕಷ್ಟದಲ್ಲಿ ಇದ್ದವರಿಗೆ ಸರ್ಕಾರದ ಸಹಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಬ್ರಾಹ್ಮಣರಿಗೆ ಸಮಸ್ಯೆಯೇ ಇಲ್ಲ ಎನ್ನುವುದು ಶುದ್ಧ ತಪ್ಪು.ನಾನಂತೂ…

Read More

ಇಂಡೋನೇಷ್ಯಾ: ರಾಜಧಾನಿ ಜಕಾರ್ತದಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ 54 ಜನರು ಗಾಯಗೊಂಡಿದ್ದಾರೆ. ನವೆಂಬರ್ 7 ರಂದು ಶಾಲಾ ಸಂಕೀರ್ಣದೊಳಗಿನ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಘಟನೆಯ ಸ್ವಲ್ಪ ಸಮಯದ ನಂತರ, ನಗರ ಪೊಲೀಸ್ ಮುಖ್ಯಸ್ಥ ಅಸೆಪ್ ಎಡಿ ಸುಹೇರಿ ದೂರದರ್ಶನದ ಪತ್ರಿಕಾಗೋಷ್ಠಿಯಲ್ಲಿ ಉತ್ತರ ಜಕಾರ್ತಾದ ಕೆಲಪಾ ಗೇಡಿಂಗ್‌ನಲ್ಲಿರುವ ಸ್ಥಳದಲ್ಲಿ ಸ್ಫೋಟದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಮಾಧ್ಯಮ ವರದಿಗಳ ಪ್ರಕಾರ, ಬಾಂಬ್ ಸ್ಫೋಟದ ಸ್ಥಳದಲ್ಲಿ ಹಲವಾರು ವಸ್ತುಗಳು ಪತ್ತೆಯಾಗಿವೆ, ಅವುಗಳಲ್ಲಿ ಬಾಡಿ ವೆಸ್ಟ್, ಬಂದೂಕುಗಳು ಮತ್ತು ಭಯೋತ್ಪಾದಕ ಚಟುವಟಿಕೆಯೊಂದಿಗೆ ಸಂಬಂಧವನ್ನು ಸೂಚಿಸುವ ಬಾಂಬ್ ವಸ್ತುಗಳು ಸೇರಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಸೀದಿಯ ಚಿತ್ರಗಳು ಯಾವುದೇ ವ್ಯಾಪಕ ಹಾನಿಯನ್ನು ತೋರಿಸದಿದ್ದರೂ, ಗಾಯಾಳುಗಳು ಸಣ್ಣಪುಟ್ಟ ಅಥವಾ ಗಂಭೀರವಾದ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Read More

ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮೈಸೂರಿನಲ್ಲಿ ಶುಕ್ರವಾರ ದಿಶಾ ಸಮಿತಿ ಸಭೆ ಆರಂಭಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು. ಮುಖ್ಯಮಂತ್ರಿಗಳು ಮನಸು ಮಾಡಿದರೆ ಇದು ಅತ್ಯಂತ ಚಿಕ್ಕ‌ ವಿಚಾರ. ಕೆಲವು ನಿಮಿಷಗಳಲ್ಲಿ ಬಗೆಹರಿಸಬಹುದಾದ ವಿಷಯ ಇದಾಗಿದೆ. ಆದರೆ, ಸಿಎಂ ಅವರು ಪ್ರತಿಯೊಂದಕ್ಕೂ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ದೇಶದ ಯಾವ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ ಹೇಳಿ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು. ಈ ಸಮಸ್ಯೆ ವಿಚಾರದಲ್ಲಿ ಜನ ಪ್ರತಿನಿಧಿಗಳನ್ನು…

Read More

ಬೆಂಗಳೂರು: ಇಂದು ಕಬ್ಬು ಬೆಳೆಗಾರ ರೈತರ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. • ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು. • ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು. • ಸಕ್ಕರೆ ಕಾರ್ಖಾನೆ ಮಾಲಿಕರ ಪರವಾಗಿ ಮುರುಗೇಶ್…

Read More