Author: kannadanewsnow09

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ತಮ್ಮ ಪರ ಒಲವು ತೋರಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು, ಶಿಕ್ಷಕರ ಸೇವೆ ಮಾಡೋದು ಖಚಿತ ಅಂತ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರಿನಲ್ಲಿ ವಿಶೇಷ ಸಭೆಯನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಾ. ಕೆ. ಕೆ. ಮಂಜುನಾಥ್ ಕುಮಾರ್ ಅವರು ನಡೆಸಿದರು. ಇದರಲ್ಲಿ ಚಿಕ್ಕಮಗಳೂರಿನ ಎಲ್ಲಾ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಚಿಕ್ಕಮಗಳೂರು ಶಾಸಕ HD ತಮ್ಮಯ್ಯನವರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವಿನ ಸನಿಹದಲ್ಲಿ ಇದ್ದಾರೆ. ಎಲ್ಲಾ ಶಿಕ್ಷಕರನ್ನು ಮನಸ್ಸು ಮಾಡಿದರೆ ಅಸಾಧ್ಯವಾದುದನ್ನು ಸಾಧಿಸಬಹುದು ಎಂದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ. ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಶಿಕ್ಷಕರ ಮೇಲೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದ್ದು, ಗೆಲುವಿನ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ. ನೈರುತ್ಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದು, ಶಿಕ್ಷಕರ ಸೇವೆ ಮಾಡೋದು…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ. ಅಲ್ಲದೇ ಸಚಿವ ನಾಗೇಂದ್ರ ಅವರ ಹೆಸರು ಕೂಡ ಬರೆದಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯುತ್ತಿದೆ ಎಂಬುದಾಗಿ ವಾಗ್ಧಾಳಿ ನಡೆಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ನಡೆದ ₹187.33 ಕೋಟಿ ಹಗರಣ ಸಂಬಂಧ ಸಚಿವ ನಾಗೇಂದ್ರ ಅವರು ಸೇರಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ ಎಂದಿದೆ. ಹಗರಣದ ಪ್ರಮುಖ ಆರೋಪಿ ಸಚಿವ ಬಿ. ನಾಗೇಂದ್ರ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಸಿದ್ಧರಾಮಯ್ಯ ಅವರು ಕೂಡಲೇ ಕಳಂಕಿತ ಸಚಿವರನ್ನು ಸಂಪುಟದಿಂದ ವಜಾಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದೆ. https://twitter.com/BJP4Karnataka/status/1795069287700549784 https://kannadanewsnow.com/kannada/breaking-bhavani-revanna-seeks-anticipatory-bail-in-woman-kidnapping-case/ https://kannadanewsnow.com/kannada/ministers-and-bureaucrats-dont-you-have-sisters-sisters-and-mothers-hd-kumaraswamy/

Read More

ಬೆಂಗಳೂರು: “ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಮೋಜಿ ಗೌಡ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷರಾದ ವಿ.ಆರ್ ಸುದರ್ಶನ್, ಮಾಜಿ ಸದಸ್ಯ ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಸೋಮವಾರ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಜೂನ್ 3ರಂದು ನಡೆಯಲಿರುವ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿ ರಾಮೋಜಿ ಗೌಡರು ಸ್ಪರ್ಧಿಸಿದ್ದಾರೆ. ಈ ಬಾರಿ ಅವರು ಮೊದಲ ಸ್ಥಾನ ಪಡೆಯುವ ವಿಶ್ವಾಸವಿದೆ. ವಿರೋಧ ಪಕ್ಷದವರಿಗೆ ಇದನ್ನು ಅರಗಿಸಿಕೊಳ್ಳಲಾಗದೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಸಾಮಾನ್ಯವಾಗಿ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಿರಲಿಲ್ಲ. ಇತ್ತೀಚೆಗೆ ಮಧು ಮಾದೇಗೌಡರು, ಪ್ರಕಾಶ್ ಹುಕ್ಕೇರಿ ಗೆದ್ದಿದ್ದಾರೆ. ಈಗ ಮೂರು ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು,…

Read More

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಾಜ್ ಹೋಟೆಲ್ ಸ್ಫೋಟಿಸುವುದಾಗಿ ಮುಂಬೈ ಪೊಲೀಸ್ ಕಂಟ್ರೋಲ್ ಗೆ ಸೋಮವಾರ ಬಾಂಬ್ ಬೆದರಿಕೆ ಬಂದಿದೆ. ಮುಂಬೈ ಪೊಲೀಸರ ನಿಯಂತ್ರಣ ಕೊಠಡಿಗೆ ಮಧ್ಯಾಹ್ನದ ವೇಳೆಗೆ ಬೆದರಿಕೆ ಕರೆ ಬಂದಿದೆ. ಮುಂಬೈನ ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಮತ್ತು ಕರೆಯನ್ನು ಕಡಿತಗೊಳಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬೆದರಿಕೆಯ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಿದರು. ಆದರೆ ಅಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಅವರು ಹೇಳಿದರು. ಬಾಂಬ್ ಬೆದರಿಕೆ ಕರೆ ಉತ್ತರ ಪ್ರದೇಶದಿಂದ ಬಂದಿದೆ ಮತ್ತು ಕರೆ ಮಾಡಿದವರನ್ನು ಬಂಧಿಸೋ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು. https://kannadanewsnow.com/kannada/breaking-bhavani-revanna-seeks-anticipatory-bail-in-woman-kidnapping-case/ https://kannadanewsnow.com/kannada/ministers-and-bureaucrats-dont-you-have-sisters-sisters-and-mothers-hd-kumaraswamy/

Read More

ಬೆಂಗಳೂರು : “ಆರು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಶಾಸಕರು, ಸಚಿವರು ಹಾಗೂ ಮುಖಂಡರು ಒಟ್ಟಾಗಿ ಜವಾಬ್ದಾರಿ ತೆಗೆದುಕೊಂಡು ಚುನಾವಣೆ ನಡೆಸುವಂತೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣೆ ಸಂಬಂಧ ಜೂಮ್ ವಿಡಿಯೋ ಸಂವಾದ ಮೂಲಕ ಪಕ್ಷದ ಪದಾಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರ ಪದವೀಧರರ, ಶಿಕ್ಷಕರ ಮತ್ತು ರಾಜ್ಯದ ಪ್ರಗತಿಗೆ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡುತ್ತೇನೆ. ಶಾಸಕರು, ಸಚಿವರು ಹಾಗೂ ಮುಖಂಡರು ಪಕ್ಷದ ಅಭ್ಯರ್ಥಿಗಳ ಪರವಾಗಿ ಹೆಚ್ಚಿನ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದರು. ಎಸ್ ಐಟಿ ಮುಂದೆ ಶರಣಾಗುತ್ತೇನೆ, ಇದೆಲ್ಲಾ ಕಾಂಗ್ರೆಸ್ ಪಿತೂರಿ ಎಂಬ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಗ್ಗೆ ಕೇಳಿದಾಗ, “ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗದೇ…

Read More

ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ ಜನತೆಯನ್ನು ಬಲಿ ಪಡೆಯುತ್ತಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ಅವರು ಈ ಸರಕಾರದ ಭ್ರಷ್ಟಾಚಾರದ ಬಲಿಪಶುವಾಗಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು. ತಮ್ಮ ಡೆತ್ ನೋಟ್‍ನಲ್ಲಿ ನಿಗಮದ ಎಂ.ಡಿ. ಪದ್ಮನಾಭ, ಇನ್ನೊಬ್ಬ ಅಧಿಕಾರಿ ಹೆಸರನ್ನು ಬರೆದಿದ್ದು, ಈ ಇಲಾಖೆಯ ಸಚಿವರ ಮೌಖಿಕ ಆದೇಶದ ಪ್ರಕಾರ ಇಷ್ಟೆಲ್ಲ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ. ತಮಗೆ ಬೆದರಿಕೆ ಒಡ್ಡಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಿದ್ದ 187 ಕೋಟಿ ರೂಪಾಯಿಗಳನ್ನು ಮಾನ್ಯ ಸಚಿವರು, ನಿಗಮದ ಎಂ.ಡಿ. ಮತ್ತು ಅಧಿಕಾರಿಗಳು ಸೇರಿ ನಕಲಿ…

Read More

ಬೆಂಗಳೂರು: ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಇಡೀ ವಾರ ಬೆಂಗಳೂರಿನಲ್ಲಿ ಒಂದು ಹನಿ ಮದ್ಯ ಸಿಗುವುದಿಲ್ಲ. ವಿಧಾನ ಪರಿಷತ್ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಮತ ಎಣಿಕೆ ಇರುವುದರಿಂದ ಜೂನ್ 1 ರಿಂದ 4, ಮತ್ತು 6 ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ ಬಾರ್ ಮತ್ತು ರೆಸ್ಟೋರೆಂಟ್‌ಗಳು ಆಲ್ಕೊಹಾಲ್ ಹೊರತುಪಡಿಸಿ ಉಳಿದಂತೆ ಗ್ರಾಹಕರಿಗೆ ಆಹಾರವನ್ನು ಸರಬರಾಜು ಮಾಡಬಹುದಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಜೂನ್ 1 ರಂದು ಮಧ್ಯಾಹ್ನ 1 ಗಂಟೆಯಿಂದ ಜೂನ್ 4 ರ ಮಧ್ಯ ರಾತ್ರಿ 12 ವರೆಗೆ ಮದ್ಯವನ್ನು ಮಾರಾಟ ಅಥವಾ ಪೂರೈಕೆ ಮಾಡುವಂತಿಲ್ಲ. 5 ರಂದು ಎಂದಿನಂತೆ ಮದ್ಯ ಮಾರಾಟಕ್ಕೆ ಅವಕಾಶವಿದ್ದು, ಜೂನ್ 6 ರಂದು ಮತ್ತೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂನ್ 3 ರಂದು ನಡೆಯಲಿದೆ. ಜೂನ್ 4 ರಂದು ಲೋಕಸಭಾ…

Read More

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಸಕ್ರಿಯ ಮುಖಂಡರಾದಂತ ಸಿ.ಶಿವು ಯಾದವ್ ಗೆ ಕಾಂಗ್ರೆಸ್ ಪಕ್ಷದಿಂದ ಎಂ.ಎಲ್.ಸಿ ಸ್ಥಾನ ನೀಡುವಂತೆ ಕಾಡುಗೊಲ್ಲ ಮುಖಂಡರು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕರ್ನಾಟಕ ರಾಜ್ಯ ಕಾಡುಗೊಲ್ಲ ಕಾರ್ಯಾಧ್ಯಕ್ಷರಾದಂತ ತಿಮ್ಮಯ್ಯ ಕೆ ಮ್ಯಾಕ್ಲೂರಹಳ್ಳಿ ಅವರು, ಶ್ರೀ ಸಿ ಶಿವು ಯಾದವ್‌ ಪ್ರಗತಿಪರ ಚಿಂತಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾಗಿರುತ್ತಾರೆ. ಸುಮಾರು 35 ವರ್ಷಗಳಿಂದಲೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‌ ಸಮಿತಿಯಲ್ಲಿ ಪದಾಧಿಕಾರಿಗಳಾಗಿ ಪಕ್ಷ ಸಂಘಟನೆ ಮಾಡಿರುತ್ತಾರೆ. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸಹಾ ಕಾರ್ಯನಿರ್ವಾಹಿಸಿರುತ್ತಾರೆ. ಅವರು ಕರ್ನಾಟಕ ರಾಜ್ಯ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾಗಿ ರಾಜ್ಯದಲ್ಲಿ ಕಾಡುಗೊಲ್ಲ ಜನಾಂಗದಲ್ಲಿ ಸಕ್ರಿಯಾವಾಗಿ ತೊಡಗಿಸಿಕೊಂಡು ಮುಂಚೂಣಿಯಲ್ಲಿರುತ್ತಾರೆ ಎಂದಿದ್ದಾರೆ. ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಉಪಾದ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಜಿಲ್ಲಾ ವಕೀಲರ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಸಿ ಶಿವು ಯಾದವ್‌ ಅವರು 2013, 2018 ಹಾಗೂ 2023ರಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ…

Read More

ಕತಾರ್: ದೋಹಾದಿಂದ ಐರ್ಲೆಂಡ್ಗೆ ತೆರಳುತ್ತಿದ್ದ ಕತಾರ್ ಏರ್ವೇಸ್ ವಿಮಾನದಲ್ಲಿ ಪ್ರಕ್ಷುಬ್ಧತೆಯಿಂದಾಗಿ ಕನಿಷ್ಠ 12 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಇದೊಂದು ಬ್ರೇಕಿಂಗ್ ಸ್ಟೋರಿ.

Read More

ಆಹಾರ ಸೇವನೆಯಲ್ಲೂ ಕೆಲವೊಂದು ನಿಯಮಗಳು ಇವೆ. ಈ 5 ಆಹಾರ ಪದ್ಧತಿಯನ್ನು ಪಾಲಿಸಿದರೆ ಮನೆಯಲ್ಲಿ ಬಡತನ ತಾಂಡವಾಡುತ್ತದೆ. ಭೀಷ್ಮರು ಅರ್ಜುನನಿಗೆ ಹೇಳಿದ ಆ 5 ಆಹಾರ ಗುಟ್ಟೇನು ಕೂದಲು ಬಿದ್ದ ಆಹಾರವನ್ನು ಸೇವಿಸಿದರೆ ಏನಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…

Read More