Author: kannadanewsnow09

ಸೆನೆಗಲ್: 85 ಪ್ರಯಾಣಿಕರನ್ನು ಹೊತ್ತ ಬೋಯಿಂಗ್ 737 ವಿಮಾನವು ಸೆನೆಗಲ್ ರಾಜಧಾನಿ ಡಕಾರ್ ವಿಮಾನ ನಿಲ್ದಾಣದಲ್ಲಿ ರನ್ವೇಯಿಂದ ಜಾರಿದ ಪರಿಣಾಮ 10 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಸಾರಿಗೆ ಸಚಿವರು ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಟ್ರಾನ್ಸ್ ಏರ್ ನಿರ್ವಹಿಸುವ ಏರ್ ಸೆನೆಗಲ್ ವಿಮಾನವು ಬುಧವಾರ ತಡರಾತ್ರಿ 79 ಪ್ರಯಾಣಿಕರು, ಇಬ್ಬರು ಪೈಲಟ್ ಗಳು ಮತ್ತು ನಾಲ್ಕು ಕ್ಯಾಬಿನ್ ಸಿಬ್ಬಂದಿಯನ್ನು ಹೊತ್ತು ಬಮಾಕೊಗೆ ತೆರಳುತ್ತಿತ್ತು ಎಂದು ಸಾರಿಗೆ ಸಚಿವ ಎಲ್ ಮಲಿಕ್ ಎನ್ಡಿಯಾಯೆ ತಿಳಿಸಿದ್ದಾರೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದವರನ್ನು ವಿಶ್ರಾಂತಿಗಾಗಿ ಹೋಟೆಲ್ ಗೆ ಕರೆದೊಯ್ಯಲಾಗಿದೆ. ಇತರ ಯಾವುದೇ ವಿವರಗಳು ತಕ್ಷಣ ಲಭ್ಯವಿಲ್ಲ. ಇದೊಂದು ಬ್ರೇಕಿಂಗ್ ಸ್ಟೋರಿ. ಹೆಚ್ಚಿನ ವಿವರಗಳನ್ನು ಸೇರಿಸಲಾಗುವುದು. https://kannadanewsnow.com/kannada/sslc-exams-10-drop-in-results-this-year-as-compared-to-last-year/ https://kannadanewsnow.com/kannada/no-one-stopped-kumaraswamy-from-fighting-in-pen-drive-case-dk-shivakumar/

Read More

ಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈ ದೇಶದಿಂದಲೇ ಗಡಿಪಾರು ಮಾಡುವಂತೆ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದಾರೆ. ಇಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದೇಶವೇ ತಲೆತಗ್ಗಿಸುವಂತ ಕೇಸ್ ಆಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯರಾದಂತ ಮಹಿಳೆಯರಿಗೆ ಸಾಂತ್ವಾನ, ಆತ್ಮಸ್ಥೈರ್ಯ ತುಂಬುವಂತ ಕೆಲಸ ಮಾಡಬೇಕಿದೆ ಎಂದರು. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಯಾರೇ ಬಲಾಢ್ಯರಾದರೂ ಸಹ ಅವರಿಗೆ ತಕ್ಕ ಶಾಸ್ತಿಯಾಗಲೇ ಬೇಕು. ಸುಸಂಸ್ಕೃತ ರಾಜಕಾರಣಿಯವರ ಕುಟುಂಬದಿಂದ ಬಂದಿರುವಂತ ಇಂತಹ ಪ್ರಜ್ವಲ್ ರೇವಣ್ಣ ಸಂಸದರಾಗಿರೋದಕ್ಕೆ ಯೋಗ್ಯತೆನೇ ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು. ಸಂಸದ ಪ್ರಜ್ವಲ್ ರೇವಣ್ಣ ಮಾಡಿರೋದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸವಾಗಿದೆ. ಇಂತಹವರಿಗೆ ಕಠಿಣ ಶಿಕ್ಷೆಯಾಗಬೇಕು. ಅಲ್ಲದೇ ಈ ದೇಶದಿಂದಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಗಡಿಪಾರು ಮಾಡಬೇಕು ಎಂಬುದಾಗಿ ಆಗ್ರಹಿಸಿದರು. https://kannadanewsnow.com/kannada/sslc-exams-10-drop-in-results-this-year-as-compared-to-last-year/ https://kannadanewsnow.com/kannada/no-one-stopped-kumaraswamy-from-fighting-in-pen-drive-case-dk-shivakumar/

Read More

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವು ಶೇಕಡಾ 10.49 ರಷ್ಟು ಕುಸಿದಿದೆ. ಇದರ ನಡುವೆ ಶೇ.73.40ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶವನ್ನು ಪ್ರಕಟಿಸಿದ್ದು, ಒಟ್ಟಾರೆ ತೇರ್ಗಡೆ ಪ್ರಮಾಣ 73.40 ರಷ್ಟಿದೆ. 2022-23ನೇ ಸಾಲಿನಲ್ಲಿ ಶೇ.83.89ರಷ್ಟು ಫಲಿತಾಂಶ ಬಂದಿತ್ತು. ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು https://kseab.karnataka.gov.in ಲಿಂಕ್ ನಲ್ಲಿ ನೋಡಬಹುದಾಗಿದೆ. ಮಂಡಳಿಯು ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ ವಿದ್ಯಾರ್ಥಿಗಳಿಗೆ ಫಲಿತಾಂಶಗಳನ್ನು ಕಳುಹಿಸುತ್ತದೆ. ಇದನ್ನು ಇಂದು ಶಾಲೆಗಳಲ್ಲಿ ಪ್ರದರ್ಶಿಸಲಾಗುವುದು. ಪರೀಕ್ಷೆಗೆ ಹಾಜರಾದ ಒಟ್ಟು 8,59,967 ವಿದ್ಯಾರ್ಥಿಗಳಲ್ಲಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮುಧೋಳದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಏಳು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಶೇ.94ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳು…

Read More

ಬೆಂಗಳೂರು: ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣದ ಗ್ಯಾರಂಟಿಯನ್ನು ನೀಡಿದ್ದಾರೆ. ಹಿಂದೆ ವರ್ಣಭೇದ ನೀತಿಯಿಂದ ಅನೇಕ ಸಾವು ನೋವುಗಳಾಗಿತ್ತು. ನೆಲ್ಸನ್‌ ಮಂಡೇಲ, ಮಹಾತ್ಮ ಗಾಂಧೀಜಿಯಿಂದ ಇದರ ವಿರುದ್ಧ ಹೋರಾಟ ನಡೆದಿತ್ತು. ಆದರೆ ಕಾಂಗ್ರೆಸ್ ಬಣ್ಣದ ಆಧಾರದಲ್ಲಿ ಜನರ ಮನಸ್ಸನ್ನು ಒಡೆದಿದೆ. 5…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣವನ್ನು ಎಸ್ಐಟಿ ಪಾರದರ್ಶಕವಾಗಿ ತನಿಖೆಯನ್ನು ನಡೆಸುತ್ತಿಲ್ಲ. ಮಧ್ಯಪ್ರವೇಶಿಸಿ, ಸರಿಯಾದ ರೀತಿಯಲ್ಲಿ ತನಿಖೆಗೆ ಸೂಚಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ. ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗವು ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿತು. ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್, ಹೆಚ್.ಡಿ ರೇವಣ್ಣ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಎಸ್ಐಟಿ ತನಿಖೆಯನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ತಾವು ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ. https://kannadanewsnow.com/kannada/pm-has-become-racist-by-bringing-skin-colour-in-election-debate-chidambaram/ https://kannadanewsnow.com/kannada/no-one-stopped-kumaraswamy-from-fighting-in-pen-drive-case-dk-shivakumar/

Read More

ಬೆಂಗಳೂರು: ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ, ಎಸ್ಐಟಿಯಿಂದ ಆಕ್ಷೇಪಣೆ ಸಲ್ಲಿಸಲಾಗಿದೆ. ಈ ಮೂಲಕ ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಕೋರ್ಟ್ ಮುಂದೆ ಎಸ್ಐಟಿಯ ಎಸ್ ಪಿಪಿ ಜಾಯ್ನಾ ಕೋಥಾರಿ ಅವರು ವಾದ ಮಂಡಿಸಿ, ಜಾಮೀನು ಅರ್ಜಿಗೆ ನಾವು ಆಕ್ಷೇಪಣೆ ಸಲ್ಲಿಸುತ್ತಿರುವುದರ ಹಿಂದೆ ವಿಳಂಪದ ಉದ್ದೇಶವಿಲ್ಲ. ನಮ್ಮ ವಾದ ಮಂಡನೆಗೆ ಕಾಲಾವಕಾಶ ನೀಡಬೇಕು ಎಂಬುದಾಗಿ ಕೋರಿದರು. ಈ ವೇಳೆ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆಗೆ ಕಾಲಾವಕಾಶ ನೀಡುವುದಿಲ್ಲ. ಬೇರೆ ಪ್ರಕರಣಗಳಲ್ಲಿ ನಾವು ಕಾಲಾವಕಾಶ ನೀಡಿಲ್ಲ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ ಎಂಬುದಾಗಿ ಸ್ಪಷ್ಟ…

Read More

ಬೆಂಗಳೂರು: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ ಉತ್ತರಿಸಿದಂತ ಅವರು,  “ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು. ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದರು. https://kannadanewsnow.com/kannada/bescom-launches-whatsapp-number-to-solve-power-crisis-heres-the-district-wise-number/ https://kannadanewsnow.com/kannada/pm-has-become-racist-by-bringing-skin-colour-in-election-debate-chidambaram/

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದಿದೆ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು…

Read More

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಅಂದರೆ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದಲ್ಲಿ 4.93.900 ವಿದ್ಯಾರ್ಥಿಗಳಲ್ಲಿ 35.97.703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. (72.83%) ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 3.66.067 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು 5.906 ಸರ್ಕಾರಿ ಶಾಲೆಗಳಲ್ಲಿ 72.46% , 3.666 ಅನುದಾನ ಶಾಲೆಗಳಲ್ಲಿ 72.22%, 6.144 ಅನುದಾನ ರಹಿತ ಶಾಲೆಗಳು ಫಲಿತಾಂಶವಾಗಿದೆ. 625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದಿದ್ದಾರೆ. 7…

Read More

ಬೆಳಗಾವಿ: ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಗಳಿಸುವ ಮೂಲಕ ರೈತನ ಮಗನೊಬ್ಬ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು  625 ಅಂಕಗಳಿಗೆ 624 ಅಂಕವನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಅಂದಹಾಗೇ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ. ಇಲ್ಲಿನ ಸುಬಲಸಾಗರ ಪ್ರೌಢ ವಿದ್ಯಾಮಂದಿರದ ಶಾಲೆಯಲ್ಲಿ ಸಿದ್ದಾಂತ ನಾಯಿಕಬಾ ಗಡಗೆ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದರು. ಈತ ರೈತನ ಮಗ ಎಂಬುದಾಗಿ ತಿಳಿದು ಬಂದಿದೆ. ಹೀಗಿದ್ದೂ ಇಂಗ್ಲೀಷಿನಲ್ಲಿ 99 ಪಡೆದಿದ್ದು, ಉಳಿದ ವಿಷಯಗಳಲ್ಲಿ ಔಟ್ ಆಫ್ ಔಟ್ ಅಂಕ ಪಡೆದಿದ್ದಾನೆ. https://kannadanewsnow.com/kannada/pm-has-become-racist-by-bringing-skin-colour-in-election-debate-chidambaram/ https://kannadanewsnow.com/kannada/kumaraswamy-married-a-girl-of-his-daughters-age-congress-mla-sr-srinivas/

Read More