Subscribe to Updates
Get the latest creative news from FooBar about art, design and business.
Author: kannadanewsnow09
ವೀಳ್ಯದೆಲೆ ಮತ್ತು ಅದರ ಪವಿತ್ರತೆ: 01.ವೀಳ್ಯದೆಲೆ ತುದಿಯಲ್ಲಿ – ಲಕ್ಷ್ಮೀ ದೇವಿಯವಾಸವಿರುತ್ತದೆ, 02.ವೀಳ್ಯದೆಲೆ ಬಲಭಾಗದಲ್ಲಿ ಬ್ರಹ್ಮ ದೇವರ ವಾಸಸ್ಥಾನ . 03.ವೀಳ್ಯದೆಲೆ ಮಧ್ಯದಲ್ಲಿ ಸರಸ್ವತೀ ದೇವಿಯ ವಾಸಸ್ಥಾನ, 04.ವೀಳ್ಯದೆಲೆ ಎಡಭಾಗದಲ್ಲಿ ಪಾರ್ವತೀ ದೇವಿಯ ವಾಸಸ್ಥಾನ, 05.ವೀಳ್ಯದೆಲೆ ಸಣ್ಣದಂಟಿನಲ್ಲಿ ಮಹಾವಿಷ್ಣುವಿನ ವಾಸಸ್ಥಾನ, 06.ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸಸ್ಥಾನ, 07.ವೀಳ್ಯದೆಲೆ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸಸ್ಥಾನ, 08.ವೀಳ್ಯದೆಲೆಯ ಬುಡದಲ್ಲಿ ಮೃತ್ಯುದೇವತೆಯ ವಾಸಸ್ಥಾನ, ,ಇದೆ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ತುದಿ ಭಾಗ ತೆಗೆದು ಹಾಕಿಕೊಳ್ಳುವುದು} 09.ವೀಳ್ಯದೆಲೆ ತೊಟ್ಟಿನಲ್ಲಿ ಅಹಂಕಾರ ದೇವತೆ ಹಾಗೂ ದಾರಿದ್ರ್ಯಲಕ್ಷ್ಮೀ ಇರುತ್ತಾರೆ, {ಆದುದರಿಂದನೇ ವೀಳ್ಯದೆಲೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ} ಅಹಂಕಾರಹಾಗೂ ದರಿದ್ರ ಲಕ್ಷ್ಮೀ ಬರಬಾರದೆಂಬ ಎಂದರ್ಥ} 10.ವೀಳ್ಯದೆಲೆಮಧ್ಯಭಾಗ ಮನ್ಮಥನ ವಾಸ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ…
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿಯವರೆಗೆ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ಸಿಬ್ಬಂದಿಗಳಿಗೆ ಸರ್ಕಾರ ಶಾಕ್ ನೀಡಿದೆ. ಅದೇ ಅಂತವರ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರವು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯದಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಟ್ಟಿ ನೀಡುವಂತೆ ತಿಳಿಸಿದೆ. ಇದಷ್ಟೇ ಅಲ್ಲದೇ ಒಂದೇ ಹುದ್ದೆ ಅಥವಾ ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯ ನಿರ್ವಹಿಸುತ್ತಿರುವಂತ ಸಿಬ್ಬಂದಿಗಳ ವರ್ಗಾವಣೆ ಅಗತ್ಯವಿದ್ದರೇ, ಅದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನೂ ಸಲ್ಲಿಸುವಂತೆ ಸೂಚಿಸಿದೆ. ಅಂದಹಾಗೇ ಒಂದೇ ಸ್ಥಳದಲ್ಲಿ ದೀರ್ಘಾವಧಿಯವರೆಗೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನಲೆಯಲ್ಲಿ ಈ ಕಂದಾಯ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜುಲೈ.8ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಓಗಳೊಂದಿಗೆ…
ಬೆಂಗಳೂರು: ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ತಮ್ಮ ವಿರುದ್ಧ ಸಾಬೀತಾದಂತ ಆರೋಪಗಳಿಗೆ ಯಾವೆಲ್ಲ ಶಿಕ್ಷೆ ಆಗಲಿವೆ ಅಂತ ಗೊತ್ತಿಲ್ಲ. ಇಂತಹ ರಾಜ್ಯ ಸರ್ಕಾರಿ ನೌಕರರಿಗೆ ನೌಕರನ ವಿರುದ್ಧ ಸಾಬೀತಾದ ಆರೋಪಗಳಿಗೆ ಅನುಗುಣವಾಗಿ ಯಾವೆಲ್ಲ ದಂಡನೆಗಳನ್ನು ವಿಧಿಸಬಹುದಾಗಿದೆ ಅಂತ ಮುಂದೆ ಓದಿ. ಈ ಬಗ್ಗೆ 2001ರಲ್ಲಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದು, ಅದರಲ್ಲಿ ರಾಜ್ಯ ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ, ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಯ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಡಾದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದರು. ಇದೀಗ ರಾಜ್ಯ ಸರ್ಕಾರದಿಂದ ಮುಡಾ ಅಕ್ರಮ ಕುರಿತಂತೆ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಈ ಕುರಿತು ದಿನ ಪತ್ರಿಕೆಗಳಲ್ಲಿ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪುಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ ಅಂತ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ, ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು Commission of Inquiry Act, 1952ರ ನಿಯಮ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಆಡಳಿತಾಧಿಕಾರಿಯ ಅವಧಿಯಲ್ಲಿ ತಮ್ಮ ಸೊಸೆಯಂದಿರಿಗೆ ಅಕ್ರಮವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 48 ಸೈಟುಗಳನ್ನು ಹಂಚಿಕೆ ಮಾಡಿದ್ದಾರೆ ಅಂತ ಕಾಂಗ್ರೆಸ್ ಗುರುತರ ಆರೋಪ ಮಾಡಿದೆ. ಸಿಎಂ ಸಿದ್ಧರಾಮಯ್ಯ ಪತ್ನಿ ವಿರುದ್ಧದ ಮುಡಾ ಅಕ್ರಮದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷದ ಕಡೆಗೆ ಬಾಣ ತಿರುಗಿಸಲಾಗಿದೆ. ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ತಿನಲ್ಲಿ ಮಾರ್ಚ್.17, 2021ರಂದು ಸದನದಲ್ಲಿ ನಡೆದ ಚರ್ಚೆಯ ಸಾರಾಂಶವನ್ನು ಸರ್ಕಾರದ ಮುಂದೆ ಇಟ್ಟಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಹಂಚಿಕೊಂಡಿರುವಂತ ಮಾಹಿತಿಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಹೆಚ್.ಡಿ ದೇವೇಗೌಡರ ಆಡಳಿತದಲ್ಲಿ ತಮ್ಮ ಸೊಸೆಯಂದಿರಿಗೆ 48 ಸೈಟುಗಳನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪದ ಬ್ಗಗೆ ಮಾತನಾಡಿದ ಮಾಹಿತಿಯ ಪತ್ರವನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ ಅಂತ ತಿಳಿಸಿದೆ. 2011ರಲ್ಲಿ ಮೂಡಾ ನಿವೇಶನ ಅಕ್ರಮ ಹಂಚಿಕೆ ಕುರಿತು ಬಿಜೆಪಿಯಿಂದ ಜೆಡಿಎಸ್ ಮೇಲೆ ಗುರುತರ ಆರೋಪ 1. ಮೈಸೂರಿನ ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ 17-03-2011 ರಲ್ಲಿ ಅಂದಿನ ಮುಖ್ಯಮಂತ್ರಿ ಶ್ರೀ ಬಿ.ಎಸ್…
ಲಂಡನ್: ಕಳೆದ ವರ್ಷದ ವಿಂಬಲ್ಡನ್ ಫೈನಲ್ ಪಂದ್ಯದಲ್ಲಿ ಸ್ಪೇನ್ ನ ಕಾರ್ಲೋಸ್ ಅಲ್ಕರಾಜ್ ಅವರು ಸರ್ಬಿಯಾದ ನೊವಾಕ್ ಜೊಕೊವಿಕ್ ಅವರನ್ನು 6-2, 6-2, 7-6 (7-4) ಸೆಟ್ ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡರು. ಎರಡು ವಿಂಬಲ್ಡನ್ ಗೆಲುವುಗಳು, 2022 ರಲ್ಲಿ ಯುಎಸ್ ಓಪನ್ ಗೆಲುವು ಮತ್ತು ಕಳೆದ ತಿಂಗಳು ಫ್ರೆಂಚ್ ಓಪನ್ ಗೆಲುವಿನ ನಂತರ ಅಲ್ಕರಾಜ್ ಈಗ ಪ್ರಮುಖ ಫೈನಲ್ಗಳಲ್ಲಿ ಪರಿಪೂರ್ಣ ದಾಖಲೆಯೊಂದಿಗೆ ನಾಲ್ಕು ಗ್ರ್ಯಾಂಡ್ ಸ್ಲಾಮ್ ಟ್ರೋಫಿಗಳನ್ನು ಹೊಂದಿದ್ದಾರೆ. ಈ ಸೋಲಿನಿಂದಾಗಿ ಜೊಕೊವಿಕ್ 25ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು ಮತ್ತು ಸಾರ್ವಕಾಲಿಕ ಪಟ್ಟಿಯಲ್ಲಿ ಮಾರ್ಗರೇಟ್ ಕೋರ್ಟ್ ಅವರನ್ನು ಹಿಂದಿಕ್ಕಿದರು ಮತ್ತು ವಿಂಬಲ್ಡನ್ ನಲ್ಲಿ ಎಂಟು ಪುರುಷರ ಸಿಂಗಲ್ಸ್ ಪ್ರಶಸ್ತಿಗಳನ್ನು ಗೆದ್ದ ರೋಜರ್ ಫೆಡರರ್ ಅವರ ದಾಖಲೆಯನ್ನು ಸರಿಗಟ್ಟಿದರು. 14 ನಿಮಿಷಗಳ ಕಾಲ ನಡೆದ ಮೊದಲ ಗೇಮ್ ನಲ್ಲಿ ಅಲ್ಕರಾಜ್ ಐದನೇ ಬ್ರೇಕ್ ಪಾಯಿಂಟ್ ಗಳಿಸಿದರು, ನಂತರ 21 ವರ್ಷದ ಮೂರನೇ ಶ್ರೇಯಾಂಕದ ಆಟಗಾರ ಸುತ್ತಿಗೆಯನ್ನು ಕೆಳಗಿಳಿಸಿ ಆರಂಭಿಕ…
ಉತ್ತರ ಕನ್ನಡ: ನಾಳೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆ ಜಿಲ್ಲೆಯಾಧ್ಯಂತ ಆಗಲಿದೆ ಅಂತ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ಧಾಪುರ, ಜೋಯಿಡಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಅಂದಹಾಗೇ ಹವಾಮಾನ ಇಲಾಖೆಯಿಂದ ಮುಂದಿನ 4 ದಿನಗಳವರೆಗೂ ಭಾರೀ ಮಳೆಯಾಗಲಿದೆ ಅಂತ ಮುನ್ಸೂಚನೆ ನೀಡಿದೆ. ಜೊತೆಗೆ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈಗಾಗಲೇ ಒಂದು ವಾರಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದರ ನಡುವೆ ಮತ್ತೆ ನಾಲ್ಕು ದಿನ ಭಾರೀ ಮಳೆ ಉತ್ತರ ಕನ್ನಡ…
ಮುಂಬೈ: ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಪಂಡಿತ್ ಅವರ ವಿವಾಹವು ( Anant Ambani and Radhika Merchant’s wedding ) ಅದ್ಧೂರಿಯಾಗಿ ನಡೆಯುತ್ತಿದೆ. ಈ ಮದುವೆಗೆ ಅಮಂತ್ರಣ ಇತ್ತವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶವಿದೆ. ಹೀಗಿದ್ದರೂ ಅವರ ಮದುವೆಗೆ ಆಹ್ವಾನವಿಲ್ಲದೆ ಪ್ರವೇಶಿಸಿದಂತ ಇಬ್ಬರು ಯೂಟ್ಯೂಬರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಅನಂತ್ ಅಂಬಾನಿ ಮದುವೆಗೆ ( anant ambani wedding ) ಆಹ್ವಾನಿವಿಲ್ಲದೇ ಪ್ರವೇಶಿಸಿದಂತ ಇಬ್ಬರು ಯ್ಯೂಟೂಬರ್ ಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅನುಮತಿಯಿಲ್ಲದೆ ಪ್ರವೇಶಿಸಿದವರಲ್ಲಿ ಒಬ್ಬರು ಯೂಟ್ಯೂಬರ್ ವೆಂಕಟೇಶ್ ನರಸಯ್ಯ ಅಲ್ಲೂರಿ (26) ಮತ್ತು ಇನ್ನೊಬ್ಬ ವ್ಯಕ್ತಿ ಲುಕ್ಮಾನ್ ಮೊಹಮ್ಮದ್ ಶಫಿ ಶೇಖ್ (28) ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಮುಂಬೈನ ಬಿಕೆಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರು ಮದುವೆಯಲ್ಲಿ ಭಾಗವಹಿಸಲು ಆಂಧ್ರಪ್ರದೇಶದಿಂದ ಬಂದಿದ್ದರು. ಎರಡೂ ಪ್ರಕರಣಗಳಲ್ಲಿ ನೋಟಿಸ್ ನೀಡಿ ಕಾನೂನು ಕ್ರಮ…
ಜಮ್ಮು-ಕಾಶ್ಮೀರ: ಇಲ್ಲಿನ ಕುಪ್ವಾರಾದ ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ಇಂದು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಅಲ್ಲದೇ ಗಡಿ ನಿಯಂತ್ರಣ ರೇಖೆಯ ಒಳಗೆ ನುಸುಳಲು ಯತ್ನಿಸಿದಂತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ 3 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಜೊತೆಗೆ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. https://twitter.com/ANI/status/1812490857007690069 ಸದ್ಯ ಜಮ್ಮು ಕಾಶ್ಮೀರದ ಕುವ್ಪಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಅಂತ ಭಾರತೀಯ ಸೇನೆ ಮಾಹಿತಿ ನೀಡಿದೆ. https://kannadanewsnow.com/kannada/445-dengue-cases-reported-across-the-state-today-taking-the-number-of-active-cases-to-9527/ https://kannadanewsnow.com/kannada/education-department-to-take-major-steps-to-improve-sslc-results/
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಿಂದ ತಿಳಿದು ಬಂದಿದೆ. https://kannadanewsnow.com/kannada/education-department-to-take-major-steps-to-improve-sslc-results/ https://kannadanewsnow.com/kannada/indias-full-schedule-at-paris-olympics-2024/