Author: kannadanewsnow09

ಬೆಂಗಳೂರು: ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದರು. ನಾವು ಕೇಳಿರೋದು 3-4 ಕ್ಷೇತ್ರ ಸೀಟು ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಆಗೋವರೆಗೂ ಮಾತನಾಡುವುದಿಲ್ಲ. ಆದರೆ, ಅಭ್ಯರ್ಥಿಗಳ ಘೋಷಣೆ ಹಾಗೂ ಕ್ಷೇತ್ರಗಳ ಹಂಚಿಕೆ ವಿಳಂಬ ಆಗುತ್ತಿದೆ ಎಂದು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದರು. ನಾವು ಬಿಜೆಪಿಯಿಂದ 6-7 ಸೀಟು ಕೇಳಿಲ್ಲ. ನಾವು ಕೇಳಿರೋದು 3-4 ಸೀಟು ಮಾತ್ರ. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. 3-4 ಸೀಟು ಕೊಡ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇನೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಎಂದು ಮಾಜಿ ಮುಖ್ಯಮಂತ್ರಿ ಅವರು ಬೇಸರ ವ್ಯಕ್ತಪಡಿಸಿದರು. ಹಾನಸ, ಮಂಡ್ಯದಲ್ಲಿ ಸ್ವತಂತ್ರವಾಗಿ ನಮ್ಮ…

Read More

ವಿಜಯಪುರ: ಜಿಲ್ಲೆಯಲ್ಲಿ ನಿರ್ಮಾಣ ಹಂತದ ಕಾಂಪೌಂಡ್ ಒಂದು ಕುಸಿತಗೊಂಡ ಪರಿಣಾಮ, ಅದರಡಿ ಸಿಲುಗಿ ಓರ್ವ ಕಾರ್ಮಿಕ ಸಾವನ್ನಪ್ಪಿರೋ ಧಾರುಣ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದಲ್ಲಿ ವಿದ್ಯುತ್ ಘಟಕ ನಿರ್ಮಾಣದ ಕಾಂಪೌಂಡ್ ನಿರ್ಮಿಸಲಾಗುತ್ತಿತ್ತು. ಈ ಕೆಲಸದಲ್ಲಿ ಮುದ್ದೇಬಿಹಾಳದ ಬಸವಲಿಂಗಯ್ಯ ಶಾಸ್ತ್ರಿ ಎಂಬುವರು ತೊಡಗಿದ್ದರು. ನಿರ್ಮಾಣ ಹಂತದ ಕಾಂಪೌಂಡ್ ದಿಢೀರ್ ಕುಸಿತಗೊಂಡ ಪರಿಣಾಮ, ಬಸವಲಿಂಗಯ್ಯ ಶಾಸ್ತ್ರಿ ಅವರು ಅದರಡಿ ಸಿಲುಕಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾಂಪೌಂಡ್ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಂತ ಬಸವಲಿಂಗಯ್ಯ ಶಾಸ್ತ್ರಿ ಅವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಮೃತ ಬಸವಲಿಂಗಯ್ಯ ಶಾಸ್ತ್ರಿ ಅವರು ಹಗರಿಬೊಮ್ಮನಹಳ್ಳಿಯ ನಿವಾಸಿ ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಮುದ್ದೇಬಿಹಾಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/good-news-for-state-government-employees-special-casual-leave-to-be-granted-tomorrow/ https://kannadanewsnow.com/kannada/hc-directs-state-govt-not-to-lock-down-shops-that-do-not-have-60-kannada-board/

Read More

ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ನಂತ್ರ, ಚುನಾವಣಾ ಕಾವು ಬಿಸಿಲಲ್ಲೂ ಏರಿದೆ. ಈ ವೇಳೆಯಲ್ಲಿ 85 ವರ್ಷ ಮೇಲ್ಪಟ್ಟಂತವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶವನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು ದೇಶದಲ್ಲಿ 85 ವರ್ಷ ಮೀರಿದ ವಯೋಮಾನದ 81 ಲಕ್ಷಕ್ಕೂ ಅಧಿಕ ಮತದಾರರಿದ್ದು, ಅವರಿಗಾಗಿ ಮನೆಯಿಂದಲೇ ಮತದಾನ ಸೌಲಭ್ಯವನ್ನು ಆಯೋಗ ಕಲ್ಪಿಸಿದೆ ಎಂದಿದೆ. ಇದರ ಜೊತೆಗೆ ಶೇ.40ಕ್ಕಿಂತಲೂ ಅಧಿಕ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೂ ಈ ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ನಗರ ಪ್ರದೇಶದಲ್ಲಿ 21,595, ಗ್ರಾಮೀಣ ಪ್ರದೇಶದಲ್ಲಿ 37,239 ಸೇರಿದಂತೆ ಒಟ್ಟು 58,834 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹೆಚ್ಚು ಮತಗಟ್ಟೆಗಳಿರುವ ಕ್ಷೇತ್ರ ಬೆಂಗಳೂರು ಉತ್ತರವಾಗಿದೆ. ಇಲ್ಲಿ 2911 ಮತಗಟ್ಟೆಗಳಿದ್ದಾವೆ. ಕಡಿಮೆ ಇರುವ ಮತಗಟ್ಟೆ ಕ್ಷೇತ್ರ ಉಡುಪಿಯಾಗಿದೆ. ಇಲ್ಲಿ 1842 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. https://kannadanewsnow.com/kannada/good-news-for-state-government-employees-special-casual-leave-to-be-granted-tomorrow/ https://kannadanewsnow.com/kannada/hc-directs-state-govt-not-to-lock-down-shops-that-do-not-have-60-kannada-board/

Read More

ಇಂದಿನ ಕಾಲದಲ್ಲಿ ಸಮೃದ್ಧ ಜೀವನ ನಡೆಸುತ್ತಿರುವವರು ಒಂದು ರೂಪಾಯಿಯೂ ಸಾಲವಿಲ್ಲದೆ ಬದುಕುವವರು ಎಂದು ಈಗಿನಿಂದಲೇ ಹೇಳಬಹುದು. ಸಾಲವು ವಾಸಿಯಾಗದ ಕಾಯಿಲೆ ಇದ್ದಂತೆ ಎಂದು ಹೇಳಬಹುದು. ಆ ಸಾಲದ ಸಮಸ್ಯೆಗಳನ್ನು ಪರಿಹರಿಸಲು ಜನರು ಪ್ರತಿದಿನ ನಡೆಸುವ ಹೋರಾಟಗಳನ್ನು ಹೇಳಲಾಗುವುದಿಲ್ಲ. ಆಧ್ಯಾತ್ಮಿಕತೆಯ ಕುರಿತಾದ ಈ ಪೋಸ್ಟ್‌ನಲ್ಲಿ ನಾವು ಈಗ ಈ ಸಮಸ್ಯೆಯಿಂದ ಹೊರಬರುವ ಸರಳ ಮಾಂತ್ರಿಕ ಆಚರಣೆಯ ಬಗ್ಗೆ ತಿಳಿಯಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…

Read More

ಬೆಂಗಳೂರು: ಇಪ್ಪತ್ತು ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಪಕ್ಷದ ಚುನಾವಣಾ ಉಸ್ತುವಾರಿ, ಸಹ ಉಸ್ತುವರಿಗಳು ಹಾಗೂ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಮುಖಂಡರು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರು ಹಾಗೂ ಮಾಜಿ ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಅತೃಪ್ತಿ ವ್ಯಕ್ತಪಡಿಸಿದರು. ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು; ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ನಿರ್ಲಕ್ಷ್ಯ ಮಾಡುತ್ತಿದೆ ಬಿಜೆಪಿ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಬಿಜೆಪಿ. ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು…

Read More

ನವದೆಹಲಿ: ಲೋಕಸಭಾ ಚುನಾವಣೆಗೆ ( Lok Sabha Election 2024) ದಿನಾಂಕ ಪ್ರಕಟವಾಗಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆದು, ಜೂನ್.4ರಂದು ಫಲಿತಾಂಶ ಪ್ರಕಟವಾಗಲಿದೆ. ಸೋ ನೀವು ಮತದಾನಕ್ಕೆ ರೆಡಿಯಾಗಿದ್ದರೇ ನಿಮ್ಮ ಹೆಸರು ವೋಟರ್ ಲೀಸ್ಟ್ ನಲ್ಲಿ ( Voter List ) ಇದ್ಯಾ ಅಂತ ಒಂದೇ ಒಂದು ನಿಮಿಷದಲ್ಲಿ ಈ ವೆಬ್ ಸೈಟ್ ಗೆ ಭೇಟಿ ನೀಡಿ, ಚೆಕ್ ಮಾಡಬಹುದಾಗಿದೆ. ಚುನಾವಣಾ ಆಯೋಗದಿಂದ ( Election Commission ) ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಲೋಕಸಭಾ ಚುನಾವಣೆ ಘೋಷಣೆಯ ನಂತ್ರವೂ ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ಯಾ ಅಂತ ಸರ್ಚ್ ಮಾಡೋದಕ್ಕೆ https://electoralsearch.eci.gov.in/ ಗೆ ಭೇಟಿ ನೀಡಿ, ಹೆಸರು, ನಿಮ್ಮ ಜಿಲ್ಲೆ, ತಾಲೂಕು, ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಪರಿಶೀಲಿಸಬಹುದಾಗಿದೆ. ಈ ಮೇಲ್ಕಂಡ ವೆಬ್ ಸೈಟ್ ನಲ್ಲಿ ಒಂದೇ ಒಂದು ನಿಮಿಷದಲ್ಲಿ ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಅಂತ ಚೆಕ್ ಮಾಡಬಹುದಾಗಿದೆ. ಒಂದು ವೇಳೆ ನಿಮ್ಮ…

Read More

ಬೆಂಗಳೂರು: ರಾಜ್ಯದಲ್ಲಿ ಶೇ.60ರಷ್ಟು ಮಳಿಗೆಗಳು ನಾಮಫಲಕಗಳಲ್ಲಿ ಕನ್ನಡವನ್ನು ಹಾಕುವುದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ಅಧಿಕೃತ ಆದೇಶವನ್ನು ಕೂಡ ಮಾಡಲಾಗಿತ್ತು. ಇದರ ನಡುವೆ ಶೇ.60ರಷ್ಟು ಕನ್ನಡ ಬೋರ್ಡ್ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ಮಳಿಗೆಗಳ ಸಂಘದಿಂದ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು. ಶೇ.60ರಷ್ಟು ಕನ್ನಡ ನಾಮಫಲಕ ಹಾಕಿದ್ರೆ ಸಮಸ್ಯೆ ಏನು ಮಳಿಗೆಗಳ ಮಾಲೀಕರಿಗೆ ಎಂಬುದಾಗಿ ಮಳಿಗೆಗಳ ಪರ ವಕೀಲರಿಗೆ ಪ್ರಶ್ನಿಸಿದರು. ಈ ವೇಳೆ ನ್ಯಾಯಪೀಠದ ಮುಂದೆ ವ್ಯಾಪಾರಿಗಳ ಸಂಘದ ಪರ ವಕೀಲರು, ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಸಮರ್ಪಕವಾಗಿ ಜಾರಿಯಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸೋದಕ್ಕೆ ಕಾಲಾವಕಾಶ ಬೇಕು. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಹಾಕದಿದ್ದದೇ ಮಳಿಗೆಗಳನ್ನು ಮುಚ್ಚಲಾಗುತ್ತಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸುವಂತೆ ಮನವಿ ಮಾಡಿತು. ಈ ವಾದವನ್ನು…

Read More

ಕೋಲ್ಕತಾ: ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಹೆಚ್ಚುವರಿ ಬದುಕುಳಿದವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳ ಸಹಾಯದಿಂದ ಎನ್ಡಿಆರ್ಎಫ್ ಸಿಬ್ಬಂದಿ ಈಗಾಗಲೇ ಸುಮಾರು 20 ಜನರನ್ನು ರಕ್ಷಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 14 ರಂದು ತಮ್ಮ ನಿವಾಸದಲ್ಲಿ ಬಿದ್ದು ಚಿಕಿತ್ಸೆ ಪಡೆದ ನಂತರ ತಲೆಗೆ ಬ್ಯಾಂಡೇಜ್ ಧರಿಸಿ ಸ್ಥಳಕ್ಕೆ ಭೇಟಿ ನೀಡಿದರು. ಕೋಲ್ಕತಾ ಮುನ್ಸಿಪಲ್ ಕಾರ್ಪೊರೇಷನ್ನ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮನೆ ಕುಸಿತದ ದುರಂತದ ಬಗ್ಗೆ ತಿಳಿದು ದುಃಖವಾಗಿದೆ. ನಮ್ಮ ಮೇಯರ್, ಅಗ್ನಿಶಾಮಕ ಸಚಿವರು, ಕಾರ್ಯದರ್ಶಿಗಳು ಮತ್ತು ಪೊಲೀಸ್ ಆಯುಕ್ತರು, ನಾಗರಿಕ, ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಮತ್ತು ತಂಡಗಳು (ಎನ್ಡಿಆರ್ಎಫ್, ಕೆಎಂಸಿ ಮತ್ತು ಕೆಪಿ…

Read More

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಸೋಮವಾರ ಘೋಷಿಸಲಾಗಿದೆ. ಇದಲ್ಲದೆ, ಬಿಹಾರ ಎನ್ಡಿಎ ಮೈತ್ರಿಕೂಟದ ಇತರ ಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ), ಹಿಂದೂಸ್ತಾನಿ ಆವಾಮ್ ಮೋರ್ಚಾ (ಎಚ್ಎಎಂ) ಮತ್ತು ರಾಷ್ಟ್ರೀಯ ಲೋಕ ಸಮತಾ ಪಕ್ಷ (ಆರ್ಎಲ್ಎಸ್ಪಿ) ಕ್ರಮವಾಗಿ ಐದು, ಒಂದು ಮತ್ತು ಒಂದು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಪಶ್ಚಿಮ ಚಂಪಾರಣ್, ಪೂರ್ವಿ ಚಂಪಾರಣ್, ಔರಂಗಾಬಾದ್, ಮಧುಬನಿ, ದರ್ಭಾಂಗ, ಮುಜಾಫರ್ಪುರ, ಮಹಾರಾಜ್ಗಂಜ್, ಸರನ್, ಬೇಗುಸರಾಯ್, ನವಾಡಾ, ಪಾಟ್ನಾ ಸಾಹಿಬ್, ಪಾಟಲಿಪುತ್ರ, ಆರಾ, ಬಕ್ಸಾರ್ ಮತ್ತು ಸಸಾರಾಮ್ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. https://kannadanewsnow.com/kannada/rs-8-lakh-cash-seized-in-tumkur/ https://kannadanewsnow.com/kannada/good-news-for-state-government-employees-special-casual-leave-to-be-granted-tomorrow/

Read More

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಯ ಹಿನ್ನಲೆಯಲ್ಲಿ ತೀರ್ಪನ್ನು ಕಾಯ್ದಿರಿಸಿದೆ.  ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಆದ್ರೇ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ…

Read More