Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 21 ರಂದು ಬೆಳಗ್ಗೆ 10.00 ರಿಂದ ಸಂಜೆ 06-00ರವರೆಗೆ ಆಯನೂರು, ಕೋಹಳ್ಳಿ, ಮಂಟಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಚನ್ನಳ್ಳಿ ವೀರಣ್ಣನಬೆನವಳ್ಳಿ, ಮೈಸವಳ್ಳಿ, ಕೊನಗವಳ್ಳಿ, ಸೇವಲಾಲ್‍ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಾರ್ಚ್-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ,…
ಕಾಬೂಲ್: ಅಫ್ಘಾನಿಸ್ತಾನ ಗಡಿಯಲ್ಲಿ ಪಾಕಿಸ್ತಾನ ಸೇನೆಯ ವೈಮಾನಿಕ ದಾಳಿಗೆ ಪ್ರತಿಕ್ರಿಯೆಯಾಗಿ, ತಾಲಿಬಾನ್ “ಭಾರಿ ಶಸ್ತ್ರಾಸ್ತ್ರಗಳೊಂದಿಗೆ ಪಾಕಿಸ್ತಾನದ ಮಿಲಿಟರಿ ಕೇಂದ್ರಗಳ” ಮೇಲೆ ಇದೇ ರೀತಿಯ ದಾಳಿಗಳನ್ನು ನಡೆಸಿದೆ ಎಂದು ಹೇಳಿಕೊಂಡಿದೆ. ಪಕ್ತಿಕಾದ ಬರ್ಮಲ್ ಜಿಲ್ಲೆ ಮತ್ತು ಖೋಸ್ಟ್ನ ಸ್ಪೆರಾ ಜಿಲ್ಲೆಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಜನರನ್ನು ಕೊಂದ ಪಾಕಿಸ್ತಾನಿ ಪಡೆಗಳ ವಿರುದ್ಧದ “ಪ್ರತೀಕಾರದ” ಕ್ರಮದಲ್ಲಿ ಯಾರಾದರೂ ಕೊಲ್ಲಲ್ಪಟ್ಟಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. “ದಾಳಿಗೆ ಪ್ರತಿಕ್ರಿಯಿಸಿದ್ದೇವೆ ಮತ್ತು ಭಾರಿ ಶಸ್ತ್ರಾಸ್ತ್ರಗಳೊಂದಿಗೆ ಪಾಕಿಸ್ತಾನದ ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿದ್ದೇವೆ” ಎಂದು ತಾಲಿಬಾನ್ ನೇತೃತ್ವದ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರನ್ನು ಉಲ್ಲೇಖಿಸಿ ಟೋಲೊ ನ್ಯೂಸ್ ಸೋಮವಾರ ವರದಿ ಮಾಡಿದೆ. ಅಫ್ಘಾನಿಸ್ತಾನದ ನೆಲದ ಮೇಲಿನ ದಾಳಿಯನ್ನು ಖಂಡಿಸಿದ ಉಗ್ರಗಾಮಿ ಸಂಘಟನೆ, ಕೆಟ್ಟ ಪರಿಣಾಮಗಳಿಗೆ ಸಿದ್ಧವಾಗುವಂತೆ ಇಸ್ಲಾಮಾಬಾದ್ ಗೆ ಎಚ್ಚರಿಕೆ ನೀಡಿದೆ. “ಅಫ್ಘಾನಿಸ್ತಾನದ ಸಾರ್ವಭೌಮತ್ವದ ಯಾವುದೇ ಉಲ್ಲಂಘನೆಯು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ” ಎಂದು ಅವರು ಹೇಳಿದರು. ಇಂತಹ ದಾಳಿಗಳು ಪಾಕಿಸ್ತಾನಕ್ಕೆ ನಿಭಾಯಿಸಲು ಸಾಧ್ಯವಾಗದ ಕೆಟ್ಟ ಪರಿಣಾಮಗಳನ್ನು ಬೀರುತ್ತವೆ ಎಂದು ಮುಜಾಹಿದ್…
ಮಂಡ್ಯ : ಜಿಲ್ಲೆಯ ಗಡಿಭಾಗದ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಅಂದಾಜು 1 ಕೋಟಿ ಹಣವನ್ನು ಚುನಾವಣಾ ಸಿಬ್ಬಂದಿ ಮತ್ತು ಮದ್ದೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಸಾಗುತ್ತಿದ್ದಂತ ಕ್ರೇಟಾ ಕಾರೊಂದನ್ನು ತಡೆದಂತ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ನಡೆಸಿದಂತ ವೇಳೆಯಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ. ಗಿರೀಶ್ ಎಂಬುವವರು ಬೆಂಗಳೂರಿನಿಂದ ಹ್ಯೂಂಡಾಯ್ ಕ್ರೇಟಾ ಕೆಎ – 54 – ಎಂ – 4030 ಕಾರಿನಲ್ಲಿ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಮದ್ದೂರು ತಾಲೂಕಿನ ಗಡಿಭಾಗ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಆರ್.ಪ್ರಸಾದ್ ಹಾಗೂ ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೋಲೀಸ್ ಸಿಬ್ಬಂದಿ ಕಾರನ್ನು ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಹಣವನ್ನು ತುಂಬಿರುವುದನ್ನು ನೋಡಿ ಶಾಕ್ ಆಗಿದ್ದಾರೆ. ಈ ಬಗ್ಗೆ…
ಬೆಂಗಳೂರು: ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸ್ ಹಾಕಿದ್ದಕ್ಕೇ ಹಲ್ಲೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಘಟನೆ ನಡೆದಿತ್ತು. ಆದ್ರೇ ಈ ಘಟನೆಯ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ದಾಖಲೆ ಸಹಿತ ಕೆಲ ಸ್ಪಷ್ಟನೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಲ್ಲ, ಆರು ಆರೋಪಿಗಳಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ.…
ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ…
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಸ್ವರ್ಣಾಂಭ ಎಂಬುವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಇಂದು ಅವರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮಾರ್ಚ್.1ರಂದು ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಘಟನೆ ನಡೆದಿತ್ತು. 10 ಮಂದಿ ಗಾಯಗೊಂಡಿದ್ದರು. ಕಳೆದ 17 ದಿನಗಳಿಂದ ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸ್ವರ್ಣಾಂಭ ಇಂದು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಬ್ರೂಕ್ ಫೀಲ್ಡ್ ಆಸ್ಪತ್ರೆಯಿಂದ ಗಾಯಾಳು ಸ್ವರ್ಣಾಂಭ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸ್ವರ್ಣಾಭ ಅವರ ಕಣ್ಣು, ಕಿವಿ, ಹೊಟ್ಟೆ ಸೇರಿದಂತೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದವು. ಹೀಗಾಗಿ ಅವರು ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ಲಾಸ್ಟಿಕ್ ಸರ್ಜರಿ ಬಳಿಕ ಇಂದು ಸಂಜೆ 6 ಗಂಟೆಗೆ ಸ್ವರ್ಣಾಂಭ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/hc-issues-urgent-notice-to-dk-shivakumar-in-defamation-case-against-yatnal/ https://kannadanewsnow.com/kannada/good-news-for-state-government-employees-special-casual-leave-to-be-granted-tomorrow/
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ ಡಿಕೆ ಶಿವಕುಮಾರ್ ಬಲಾಢ್ಯರಾಗಿದ್ದಾರೆ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಾಪೀಠವನ್ನು ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಪ್ರಕರಣ ಕುರಿತಂತೆ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಅಂದಹಾಗೇ ಬಿಜೆಳಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ…
ಬೆಂಗಳೂರು: ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಿಗೆ ಮಾರ್ಚ್.23ರ ನಂತ್ರ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಯಾರಿಗೂ ಆಂತಕ ಬೇಡ, ಎಲ್ಲಾ ಒಳ್ಳೇಯದೇ ಆಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮಿತ್ರಪಕ್ಷ ಬಿಜೆಪಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ಕೋಲಾರ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ವಿಳಂಬ ಮಾಡುತ್ತಿರುವ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿದರು. ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿ ಇದೆ ಅಂತ ಎಲ್ಲರಿಗೂ ಗೊತ್ತು. ರಾಜಕೀಯ ವಿಶ್ಲೇಷಣೆ ಮಾಡುವ ಎಲ್ಲರಿಗೂ ಈ ವಿಷಯ ಗೊತ್ತಿದೆ. ಬಿಜೆಪಿ ಅವರು ಇದನ್ನೆಲ್ಲ ಗಮನಿಸುತ್ತಾರೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ ಅಂತ ಹೇಳೋಕೆ ನಾವು ಸಭೆ ಮಾಡಿದ್ದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. ನಮ್ಮ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಎಡೆ ಮಾಡಿಕೊಡದೆ ಒಟ್ಟಾಗಿ ಕೆಲಸ ಮಾಡಿ. ಅದು…
ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು. ಶಿವಮೊಗ್ಗದಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರ, ತುಷ್ಟೀಕರಣದ ನೀತಿಯನ್ನು ತನ್ನಾಗಿಸಿದ ಇಂಡಿ ಒಕ್ಕೂಟವು ಬಿಜೆಪಿ ಜನಬೆಂಬಲ ಗಮನಿಸಿ ನಿದ್ದೆಗೆಡುವ ಸ್ಥಿತಿ ಬಂದಿದೆ. ಯಡಿಯೂರಪ್ಪ ಅವರ ತಪೋಭೂಮಿ ಇದು. ಕರ್ನಾಟಕದ 28ರಲ್ಲಿ 28 ಸೀಟುಗಳನ್ನೂ ಬಿಜೆಪಿ- ಎನ್‍ಡಿಎಗೆ ಗೆಲ್ಲಿಸಿಕೊಡಿ ಎಂದು ವಿನಂತಿಸಿದರು. ಕಾಂಗ್ರೆಸ್ ಸುಳ್ಳುಗಳ ಮೂಲಕ ಅಧಿಕಾರಕ್ಕೆ ಬಂತು. ಬಳಿಕ ಕೇಂದ್ರ, ಮೋದಿಯವರ ಮೇಲೆ ಆರೋಪ ಹೊರಿಸುತ್ತಿದೆ. ಕಾಂಗ್ರೆಸ್ ಪಕ್ಷ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಜನರನ್ನು ಲೂಟಿ ಮಾಡಿ ಕಿಸೆ ಭರ್ತಿ ಮಾಡುವ ಕೆಲಸ ಮಾಡುತ್ತದೆ ಎಂದು ಆರೋಪಿಸಿದರು. ಕಾಂಗ್ರೆಸ್ಸಿಗರು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ರಾಜ್ಯದ ಖಜಾನೆ ಖಾಲಿ ಮಾಡಿದೆ ಎಂದು ಆಕ್ಷೇಪಿಸಿದರು. ಅನೇಕ ಸಿಎಂಗಳಿರುವ ಕರ್ನಾಟಕ ಸರಕಾರ……
ಗದಗ: ಲೋಕಸಭಾ ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಂದ ಅಭೂತಪೂರ್ವವಾದ ಬೆಂಬಲ ದೊರೆಯುತ್ತಿದೆ. ವಿಶೇಷ ವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸಾಹದಿಂದ ಚುನಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ…