Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2011ರಲ್ಲಿ ಮೂಡಾ ನಿವೇಶನ ಅಕ್ರಮ ಹಂಚಿಕೆ ಕುರಿತು ಬಿಜೆಪಿಯಿಂದ ಜೆಡಿಎಸ್ ಮೇಲೆ ಗುರುತರ ಆರೋಪ ಮಾಡುತ್ತಿರೋದಾಗಿ ಹೇಳಲಾಗುತ್ತಿದೆ. 1. ಮೈಸೂರಿನ ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ 17-03-2011 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಶ್ರೀ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ. 2. ಈ ಆರೋಪದಲ್ಲಿ ಎಚ್. ಡಿ ಕುಮಾರಸ್ವಾಮಿ ರವರಿಗೆ 300 x 200 ಅಡಿ ಅಳತೆಯ (ಸುಮಾರು 60,000 ಅಡಿ) ನಿವೇಶನ ಸಂಖ್ಯೆ.17(ಬಿ) ಹಂಚಿಕೆಯಾಗಿರುವುದಾಗಿ ಹೇಳಿದ್ದಾರೆ. ಅದೇ ರೀತಿ ಅವರ ಕುಟುಂಬದ ಸವಿತಾ ಕೋಂ ಬೀರೇಗೌಡ ಎಂಬುವರಿಗೆ 130x 110 ಅಡಿ (ಸುಮಾರು 14,300 ಅಡಿ) ಅಕ್ರಮ ಹಂಚಿಕೆಯ ಕುರಿತು ಆರೋಪ ಮಾಡಿದ್ದಾರೆ. ಇದರ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುವುದೇ? 3. ವಿಧಾನಪರಿಷತ್ತಿನಲ್ಲಿ ಮಾತನಾಡುವಾಗ ಬಿ ಎಸ್ ಕೆ ಮೈನಿಂಗ್…
ಶಿವಮೊಗ್ಗ: ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಸೊರಬ ತಾಲೂಕಿನ ವರದಾ ನದಿಗೆ ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 62 ಕೋಟಿ ರೂಪಾಯಿ ಮಂಜೂರಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು. ಸೊರಬ ತಾಲೂಕಿನಲ್ಲಿ ಕೊರತೆ ಇರುವ ಶಿಕ್ಷಕರ ಶೇಕಡ 95 ರಷ್ಟು ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗುತ್ತಿದೆ ಎಂದ ಅವರು ಶಾಲಾ ಮಕ್ಕಳಿಗೆ ವಾರದ ಎರಡು ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದೊಂದಿಗೆ ಮುಂದಿನ ಮೂರು ವರ್ಷಗಳವರೆಗೆ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಸರ್ಕಾರ…
ಮುಂಬೈ : ಭಾರತ, ಏಷ್ಯಾ ಅಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಮಗ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗೀ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು. ಅಂಬಾನಿ ಕುಟುಂಬದ ಮದುವೆ ಸಮಾರಂಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಅನೇಕ ನಾಯಕರು ಕಾಣಿಸಿಕೊಂಡರು. ಇನ್ನು ಇಂದು (ಶನಿವಾರ- ಜುಲೈ 13) ನಡೆಯಲಿರುವ ಆಶೀರ್ವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷದ ಹಲವು ನಾಯಕರು, ಪ್ರತಿಪಕ್ಷದ ಹಲವು ಹಿರಿಯ ನಾಯಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಟಿಎಂಸಿ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್,…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿಯವರು ವಿನಾ ಕಾರಣ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ನಾಯಕರು ತಾವು ಮಾಡಿದಂತ ಭ್ರಷ್ಟಾಚಾರವನ್ನು ಮುಚ್ಚಿಹಾಕಿಕೊಳ್ಳಲು ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಬಯಲು ಮಾಡುವುದು ಅನಿವಾರ್ಯವಾಗಿದೆ ಅಂತ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗ ಅಧ್ಯಕ್ಷರಾದಂತ ರಮೇಶ್ ಬಾಬು ಕಿಡಿಕಾರಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಸಾರ್ವಜನಿಕ ಸೇವೆಯ ಒಂದು ಪ್ರಮುಖ ಸಂಸ್ಥೆಯಾಗಿದ್ದು, ಸೇವಾ ಮನೋಭಾವದಲ್ಲಿ ಕೆಲಸ ಮಾಡುತ್ತಿದೆ. ನಮ್ಮ ಸಾರಿಗೆ ಸಂಸ್ಥೆಯು ದೇಶದಲ್ಲಿ ಒಂದು ಉತ್ತಮ ಮತ್ತು ಅಗ್ರಮಾನ್ಯ ಸಾರಿಗೆ ಸಂಸ್ಥೆಯಾಗಿದ್ದು, ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನು ನೀಡುತ್ತಿದೆ. ಸಾಮಾಜಿಕ ಹೊಣೆಗಾರಿಕೆಯ ಅಡಿಯಲ್ಲಿ ಕರ್ನಾಟಕದ ಈಗಿನ ಕಾಂಗ್ರೆಸ್ ಸರ್ಕಾರ ಸಾರಿಗೆ ಇಲಾಖೆ ಮೂಲಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಉಚಿತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಅವರಿಗೆ ಮಾನಸಿಕ ಖಿನ್ನತೆ ಕಾಡುತ್ತಿದೆಯಂತೆ. ಹೀಗಾಗಿಯೇ ನಿವಾರಣೆಗೆ ಯೋಗದ ಮೊರೆಯನ್ನು ಡಿ ಬಾಸ್ ಹೋಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಬಂಧನವಾಗಿತ್ತು. ಆ ಬಳಿಕ ನ್ಯಾಯಾಂಗ ಬಂಧನವಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ನಟ ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ. ಆಗಾಗಲ ಪುಡ್ ಪಾಯಿಸನ್ ಕೂಡ ಆಗುತ್ತಿದೆಯಂತೆ. ಇದೇ ಕಾರಣಕ್ಕೆ ನನಗೆ ಜೈಲೂಟ ಬೇಡ, ಮನೆಯೂಟ ತರಿಸಿಕೊಳ್ಳೋದಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಪರಪ್ಪನ ಅಗ್ರಹಾರದಲ್ಲಿರುವಂತ ನಟ ದರ್ಶನ್ ಗೆ ಈಗ ಮಾನಸಿಕ ಖಿನ್ನತೆ ಕಾಡುತ್ತಿದೆಯಂತೆ. ಖೈದಿಗಳು ಬೇಡ, ನನ್ನೊಂದಿಗೆ ಯಾರು ಬೇಡ. ನಾನು ಒಬ್ಬಂಟಿಯಾಗೇ ಇರ್ತೀನಿ ಅನ್ನುತ್ತಿರುವಂತ ಅವರು, ಮಾನಸಿಕ ಖಿನ್ನತೆಯ ನಿವಾರಣೆಗಾಗಿ ಯೋಗ ಮಾಡುತ್ತಿದ್ದಾರಂತೆ. ಅಂದಹಾಗೇ ನಟ ದರ್ಶನ್…
ಇಸ್ರೇಲ್: ಗಾಝಾದ ಖಾನ್ ಯೂನಿಸ್ನಲ್ಲಿ ವಸತಿ ಡೇರೆಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಹಮಾಸ್ ಆಡಳಿತದ ಗಾಝಾ ಸರ್ಕಾರವು ಈ ದಾಳಿಯನ್ನು ‘ದೊಡ್ಡ ಹತ್ಯಾಕಾಂಡ’ ಎಂದು ಬಣ್ಣಿಸಿದ್ದು, ಸಾವನ್ನಪ್ಪಿದವರಲ್ಲಿ ನಾಗರಿಕ ತುರ್ತು ಸೇವಾ ಸದಸ್ಯರು ಸೇರಿದ್ದಾರೆ ಎಂದು ಹೇಳಿದೆ. “ಖಾನ್ ಯೂನಿಸ್ನಲ್ಲಿ ಸ್ಥಳಾಂತರಗೊಂಡವರ ಟೆಂಟ್ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸುವ ಮೂಲಕ ಇಸ್ರೇಲಿ ಆಕ್ರಮಿತ ಸೇನೆಯು ದೊಡ್ಡ ಹತ್ಯಾಕಾಂಡವನ್ನು ನಡೆಸಿತು. ಈ ಭಯಾನಕ ಹತ್ಯಾಕಾಂಡದಲ್ಲಿ ನಾಗರಿಕ ತುರ್ತು ಸೇವೆಯ ಸದಸ್ಯರು ಸೇರಿದಂತೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ” ಎಂದು ಹಮಾಸ್ ಆಡಳಿತದ ಗಾಝಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಕನಿಷ್ಠ 38,345 ಜನರು ಸಾವನ್ನಪ್ಪಿದ್ದಾರೆ ಮತ್ತು ಅಕ್ಟೋಬರ್ 7 ರಂದು ಹಮಾಸ್ ಉಗ್ರಗಾಮಿಗಳು ಇಸ್ರೇಲ್…
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ LKG, UKG ಹಾಗೂ 1ನೇ ತರಗತಿ ಪ್ರವೇಶಾತಿಗೆ ಶಿಕ್ಷಣ ಇಲಾಖೆಯಿಂದ ಗರಿಷ್ಟ ವಯೋಮಿತಿ ನಿಗದಿಪಡಿಸಿ ಆದೇಶಿಸಿದೆ. ಅಲ್ಲದೇ 8 ವರ್ಷ ಮೀರಿದ ವಯೋಮಾನದ ಮಕ್ಕಳನ್ನು 1ನೇ ತರಗತಿ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 26-07-2022ರಂದು ಹೊರಡಿಸಿದಂತ ಆದೇಶದಲ್ಲಿ ಜೂನ್ 1ನೇ ತಾರೀಕಿಗೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿ ಪಡಿಸಲಾಗಿತ್ತು. ಅಲ್ಲದೇ 25-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಆದೇಶ ಮಾಡಲಾಗಿತ್ತು ಎಂದಿದ್ದಾರೆ. ಈಗಾಗಲೇ LKG, UKG ಮತ್ತು 1ನೇ ತರಗತಿ ಪ್ರವೇಶಕ್ಕೆ ದಾಖಲಾತಿಗೆ ಕನಿಷ್ಠ ಅರ್ಹ ವಯೋಮಾನವನ್ನು ಪರಿಷ್ಕರಿಸಿ ನಿಗಧಿ ಪಡಿಸಲಾಗಿದೆ. ಆದ್ರೇ ಗರಿಷ್ಠ ವಯೋಮಾನ ಪರಿಷ್ಕರಿಸಿಲ್ಲ. ಈ ಗರಿಷ್ಠ ವಯೋಮಾನವನ್ನು ಈ ಕೆಳಗಿನಂತೆ ನಿಗದಿ ಪಡಿಸಿದೆ ಅಂತ ಹೇಳಿದ್ದಾರೆ. ಹೀಗಿದೆ LKG, UKG ಹಾಗೂ 1ನೇ…
ಮಂಗಳೂರು : ಮಾಧ್ಯಮ ಪ್ರತಿನಿಧಿಗಳು ಹಮ್ಮಿಕೊಂಡಿರುವ ಹಸಿರೇ ಉಸಿರು ಸೇರಿದಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾದ ಮಹತ್ವದ ಕಾರ್ಯಕ್ರಮ ವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ.ವಿ. ಪ್ರಭಾಕರ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಸಹಾಭಾಗಿತ್ವದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಶನಿವಾರ ಹಮ್ಮಿಕೊಂಡ ‘ಹಸಿರೇ ಉಸಿರು’ ವನಮ ಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳು ತಮ್ಮ ವೃತ್ತಿಯ ಜೊತೆ ಗ್ರಾಮ ವಾಸ್ತವ್ಯ, ವನಮಹೋತ್ಸವ, ಸರಕಾರಿ ಶಾಲೆ,ಅಂಗನವಾಡಿಗಳಿಗೆ ನೆರವು ಸೇರಿದಂತೆ ಸಾಮಾಜಿಕ ಹೊಣೆಗಾರಿ ಕೆಯನ್ನುಅರಿತು ಕಾರ್ಯ ನಿರ್ವಹಿಸು ತ್ತಿರುವುದು ಮಾದರಿ ಯಾಗಿದೆ ಎಂದು ಪ್ರಭಾಕರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡುತ್ತಾ, ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಮರೆಯ ಬಾರದು.ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ…
ಬ್ಯೂನಸ್ ಐರಿಸ್: ಅರ್ಜೆಂಟೀನಾ ಹಮಾಸ್ ಅನ್ನು ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ ಮತ್ತು ಹಣಕಾಸಿನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. ಅಧ್ಯಕ್ಷ ಜೇವಿಯರ್ ಮಿಲ್ಲೆ ಅರ್ಜೆಂಟೀನಾವು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನೊಂದಿಗೆ ದೃಢವಾಗಿ ಹೊಂದಿಕೊಳ್ಳಬೇಕೆಂದು ಬಯಸುತ್ತಾರೆ. ಅಕ್ಟೋಬರ್ 7 ರಂದು ಇಸ್ರೇಲ್ನಲ್ಲಿ ಫೆಲೆಸ್ತೀನ್ ಗುಂಪು ನಡೆಸಿದ ದಾಳಿಯನ್ನು ಉಲ್ಲೇಖಿಸಿ ಮಿಲ್ಲೆ ಅವರ ಕಚೇರಿ ಈ ಘೋಷಣೆ ಮಾಡಿದೆ. ಇದು ಇಸ್ರೇಲ್ನ 76 ವರ್ಷಗಳ ಇತಿಹಾಸದಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ. ಹಮಾಸ್ ನೊಂದಿಗೆ ಇರಾನ್ ನ ನಿಕಟ ಸಂಬಂಧವನ್ನು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ, ಇದು ದೇಶದ ಯಹೂದಿ ತಾಣಗಳ ಮೇಲೆ ನಡೆದ ಎರಡು ಮಾರಣಾಂತಿಕ ಭಯೋತ್ಪಾದಕ ದಾಳಿಗಳಿಗೆ ಅರ್ಜೆಂಟೀನಾವನ್ನು ದೂಷಿಸುತ್ತಿದೆ. ಹಮಾಸ್ ಆರೋಪ ಏತನ್ಮಧ್ಯೆ, ಇಸ್ರೇಲ್ ನಿರಂತರವಾಗಿ ಹಮಾಸ್ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡಿದೆ. ಗಾಝಾದಲ್ಲಿ 70ಕ್ಕೂ ಹೆಚ್ಚು ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ. ಇಸ್ರೇಲ್ ಜನರ ಯೋಜಿತ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ಹಮಾಸ್ ಅಧಿಕಾರಿಯೊಬ್ಬರು ಆರೋಪಿಸಿದ್ದಾರೆ. ಪೂರ್ವ ಗಾಝಾ ನಗರದ ಸಾವಿರಾರು ಫೆಲೆಸ್ತೀನೀಯರನ್ನು ಇಸ್ರೇಲ್…
ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದಕ್ಕೆ ಬೆಂಗಳೂರಿನಿಂದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶಿವಮೊಗ್ಗಕ್ಕೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು. ಆದ್ರೇ ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ವಾಪಾಸ್ ಆಗಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ, ನೂತನ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಲೋಕಾರ್ಪಣೆಗೊಳಿಸೋದಕ್ಕಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು. ಇಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದಂತ ಇಂಡಿಗೋ ವಿಮಾನಕ್ಕೆ ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ಲ್ಯಾಂಡ್ ಗೆ ಅವಕಾಶ ನೀಡಲಿಲ್ಲ. ಹೀಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮರಳಿ ಬೆಂಗಳೂರಿಗೆ ವಾಪಾಸ್ ಆಗಿದೆ. ಈ ಹಿನ್ನಲೆಯಲ್ಲಿ ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿಗದಿಯಾಗಿದ್ದಂತ ಕಾರ್ಯಕ್ರಮಗಳು ರದ್ದಾಗಿದ್ದಾವೆ. ಅಂದಹಾಗೇ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೇರಿದಂತೆ ವಿವಿಧ ತಂತ್ರಾಂಶವನ್ನು ಇನ್ನೂ ಅಳವಡಿಸಿಲ್ಲ. ಹೀಗಾಗಿ ರಾತ್ರಿ…