Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಾಳೆಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ದಿನಾಂಕ: 19.03.2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಮಹಿಳಾ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದ್ದಾರೆ. ಈ ಸೌಲಭ್ಯವನ್ನು ಪಡೆಯಲು ರಜೆಯನ್ನು ಮಂಜೂರು ಮಾಡುವ ಸಕ್ಷಮ ಅಧಿಕಾರಿಯಿಂದ ಮುಂಚಿತವಾಗಿ ರಜೆಯನ್ನು ಪಡೆಯತಕ್ಕದ್ದು ಹಾಗೂ ಕಾರ್ಯಕ್ರಮದಲ್ಲಿ ಹಾಜರಾಗಿರುವ ಕುರಿತು ನೌಕರರ ಸಂಘದಿಂದ ಪಡೆದ ಅಧಿಕೃತ ಹಾಜರಾತಿ ಪುಮಾಣ…
ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಯ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ‘ಶಕ್ತಿ’ಯ ವ್ಯಕ್ತಿತ್ವದ ರೂಪವಾಗಿರುವ ತಾಯಂದಿರು ಮತ್ತು ಸಹೋದರಿಯರಿಗಾಗಿ ತಮ್ಮ ಜೀವನವನ್ನು ತ್ಯಾಗ ಮಾಡಲು ಸಿದ್ಧ ಎಂದು ಹೇಳಿದರು. ತೆಲಂಗಾಣದ ಜಗ್ತಿಯಾಲ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಅವರು ಭಾರತದಲ್ಲಿ ‘ಶಕ್ತಿ ವಿನಾಶ್’ (ಶಕ್ತಿ ವಿನಾಶ) ಬಗ್ಗೆ ಹೇಗೆ ಮಾತನಾಡುತ್ತಾರೆ?” ಎಂದು ಪ್ರಶ್ನಿಸಿದರು. ಶಕ್ತಿಗೆ ಸವಾಲೊಡ್ಡಲು ಬಯಸುವ ಯಾರನ್ನಾದರೂ ನೀವು ಬೆಂಬಲಿಸುತ್ತೀರಾ ಎಂದು ಅವರು ರಾಜ್ಯದ ಜನರನ್ನು ಕೇಳಿದರು. “ನಿನ್ನೆ, ಇಂಡಿ ಅಲೈಯನ್ಸ್ ಮುಂಬೈನಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ತಮ್ಮ ಹೋರಾಟ ‘ಶಕ್ತಿ’ಯ ವಿರುದ್ಧ ಎಂದು ಅವರು ಘೋಷಿಸಿದರು. “ನನಗೆ, ಪ್ರತಿ ಮಗಳು, ತಾಯಿ ಮತ್ತು ಸಹೋದರಿ ‘ಶಕ್ತಿ’ಯ ಪ್ರತಿರೂಪವಾಗಿದ್ದಾರೆ” ಎಂದು ಪ್ರಧಾನಿ ಹೇಳಿದರು. ಶಕ್ತಿಯ ಸಾಕಾರರೂಪವಾಗಿರುವ ಈ ತಾಯಂದಿರು ಮತ್ತು ಸಹೋದರಿಯರನ್ನು ರಕ್ಷಿಸಲು “ತಮ್ಮ ಪ್ರಾಣವನ್ನು ಪಣಕ್ಕಿಡುತ್ತೇನೆ” ಎಂದು ಅವರು ಹೇಳಿದರು. https://kannadanewsnow.com/kannada/breaking-sensex-down-152-points-nifty-down-22000-points-in-early-trade/ https://kannadanewsnow.com/kannada/congress-partys-contribution-in-womens-empowerment-is-immense-minister-laxmi-hebbalkar/
ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ. ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಂಬಿಕೆಗೆ ಮತ್ತೊಂದು ಹೆಸರೇ ಕಾಂಗ್ರೆಸ್. ಚುನಾವಣಾ ಪೂರ್ವ ಜನರಿಗೆ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ 100 ದಿನಗಳಲ್ಲಿ ಪೂರೈಸಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಶ್ರಮದ ಫಲವಾಗಿ ಇಂದು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿವೆ. ರಾಜ್ಯಾದ್ಯಂತ 1.20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಕ್ಕಿದೆ ಎಂದು ಹೇಳಿದರು. ಈ ಮೊದಲು ಸರ್ಕಾರದ ಅನುದಾನ ಪಡೆಯಲು ಜನರು ಮುಜುಗರ ಪಡುತ್ತಿದ್ದರು.…
ಬೆಂಗಳೂರು : ಚಾರ್ಮಾಡಿ ಘಾಟ್‌ನಲ್ಲಿ ಬೃಹತ್ ಪ್ರಮಾಣದ ಪ್ಲಾಸ್ಟಿಕ್ ಸಂಗ್ರಹ ಅಭಿಯಾನವನ್ನು ನಡೆಸಲು ಬಿಸ್ಲೇರಿ ಇಂಟರ್‌ನ್ಯಾಶನಲ್ ಸಂಸ್ಥೆಯು ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿದೆ. ಮಾರ್ಚ್ 8, 2024 ರಂದು ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆಯ ನಂತರ ಬಿಸ್ಲೆರಿ ಇಂಟರ್ನ್ಯಾಷನಲ್ ತಂಡವು ಮಾರ್ಚ್ 14, 2024 ರಂದು ತನ್ನ “ಬಾಟಲ್ಸ್ ಫಾರ್ ಚೇಂಜ್” ಉಪಕ್ರಮದ ಅಡಿಯಲ್ಲಿ ಸಂಗ್ರಹವನ್ನು ಪ್ರಾರಂಭಿಸಿದೆ. ಇದರಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದಾರೆ. ಭಕ್ತರು ಸೇವಿಸಿದ 1,958 ಕೆಜಿ ಪ್ಲಾಸ್ಟಿಕ್ ಅನ್ನು ತಂಡವು ಸಂಗ್ರಹಿಸಿ ಮರುಬಳಕೆಗಾಗಿ ತಲುಪಿಸಿದೆ. ಈ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಜನರು ದೇವಾಲಯಕ್ಕೆ ಭೇಟಿ ನೀಡಿದ್ದರು. ಕರ್ನಾಟಕ ಅರಣ್ಯ ಇಲಾಖೆಯ ರೇಂಜ್ ಫಾರೆಸ್ಟ್ ಆಫೀಸರ್ ಶ್ರೀ ಮೋಹನ್ ಕುಮಾರ್ ಹೇಳುವಂತೆ, “ಈ ಪಾಲುದಾರಿಕೆಯು ಪರಿಸರ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಮಹತ್ವದ ಕ್ರಮವಾಗಿದೆ. ‘ಬಾಟಲ್ಸ್ ಫಾರ್ ಚೇಂಜ್’ ಉಪಕ್ರಮದ ಅಡಿಯಲ್ಲಿ ಮರುಬಳಕೆಯ ಪ್ರಯತ್ನಗಳಲ್ಲಿ ಬಿಸ್ಲೆರಿ ಇಂಟರ್‌ನ್ಯಾಶನಲ್‌ನ ಸಹಕಾರ ಮತ್ತು ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ನಾವು ಶ್ಲಾಘಿಸುತ್ತೇವೆ. ಕರ್ನಾಟಕದ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ನಿನ್ನೆ ಆಂಧ್ರಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ಮೋದಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹೇಳಿದ್ದಾರೆ. “ಚುನಾವಣಾ ಆಯೋಗದ ನಿಯಮಗಳು ಪ್ರಚಾರಕ್ಕಾಗಿ ಸರ್ಕಾರಿ ಯಂತ್ರೋಪಕರಣಗಳನ್ನು ಬಳಸುವುದನ್ನು ನಿಷೇಧಿಸುತ್ತವೆ. ಈ ಕಾರಣಕ್ಕಾಗಿಯೇ 1975ರಲ್ಲಿ ಇಂದಿರಾ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ನೀತಿ ಸಂಹಿತೆ ಉಲ್ಲಂಘನೆಯನ್ನು ಕಟ್ಟುನಿಟ್ಟಾಗಿ ಎದುರಿಸಲಾಗುವುದು ಎಂದು ಚುನಾವಣಾ ಆಯೋಗವು ಚುನಾವಣೆಗಳನ್ನು ಘೋಷಿಸುವಾಗ ಹೇಳಿತ್ತು ಎಂದು ಅವರು ಹೇಳಿದರು. “ಐಎಎಫ್ ಹೆಲಿಕಾಪ್ಟರ್ ಅನ್ನು ಬಾಡಿಗೆಗೆ ನೀಡಲು ಬಿಜೆಪಿ ಹಣ ಪಾವತಿಸಿದ್ದರೆ, ಐಎಎಫ್ ಹೆಲಿಕಾಪ್ಟರ್ ಏಕೆ ಅವಶ್ಯಕ ಎಂಬುದಕ್ಕೆ ಕಾರಣಗಳೊಂದಿಗೆ ಚುನಾವಣಾ ಆಯೋಗವು ನಮಗೆಲ್ಲರಿಗೂ ತಿಳಿಸಬೇಕು (ಮುಖ್ಯಮಂತ್ರಿಗಳು ಮತ್ತು ಇತರ ಝಡ್ + ರಕ್ಷಕರು ಎಲ್ಲಾ ಅಗತ್ಯ ಭದ್ರತಾ ವೈಶಿಷ್ಟ್ಯಗಳನ್ನು ಹೊಂದಿರುವ ಸಾಮಾನ್ಯ ವಿವಿಐಪಿ ಹೆಲಿಕಾಪ್ಟರ್ಗಳನ್ನು…
ಬೆಂಗಳೂರು: ಬಹುದಿನಗಳ ಬೇಡಿಕೆಯಂತೆ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಹುದ್ದೆ ತುಂಬಲು ಸರ್ಕಾರ ಮುಂದಾಗಿದ್ದು ಅರ್ಹ ಅಭ್ಯರ್ಥಿಗಳ ನೇಮಕಾತಿ ಮಾಡಲು ಕೆಪಿಎಸ್ ಸಿ ಯಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀ್ಟ್ ಮಾಡಿದ್ದಾರೆ. ನಾವು ಅಧಿಕಾರ ವಹಿಸಿಕೊಂಡಾಗ ನೂತನ ನೇಮಕಾತಿಗಳಿಗಾಗಿ ನಮ್ಮ ಇಲಾಖೆಯಲ್ಲಿದ್ದ ಹಲವಾರು ನಿರ್ಬಂಧನೆ ಹಾಗೂ ಅಡೆತಡೆಗಳನ್ನು ಈಗ ಸಂಪೂರ್ಣವಾಗಿ ನಿವಾರಿಸಿ ಎಲ್ಲಾ ನೂತನ ನೇಮಕಾತಿಗಳಿಗೆ ದಾರಿ ಮಾಡಿಕೊಡಲಾಗಿದೆ. ಅಗತ್ಯವಿದ್ದ ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಕ್ಯಾಬಿನೆಟ್ ಅನುಮೋದನೆ ಪಡೆದು, ನೂತನ ನೇಮಕಾತಿಗಳನ್ನು ಶೀಘ್ರವಾಗಿ ನಡೆಸುವಂತೆ KPSCಗೆ ಸೂಚನೆ ನೀಡಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಲಾಗಿದೆ. ಇದೀಗ ರಾಜ್ಯಾದ್ಯಂತ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (PDO) ಹುದ್ದೆಗಳ ನೇಮಕಾತಿಗೆ KPSC ಕರೆ ನೀಡಿದ್ದು ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಶುಭ ಕೋರುತ್ತೇನೆ. ಈ 247 ಹುದ್ದೆಗಳ ಪೈಕಿ 150 ಹುದ್ದೆಗಳು ಮಿಕ್ಕುಳಿದ ವೃಂದಕ್ಕೆ ಸೇರಿದ್ದರೆ, 97 ಹುದ್ದೆಗಳು ಕಲ್ಯಾಣ ಕರ್ನಾಟಕ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಗಳನ್ನು ಅಂಟಿಸಿ ಪ್ರದರ್ಶಿಸಲು ಕಟ್ಟು ನಿಟ್ಟಿನ ಆದೇಶ ಮಾಡಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಆದೇಶ ಹೊರಡಿಸಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಸ್ಟಿಕರ್ ಗಳನ್ನು ಅಂಟಿಸಿಕೊಳ್ಳಬೇಕಿದೆ ಎಂದು ತಿಳಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ವಾಹನಗಳಿಗೆ ಜಲಮಂಡಳಿ ವತಿಯಿಂದ ಸ್ಟಿಕ್ಕರ್ ಗಳನ್ನು ಸಿದ್ದಪಡಿಸಿ ಪಾಲಿಕೆಗೆ ನೀಡಿದೆ. ಸದರಿ ಸ್ಟಿಕ್ಕರ್ ಗಳನ್ನು ವಲಯವಾರು ಹಂಚಿಕೆ ಮಾಡಲಾಗಿದೆ ಎಂದು ಹೇಳಿದೆ. ಅದರಂತೆ, ಪ್ರತಿ ಟ್ಯಾಂಕರ್ ಮಾಲೀಕರು ಪಾಲಿಕೆಯಲ್ಲಿ ಸ್ವಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಹಾಗೂ ಪಾಲಿಕೆ ನೀಡಿರುವ ಸ್ಟಿಕರ್ ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರುವಾಣಿ ಸಂಖ್ಯೆ ಹಾಗೂ ಸ್ವಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಇಲ್ಲವಾದಲ್ಲಿ ಶಿಸ್ತು…
ನವದೆಹಲಿ: ವೋಟರ್ ಐಡಿ ( Voter ID ) ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸೋದಕ್ಕೆ ಗುರುತಿನ ಪುರಾವೆಯಾಗಿದೆ. ಮತದಾರರ ಗುರುತಿನ ಚೀಟಿ ಇಲ್ಲದೇ ಇದ್ದರೂ ಪರ್ಯಾಯ ಐಡಿಗಳನ್ನು ತೋರಿಸಿ ನಿಮ್ಮ ಮತವನ್ನು ಚಲಾಯಿಸಬಹುದಾಗಿದೆ. ಹಾಗಾದ್ರೇ ಇಂತಹ ಮತದಾರರ ಗುರುತಿನ ಚೀಟಿ ಅಂದ್ರೆ ಏನು.? ಪಡೆಯುವುದು ಹೇಗೆ.? ಮಹತ್ವ ಏನು ಅಂತ ಮುಂದೆ ಓದಿ. ಭಾರತದ ನಾಗರಿಕರಿಗೆ 18 ವರ್ಷ ತುಂಬಿದ ನಂತರ, ಅವರು ಮತ ಚಲಾಯಿಸಲು ಅರ್ಹರಾಗುತ್ತಾರೆ. ಭಾರತದಲ್ಲಿ ಮತ ಚಲಾಯಿಸಲು ವೋಟರ್ ಐಡಿ ಅಗತ್ಯವಿದೆ. ಹೀಗಾಗಿ, 18 ವರ್ಷಕ್ಕಿಂತ ಮೇಲ್ಪಟ್ಟ ಭಾರತೀಯ ನಾಗರಿಕರು ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದು ಮತ್ತು ಪಡೆಯಬಹುದು, ಇದನ್ನು ವಿವಿಧ ಉದ್ದೇಶಗಳಿಗಾಗಿ ಗುರುತಿನ ಪುರಾವೆ ದಾಖಲೆಯಾಗಿ ಬಳಸಬಹುದು. ಮತದಾರರ ಗುರುತಿನ ಚೀಟಿ ಎಂದರೇನು? ಮತದಾರರ ಗುರುತಿನ ಚೀಟಿಯು ಭಾರತದ ಚುನಾವಣಾ ಆಯೋಗವು ನೀಡುವ ಫೋಟೋ ಗುರುತಿನ ಚೀಟಿಯಾಗಿದೆ. ಮತದಾರರ ಗುರುತಿನ ಚೀಟಿಯ ಪ್ರಾಥಮಿಕ ಕಾರ್ಯವೆಂದರೆ ಮತದಾರರಿಗೆ ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುವುದು, ದಕ್ಷತೆಯನ್ನು ಹೆಚ್ಚಿಸುವುದು ಮತ್ತು…
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಇಂದು ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ…
ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು 2024-25ರ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಇದೀಗ ಬಜೆಟ್ ಮಂಡಿಸಿ ತಿಂಗಳೊಳಗಾಗಿ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ಹಂಚಿಕೊಂಡಿದ್ದು, ಉಪ ನೋಂದಣಾಧಿಕಾರಿ ಕಛೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರ್ಕಾರಿ ಕಛೇರಿಗಳಲ್ಲಿ ಕಾಯಿಸುವುದೂ ಸಹ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ “ಎನಿವೇರ್ ನೋಂದಣಿ ವ್ಯವಸ್ಥೆ”ಯನ್ನು ಜಾರಿಗೊಳಿಸಲಾಗಿದೆ. ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಿ ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿತ್ತು ಎಂದಿದ್ದಾರೆ. ಇದೇ ಕಾರಣಕ್ಕೆ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಛೇರಿಯ…