Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ 80ಕ್ಕೂ ಅಧಿಕ ಅಂಕಪಡೆದ ನೌಕರರ ಮಕ್ಕಳಿಗೆ ಸನ್ಮಾನ ಸಮಾರಂಭವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮಕ್ಕಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಇಂಜಿನಿಯರಿಂಗ್ ಮಾಡುತ್ತಿರುವ ಮಕ್ಕಳಿಗೆ ಪ್ರತಿ ವರ್ಷ 5 ಸಾವಿರದಿಂದ 50 ಸಾವಿರ ರೂ.ಗಳವರೆಗೂ ಪ್ರೋತ್ಸಾಹಧನ ಹೆಚ್ಚಿಸಿ ನೀಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಪ್ರಸ್ತುತ ನಿಗಮದಲ್ಲಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಕೊಡುವ ವಿದ್ಯಾರ್ಥಿ ವೇತನ ಈ ಹಿಂದೆ ವರ್ಷಕ್ಕೆ ರೂ 2 ರಿಂದ ರೂ 3 ಲಕ್ಷಗಳವರಗೆ ಮಾತ್ರ ಪಾವತಿಯಾಗುತ್ತಿತ್ತು. ಈಗ ಪ್ರತಿ ವರ್ಷ ರೂ. 1.70 ಯಿಂದ ರೂ.1.87 ಕೋಟಿ ರೂಪಾಯಿಯಷ್ಟು ವಿದ್ಯಾರ್ಥಿ ವೇತನವನ್ನು ಸಿಬ್ಬಂದಿಗಳ ಮಕ್ಕಳಿಗೆ…
ಮಂಗಳೂರು : ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು. ಅಂಗನವಾಡಿ ಹೆಸರು ಬದಲಾವಣೆ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು ಎಂದು ಸಚಿವರು ತಿಳಿಸಿದರು. ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ.…
ಕ್ಷೌರದ ನಿಯಮಗಳು ಕ್ಷೌರಕ್ಕೆ ವಿಹಿತ ಮತ್ತು ನಿಷಿದ್ಧ ವಾರಗಳು ಯಾವವು”. ಕ್ಷೌರಕ್ಕೂ, ಆಯುಷ್ಯಕ್ಕು ಸಮಬಂಧವಿದೆ. ಅದಕ್ಕೋಸ್ಕರವಾಗಿಯೇ ಕ್ಷೌರಕ್ಕೆ ” ಆಯುಷ್ಕರ್ಮ” ಎಂಬ ಶಬ್ದ ಪ್ರಸಿದ್ಧವಾಗಿತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಮುಂಬರುವ ಟೀಂ ಇಂಡಿಯಾ ಪುರುಷರ ತಂಡದ ಶ್ರೀಲಂಕಾ ಪ್ರವಾಸದ ಪರಿಷ್ಕೃತ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಪ್ರವಾಸದ ಆರಂಭಿಕ ವೇಳಾಪಟ್ಟಿಯು ಪಂದ್ಯಗಳು ಜುಲೈ 26 ರಿಂದ ಪ್ರಾರಂಭವಾಗುತ್ತಿವೆ ಎಂದು ಸೂಚಿಸಿದರೆ, ಇದು ಈಗ 27 ರಂದು ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 7 ರವರೆಗೆ ಮುಂದುವರಿಯುತ್ತದೆ, ಇದರಲ್ಲಿ 3 ಏಕದಿನ ಮತ್ತು ಅನೇಕ ಟಿ 20 ಪಂದ್ಯಗಳು ಸೇರಿವೆ. ಆದಾಗ್ಯೂ, ಎಲ್ಲಾ ಪಂದ್ಯಗಳಿಗೆ ಸ್ಥಳಗಳು ಒಂದೇ ಆಗಿರುತ್ತವೆ. 26, 27 ಮತ್ತು 30ರಂದು ಪಲ್ಲೆಕೆಲೆಯಲ್ಲಿ ಎಲ್ಲಾ ಟಿ20 ಪಂದ್ಯಗಳು ನಡೆಯಲಿವೆ. ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಆಗಸ್ಟ್ 2, 4 ಮತ್ತು 7 ರಂದು 50 ಓವರ್ ಗಳ ಪಂದ್ಯಗಳು ನಡೆಯಲಿವೆ. ಕಳೆದ ವರ್ಷ ನಡೆದ 50 ಓವರ್ಗಳ ವಿಶ್ವಕಪ್ನಲ್ಲಿ ಉಭಯ ತಂಡಗಳು ಕೊನೆಯ ಬಾರಿಗೆ ಆಡಿದ್ದು, ಮೆನ್ ಇನ್ ಬ್ಲೂ ಶ್ರೀಲಂಕಾವನ್ನು 357 ರನ್ ಗಳಿಸಿದ ನಂತರ 302 ರನ್ಗಳಿಂದ ಸೋಲಿಸಿತು. ಗೌತಮ್ ಗಂಭೀರ್ ಶ್ರೀಲಂಕಾ ಪ್ರವಾಸದಿಂದ ಕೋಚಿಂಗ್ ಆರಂಭ…
ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡಲು ಪಕ್ಷ ಭೇದ ಮರೆತು ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನವಲಗುಂದ ವಿದಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮಕ್ಕೆ ಶೀಮತಿ ಫಕ್ಕೀರಮ್ಮ ಭ.ದೊಡ್ಡಗಾಣಿಗೇರ ಸರಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಿಸಿದ ಮಾಜಿ ಮುಖ್ಯಮಂತ್ರಿ ದಿ. ಎಸ್.ಆರ್. ಬೊಮ್ಮಾಯಿ ಅವರ ಪುತ್ಥಳಿ ಅನಾವರಣ ಹಾಗೂ ಸರ್ಕಾರದ ವಿವೇಕ ಯೋಜನೆ ಹಾಗೂ ಸಿ.ಎಸ್.ಆರ್. ಯೋಜನೆ ಅಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಕೇಂದ್ರ ಆಹಾರ ಮತ್ತು ನಾಗರೀಕ ಸೇವೆ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಧಾರವಾಡದಿಂದ ನವಲಗುಂದ, ರೋಣ, ಗದಗ ಹಾಗೂ ನರಗುಂದ ವರೆಗೆ ಪಾದಯಾತ್ರೆ ಮಾಡಿ ಈ ಯೋಜನೆ ಜಾರಿ ಮಾಡಲು ಸಾಕಷ್ಟು ಹೋರಾಟ ಮಾಡಿದ ಸಂದರ್ಭದಲ್ಲಿ ಎಲ್ಲರೂ ಬೆಂಬಲಿಸಿದ್ದಾರೆ. ಯೋಜನೆ ಬಗ್ಗೆ ನಮಗೂ ಕೂಡ ಬದ್ಧತೆ ಇದ್ದು ಆದಷ್ಟು ಬೇಗ ಯೋಜನೆ ಜಾರಿಗೆ ಕೇಂದ್ರದಿಂದ…
ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸೋ ನಿಟ್ಟಿನಲ್ಲಿ ಜಿಸಿಸಿ ನೀತಿ ನಿಯಮಾವಳಿಗಳನ್ನು ಸಡಿಲಿಕೆ ಮಾಡಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು ಸಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 27ನೇ ಆವೃತ್ತಿ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ. ಟೆಕ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್ ಬೌಂಡರೀಸ್ʼ ಆಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸತನವನ್ನು ಹೆಚ್ಚಿಸಲು ವೈವಿಧ್ಯಮಯ ವಲಯಗಳ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ಘೋಷವಾಕ್ಯ ಒಳಗೊಂಡಿದೆ. ಶೃಂಗಸಭೆಯಲ್ಲಿ ಕೈಗಾರಿಕೆ ಹಾಗೂ ವ್ಯವಹಾರಗಳನ್ನು ಮರುರೂಪಿಸುತ್ತಿರುವ ತಾಂತ್ರಿಕ ಪ್ರಗತಿಗಳು ಮತ್ತು ಪ್ರವೃತ್ತಿಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/bjp-mla-munirathna-praises-cm-siddaramaiah-on-stage/ https://kannadanewsnow.com/kannada/state-govt-transfers-dead-officer/
ಬೆಂಗಳೂರು: ಬಿಜೆಪಿ ಪಕ್ಷದ ವಿರೋಧಿ ಎಂಬ ಘೋಷಣೆಗೂ ಡೋಂಟ್ ಕೇರ್ ಎನ್ನುವಂತೆ ವೇದಿಕೆಯ ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಶಾಸಕ ವಿ.ಮುನಿರತ್ನ ಅವರು ಹಾಡಿ ಹೊಗಳಿದಂತ ಘಟನೆ ನಡೆದಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬಳಿಯಲ್ಲಿ ಇಂದು ಬಾಬು ಜಗನ್ ಜೀವನ್ ರಾಮ್ ಭವನ, ಸಂಶೋಧನಾ ಸಂಸ್ಥೆಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಬಿಜೆಪಿ ಶಾಸಕ ವಿ ಮುನಿರತ್ನ ಅವರು, ಈಗ ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಸಿದ್ಧರಾಮಯ್ಯ ವಿರುದ್ಧ ಮಾತನಾಡೋದಿಲ್ಲ ಎಂದರು. ನಮ್ಮ ಹೋರಾಟ ಏನಿದ್ದರೂ ಬೇರೆಯೇ ಆಗಿದೆ. ಮುಖ್ಯಮಂತ್ರಿ ಕುರ್ಚಿ ಅಲ್ಲಾಡಿಸೋ ಕೆಲಸ ಮಾಡ್ತಿಲ್ಲ. ವಿರೋಧ ಪಕ್ಷದ ಓರ್ವ ಶಾಸಕನಾಗಿ ಹೇಳುತ್ತೇನೆ. ಬೆಂಗಳೂರು, ಕ್ಷೇತ್ರ ಅಭಿವೃದ್ಧಿಗೆ ಮುಂದಾಗಬೇಕು ಎಂಬುದಾಗಿ ವೇದಿಕೆಯಲ್ಲೇ ಸಿಎಂ ಸಿದ್ಧರಾಮಯ್ಯಗೆ ಮನವಿ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಶಾಸಕ ವಿ.ಮುನಿರತ್ನ ವೇದಿಕೆಯಲ್ಲೇ ಹಾಡಿ ಹೊಗಳಿದ್ದರಿಂತ ಕೋಪಗೊಂಡ ಓರ್ವ ಕಾರ್ಯಕರ್ತನೊಬ್ಬ ಬಿಜೆಪಿ ಪಕ್ಷ ವಿರೋಧಿ ಮುನಿರತ್ನ ಎಂಬುದಾಗಿ ಘೋಷಣೆ ಕೂಗಿದರು. ಮುನಿರತ್ನ…
ಬೆಂಗಳೂರು: ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನಿಗೆ ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಈಗಿರುವಾಗ ಇದು ಖಂಡಿತವಾಗಿಯೂ ಮುಡಾಗೆ ಸೇರಿದ ಜಮೀನು ಆಗುತ್ತದೆ. ಈ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಖರೀದಿಸಲಾಗಿದೆ. ಇದು ಕಾನೂನುಬಾಹಿರ ಎಂದು ಕೇಂದ್ರ ಸಚಿವರು ದೂರಿದರು. ಇದೇ ವೇಳೆ ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಹಗರಣಕ್ಕೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳನ್ನು ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಸಿಎಂ ಸಿದ್ಧರಾಮಯ್ಯ ಅವರ ಧರ್ಮಪತ್ನಿಗೆ ದಾನ ಮಾಡಿದಾಗ ಕೃಷಿ ಭೂಮಿ ಎಂದು ತೋರಿಸುತ್ತಾರೆ. ಆದರೆ, ಆ…
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ್ ರಾಯರೆಡ್ಡಿ ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಆಯವ್ಯಯವು 3 ಲಕ್ಷ 73 ಸಾವಿರ ಕೋಟಿ ರೂಪಾಯಿ ಇದೆ. ಇದರಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷ 20 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಇನ್ನು ಗ್ಯಾರಂಟಿ ಯೋಜನೆಗಳಿಗೆ 58,000 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. ಇನ್ನು ಸಾಮಾಜಿಕ ಪಿಂಚಣಿ, ಸರ್ಕಾರಿ ನೌಕರರ ವೇತನ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆಯು ಸಹ ಸಮರ್ಪಕವಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಮೀಸಲಿಟ್ಟೇ ಎಲ್ಲ ಚಟುವಟಿಕೆಯನ್ನು ನಡೆಸಲಾಗುತ್ತಿದೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಶಾಸಕರಾದ ದಿನೇಶ್ ಗೂಳಿಗೌಡ, ಇಷ್ಟು ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮೊದಲು ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ…
ಬೆಂಗಳೂರು: ಕೆಪಿಸಿಸಿ ಕಚೇರಿ ಸ್ವಚ್ಚತಾ ಸಿಬ್ಬಂದಿಗೆ ಮನೆ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದರು. ರಾಜ್ಯದ ನಾನಾ ಕಡೆಗಳಿಂದ ಬಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿತ್ತಾ, ಸಾಧ್ಯವಿದ್ದವರೆಲ್ಲಾ ಸ್ಥಳದಲ್ಲೇ ಪರಿಹಾರ ಒದಗಿಸಿಕೊಳ್ಳುತ್ತಿದ್ದರು. ಈ ವೇಳೆ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿ ಆಶಾ, ಸುಗಂತಿ, ಜಯಂತಿ ಮತ್ತು ಅರ್ಚನಾ ಅವರು ತಮಗೆ ಮನೆಗಳನ್ನು ಕೊಡಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗೆ ಸ್ಥಳದಿಂದಲೇ ಕರೆ ಮಾಡಿ ಸ್ವಚ್ಛತಾ ಸಿಬ್ಬಂದಿಯ ದಾಖಲೆ ಪರಿಶೀಲನೆ ನಡೆಸಿ ಅರ್ಹತೆ ಆಧಾರದಲ್ಲಿ ಮನೆಗಳನ್ನು ಒದಗಿಸಿಕೊಡುವಂತೆ ಸೂಚಿಸಿದರು. https://kannadanewsnow.com/kannada/in-2011-the-bjp-levelled-serious-allegations-against-the-jds-over-the-illegal-allotment-of-muda-plots/ https://kannadanewsnow.com/kannada/various-development-works-worth-rs-140-crore-to-be-launched-in-soraba-taluk-soon-minister-madhu-bangarappa/