Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿ ಎ ಆರ್ ಸಿ ಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ನಾಳೆಯಿಂದಲೇ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಗೊಳ್ಳಲಿದ್ದಾವೆ. ಇಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70 ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರ ನಾಳೆಯಿಂದಲೇ ಜಾರಿಗೆ ಬರಲಿವೆ ಎಂದು ಘೋಷಿಸಿದರು. ಇತ್ತೀಚೆಗೆ ಮೆಟ್ರೋ ಪ್ರಯಾಣ ದರ ಏರಿಕೆ ಮಿತಿಮೀರಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿದ್ದರು. ಮೆಟ್ರೋ ರೈಲು ದರದಲ್ಲಿನ ಅಸಂಗತತೆಗಳನ್ನು ಸರಿಪಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ನಿರ್ದೇಶನ ನೀಡಿದ್ದೇನೆ ಎಂದು ಅವರು ಎಕ್ಸ್ ನಲ್ಲಿ ಹೇಳಿದರು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ…

Read More

ಬೆಂಗಳೂರು: ಶೆ.45ರಿಂದ 50ರಷ್ಟು ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಿರುವ ಕಡೆ ಇಳಿಕೆ ಮಾಡಲಾಗುತ್ತದೆ. ನಮ್ಮ ಮೆಟ್ರೋ ಪ್ರಯಾಣದ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡುವುದಾಗಿ BMRCL ಎಂ.ಡಿ ಮಹೇಶ್ವರ ರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಸಂಬಂಧ ಕಳೆದ ಮೂರು ದಿನಗಳ ಹಿಂದೆ ಬೋರ್ಡ್ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ದರ ಏರಿಕೆಯ ನಿರ್ಧಾರವನ್ನು ಮಾಡಲಾಗಿತ್ತು. ಆದರೇ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ದರ ಇಳಿಕೆ ಮಾಡಲು ಎಲ್ಲಿ ಸಾಧ್ಯವಿದೆಯೋ ಅಲ್ಲಿ ಮಾಡುತ್ತೇವೆ ಎಂದರು. ಮೆಟ್ರೋ ಪ್ರಯಾಣದ ದರ ಏರಿಕೆ ನಂತ್ರ ಮಾಧ್ಯಮಗಳು, ಜಾಲತಾಣಗಳಲ್ಲಿ, ಪತ್ರಿಕೆಗಳಲ್ಲಿ ಜನಾಭಿಪ್ರಾಯ ವ್ಯಕ್ತವಾಗಿದೆ. ಈ ಜನಾಭಿಪ್ರಾಯದ ಮೇಲೆ ಮೆಟ್ರೋ ದರ ಇಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದರು. ಮೆಟ್ರೋದಲ್ಲಿ ಸಾಕಷ್ಟು ಹೂಡಿಕೆ ಮಾಡಲಾಗಿದೆ. ನಮ್ಮ ಮೆಟ್ರೋ ಸಿಬ್ಬಂದಿಗಳಿಗೆ ವೇತನ ನೀಡಬೇಕಾಗಿದೆ. ಮೆಟ್ರೋ ದರದಲ್ಲಿ ಶೇ.45 ರಿಂದ 50ರಷ್ಟು ಹೆಚ್ಚಳವಾದ ಕಡೆಯಲ್ಲಿ ಇಳಿಕೆ ಮಾಡಲಾಗುತ್ತದೆ. ನಮ್ಮ…

Read More

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಸುಗ್ರೀವಾಜ್ಞೆಯಲ್ಲಿ ಏನೆಲ್ಲಾ ಮುಖ್ಯಾಂಶಗಳಿದ್ದಾವೆ ಅಂತ ಮುಂದೆ ಓದಿ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:- 1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. 2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ. 3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ. 4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ. 5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಏಕಾಏಕಿ ಶೇ.47ರಷ್ಟು ಹೆಚ್ಚಳ ಮಾಡಿದ್ದರಿಂದ ಪ್ರಯಾಣಿಕರು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಈ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರವನ್ನು ಎಲ್ಲಿ ಇಳಿಸಲು ಸಾಧ್ಯವಿದೆಯೋ ಅಲ್ಲಿ ಇಳಿಸುವುದಾಗಿ ಬಿ ಎಂ ಆರ್ ಸಿ ಎಲ್ ಎಂಡಿ ಮಹೇಶ್ವರ ರಾವ್ ಅವರು ತಿಳಿಸಿದ್ದಾರೆ. ಈ ಮೂಲಕ ಪ್ರಯಾಣಿಕರ ಒತ್ತಡಕ್ಕೆ ಮಣಿದು ಶೀಘ್ರವೇ ನಮ್ಮ ಮೆಟ್ರೋ ಪ್ರಯಾಣದ ದರವನ್ನು ಇಳಿಕೆ ಮಾಡುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ದರ ಏರಿಕೆ ಸಂಬಂಧ ಕಳೆದ ಮೂರು ದಿನಗಳ ಹಿಂದೆ ಬೋರ್ಡ್ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ದರ ಏರಿಕೆಯ ನಿರ್ಧಾರವನ್ನು ಮಾಡಲಾಗಿತ್ತು. ಆದರೇ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ದರ ಇಳಿಕೆ ಮಾಡಲು ಎಲ್ಲಿ ಸಾಧ್ಯವಿದೆಯೋ ಅಲ್ಲಿ ಮಾಡುತ್ತೇವೆ ಎಂದರು. ಮೆಟ್ರೋ ಪ್ರಯಾಣದ ದರ ಏರಿಕೆ ನಂತ್ರ ಮಾಧ್ಯಮಗಳು, ಜಾಲತಾಣಗಳಲ್ಲಿ, ಪತ್ರಿಕೆಗಳಲ್ಲಿ ಜನಾಭಿಪ್ರಾಯ ವ್ಯಕ್ತವಾಗಿದೆ. ಈ ಜನಾಭಿಪ್ರಾಯದ ಮೇಲೆ ಮೆಟ್ರೋ ದರ ಇಳಿಸಲು ಕ್ರಮ…

Read More

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಹೊಸ ಆದಾಯ ತೆರಿಗೆ ಮಸೂದೆಯು ಆರು ದಶಕಗಳಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆಯನ್ನು ಬದಲಾಯಿಸುತ್ತದೆ ಮತ್ತು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದೆ. ಹೊಸ ಮಸೂದೆಯಲ್ಲಿ ಯಾವುದೇ ಪ್ರಮುಖ ರಚನಾತ್ಮಕ ಬದಲಾವಣೆಗಳಿಲ್ಲದ ಕಾರಣ, ತಜ್ಞರು ಇದು ಮುಖ್ಯವಾಗಿ ಸರಳೀಕರಣ ಪ್ರಕ್ರಿಯೆಯಾಗಿದೆ ಮತ್ತು ಅದರ ಪ್ರಮುಖ ಲಕ್ಷಣಗಳೆಂದರೆ – ಗರಿಗರಿ ಭಾಷೆ, ಹೆಚ್ಚುವರಿ ನಿಬಂಧನೆಗಳು ಮತ್ತು ವಿವರಣೆಗಳನ್ನು ತೆಗೆದುಹಾಕುವುದು ಮತ್ತು ಆದಾಯದ ವಿಸ್ತೃತ ವ್ಯಾಖ್ಯಾನ. ಹೊಸ ಐಟಿ ಮಸೂದೆಯಲ್ಲಿ, ವರ್ಚುವಲ್ ಡಿಜಿಟಲ್ ಸ್ವತ್ತುಗಳನ್ನು ಮೌಲ್ಯಮಾಪಕರ ಬಂಡವಾಳ ಆಸ್ತಿ ಎಂದು ಪರಿಗಣಿಸಬೇಕಾದ ಆಸ್ತಿಯ ವ್ಯಾಖ್ಯಾನದಲ್ಲಿ ಸೇರಿಸಲಾಗಿದೆ. ಮೂಲದಲ್ಲಿ ತೆರಿಗೆ ಕಡಿತ (ಟಿಡಿಎಸ್) ನಿಬಂಧನೆಗಳು, ಊಹೆಯ ತೆರಿಗೆ ದರಗಳು, ಮೌಲ್ಯಮಾಪನ ಸಮಯ ಮಿತಿಗಳಂತಹ ಹಲವಾರು ನಿಬಂಧನೆಗಳನ್ನು ಕೋಷ್ಟಕ ರೂಪದಲ್ಲಿ ಒದಗಿಸಲಾಗಿದೆ.

Read More

ಆ ಸಮಸ್ಯೆಯ ಬಗ್ಗೆ ಹೊರಗೆ ಯಾರಿಗೂ ಹೇಳಲೂ ಆಗದ ಹಾಗೆ ಸಿಕ್ಕಿಹಾಕಿಕೊಳ್ಳುತ್ತೇವೆ. ದೇವರನ್ನು ಬಿಟ್ಟು ಬೇರೆ ಯಾರೂ ಇದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬ ಹಂತಕ್ಕೆ ನಾವು ತಲುಪುತ್ತೇವೆ. ಆ ಹಂತವನ್ನು ತಲುಪಿದ ನಂತರ, ವಾರಾಹಿ ಅಮ್ಮನ ಬಗ್ಗೆ ಯೋಚಿಸಿ ಮತ್ತು ಮೂರು ದಿನಗಳವರೆಗೆ ಪ್ರತಿದಿನ ಈ ಒಂದು ವಿಷಯವನ್ನು ಬರೆಯಿರಿ, ವಾರಾಹಿ ಅಮ್ಮನವರು ನಿಮ್ಮ ಪರಿಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸುವ ಮಾರ್ಗಗಳನ್ನು ನೀಡುತ್ತಾರೆ. ಅಂತಹ ಆರಾಧನೆಯ ಬಗ್ಗೆ ನಾವು ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನೋಡಲಿದ್ದೇವೆ. ವಾರಾಹಿ ದೇವಿಯನ್ನು ಪೂಜಿಸಿದರೆ ನಮಗೆ ಹಲವಾರು ಲಾಭಗಳು ಸಿಗುತ್ತವೆ. ಜೀವನದಲ್ಲಿ ಶತ್ರುಗಳ ಕಾಟ, ಸಾಲದ ಬಾಧೆಯಿಂದ ನರಳುತ್ತಿರುವವರು ವಾರಾಹಿ ಅಮ್ಮನವರಿಗೆ ಮನಃಪೂರ್ವಕವಾಗಿ ಅರ್ಪಿಸಿದರೆ ಕ್ರಮೇಣ ಕಷ್ಟಗಳೆಲ್ಲ ಮಾಯವಾದಂತೆ ಅನಿಸುತ್ತದೆ. ಅಂತಹ ವಾರಾಹಿ ಅಮ್ಮನವರನ್ನು ಆಲೋಚಿಸಿ ಮಾಡಬಹುದಾದ ಸರಳ ಪರಿಹಾರವನ್ನು ನೋಡೋಣ. ಈ ಪರಿಹಾರವನ್ನು ಯಾವುದೇ ದಿನದಲ್ಲಿ ಮಾಡಬಹುದು. ನೀವು ಯಾವಾಗ ಬೇಕಾದರೂ ಮಾಡಬಹುದು. ನಮಗೆ ಬೇಕಾಗಿರುವುದು ಪೆನ್ನು ಮತ್ತು ಕಾಗದ. ಬೇರೇನೂ ಬೇಕಾಗಿಲ್ಲ. ಪೂಜೆ ಮಾಡುವ ಕೋಣೆಯಲ್ಲಿ…

Read More

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ. ಅದಕ್ಕಾಗಿಯೇ ಇರುವಂತ ಸಮಿತಿಯಾಗಿದೆ. ಬಿಜೆಪಿಯರು ಸುಖಾ ಸುಮ್ಮನೇ ನಮ್ಮ ಕಡೆಗೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಇಂದು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಯಾರು ಬೇಕಾದರೂ ಸಂಸತ್ತಿನಲ್ಲಿ ಮಾತನಾಡಲಿ, ಇಲ್ಲಿ ಪ್ರತಿಭಟನೆ ಮಾಡಲಿ, ಗಲಾಟೆ ಮಾಡಲಿ. ಆದರೆ ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ. ದರ ಏರಿಕೆ ತೀರ್ಮಾನ ಅವರು ಮಾಡುತ್ತಾರೆ” ಎಂದರು. “ಡಬಲ್ ಡೆಕ್ಕರ್ ಸೇರಿದಂತೆ ಬೆಂಗಳೂರಿನ ಮೆಟ್ರೋವನ್ನು ಇನ್ನೂ ಹೆಚ್ಚಿನ ಭಾಗಕ್ಕೆ ವಿಸ್ತರಣೆ ಮಾಡಬೇಕಿದೆ. ಮೆಟ್ರೋ ಜೊತೆಗೆ ಮೇಲ್ಸೆತುವೆ ನಿರ್ಮಾಣಕ್ಕೆ…

Read More

ಮೈಸೂರು/ ಬೆಂಗಳೂರು: “ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮೈಸೂರಿನ ಗಲಭೆ ಪೀಡಿತ ಪ್ರದೇಶ ಉದಯಗಿರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, “ಇಲ್ಲಿ ಯಾರೇ ತಪ್ಪು ಮಾಡಿದ್ದರೂ ತಪ್ಪು. ಯಾವುದೇ ರೀತಿಯ ತಪ್ಪು ನಡೆದಿದ್ದರೂ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ನಾನು ಪೊಲೀಸರಿಂದ ವರದಿ ತರಿಸಿಕೊಂಡಿದ್ದೇನೆ. ಘಟನೆ ನಡೆದ ತಕ್ಷಣ ಮುಸಲ್ಮಾನ ಸಮುದಾಯದ ಹಿರಿಯ ಮುಖಂಡರುಗಳು ಬಂದು ಪರಿಸ್ಥಿತಿ ನಿಭಾಯಿಸಿದ್ದಾರೆ. ಗಲಾಟೆ ತಡೆಯಲು ಬಂದ ಮುಸ್ಲಿಂ ಮುಖಂಡರಿಗೂ ಏಟುಗಳು ಬಿದ್ದಿವೆ. ಪೊಲೀಸ್ ಅಧಿಕಾರಿ ಮುತ್ತುರಾಜ್ ಅವರ ಕಾಲಿಗೂ ಏಟಾಗಿದೆ. ಈ ವಿಡಿಯೋವನ್ನು ನಾನು ನೋಡಿದ್ದೇನೆ” ಎಂದು ಹೇಳಿದರು. ಮೈಸೂರಿನ ಉದಯಗಿರಿಯಲ್ಲಿನ ಗಲಭೆ ಹಾಗೂ ಈ ಪ್ರಕರಣದಲ್ಲಿ ಪೊಲೀಸರದ್ದೇ ತಪ್ಪಿದೆ ಎನ್ನುವ ಸಚಿವ ಕೆ.ಎನ್.ರಾಜಣ್ಣ…

Read More

ಬೆಂಗಳೂರು: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿಯ ಸದಸ್ಯರನ್ನಾಗಿ ಹಿರಿಯ ರಂಗಕರ್ಮಿ, ಪತ್ರಕರ್ತ ವೈದ್ಯನಾಥ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಅವರು, ಹಿರಿಯ ಪತ್ರಕರ್ತರು, ರಂಗಕರ್ಮಿಗಳು, ಚಲನಚಿತ್ರ ಸಂಘಟಕರು, ಕಲಾವಿದರು ಆದ ವೈದ್ಯನಾಥ್ ಅವರು ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿ ಸದಸ್ಯರಾಗಿ ನೇಮಕ ಗೊಂಡಿದ್ದಾರೆ ಎಂದಿದ್ದಾರೆ. ಜೊತೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಆಯ್ಕೆ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರನ್ನು ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ – ಶಿವಮೊಗ್ಗ ಚಿತ್ರಸಮಾಜದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್ ಅವರು ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯ ದವರೆಗೆ ಹಾಸ್ಟೆಲ್ ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ. ಮಾಡಲಾಗಿದೆ. ಇನ್ನು 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು ಅದು ಸರಿ ಹೋದ ನಂತರ ಅವರಿಗೂ…

Read More