Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಅದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಸರ್ಕಾರ ಜಾತಿ ಗಣತಿ ಪರವಾಗಿದೆ . ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು. ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆ ಆಗ್ರಹಿಸಿದಾಗ 1992 ರ ಇಂದಿರಾ ಸಹಾನಿ ಕೇಸನ್ನು ಉಲ್ಲೇಖಿಸಿ ಮೀಸಲಾತಿ ಶೇಕಡ 50ರಷ್ಟು ಮೀರಬಾರದು ಎನ್ನುವ ಅಂಶವನ್ನು ಸಭೆಗೆ ತಿಳಿಸುತ್ತಾ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( EWS)…
ನಮಸ್ಕಾರ ಸ್ನೇಹಿತರೆ ಈ ದಿನ ನಾವು ತುಂಬಾ ಮುಖ್ಯ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಮನುಷ್ಯನ ಜೀವನದಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ಪ್ರತಿನಿತ್ಯ ಎದುರಾಗುತ್ತಲೇ ಇರುತ್ತವೆ ಒಂದು ಸಮಸ್ಯೆಗೆ ಪರಿಹಾರವನ್ನು ಪಡೆದುಕೊಳ್ಳುತ್ತಿದ್ದಂತೆ ಮತ್ತೊಂದು ಸಮಸ್ಯೆ ಹುಟ್ಟಿಕೊಳ್ಳುವುದು ಮನುಷ್ಯನ ಜೀವನದಲ್ಲಿ ಸಾಮಾನ್ಯವಾಗಿರುತ್ತದೆ ಆದರೆ ಸ್ನೇಹಿತರೇ ಸಮಸ್ಯೆಗಳು ಬರುತ್ತಿವೆ ಎಂದು ಹೆದರಿ ನಡೆದಷ್ಟು ಸಮಸ್ಯೆಗಳು ಹೆಚ್ಚಾಗುತ್ತ ಹೋಗುತ್ತವೆ ಸಮಸ್ಯೆಗಳನ್ನು ಎದುರಿಸಿ ನಡೆದರೆ ಖಂಡಿತವಾಗಿಯೂ ಉತ್ತಮ ಜೀವನವನ್ನು ಪಡೆದುಕೊಳ್ಳಬಹುದು ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…
ದಾವಣಗೆರೆ: ವಿಮಾನದಲ್ಲಿ ಸಂಚರಿಸಬೇಕು ಎಂಬುದು ಹಲವರ ಬಯಕೆ. ಹೀಗೆ ಕೂಲಿ ಕಾರ್ಮಿಕರಾಗಿದ್ದಂತ ಆ ಮಹಿಳೆಯರಲ್ಲೂ ಆಸೆ ಬಂದಿತ್ತು. ಇಂತಹ ಮಹಿಳಾ ಕೂಲಿ ಕಾರ್ಮಿಕರ ಆಸೆಯನ್ನು ರೈತನೊಬ್ಬ ಈಡೇರಿಸಿದ್ದಾನೆ. ಹೌದು. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ರೈತನೊಬ್ಬ, ಮಹಿಳಾ ಕೂಲಿ ಕಾರ್ಮಿಕರ ವಿಮಾನದ ಆಸೆಯನ್ನು ಈಡೇರಿಸಿದ್ದಾರೆ. ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಂತ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಶಿರಗನಹಳ್ಳಿಯ ರೈತ ವಿಶ್ವನಾಥ್ ಎಂಬುವರೇ ಹತ್ತು ಜನ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಮಾಡಿಸಿ, ಆಸೆ ಪೂರೈಸಿದಂತವರಾಗಿದ್ದಾರೆ. ಅವರ ತೋಟದಲ್ಲಿ ಕೂಲಿ ಕೆಲಸಕ್ಕೆ ಇದ್ದಂತ ಮಹಿಳೆಯರು ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣಿಸಬೇಕು ಎನ್ನುವಂತ ಆಸೆ ವ್ಯಕ್ತ ಪಡಿಸಿದ್ದಾರೆ. ಈ ಆಸೆಯನ್ನು ಕಾರ್ಯರೂಪಕ್ಕೆ ತಂದು, ಶಿವಮೊಗ್ಗ ಏರ್ ಪೋರ್ಟ್ ನಿಂದ ಗೋವಾದವರೆಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಆ ಮೂಲಕ ವಿಮಾನಯಾನ ಭಾಗ್ಯವನ್ನು ರೈತ ಕಲ್ಪಿಸಿದ್ದಾನೆ. ರೈತ ವಿಶ್ವನಾಥ್ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/no-escoms-are-in-curring-losses-in-the-state-minister-kj-george/ https://kannadanewsnow.com/kannada/good-news-for-farmers-in-the-state-7-hour-power-supply-to-agriculture-minister-k-j-george/
ದಾವಣಗೆರೆ : ರಾಜ್ಯದಲ್ಲಿರುವ ಯಾವುದೇ ಎಸ್ಕಾಂಗಳು ನಷ್ಟದಲ್ಲಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಎಸ್ಕಾಂಗಳು ನಷ್ಟದಲ್ಲಿವೆ ಎಂಬುದು ಕೇವಲ ಆರೋಪವಷ್ಟೆ. ಸರ್ಕಾರದಿಂದ ಸಾಕಷ್ಟು ಹಣ ಬರಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ನಮಗೆ ಬರಬೇಕಾದ ಹಣ ಬಾಕಿ ಇದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಂಡು ಸ್ವಾವಲಂಭನೆ ಸಾಧಿಸಲು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಉದ್ದೇಶಿಸಲಾಗಿದೆ. ಪ್ರಾಯೋಗಿಕವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ, ಸೋಲಾರ್ ಪ್ಯಾನಲ್ ಅಳವಡಿಸಲಾಗುತ್ತದೆ. ಹೆಚ್ಚುವರಿ ವಿದ್ಯುತ್ತನ್ನು ಗ್ರಿಡ್‍ಗೆ ನೀಡಿದರೆ ಹೆಚ್ಚುವರಿ ಅಗತ್ಯ ಇರುವಾಗ ಅಷ್ಟೆ ವಿದ್ಯುತ್‍ಅನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ಪಂಚಾಯಿತಿಗಳ ಮೇಲಿನ ಹೊರೆ ಕಡಿಮೆಯಾಗಲಿದೆ ಎಂದರು. https://kannadanewsnow.com/kannada/court-allows-darshan-to-travel-to-mysuru-till-feb-20/ https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/
ದಾವಣಗೆರೆ : ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ. ಸರ್ಕಾರದ ಬದ್ದತೆಯಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ರಾಜ್ಯದಲ್ಲಿ ಪ್ರತಿನಿತ್ಯ 18,500 ಮೆಗಾವ್ಯಾಟ್ ಬೇಡಿಕೆ ಇದ್ದು, ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ. 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ ವಿನಿಮಯ…
ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ತೊಡೆತಟ್ಟಿ ಹೇಳಿಕೆ ನೀಡಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಟ್ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಿತ್ತು. ಈ ನೋಟಿಸ್ ಗೆ 9 ಪುಟಗಳ ಉತ್ತರವನ್ನು ನೀಡಿರುವಂತ ಶಾಸಕ ಯತ್ನಾಳ್, ಅದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷ ವಿರೋಧಿ ಹೇಳಿಕೆಯಿಂದಾಗಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ನೀಡಿದ್ದಂತ ನೋಟಿಸ್ ಗೆ 72 ಗಂಟೆಗಳ ಒಳಗಾಗಿ ಉತ್ತಿರಿಸುವಂತೆ ಸೂಚಿಸಲಾಗಿತ್ತು. ಈ ಮೊದಲು ನೀಡಿದ್ದಂತ ನೋಟಿಸ್ ಗೆ ನೀಡಿದ್ದಂತ ಉತ್ತರಕ್ಕೆ ಬಿಜೆಪಿ ಹೈಕಮಾಂಡ್ ತೃಪ್ತಿಯಾಗಿಲ್ಲ ಎನ್ನಲಾಗಿತ್ತು. ಇನ್ನೂ ಬಿಜೆಪಿ ಹೈಕಮಾಂಡ್ ನೀಡಿದ್ದಂತ 2ನೇ ನೋಟಿಸ್ ಗೆ ಶಾಸಕ ಯತ್ನಾಳ್ ಬರೋಬ್ಬರಿ 9 ಪುಟಗಳ ಪ್ರತ್ಯುತ್ತರ ನೀಡಿದ್ದಾರೆ ಎನ್ನಲಾಗಿದೆ. ಈ ಉತ್ತರವು ಈ ಹಿಂದೆ ನೀಡಿದ್ದಂತ ಉತ್ತರವನ್ನೇ ಕಾಪಿ ಪೇಸ್ಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗಿರುವಂತ ನಟ ದರ್ಶನ್ ಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಫೆಬ್ರವರಿ 20ರವರೆಗೆ ಮೈಸೂರಿನಲ್ಲಿ ಇರಲು ಅನುಮತಿ ನೀಡಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿ ಜಾಮೀನು ಪಡೆದು ನಟ ದರ್ಶನ್ ಬಿಡುಗಡೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿರುವಂತ ಅವರು ವೈದ್ಯರನ್ನು ಭೇಟಿಯಾಗುವ ಸಂಬಂಧ ಮೈಸೂರಿಗೆ ತೆರಳಬೇಕಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯವು ಫೆಬ್ರವರಿ 20ರವರೆಗೆ ಮೈಸೂರಿಗೆ ತೆರಳಲು, ವೈದ್ಯರನ್ನು ಭೇಟಿಯಾಗಲು ಅನುಮತಿ ನೀಡಿದೆ. ಈ ಮೂಲಕ ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ. https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/ https://kannadanewsnow.com/kannada/breaking-good-news-for-state-government-employees-casual-leave-granted-on-feb-20/
ಬೆಳಗಾವಿ: ಇಲ್ಲಿನ ದರ್ಗಾ ಬಳಿಯೇ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡ ಪರಿಣಾಮ ಜನರು ಬೆಚ್ಚಿ ಬಿದ್ದಿರುವಂತ ಘಟನೆ ನಡೆದಿದೆ. ಕಲ್ಲು ಗಣಿಗಾರಿಕೆಯ ಕ್ರಷರ್ ನಲ್ಲಿದ್ದಂತ ಜಿಲೆಟಿನ್ ಕಟ್ಟಿ ಸ್ಪೋಟದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಬಳಿಯಲ್ಲಿ ದರ್ಗಾ ಬಳಿಯಲ್ಲೇ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡಿದ್ದಾವೆ. ಉದಯ್ ಶಿವಕುಮಾರ್ ಎಂಬುವರು ದರ್ಗಾ ಬಳಿಯೇ ಕ್ರಷರ್ ನಡೆಸುತ್ತಿದ್ದರು ಎನ್ನಲಾಗಿದೆ. ಕ್ರಷರ್ ನಡೆಸುತ್ತಿದ್ದಂತ ಗುಡ್ಡಕ್ಕೆ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ. ಈ ಬೆಂಕಿಯ ಕಿಡಿ ಕ್ರಷರ್ ನಲ್ಲಿದ್ದಂತ ಶೆಡ್ಡಿಗೆ ತಾಗಿದೆ. ಇದರಿಂದಾಗಿ ಶೆಡ್ಡಿನಲ್ಲಿದ್ದಂತ ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡಿವೆ ಎನ್ನಲಾಗಿದೆ. ಜಿಲೆಟಿನ್ ಕಟ್ಟಿಗಳು ಸ್ಪೋಟಗೊಂಡ ಹಿನ್ನಲೆಯಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ನಡುಕ ಕೂಡ ಆಗಿದೆ. ಹೀಗಾಗಿ ಅಕ್ಕಪಕ್ಕದ ಜನರು ಬೆಚ್ಚಿ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. https://kannadanewsnow.com/kannada/social-exclusion-still-alive-in-the-state-village-administration-to-remove-meenamesh/ https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/
ಮಂಡ್ಯ : ಸದಸ್ಯರಲ್ಲದವರಿಗೆ ಪ್ರವೇಶ ನೀಡಿ ಅಕ್ರಮವಾಗಿ ಜೂಜಾಟ ಆಡಿಸುತ್ತಿದ್ದ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯ ಕ್ಲಬ್ ಮೇಲೆ ಮಳವಳ್ಳಿ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ್ದು, 71 ಮಂದಿಯನ್ನು ವಶಕ್ಕೆ ಪಡೆದು 99.970 ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಶ್ರೀ ವರದರಾಜ ರೀ ಕ್ರಿಯೇಷನ್ ಕ್ಲಬ್ ( ಕುಳ್ಳರಾಜ ಕ್ಲಬ್ ) ಮೇಲೆ ಭಾನುವಾರ ದಾಳಿ ಮಾಡಿರುವ ಮಳವಳ್ಳಿ ಗ್ರಾಮಾಂತರ ವೃತ್ತ ನಿರೀಕ್ಷಕ ಪಿ.ಜಿ.ಮಹೇಶ್ ಹಾಗೂ ಸಿಬ್ಬಂದಿಗಳು ರಾಮನಗರ, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಕ್ಲಬ್ ಸದಸ್ಯರಲ್ಲದವರು ಜೂಜಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅವರಿಂದ 99 ಸಾವಿರದ 970 ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಜೂಜಾಟದಲ್ಲಿ ತೊಡಗಿದ್ದ 71 ಮಂದಿಯನ್ನು ವಶಕ್ಕೆ ಪಡೆದು, ಅವರಿಂದ 99.970 ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಬಹುತೇಕರು, ಕ್ಲಬ್ ಸದಸ್ಯರಲ್ಲ. ಅಕ್ರಮವಾಗಿ ಕ್ಲಬ್‌ಗೆ ಬಂದು ಜೂಜಾಟದಲ್ಲಿ ತೊಡಗಿದ್ದರು. ಕ್ಲಬ್ ಆಡಳಿತ ಮಂಡಳಿ…
ಬೆಂಗಳೂರು : ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು. ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಕೆ.ಎನ್.ರಾಜಣ್ಣರವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ…












