Author: kannadanewsnow09

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾವಣೆ ಕೆಲಸ ಮಾಡಿಕೊಂಡು ಹೋಗುವಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇನೆ ಎಂದು ತಿಳಿಸಿದರು. ಒಂದು ವಾರದಲ್ಲಿ ನಾನು ವಾಪಸ್ ಬರುತ್ತೇನೆ.‌ ನಮ್ಮ ಮೂರು ಕ್ಷೇತ್ರಗಳಲ್ಲಿ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲಿಯೂ ಕೆಲಸ ಮಾಡುವಂತೆ ಕೋರಿದ್ದೇನೆ. ಯಾರೂ ಸಮಯ ವ್ಯರ್ಥ ಮಾಡಬಾರದು. ಆಸ್ಪತ್ರೆಯಿಂದ ಬಂದ ಕೂಡಲೇ ನಾನು…

Read More

ಶಿವಮೊಗ್ಗ: ಅರ್ಜಿದಾರರಾದ ಗೋವಿಂದನಾಯ್ಕರವರು ಕರ್ನಾಟಕ ಗ್ರಾಮೀಣ ಬ್ಯಾಂಕ್, ಆಯನೂರು, ಶಿವಮೊಗ್ಗ ಶಾಖೆ ಹಾಗೂ ಯೂನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಕಂಪೆನಿ ಶಿವಮೊಗ್ಗ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಿಮಾ ಮೊತ್ತ ಪಾವತಿಸುವಂತೆ ಎದುರುದಾರರಿಗೆ ಆದೇಶಿಸಿದೆ. ಅರ್ಜಿದಾರ ಗೋವಿಂದನಾಯ್ಕರು 2014 ರಲ್ಲಿ ಆಯನೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್‍ನಲ್ಲಿ ಉಳಿತಾದ ಖಾತೆ ಹೊಂದಿದ್ದು, ಈ ಖಾತೆಗೆ ಯೂನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಕಂಪೆನಿಯಿಂದ ಕೆಬಿಎಲ್ ಸುರಕ್ಷಾ ಪಾಲಿಸಿ ಪಡೆದಿರುತ್ತಾರೆ. 2020 ರ ಜೂನ್ 2 ರಂದು ಎಲೆಕ್ಟ್ರಿಕ್ ಶಾಕ್‍ನಿಂದ ಅರ್ಜಿದಾರರು ಮೃತಪಟ್ಟಿದ್ದು ಮೃತರ ತಂದೆ ಬ್ಯಾಂಕ್ ಮತ್ತು ವಿಮಾ ಕಂಪೆನಿಯನ್ನು ಸಂಪರ್ಕಿಸಿ ವಿಮಾ ಪರಿಹಾರ ಮೊತ್ತ ಸಂದಾಯ ಮಾಡುವಂತೆ ಕೋರಿರುತ್ತಾರೆ. ಆದರೆ ಬ್ಯಾಂಕ್‍ನವರು ಮೃತರ ಖಾತೆ ಮುಕ್ತಾಯಗೊಳಿಸಿರುವುದರಿಂದ ಕೆಬಿಎಲ್ ಸುರಕ್ಷಾ ಸರ್ಟಿಫಿಕೇಟ್ ಡೌನ್‍ಲೋಡ್ ಮಾಡಲು ಸಾಧ್ಯವಿಲ್ಲವೆಂದು ತಿಳಿಸಿರುತ್ತಾರೆ. ಹಾಗೂ ವಿಮಾ ಕಂಪೆನಿಯವರು ಪರಿಹಾರ ಕೋರಿಕೆ ಅರ್ಜಿ ತಡವಾಗಿ ಹಾಜರು ಮಾಡಿರುತ್ತಾರೆಂದು ಪರಿಹಾರ ಮೊತ್ತ…

Read More

ಬೆಂಗಳೂರು: ರಾಜ್ಯದ ಎಲ್ಲಾ ಘಟಕಗಳಲ್ಲಿ ಅಂದರೆ ಬೆಂಗಳೂರು ನಗರ ಒಳಗೊಂಡಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹಲ್ಮಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ ಎಂದಿದ್ದಾರೆ. ಆದ್ದರಿಂದ, ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು, ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು…

Read More

ಬೆಂಗಳೂರು: ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ಜೆಡಿಎಸ್‌ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ನೀವು. ನಿಮ್ಮಿಂದಲೇ ಈ ಮೈತ್ರಿ ಆಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹೊಂದಾಣಿಕೆ ಮಾಡಿಕೊಳ್ಳೊದಕ್ಕೆ ಮೂಲ ಕಾರಣವೂ ನೀವೇ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹಿಂದೆ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರಕಾರ ರಚನೆ ಆದಾಗ ಈ ಸರಕಾರ ಐದು ವರ್ಷ ಇರಬೇಕು ಎಂದು ಹೇಳಿದ್ದಿರಿ. ಆದರೆ ಪಕ್ಕದಲ್ಲೇ ಕೂತು ಬಿಲ ಕೊರೆದಿರಿ. ಅಧಿಕಾರವನ್ನೂ, ಆ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷವನ್ನೇ ರಾಮನಗರದಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಿರಿ. ಆಗ ಮಂಡ್ಯದಲ್ಲಿ ದೋಖಾ ಮಾಡಿ ನಿಖಿಲ್‌ ಕುಮಾರಸ್ವಾಮಿಯನ್ನು ಸೋಲುವಂತೆ ಮಾಡಿದಿರಿ. ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಮ್ಮ ಕಾರ್ಯಕರ್ತರು ಇದನ್ನೇ ಮಾಡಿದ್ದಿದ್ದರೆ ಆತನೂ ಮನೆಯಲ್ಲಿ ಕೂರಬೇಕಿತ್ತು. ಮೈತ್ರಿಗೆ ನಾವು ಮೋಸ ಮಾಡಲಿಲ್ಲ ಎಂದರು. ಬಿಜೆಪಿ ಜತೆ 20 ತಿಂಗಳು ಸರಕಾರ ಮಾಡಿದ್ದರಿಂದ ನಾನು ಪಕ್ಷವನ್ನು ಉಳಿಸಿಕೊಂಡಿದ್ದೇನೆ.…

Read More

ಬೆಂಗಳೂರು: ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್‌ ಡಿ.ಕೆ.ಶಿವಕುಮಾರ್. 2002ರ ಚುನಾವಣೆಯನ್ನು ನಿಮಗೆ ನೆನಪು ಮಾಡಿಕೊಡುತ್ತೇನೆ. ಮೈಸೂರು, ಶಿಡ್ಲಘಟ್ಟ, ದೇವನಹಳ್ಳಿ ಕಡೆಯಿಂದ ನೀವು ಜನರನ್ನು ಕರೆದುಕೊಂಡು ಬಂದು ಕಳ್ಳ ವೋಟು ಹಾಕಿಸಿದ್ದು ಮರೆತಿದ್ದೀರಾ? ಕಳ್ಳ ಮತ ಹಾಕಿಸಲು ಕರೆದುಕೊಂಡು ಬಂದಾಗ ರಾಜರಾಜೇಶ್ವರಿ ನಗರದ ಹೆಬ್ಬಾಗಿಲಲ್ಲಿ ನಾನು ನಿಮ್ಮವರನ್ನು ಚಡ್ಡಿಯಲ್ಲಿ ಕೂರಿಸಿದ್ದನ್ನು ಮರೆಯಬೇಡಿ. ನನಗೆ ಚುನಾವಣೆ ಮಾಡುವುದು ಬರುವುದಿಲ್ಲ ಎಂದುಕೊಳ್ಳಬೇಡಿ. ಫೀಲ್ಡಿಗೆ ಇಳಿದರೆ ನಿಮಗಿಂತ ಚೆನ್ನಾಗಿ ಚುನಾವಣೆ ಮಾಡಬಲ್ಲೆ. ಆಗ ನೀವು ಅಧಿಕಾರದಲ್ಲಿ ಇದ್ದಿರಿ. ದೇವೇಗೌಡರನ್ನು ಸೋಲಿಸಲು ಪ್ತಯತ್ನ ಮಾಡಿದಿರಿ. ಆಸ್ಪತ್ರೆಯಿಂದ ನಾನು ವಾಪಸ್‌ ಬರ್ತಿನಿ, ಅದುವರೆಗೂ ನಿಮ್ಮ ಆಟ ನಡೆಯಲಿ ನೋಡೋಣ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ನೇರವಾಗಿಯೇ ಟಾಂಗ್‌ ಕೊಟ್ಟರು. ನಿಮಗೆ ನಾಚಿಕೆ ಆಗಬೇಕು. ಐದು ಗ್ಯಾರಂಟಿ ಕೊಟ್ಟಿದ್ದೇವೆ ಎಂದು ದಿನವೂ ಹೇಳಿದ್ದೇ ಹೇಳಿದ್ದು. ಮಿಸ್ಟರ್ ಸಿದ್ದರಾಮಯ್ಯ.. ನಿಮ್ಮ ಎರಡು ಸಾವಿರ ರೂಪಾಯಿ ಸಾಮಾನ್ಯ ಜನರ ಜೀವ ಉಳಿಸುತ್ತಿದೆ ಎಂದಾದರೆ…

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿ*ಗಳನ್ನು ನಿಯೋಜಿಸಬೇಕು ಎಂದು *ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಆಗ್ರಹಪಡಿಸಿದರು. ಅಲ್ಲದೆ; ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಕೇಂದ್ರ ಆಯೋಗ ಏನು ಮಾಡುತ್ತಿದೆ? ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ…

Read More

ಬೆಂಗಳೂರು: ಪ್ರಧಾನಿ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂಬುದಾಗಿ ಮೋದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ಮಾಡಿರುವಂತ ಅವರು, ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಕೇಳಿದ್ದಾರೆ. https://twitter.com/siddaramaiah/status/1770040789638521030 ಕರ್ನಾಟಕದಲ್ಲಿ ನಿಮ್ಮ…

Read More

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವಂತ ವಿಶೇಷ ಮೆಮು ರೈಲನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಲಾಗಿದೆ. ರೈಲುಗಳ ಸಂಖ್ಯೆ 06525/06526 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಮೈಸೂರು ನಿಲ್ದಾಣಗಳ ನಡುವೆ ಚಲಿಸುವ ಮೆಮು ವಿಶೇಷ ರೈಲುಗಳನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಕಾಲ ಅಂದರೆ ಮಾರ್ಚ್ 21, 2024 ರಿಂದ ಸೆಪ್ಟೆಂಬರ್ 20, 2024 ರವರೆಗೆ ಪ್ರಸ್ತುತ ಸಮಯದೊಂದಿಗೆ ಮುಂದುವರಿಸಲು ನಿರ್ಧರಿಸಲಾಗಿದೆ. II. ರೈಲುಗಳ ಸಂಚಾರ ಅವಧಿ ವಿಸ್ತರಣೆ ರೈಲು ಸಂಖ್ಯೆ 07335/07336 ಬೆಳಗಾವಿ-ಭದ್ರಾಚಲಂ ರೋಡ ನಿಲ್ದಾಣಗಳ ನಡುವೆ ಚಲಿಸುವ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ವಿಸ್ತರಣೆ ಸೇವೆಯ ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 07335 ಬೆಳಗಾವಿ-ಭದ್ರಾಚಲಂ ರೋಡ್ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ಏಪ್ರಿಲ್ 1 ರಿಂದ ಏಪ್ರಿಲ್ 30,…

Read More

ಬೆಂಗಳೂರು: ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ. ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂಬುದಾಗಿ ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂದು ಕಿಡಿಕಾರಿದ್ದಾರೆ. ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ ಎಂದಿದ್ದಾರೆ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ…

Read More

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಐವರಿಂದ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದಂತ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂಧಿತ ಆರೋಪಿಯೊಬ್ಬರ ಸಹೋದರ ಹಾಕಿದ್ದಂತ ಸ್ಟೇಟಸ್ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅಷ್ಟೇ ಆಕ್ರೋಶಕ್ಕೂ ಕಾರಣವಾಗಿದೆ. ಆ ಬಗ್ಗೆ ಮುಂದೆ ಓದಿ. ಬೆಂಗಳೂರಿನ ನಗರತ್ ಪೇಟೆಯ ಅಂಗಡಿಯೊಂದರಲ್ಲಿ ಹನುಮಾನ್ ಜಾಲೀಸಾ ಹಾಕಿದ್ದ ಕಾರಣಕ್ಕಾಗಿ ಹಿಂದೂ ವ್ಯಾಪಾರಿಯೊಬ್ಬರ ಮೇಲೆ ಐವರು ಯುವಕರು ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಚರ್ಚೆಗೂ ಗ್ರಾಸವಾಗಿದೆ. ಅಲ್ಲದೇ ರಾಜಕೀಯ ತಿರುವು ಪಡೆದು ಪ್ರತಿಭಟನೆಗೂ ಕಾರಣವಾಗಿತ್ತು. ಇದರ ನಡುವೆ ಬಂಧಿತ ಸುಲೇಮಾನ್ ಸಹೋದರ ಹಾಕಿರೋ ಸ್ಟೇಟಸ್ ಈಗ ವೈರಲ್ ಆಗಿದೆ. ಅದರಲ್ಲಿ ಇಂದು ಜೈಲ್, ನಾಳೆ ಬೇಲ್, ಮತ್ತೆ ಅದೇ ಖೇಲ್ ಎಂದಿದ್ದಾನೆ. ಈ ಮೂಲಕ ಕಿರಾತಕನೊಬ್ಬ ವಿಕೃತಿ ಮೆರೆದಿದ್ದಾನೆ. ಆತನ ಸ್ಟೇಟಸ್ ಗೆ ಅನೇಕರು ಆಕ್ರೋಶ ಹೊರ ಹಾಕಿದ್ದಾರೆ. ಸಹೋದರನನ್ನು ಬಂಧಿಸಿದಂತೆ ಈತನನ್ನೂ…

Read More