Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಳೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಭು ಸಾಹುಕಾರ್ ವಿನಂತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ವಿಶ್ವ ಪರಿಸರ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 3 ಗಂಟೆಯವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕನಿಷ್ಠ 45 ಕೆಜಿ ತೂಕವಿರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು 18 ರಿಂದ 60 ವರ್ಷದ ಒಳಗಿನ ಎಲ್ಲರೂ ರಕ್ತವನ್ನು ನೀಡಬಹುದು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇನ್ನೂ ಒಂದು ವರ್ಷದಿಂದ ಈಚೆಗೆ ಮಲೇರಿಯಾ, ಟೈಪೈಡ್, ಜಾಂಡೀಸ್ ಖಾಯಿಲೆಗೆ ಒಳಗಾದವರು ರಕ್ತ ನೀಡಬಾರದು. ಒಂದು ವರ್ಷದ ಈಚೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾದವರು, ಗರ್ಭಿಣಿ ಸ್ತ್ರೀಯರು, ಹಾಲುಣಿಸುವಂತ ತಾಯಂದಿರು, ಋತುಸ್ರಾವದಲ್ಲಿರುವಂತ ಸ್ತ್ರೀಯರು ರಕ್ತ ನೀಡಬಾರದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.…

Read More

ಬೆಂಗಳೂರು: ಅಹಮದಾಬಾದಿನ ಮೋದಿ ಕ್ರೀಢಾಂಗಣದಲ್ಲಿ ನಡೆದಂತ ಐಪಿಎಲ್-2025ರ ಫೈನಲ್ ಪಂದ್ಯಾವಳಿಯಲ್ಲಿ ಆರ್ ಸಿ ಬಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಬಳಿಕ ಬೆಂಗಳೂರಲ್ಲಿ ಸರ್ಕಾರದಿಂದ ನಿಗದಿ ಪಡಿಸಲಾಗಿರುವಂತ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ. ಇಂತಹ ಆರ್ ಸಿ ಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದಂತ ಫೈನಲ್ ಪಂದ್ಯದಲ್ಲಿ 18 ವರ್ಷಗಳ ಬಳಿಕ ಆರ್ ಸಿ ಬಿ ಗೆಲುವು ಕಂಡಿತ್ತು. ಹೀಗಾಗಿ ರಾಜ್ಯ ಸರ್ಕಾರ ತಂಡದ ಆಟಗಾರರಿಗೆ ಸನ್ಮಾನಿಸಿ, ಅಭಿನಂದಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ ಸಂಜೆ 4 ಗಂಟೆಗೆ ಆರ್ ಸಿ ಬಿ ತಂಡದ ಎಲ್ಲಾ ಆಟಗಾರರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿ,…

Read More

ಬೆಂಗಳೂರು: 2025 ರ ಐಪಿಎಲ್ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಮೆರವಣಿಗೆಯನ್ನು ಬೆಂಗಳೂರಿನಲ್ಲಿ ರದ್ದುಗೊಳಿಸಲಾಗಿದೆ. 18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಪ್ರೀತಿ ಜಿಂಟಾ ಅವರ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಜಿಂಕ್ಸ್ ಅನ್ನು ಮುರಿದು ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ತಂಡವನ್ನು ಬೆಂಗಳೂರಲ್ಲಿ ತೆರೆದ ವಾಹನದಲ್ಲಿ ಮೆರೆವಣಿ ಮಾಡುವ ಮೂಲಕ ವಿಜಯೋತ್ಸವ ಆಚರಿಸಲು ಸರ್ಕಾರ ತೀರ್ಮಾನಿಸಿತ್ತು. ಆದರೇ ಇದರಿಂದ ಬೆಂಗಳೂರಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಆರ್ ಸಿ ಬಿ ಆಟಗಾರರ ಭದ್ರತೆಯ ದೃಷ್ಠಿಯಿಂದಲೂ ಇದು ಸರಿಯಾದ ನಿರ್ಧಾರವಲ್ಲ ಎಂಬುದಾಗಿ ಪೊಲೀಸರು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಆರ್ ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ರದ್ದುಗೊಳಿಸಲಾಗಿದೆ. ಇದರ ಬದಲಾಗಿ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್ ಸಿ ಬಿ ಆಟಗಾರರನ್ನು ಅಭಿನಂದಿಸುವಂತ ಸಮಾರಂಭವನ್ನು ಸರ್ಕಾರ ಆಯೋಜಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಇಂದು ಸಂಜೆ…

Read More

ಬೆಂಗಳೂರು: 18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್‌ಶಿಪ್ ಆಗಿರುವ ಆರ್‌ಸಿಬಿ ತಂಡಕ್ಕೆ ನನ್ನ ಅಭಿನಂದನೆಗಳು. ವಿಶೇಷವಾಗಿ ವಿರಾಟ್ ಕೊಹ್ಲಿ ಅವರು ದೇಶಕ್ಕೆ ಮಾತ್ರವಲ್ಲದೇ, ಇಡೀ ವಿಶ್ವಕ್ಕೆ ಮಾದರಿ‌ ಕ್ರೀಡಾಪಟುವಾಗಿ ಹೊರ ಹೊಮ್ಮಿರುವುದು ಸಂತೋಷದಾಯಕ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರ‌ಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ‌ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ‌. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ‌ ಎಂದರು. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್‌ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್‌ನಲ್ಲೇ ವಾಪಸ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ‌ ಮುಖ್ಯಮಂತ್ರಿ…

Read More

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ 21 ರಂದು ಪ್ರಾರಂಭವಾಗಿ ಆಗಸ್ಟ್ 12 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವಂತ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಅಧಿವೇಶನದ ಸಮಯದಲ್ಲಿ ಆಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಪ್ರತಿ ಅಧಿವೇಶನವು ವಿಶೇಷವಾಗಿದೆ ಮತ್ತು ಆಪರೇಷನ್ ಸಿಂಧೂರ್ ಸೇರಿದಂತೆ ಎಲ್ಲಾ ವಿಷಯಗಳನ್ನು ನಾವು ಚರ್ಚಿಸುತ್ತೇವೆ ಎಂದು ರಿಜಿಜು ಹೇಳಿದರು. ಸರ್ಕಾರವು ಎಲ್ಲರನ್ನೂ ಮಂಡಳಿಯಲ್ಲಿ ತೆಗೆದುಕೊಳ್ಳಬೇಕೆಂದು ಬಯಸುತ್ತದೆ. ನಾವು ವಿರೋಧ ಪಕ್ಷದ ಬಳಿಗೆ ಹೋಗಿದ್ದೇವೆ ಮತ್ತು ಎಲ್ಲರೂ ಒಗ್ಗಟ್ಟಿನ ನಿಲುವನ್ನು ತೆಗೆದುಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು. 23 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಪ್ರಮುಖ ಶಾಸಕಾಂಗ ಮಸೂದೆಗಳ ಪರಿಚಯ, ರಾಷ್ಟ್ರೀಯ ಭದ್ರತೆ, ಆರ್ಥಿಕತೆ ಮತ್ತು ಆಪರೇಷನ್ ಸಿಂಧೂರ್‌ನಂತಹ ಇತ್ತೀಚಿನ ರಾಷ್ಟ್ರೀಯ ಬೆಳವಣಿಗೆಗಳ ಕುರಿತು ಚರ್ಚೆಗಳು ನಡೆಯುವ ನಿರೀಕ್ಷೆಯಿದೆ. https://TWITTER.com/ANI/status/1930170590809223208

Read More

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ 21 ರಿಂದ ಪ್ರಾರಂಭವಾಗಿ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಘೋಷಿಸಿದ್ದಾರೆ. ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ನಂತರ ಸಂಸತ್ತಿನ ಉಭಯ ಸದನಗಳು ಜುಲೈ 21 ರಂದು ಬೆಳಿಗ್ಗೆ 11 ಗಂಟೆಗೆ ಸಭೆ ಸೇರಲಿವೆ. ಈ ವರ್ಷದ ಜನವರಿ 31 ರಂದು ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಯಿತು. 2025 ರ ಮೊದಲ ಸಂಸತ್ ಅಧಿವೇಶನವನ್ನು ಮುಕ್ತಾಯಗೊಳಿಸುವ ಮೂಲಕ ಏಪ್ರಿಲ್ 4 ರಂದು ಲೋಕಸಭೆ ಮತ್ತು ರಾಜ್ಯಸಭೆ ಎರಡನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ತಾಣಗಳನ್ನು ಭಾರತ ಹೊಡೆದುರುಳಿಸಿದ ಮಿಲಿಟರಿ ವ್ಯಾಯಾಮವಾದ ಆಪರೇಷನ್ ಸಿಂದೂರ್ ಬಗ್ಗೆ ಚರ್ಚಿಸಲು ವಿರೋಧ ಪಕ್ಷದ ನಾಯಕರು ವಿಶೇಷ ಸಂಸತ್ತಿನ ಅಧಿವೇಶನಕ್ಕೆ ಒತ್ತಾಯಿಸಿದ ಬೆನ್ನಲ್ಲೇ, ಮಳೆಗಾಲದ ಅಧಿವೇಶನದ ದಿನಾಂಕ ಘೋಷಣೆಯಾಗಿದೆ. https://twitter.com/ANI/status/1930170590809223208

Read More

ಸಾವಿನ ನಂತರ ಜೀವ ಎಲ್ಲಿಗೆ ಹೋಗುತ್ತದೆ? ಸ್ವರ್ಗ ನರಕಗಳು ಇರುವುದು ನಿಜವೇ? ಇತ್ಯಾದಿ ಕುತೂಹಲ ಎಲ್ಲ ದೇಶಕಾಲಗಳ ಮನುಷ್ಯರನ್ನೂ ಕಾಡಿದೆ. ಹಾಗೆಂದೇ ಬಹುತೇಕ ಎಲ್ಲ ಮತ ಪಂಥಗಳು, ಜನಪದ – ನಾಗರಿಕತೆಗಳು ಈ ಬಗ್ಗೆ ತಮ್ಮದೇ ವಿವರಗಳನ್ನು ನೀಡಲು ಯತ್ನಿಸಿವೆ. ಅಂಥವುಗಳಲ್ಲಿ ನಮ್ಮ ಗರುಡಪುರಾಣವೂ ಒಂದು. ಈ ಲೇಖನದಲ್ಲಿ ಗರುಡಪುರಾಣದಲ್ಲಿ ಹೇಳಲಾಗಿರುವಂತೆ ಸಾವಿನ ನಂತರ ಜೀವದ ಪ್ರಯಾಣ ಮತ್ತು ಅವಸ್ಥೆಯ ಬಗ್ಗೆ ಮಾಹಿತಿ ಇದೆ.  ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ,…

Read More

ಬೆಂಗಳೂರು: ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಲಭ್ಯವಿದೆ. ಸೌರ ವಿದ್ಯುತ್‌ ಉತ್ಪಾದನೆಯಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಹೀಗಾಗಿಯೇ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಮಾಡುತ್ತಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. https://twitter.com/KarnatakaVarthe/status/1929880402782834940 ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್ ಆರ್ ನಂಬರ್ ಗೆ ಡಿ ಲಿಂಕ್ ಮಾಡಿ ಹೊಸ ಆರ್ ಆರ್ ನಂಬರ್ ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಜೆ.ಜಾರ್ಜ್, ಆನ್ ಲೈನ್ ಮೂಲಕವೇ ಡಿ ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು. ಗೃಹಜ್ಯೋತಿ ಯೋಜನೆಯಡಿ ಪ್ರಸ್ತುತ 1.60 ಕೋಟಿ ಕುಟುಂಬಗಳು ಶೂನ್ಯ ಬಿಲ್ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಇದರ ಸಬ್ಸಿಡಿ ಮೊತ್ತ ಸುಮಾರು 9,000 ಕೋಟಿ ರೂ.ಅನ್ನು…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಮಂಡಳಿಯು NEET-PG 2025 ಪರೀಕ್ಷೆಯನ್ನು ಆಗಸ್ಟ್ 3, 2025 ರ ಮೊದಲ ಪಾಳಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12:30 ರವರೆಗೆ ನಡೆಸಲು ಮುಂದೂಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಹಿಂದೆ, ಜೂನ್ 15 ರಂದು ನಿಗದಿಯಾಗಿದ್ದ NEET-PG ಪರೀಕ್ಷೆಯನ್ನು ಡಬಲ್ ಪಾಳಿಗಳ ಬದಲಿಗೆ ಒಂದೇ ಪಾಳಿಯಲ್ಲಿ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ನಂತರ NBE ಮುಂದೂಡಲು ನಿರ್ಧರಿಸಿತ್ತು. ಮೇ 30 ರಂದು ಹೊರಡಿಸಿದ ಆದೇಶದಲ್ಲಿ ನ್ಯಾಯಾಲಯವು ಎರಡು ಪಾಳಿಗಳಲ್ಲಿ ಪರೀಕ್ಷೆಯನ್ನು ನಡೆಸುವ NBE ನಿರ್ಧಾರವನ್ನು ಟೀಕಿಸಿತ್ತು. ತನ್ನ ಅರ್ಜಿಯಲ್ಲಿ, NBE ತನ್ನ ತಂತ್ರಜ್ಞಾನ ಪಾಲುದಾರ TCS ಒಂದೇ ಶಿಫ್ಟ್‌ನಲ್ಲಿ ಪರೀಕ್ಷೆಯನ್ನು ನಡೆಸಲು ನೀಡಿದ ಸಾಧ್ಯವಾದಷ್ಟು ಆರಂಭಿಕ ದಿನಾಂಕ ಆಗಸ್ಟ್ 3 ಎಂದು ಹೇಳಿದೆ. TCS ಪ್ರಕಾರ, ಮೇ 30 ರಿಂದ ಜೂನ್ 15 ರವರೆಗೆ ಉಳಿದಿರುವ ಸಮಯವು ಒಂದೇ ಶಿಫ್ಟ್‌ನಲ್ಲಿ ಪರೀಕ್ಷೆಯನ್ನು ನಡೆಸಲು ಸಾಕಾಗಲಿಲ್ಲ – ಏಕೆಂದರೆ ಈಗ ಹೆಚ್ಚಿನ ಸಂಖ್ಯೆಯ ನಗರಗಳಲ್ಲಿ…

Read More

ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು. ಈ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 2 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೆಎಸ್ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರುಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ. ಕೆಎಸ್ಡಿಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ. ಬುಧವಾರದ ಕಾರ್ಯಕ್ರಮದಲ್ಲಿ…

Read More