Subscribe to Updates
Get the latest creative news from FooBar about art, design and business.
Author: kannadanewsnow09
ಇಂದು ನಾವು ಒಂದು ಪರಿಹಾರವನ್ನು ನೋಡಲಿದ್ದೇವೆ ಆದರೆ ನಿಮಗೆ ಸಾಧ್ಯವಾದಷ್ಟು ಬೇಗ ಉತ್ತಮ ಕೆಲಸವನ್ನು ಪಡೆಯಲು ಎರಡು ಶಕ್ತಿಶಾಲಿ ಪರಿಹಾರಗಳನ್ನು ನೋಡೋಣ. ಒಂದು ರೂಪಾಯಿ ಕೂಡ ಖರ್ಚು ಮಾಡಬೇಕಿಲ್ಲ. ಪ್ರತಿದಿನ ನಂಬಿಕೆಯಿಂದ ಒಂದು ಟಂಬ್ಲರ್ ನೀರನ್ನು ತೆಗೆದುಕೊಂಡು ಜಪಿಸುವ ಮಂತ್ರವನ್ನು ಪಠಿಸುವ ಮೂಲಕ ಭೂಮಿಗೆ ಸುರಿಯಿರಿ. ಸೋಮವಾರ ಮತ್ತು ಗುರುವಾರ ದುರ್ಗಾ ಅಮ್ಮನವರ ದೇಗುಲದಲ್ಲಿ ನಿಂತು ನನಗೆ ಕೆಲಸ ಕೊಡಿಸಿ ಎಂದು ನ್ಯಾಯವಾಗಿ ಕೇಳಿಕೊಳ್ಳಿ. ಅಷ್ಟೆ, ಈ ಎರಡು ಉಪಾಯಗಳನ್ನು ಸರಿಯಾಗಿ ಹೇಗೆ ಮಾಡಬೇಕು, ದಿನನಿತ್ಯ ಹೇಳಬೇಕಾದ ಮಂತ್ರವೇನು ಎಂಬ ವಿವರವಾದ ಮಾಹಿತಿಯನ್ನು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿಯಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು…
ಬೆಂಗಳೂರು: ರಾಜ್ಯಾಧ್ಯಂತ ಮತ್ತೆ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಲಿದೆ. ಇದಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಹೋಂ ಸ್ಟೇ ಸೇರಿದಂತೆ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವಂತ ಸಚಿವ ಈಶ್ವರ್ ಖಂಡ್ರೆ, ಅದರಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದ ಕಾರ್ಯಪಡೆ ರಚಿಸಲಾಗಿದ್ದು, ಮೊದಲಿಗೆ ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಗಳು, ಹೋಂಸ್ಟೇಗಳನ್ನು ಹಾಗೂ ಕರ್ನಾಟಕ ಅರಣ್ಯ ಕಾಯಿದೆ 19630 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಮತ್ತು ನ್ಯಾಯಾಲಯದ ತಡೆಯಾಜ್ಞೆ, ವಿಚಾರಣೆ ಬಾಕಿ ಇಲ್ಲದ ದೊಡ್ಡ ಒತ್ತುವರಿಗಳನ್ನು ತೆರವು ಮಾಡಲು ಸೂಚಿಸಲಾಗಿರುತ್ತದೆ. ಈ…
ಮಂಡ್ಯ: ‘ಆತಿಥ್ಯ’ದ ನೆಲವೆಂಬ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಒಗ್ಗಟ್ಟು ಹಾಗೂ ಶ್ರಮ ಅಗತ್ಯವೆಂದು ಶಾಸಕರು ಹಾಗೂ ಸಮ್ಮೇಳನ ಮಾಧ್ಯಮ ಸಮನ್ವಯ ಸಮಿತಿ ಅಧ್ಯಕ್ಷ ದಿನೇಶ್ ಗೂಳಿಗೌಡ ಅಭಿಪ್ರಾಯಿಸಿದರು. ಡಿಸೆಂಬರ್ 20, 21 ಹಾಗೂ 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ನಗರದ ಹೊರ ವಲಯದಲ್ಲಿರುವ ಅಮರಾವತಿ ಹೋಟೇಲ್ ನಲ್ಲಿ ಆಯೋಜನೆಗೊಂಡಿದ್ದ ಮಾಧ್ಯಮ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡ ಭಾಷೆ ಕನ್ನಡದ ಹಬ್ಬ ಜಿಲ್ಲೆಯಲ್ಲಿ ಮೂರನೇ ಬಾರಿಗೆ ಆಯೋಜನೆಗೊಳ್ಳುತ್ತಿರುವುದು ನಮ್ಮೆಲ್ಲರಿಗೂ ಸಂತಸದ ವಿಚಾರ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ಹರಡಬೇಕು. ಆ ಮೂಲಕ ಮಂಡ್ಯ ಜಿಲ್ಲೆಯ ಸೊಗಡು ವಿಶ್ವವ್ಯಾಪಿ ಪಸರಿಸಲು ಶ್ರಮಿಸಬೇಕೆಂದು ಕರೆ ನೀಡಿದರು. ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ…
ಮಂಡ್ಯ: ಜಿಲ್ಲೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನ, ಮುಂದೆ ನಡೆಯುವಂತಹ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನಗಳಿಗೆ ಮಂಡ್ಯ ರೋಲ್ ಮಾಡೆಲ್ ಆಗಬೇಕು. ಆ ನಿಟ್ಟಿನಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು ಎಂದು ಶಾಸಕರು ಹಾಗೂ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. 87ನೇ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚನೆ ಮಾಡಿರುವ ಸಾಂಸ್ಕೃತಿಕ ಸಮನ್ವಯ ಸಮಿತಿಯ ಸದಸ್ಯರು, ಸಂಚಾಲಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಹೃದಯ ಶ್ರೀಮಂತಿಕೆಗೆ ಹೆಸರುವಾಸಿಯಾಗಿರುವ ಜಿಲ್ಲೆಯಲ್ಲಿ ಅತಿ ಹೆಚ್ಚು ಕಲಾಪ್ರಕಾರಗಳಿವೆ. ಸ್ಥಳೀಯ ಕಲಾವಿದರ ಜೊತೆಗೆ ಹೊರರಾಜ್ಯ, ವಿದೇಶದ ಕಲಾವಿದರಿಗೆ ಅವಕಾಶ ನೀಡುವ ಮೂಲಕ ಜಿಲ್ಲೆಯ ಜನತೆಗೆ ಕಲೆಯ ರಸದೌತಣ ನೀಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದು ಕರೆಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ. ಸಾಹಿತ್ಯ ಸಮ್ಮೇಳನಕ್ಕೆ ಕಲಾವಿದರೇ ಬೆನ್ನೆಲುಬು, ಅವರೇ ಶಕ್ತಿ. ಕಲಾವಿದರ ಆಯ್ಕೆ, ಕಾರ್ಯಚಟುವಟಿಕೆಗಳಿಗೆ ಸ್ಪಷ್ಟ ರೂಪ ಕೊಡಬೇಕು. ಈ ನೆಲ, ಜಲ, ಭಾಷೆ ಹೆಸರು ವಿಶ್ವಮಟ್ಟದಲ್ಲಿ…
ಬೆಂಗಳೂರು: ಬೆಂಗಳೂರು ವಿಭಾಗದ ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನಲೆ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ: ಈ ರೈಲುಗಳ ಸಂಚಾರ ಭಾಗಶಃ ರದ್ದು: 1. ರೈಲು ಸಂಖ್ಯೆ 06515 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಹಿಂದೂಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಹಿಂದೂಪುರದಲ್ಲಿ ಕೊನೆಗೊಳ್ಳುತ್ತದೆ. 2. ರೈಲು ಸಂಖ್ಯೆ 06516 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ…
ಬೆಂಗಳೂರು: ನಗರದಲ್ಲಿ ಏಕಾಂತದಲ್ಲಿದ್ದಂತ ಪ್ರೇಮಿಗಳಿಗೆ ಯುವಕರು ಕಿರುಕುಳ ನೀಡಿರುವಂತ ಘಟನೆ ನಡೆದಿದೆ. ರೊಚ್ಚಿಗೆದ್ದಂತ ಪ್ರೇಮಿಯಿಂದ ಯುವಕರಿಬ್ಬರಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿರುವಂತ ಘಟನೆ ಕಬ್ಬನ್ ಪಾರ್ಕ್ ನಲ್ಲಿ ನಡೆದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳಿಬ್ಬರು ಏಕಾಂತದಲ್ಲಿದ್ದರು. ಇಲ್ಲಿಗೆ ತೆರಳಿದಂತ ಯುವಕರಿಬ್ಬರು ಕಿರಿಕ್ ತೆಗೆದಿದ್ದಾರೆ. ಅವರನ್ನು ಪ್ರಶ್ನಿಸಿ, ಜಗಳ ಮಾಡಿದ್ದಾರೆ. ಯುವಕರು ಹಾಗೂ ಪ್ರೇಮಿಯ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ತಾರಕಕ್ಕೇರಿ, ಕೈಕೈ ಮಿಲಾಯಿಸಿಕೊಂಡಿದ್ದಾರೆ. ಅಲ್ಲದೇ ಸಿಟ್ಟಿಗೆದ್ದಂತ ಪ್ರೇಮಿಯೊಬ್ಬ ಯುವಕರಿಬ್ಬರಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿರುವಂತ ಘಟನೆ ನಡೆದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-those-going-home-for-gowri-ganesh-festival-1500-additional-ksrtc-buses-arranged/ https://kannadanewsnow.com/kannada/neither-i-nor-my-family-have-got-a-single-plot-from-the-government-m-b-patil-2/
ಬೆಂಗಳೂರು: ‘ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ- ಕ್ಯಾಟಗರಿ, ಕೆಎಚ್ ಬಿ ಅಥವಾ ಕೆಐಎಡಿಬಿಯ ನಿವೇಶನಗಳನ್ನು ಸರ್ಕಾರದಿಂದ ಪಡೆದುಕೊಂಡಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ಅವರು ಪ್ರತಿಯುತ್ತರ ನೀಡಿದ್ದಾರೆ. ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. ಎಲ್ಲ ಪಕ್ಷಗಳ ಸರ್ಕಾರಗಳ ಆಡಳಿತಾವಧಿಯಲ್ಕೂ ಈ ಸಂಸ್ಥೆಗಳು ಈ ರೀತಿ ನಿವೇಶನ ಪಡೆದು, ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು’ ಎಂದು ಸಚಿವರು ತಿರುಗೇಟು ನೀಡಿದರು. ಬಾಗ್ಮನೆಯೊಂದಿಗೆ ನಮ್ಮ ಕುಟುಂಬ ಮಟ್ಟದ ವ್ಯವಹಾರಕ್ಕೂ ಸರಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಅರ್ಜಿ ಹಾಕಿದ್ದರು. ಇಂತಹ…
ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಲು ಕರೆಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದನ್ನು ಹೇಗೆ ಡೌನ್ ಲೋಡ್ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 371-ಜೆ (ಕಲ್ಯಾಣ ಕರ್ನಾಟಕ) ಮೀಸಲಾತಿಯಡಿ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ಅರ್ಹತೆ ಪಡೆದವರ ಮೂಲ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲನೆಗೆ 1:5ರ ಅನುಪಾತದಲ್ಲಿ ಅರ್ಹತಾ ಪಟ್ಟಿ ಹಾಗೂ ಅಂತಿಮ ಅಭ್ಯರ್ಥಿಯ ಕಟ್ಆಫ್ ವಿವರಗಳುಳ್ಳ ಪ್ರಕಟಣೆಯನ್ನು ಈಗಾಗಲೇ ಹೊರಡಿಸಲಾಗಿದೆ ಎಂದಿದೆ. ಅದರಂತೆ, ಅರ್ಹ ಅಭ್ಯರ್ಥಿಗಳ ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಲು ಸಂಸ್ಥೆಯ ಅಧಿಕೃತ ವೆಬ್ಸೈಟ್ www.mybmtc.karnataka.gov.in ರಲ್ಲಿ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಕರೆಪತ್ರವನ್ನು ಡೌನ್ಲೊಡ್ ಮಾಡಿಕೊಂಡು, ಸೂಚಿಸಿರುವ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ಹಾಜರಾಗುವಂತೆ ಈ ಮೂಲಕ ತಿಳಿಸಿಲಾಗಿದೆ. https://kannadanewsnow.com/kannada/good-news-for-those-going-home-for-gowri-ganesh-festival-1500-additional-ksrtc-buses-arranged/ https://kannadanewsnow.com/kannada/grihalakshmi-scheme-money-to-be-credited-to-account-for-july-august-soon-minister-lakshmi-hebbalkar/
ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ ಎನ್ನುವಂತೆ 1,500 ಹೆಚ್ಚುವರಿ KSRTC ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದವರಿಗೆ ಶೇ.5ರಷ್ಟು ರಿಯಾಯಿತಿಯನ್ನು ನಿಗಮ ಘೋಷಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ ಚತುರ್ಥಿ ಹಾಗೂ ದಿನಾಂಕ 08.09.2024ರಂದು ವಾರಾಂತ್ಯ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:05.09.2024 ರಿಂದ 07.09.2024 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:08.09.2024ದಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ,…
ಚಿತ್ರದುರ್ಗ : ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು. ಬಿಜೆಪಿಗರ ಕುತಂತ್ರಕ್ಕೆ ಶೀಘ್ರವೇ ಉತ್ತರ ಕರ್ನಾಟಕದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸ್ಥಿರವಾದ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಬಿಜೆಪಿ ನಾಯಕರ ಉದ್ದೇಶ. ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಏನೆಲ್ಲಾ ಸರ್ಕಸ್ ನಡೆಸುತ್ತಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೋವಿಡ್ ಕಾಲದ ಭ್ರಷ್ಟಾಚಾರ ಬಯಲು ಕೋವಿಡ್ ವೇಳೆ ಬಿಜೆಪಿ ಸಚಿವರು ಮಾಡಿದ್ದ ಭ್ರಷ್ಟಾಚಾರ ಇಡೀ ರಾಜ್ಯಕ್ಕೆ…













