Author: kannadanewsnow09

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸರ್ಕಾರಿ ಅತಿಥಿ ಗೃಹಗಳನ್ನು ಕಂದಾಯ ಅಧಿಕಾರಿಗಳ ಸುಪರ್ಧಿಗೆ ಮಾದರಿ ನೀತಿ ಸಂಹಿತೆ ಕಾರಣ ನೀಡಲಾಗಿದೆ. ಈ ನೀತಿ ಸಂಹಿತೆ ಉಲ್ಲಂಘಿಸಿ, ಐಬಿಯಲ್ಲೇ ಇಂಜಿನೀಯರ್, ಗುತ್ತಿಗೆದಾರರು ಸೇರಿ ಎಣ್ಣೆ ಪಾರ್ಟಿ ಮಾಡಿದ್ದಕ್ಕಾಗಿ ಬಾಗಲಕೋಟೆ ಜಿಲ್ಲಾಧಿಕಾರಿ ಇಂಜಿನಿಯರ್, ಜಮಖಂಡಿ ತಹಶೀಲ್ದಾರ್ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಬಾಗಲಕೋಟೆಯ ಐಬಿಯಲ್ಲೇ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುತ್ತಿಗೆದಾರರೊಂದಿಗೆ ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಇಂಜಿನಿಯರ್, ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದರು. ಹೀಗೆ ಸರ್ಕಾರಿ ಅತಿಥಿ ಗೃಹದಲ್ಲೇ ಭರ್ಜರಿ ಎಣ್ಣೆ ಪಾರ್ಟಿ ಮಾಡುತ್ತಿದ್ದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ಸಂಬಂಧ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಅವರು ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಹಾಗೂ ಜಮಖಂಡಿ ತಹಶೀಲ್ದಾರ್ ಸದಾಶಿವಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಹೊರಗಿನವರಿಗೆ ಅವಕಾಶ ಇರೋದಿಲ್ಲ. ಸರ್ಕಾರಿ ವಸತಿ ಗೃಹಗಳಲ್ಲಿ ಹೊರಗಿನವರಿಗೆ ಅವಕಾಶ…

Read More

ಬೆಂಗಳೂರು: ರಾಜ್ಯದಲ್ಲಿರುವಂತ ಅನಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸುವಂತೆ ಮಕ್ಕಳ ಪೋಷಕರು ಆಗ್ರಹಿಸಿದ್ದರು. ಪೋಷಕರ ಒತ್ತಡಕ್ಕೆ ಮಣಿದಿರುವಂತ ಶಾಲಾ ಶಿಕ್ಷಣ ಇಲಾಖೆಯು, ಕೊನೆಗೆ ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಿಯನ್ನು ಪ್ರಕಟಿಸಿದೆ. ಹಾಗಾದ್ರೇ ಪಟ್ಟಿ ಹೇಗೆ ಪರಿಶೀಲಿಸಬೇಕು ಅಂತ ಮುಂದೆ ಓದಿ. ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆಯದೇ, ಕೆಲ ಖಾಸಗಿ ಶಾಲೆಗಳು ಮಕ್ಕಳನ್ನು ಶಾಲೆಗಳಿಗೆ ದಾಖಲಾಗಿ ಮಾಡಿಕೊಳ್ಳುತ್ತಿದ್ದಾವೆ. ಈ ಮೂಲಕ ಶಾಲಾ ಮಕ್ಕಳ ಭವಿಷ್ಯದ ಜೊತೆಗೆ ಚೆಲ್ಲಾಟ ಆಡ್ತಿದ್ದಾವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿಯ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಆಗ್ರಹಿಸಿದ್ದರು. ಅಲ್ಲದೇ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ, ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಿ ಪ್ರಕಟಿಸುವಂತೆಯೂ ಆಗ್ರಹಿಸಿದ್ದರು. ಈ ಬೆನ್ನಲ್ಲೇ ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ, ಖಾಸಗಿ ಶಾಲೆ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆದಿದ್ಯೋ ಇಲ್ಲವೋ ಅಂತ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಪ್ರಚಾರ ಆರಂಭಗೊಂಡಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಪರವಾಗಿ ಬಹುದೊಡ್ಡ ಅಲೆಯೇ ಏರ್ಪಟ್ಟಿದೆ. ಇದೇ ಸಂದರ್ಭದಲ್ಲಿ ಶಾಸಕ ಹೆಚ್.ಡಿ ತಮ್ಮಯ್ಯ ಅವರು, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾಕ್ಟರ್ ಕೆ ಕೆ ಮಂಜುನಾಥ್ ಕುಮಾರ್ ಅವರ ಪರವಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹೆಚ್ ಡಿ ತಮ್ಮಯ್ಯನವರು ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು, ಪ್ರಾಂಶುಪಾಲರು ಹಾಗೂ ವಿವಿಧ ಸಂಘದ ಪದಾಧಿಕಾರಿಗಳನ್ನು ಕರೆದು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರಾದ ಡಾ.ಕೆ.ಕೆ ಮಂಜುನಾಥ್ ಅವರನ್ನು ಅತ್ಯಂತ ಹೆಚ್ಚು ಮತಗಳ ಅಂತರದಿಂದ ಜಯಶೀಲರನ್ನಾಗಿ ಮಾಡಬೇಕೆಂದು ಶಾಸಕ ಹೆಚ್.ಡಿ ತಮ್ಮಯ್ಯ ಇದೇ ಸಂದರ್ಭದಲ್ಲಿ ಶುಭ ಕೋರಿ, ಹಾರೈಸಿದರು. https://kannadanewsnow.com/kannada/6-killed-25-injured-in-explosion-fire-at-chemical-factory-in-thane/ https://kannadanewsnow.com/kannada/breaking-bomb-threat-to-lady-sriram-college-sri-venkateswara-college-in-delhi/

Read More

ಛತ್ತೀಸ್‌ಗಢ: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಏಳು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು, ಇದು ಇನ್ನೂ ನಡೆಯುತ್ತಿದೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಇಬ್ಬರು ನಕ್ಸಲೀಯರ ಶವಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಈ ಹಿಂದೆ ಮಾಹಿತಿ ನೀಡಿದ್ದಾರೆ. ದಾಂತೇವಾಡ, ನಾರಾಯಣಪುರ ಮತ್ತು ಬಸ್ತಾರ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ, ಬಸ್ತಾರ್ ಫೈಟರ್ಸ್ ಮತ್ತು ವಿಶೇಷ ಕಾರ್ಯಪಡೆ – ರಾಜ್ಯ ಪೊಲೀಸ್‌ನ ಎಲ್ಲಾ ಘಟಕಗಳು – ಮಾವೋವಾದಿಗಳ ಇಂದ್ರಾವತಿ ಪ್ರದೇಶ ಸಮಿತಿಯ ಕೇಡರ್‌ಗಳ ಉಪಸ್ಥಿತಿಯ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದರು. ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆಯೊಂದಿಗೆ, ರಾಜ್ಯದಲ್ಲಿ…

Read More

ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ, ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮುಂಬೈ ಸಮೀಪದ ಥಾಣೆಯ ಡೊಂಬಿವಾಲಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ ಭಾರೀ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ಖಾನೆಯಲ್ಲಿ ಮೂರು ಸ್ಫೋಟಗಳು ಕೇಳಿಬಂದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕನಿಷ್ಠ ಎಂಟು ಜನರನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ತಿಳಿಸಿದ್ದಾರೆ. https://kannadanewsnow.com/kannada/according-to-me-it-was-hd-deve-gowda-who-sent-prajvala-revanna-abroad-cm-siddaramaiahs-statement/ https://kannadanewsnow.com/kannada/why-is-the-police-silent-despite-the-killing-of-innocent-girls-union-minister-pralhad-joshi/

Read More

ಮೈಸೂರು: ಜಿಲ್ಲೆಯಲ್ಲಿ ನಿನ್ನೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ನಾಲ್ವರು ಧಾರುಣವಾಗಿ ಸಾವನ್ನಪ್ಪಿದ್ದರು. ಇಂದು ಕುಟುಂಬಸ್ಥರನ್ನು ಭೇಟಿ ಮಾಡಿದಂತ ಸಿಎಂ ಸಿದ್ಧರಾಮಯ್ಯ, ಸಾಂತ್ವಾನ ಹೇಳಿ, ರಾಜ್ಯ ಸರ್ಕಾರದಿಂದ ತಲಾ 3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು. https://kannadanewsnow.com/kannada/according-to-me-it-was-hd-deve-gowda-who-sent-prajvala-revanna-abroad-cm-siddaramaiahs-statement/ https://kannadanewsnow.com/kannada/why-is-the-police-silent-despite-the-killing-of-innocent-girls-union-minister-pralhad-joshi/

Read More

ಬೆಂಗಳೂರು: SIT ಅಧಿಕಾರಿಗಳು CDಶಿವುನ ಹಿಡಿದು ಡ್ರಿಲ್ ಮಾಡಿದರೆ ಸತ್ಯ ತಾನಾಗಿಯೇ ಆಚೆ ಬರುತ್ತದೆ. ರಾಜ್ಯದ ಜನ ಶೀಘ್ರದಲ್ಲಿಯೇ ‘CD ಶಿವು ಎಲ್ಲಿದ್ದಿಯಪ್ಪ?’ ಎಂದು ಕೇಳುವ ದಿನವೂ ದೂರವಿಲ್ಲ ಎಂಬುದಾಗಿ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಇಂದು ಎಕ್ಸ್ ಮಾಡಿರುವಂತ ಜೆಡಿಎಸ್ ಪಕ್ಷವು, ಪ್ರಜ್ವಲ್ ಎಲ್ಲಿರಬಹುದು ಎನ್ನುವ ವಿಷಯ ನಿಮ್ಮ CDಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ. ಅವರನ್ನೇ ಕೇಳಿದರೆ ಉತ್ತಮವಲ್ಲವೇ? ಸಖ್ಯ ಮತ್ತು ಸೌಖ್ಯದ ಬಗ್ಗೆ ಅವರಿಗಿಂತ ಬಲ್ಲವರು ಉಂಟೇ ಕಪಟ ಕಾಂಗಿಗಳೇ? ಎಂದು ಪ್ರಶ್ನಿಸಿದೆ. SIT ಅಧಿಕಾರಿಗಳು CDಶಿವುನ ಹಿಡಿದು ಡ್ರಿಲ್ ಮಾಡಿದರೆ ಸತ್ಯ ತಾನಾಗಿಯೇ ಆಚೆ ಬರುತ್ತದೆ. #Shivakumar_Investigation_Team ಗೇ ಗೊತ್ತಿಲ್ಲವೆಂದರೆ ಅದು ಶತಮಾನದ ಜೋಕಷ್ಟೇ ಅಲ್ಲ, CDಶಿವು ಪೂರ್ವಾಶ್ರಮಕ್ಕೆ ಮಾಡಿದ ಘೋರ ಅಪಚಾರ! ಈ ಶತಮಾನ ಕಂಡು ಕೇಳರಿಯದ ಸೋಜಿಗ ಅಂತ ತಿಳಿಸಿದೆ. ಪೆನ್ ಡ್ರೈವ್ ಫ್ಯಾಕ್ಟರಿ ಒರಿಜಿನಲ್ ಓನರ್, CD ಸಂಚುಕೋರ CDಶಿವು ಕಣ್ಸನ್ನೆಯಂತೆ ಅವರ ಚೇಲಾಗಳು ನಡೆಸಿದ ಪೆನ್ ಡ್ರೈವ್ ಸಮಾರಾಧನೆ ಯಾರಿಗೆ ಗೊತ್ತಿಲ್ಲ ಹೇಳಿ?…

Read More

ಹುಬ್ಬಳ್ಳಿ: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಬೀದರ್ ನಲ್ಲಿ ಇಂದು ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ– ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದರು. ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರೆಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರು ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಮಾದಕ ವಸ್ತು ಮಾರಾಟ: ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ…

Read More

ಮಹಾರಾಷ್ಟ್ರ: ಮಹಾರಾಷ್ಟ್ರ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಎಂಐಡಿಸಿ) ಪ್ರದೇಶದಲ್ಲಿರುವ ಡೊಂಬಿವಿಲಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದಂತೆ ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ”ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸಚಿವ ಉದಯ್ ಸಮಂತ್ ಹೇಳಿದ್ದಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. https://twitter.com/PTI_News/status/1793567983694201121 ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್ ಡೊಂಬಿವಿಲಿ ಅಗ್ನಿ ದುರಂತದ ಬಗ್ಗೆ ಟ್ವೀಟ್ ಮಾಡಿದ್ದಾರೆ. “ಡೊಂಬಿವಿಲಿ ಎಂಐಡಿಸಿಯ ಅಮುದನ್ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ದುರಂತ. 8 ಜನರನ್ನು ಅಮಾನತುಗೊಳಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಮತ್ತು ಹೆಚ್ಚಿನ ಆಂಬ್ಯುಲೆನ್ಸ್‌ಗಳನ್ನು ಸಿದ್ಧಪಡಿಸಲಾಗಿದೆ. ನಾನು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದ್ದೇನೆ ಮತ್ತು ಅವರು ಸಹ ತಲುಪುತ್ತಿದ್ದಾರೆ. 10 ನಿಮಿಷಗಳಲ್ಲಿ ಸ್ಥಳಕ್ಕೆ ಎನ್‌ಡಿಆರ್‌ಎಫ್, ಟಿಡಿಆರ್‌ಎಫ್, ಅಗ್ನಿಶಾಮಕ ದಳಗಳು ಧಾವಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾವೆ…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಹಿರಿಯೂರು ಬಳಿಯಲ್ಲಿ ಲಾರಿ, ಬಾಸ್, ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಸ್ ನಿಲ್ದಾಣದ ಬಳಿಯಲ್ಲಿ ಟಾಟಾ ಏಸ್, ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೂ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿಯಲ್ಲಿ ನಡೆದಂತ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಹಿರಿಯೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/hd-deve-gowda-gave-the-last-warning-to-prajwal-admonishment-to-appear-before-sit/ https://kannadanewsnow.com/kannada/big-shock-for-prajwal-revanna-passport-cancellation-process-started-arrest-soon/

Read More