Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ‌ ಬೆಂಗಳೂರು ಜಲಮಂಡಲಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 4 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿ ನಂತರ ಪರೀಕ್ಷೆ ನಡೆಸದೇ ಇರುವ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದು, ಮರು ಅಧಿಸೂಚನೆ ಹೊರಡಿಸಲು ಸರ್ಕಾರ ಸೂಚಿಸಿತ್ತು. ಆ ಪ್ರಕಾರ ಸಂಬಂಧಪಟ್ಟ ಇಲಾಖೆಗಳಿಂದ‌ ಒಳ ಮೀಸಲಾತಿ ಅಳವಡಿಸಿಕೊಂಡು ಮರು ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಕರೆದಿದ್ದು, ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಎ, ಬಿ ಮತ್ತು ಸಿ ವರ್ಗ ಗಳ ಆರ್ ಡಿ ಸಂಖ್ಯೆ ದಾಖಲು ಮಾಡದವರು ಕೂಡ ಈ ಹಿಂದಿನ ಅರ್ಜಿಯಲ್ಲೇ ಎಡಿಟ್ ಮಾಡಿ, ದಾಖಲಿಸಬಹುದು ಎಂದು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. 2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಎದುರಾಗಿ ಒಟ್ಟು 5,910 ಅತಿಥಿ ಉಪನ್ಯಾಸಕರನ್ನು (Guest Lecturers) ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅಧಿಕೃತ ಆದೇಶ ಹೊರಡಿಸಿದೆ. ಮೇ 20, 2026 ರಂದು ಇಲಾಖೆಯ ನಿರ್ದೇಶಕರು ಹೊರಡಿಸಿರುವ ಅಧಿಕೃತ ಜ್ಞಾಪನ ಪತ್ರದ ಪ್ರಕಾರ, ಈ ನೇಮಕಾತಿಯು ಕೇವಲ 10 ತಿಂಗಳ ಅವಧಿಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಸೀಮಿತವಾಗಿರುತ್ತದೆ. ಪ್ರಮುಖ ನಿಯಮಗಳು ಮತ್ತು ಷರತ್ತುಗಳು: ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಜರುಗದಂತೆ ತಡೆಯಲು ಇಲಾಖೆಯು ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ: ಕಾರ್ಯಭಾರ ಸರಿಹೊಂದಿಸುವಿಕೆ (Deployment): ಜಿಲ್ಲಾ ವ್ಯಾಪ್ತಿಯಲ್ಲಿ ಕಡಿಮೆ ಕಾರ್ಯಭಾರ (Workload) ಹೊಂದಿರುವ ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರನ್ನು, ಉಪನ್ಯಾಸಕರಿಲ್ಲದ ಬೇರೆ ಕಾಲೇಜುಗಳಿಗೆ ಮೊದಲು ನಿಯೋಜಿಸಬೇಕು. ಆ ನಂತರವೂ ಉಳಿಯುವ…

Read More

ನವದೆಹಲಿ: ದೇಶದ ನಿರುದ್ಯೋಗಿ ಯುವಕರನ್ನು ಜಿರಳೆಗಳಿಗೆ (Cockroaches) ಹೋಲಿಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ (CJI) ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಚಳವಳಿಗೆ ದೊಡ್ಡ ಹಿನ್ನಡೆಯಾಗಿದೆ. ಭಾರತದಲ್ಲಿ ಈ ಡಿಜಿಟಲ್ ಪಾರ್ಟಿಯ ಅಧಿಕೃತ X (ಟ್ವಿಟರ್) ಖಾತೆಯನ್ನು (@CJP_2029) ಕಾನೂನು ಬೇಡಿಕೆಯ ಮೇರೆಗೆ ಅಮಾನತುಗೊಳಿಸಲಾಗಿದೆ (Withheld). ಇನ್‌ಸ್ಟಾಗ್ರಾಮ್‌ನಲ್ಲಿ ಈ ಖಾತೆಯು ಆಡಳಿತಾರೂಢ ಬಿಜೆಪಿಯ ಅಧಿಕೃತ ಹ್ಯಾಂಡಲ್‌ಗಿಂತಲೂ ಹೆಚ್ಚಿನ ಫಾಲೋವರ್ಸ್ (11 ಮಿಲಿಯನ್‌ಗೂ ಹೆಚ್ಚು) ಗಳಿಸಿ ದಾಖಲೆ ಬರೆದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. https://twitter.com/shah34516/status/2057374387058176454 ಹಿನ್ನೆಲೆ ಏನು? ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿಚಾರಣೆಯೊಂದರ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿಗಳು (CJI ಸೂರ್ಯ ಕಾಂತ್), “ಕೆಲವು ಯುವಕರು ಜಿರಳೆಗಳಂತೆ ಇದ್ದಾರೆ. ಅವರಿಗೆ ಯಾವುದೇ ಉದ್ಯೋಗ ಸಿಗದಿದ್ದಾಗ ಸಾಮಾಜಿಕ ಜಾಲತಾಣ, ಆರ್‌ಟಿಐ (RTI) ಕಾರ್ಯಕರ್ತರು ಅಥವಾ ಮಾಧ್ಯಮಗಳ ಹೆಸರಿನಲ್ಲಿ ಎಲ್ಲರ ಮೇಲೂ ದಾಳಿ ಮಾಡಲು ಪ್ರಾರಂಭಿಸುತ್ತಾರೆ” ಎಂದು ಹೇಳಿಕೆ ನೀಡಿದ್ದರು ಎನ್ನಲಾದ ವರದಿಗಳು ವೈರಲ್…

Read More

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಇತ್ತೀಚೆಗೆ ನಡೆದ ಸಾಕಾನೆಗಳ ಕಾಳಗ ಹಾಗೂ ಪ್ರವಾಸಿಗಳ ಸಾವಿನ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರವನ್ನು ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಸಂಪೂರ್ಣ ಬಂದ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ತಡೆಯಲು ಅರಣ್ಯ ಇಲಾಖೆ ಈ ಕಠಿಣ ನಿರ್ಧಾರ ಕೈಗೊಂಡಿದೆ. ಕಠಿಣಗೊಂಡ ನಿಯಮಗಳು ಆರಂಭದಲ್ಲಿ ಸಕ್ರೆಬೈಲು ಬಿಡಾರದಲ್ಲಿ ಕೇವಲ ಆನೆಗಳ ಸ್ನಾನ ಮಾಡಿಸುವುದು ಮತ್ತು ಅವುಗಳ ಮೈ ಮುಟ್ಟುವುದಕ್ಕೆ ಮಾತ್ರ ನಿಷೇಧ ಹೇರಲಾಗಿತ್ತು. ಪ್ರವಾಸಿಗರಿಗೆ ದೂರದಿಂದಲೇ ಆನೆಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಧಿಕಾರಿಗಳ ಸ್ಪಷ್ಟನೆ: ಆನೆ ಬಿಡಾರಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಎಸ್‌ಒಪಿ (SOP – ಪ್ರಮಾಣಿತ ಕಾರ್ಯಾಚರಣೆ ವಿಧಾನ) ನಿಯಮಗಳು ಜಾರಿಗೆ ಬರುವವರೆಗೆ ಈ ನಿರ್ಬಂಧ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿನ್ನೆಲೆ ಏನು? ಕೆಲವು ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಸಾಕಾನೆಗಳ ನಡುವೆ…

Read More

“ಒಂದೇ ಒಂದು #ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ? ಶಾಸ್ತ್ರಗಳು ಏನು ಹೇಳುತ್ತವೆ ಮುಂದೆ ಓದಿ! “ಅಶ್ವತ್ಥ ವೃಕ್ಷದ (ಅರಳಿ ಮರ) ಮಹತ್ವ ಮತ್ತು ಫಲಗಳು ಅಶ್ವತ್ಥ ಮರವನ್ನು ನೆಟ್ಟರೆ ಮೂರು ಸಂಪಿಗೆ ಮತ್ತು ಎಕ್ಕೆಗಿಡ, ಏಳು ಆಲದಮರ, ಎಂಟು ಬಿಲ್ವಪತ್ರೆಗಿಡ, ಮತ್ತು ನಿಂಬೆಮರ ನೆಟ್ಟಷ್ಟು ಫಲ. ಜಲಾಶಯ, ನದಿ ಸಮೀಪದಲ್ಲಿ ಅಶ್ವತ್ಥಮರವನ್ನು ನೆಟ್ಟರೆ ಪಿತೃಗಳಿಗೆ ಬಹಳ ತೃಪ್ತಿಯಾಗುತ್ತದೆ. ಅದರ ಎಲೆಗಳು ಪರ್ವಕಾಲದಲ್ಲಿ ನೀರಿನಲ್ಲಿ ಬಿದ್ದಾಗಲೆಲ್ಲಾ ಪಿಂಡ ಸಮಾನವಾಗಿ ಪิตೃಗಳಿಗೆ ಅಕ್ಷಯಲೋಕಗಳನ್ನು ಕೊಡುತ್ತದೆ. ಅಶ್ವತ್ಥಃ ಸರ್ವ ವೃಕ್ಷಾಣಾಂ ಅಂತ ಭಗವದ್ಗೀತೆಯಲ್ಲಿ ಕೃಷ್ಣ ಹೇಳುತ್ತಾನೆ ಅಂದರೆ ಸರ್ವ ವೃಕ್ಷಗಳಲ್ಲಿ ಶ್ರೇಷ್ಠ ಅಶ್ವತ್ಥಮರ…… ಅಶ್ವತ್ಥ ಮರದಲ್ಲಿ ದೇವತೆಗಳು ನೆಲೆಸಿರುತ್ತವೆ. ಇಲ್ಲಿ ಲಕ್ಷ್ಮಿ ವಾಸವಾಗಿರುತ್ತಾಳೆ. ಹಿಂದೂ ಸಂಪ್ರದಾಯದಲ್ಲಿ ಅಶ್ವತ್ಥ ಮರಕ್ಕೆ ಬಹಳ ಮಹತ್ವದ ಸ್ಥಾನ ನೀಡಲಾಗಿದೆ. ಈ ಅರಳಿ ವೃಕ್ಷದ ಸೇವೆಯಿಂದ ಶನಿ ಕೃಪೆಗೆ ಪಾತ್ರರಾಗಬಹುದು. ಅರಳಿ ಮರಕ್ಕೆ ನಿಯಮಿತವಾಗಿ ದೀಪ ಹಚ್ಚುವುದರಿಂದ ದೇವಾನುದೇವತೆಗಳ ಆಶೀರ್ವಾದ ಸಿಗಲಿದೆ. ಶ್ರದ್ಧೆಯಿಂದ ಅರಳಿ ಮರಕ್ಕೆ ನಮಸ್ಕರಿಸಿದರೆ ದೇವಾನುದೇವತೆಗಳು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ದಲ್ಲಾಳಿಗಳು (ಬ್ರೋಕರ್ಸ್) ಕಂಡುಬಂದರೆ ಅಥವಾ ಬ್ರೋಕರ್ ಬಂದರೆ ಮಾತ್ರ ಕೆಲಸ ಮಾಡಿಕೊಡುವ ಅಧಿಕಾರಿಗಳು ಇದ್ದರೆ ತಕ್ಷಣ ಅವರನ್ನು ಅಮಾನತು ಮಾಡಿ. ಸಾರ್ವಜನಿಕರನ್ನು ಸತಾಯಿಸುವುದನ್ನು ಮೊದಲು ನಿಲ್ಲಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ನಗರಸಭೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಈ-ಸ್ವತ್ತು’ ವಿಳಂಬಕ್ಕೆ ಶಾಸಕರ ಆಕ್ರೋಶ ನಗರಸಭೆಯ ಕೆಲವು ವಿಭಾಗಗಳ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ವಿಶೇಷವಾಗಿ ‘ಈ-ಸ್ವತ್ತು’ ದಾಖಲೆಗಳನ್ನು ಕಾಲಮಿತಿಯಲ್ಲಿ ಮಾಡಿಕೊಡುತ್ತಿಲ್ಲ. ಬ್ರೋಕರ್‌ಗಳನ್ನು ಕರೆದುಕೊಂಡು ಹೋದರೆ ಮಾತ್ರ ಕೆಲಸವಾಗುತ್ತದೆ ಎಂದು ಜನ ನನ್ನ ಬಳಿ ಅಹವಾಲು ತೋಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಕೊಡುವ ಅಧಿಕಾರಿಗಳು ಇಲ್ಲಿರುವುದು ಬೇಡ. ಸರಿಯಾಗಿ ಕೆಲಸ ಮಾಡಿ, ಇಲ್ಲವಾದರೆ ಇಲ್ಲಿಂದ ಜಾಗ ಖಾಲಿ ಮಾಡಿ ಎಂದು ಶಾಸಕರು ತರಾಟೆಗೆ ತೆಗೆದುಕೊಂಡರು. ಸಂಚಾರ…

Read More

ಶಿವಮೊಗ್ಗ: ಪರಿಭಾವಿತ ಅರಣ್ಯದ (ಡೀಮ್ಡ್ ಫಾರೆಸ್ಟ್) ಸ್ವರೂಪವನ್ನು ಕಳೆದುಕೊಂಡಿರುವ ಸ್ವತ್ತುಗಳನ್ನು ಗುರುತಿಸಿ, ಅವುಗಳನ್ನು ಅರಣ್ಯ ಪ್ರದೇಶದ ಪಟ್ಟಿಯಿಂದ ಕೈಬಿಡುವ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆದಿದ್ದು, ಈ ಕುರಿತು ಜಂಟಿ ಸರ್ವೇ ಕಾರ್ಯ ನಡೆಸುವ ಉದ್ದೇಶ ಹೊಂದಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ಪರಿಭಾವಿತ ಅರಣ್ಯಕ್ಕೆ ಸಂಬಂಧಿಸಿದಂತೆ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್‌ಗೆ ವಾಸ್ತವ ವರದಿ ಸಲ್ಲಿಕೆ “ನಾವು ಈಗಾಗಲೇ ಡೀಮ್ಡ್ ಫಾರೆಸ್ಟ್ ಪಟ್ಟಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದೇವೆ. ಆದರೆ, ಬಹುತೇಕ ಕಡೆಗಳಲ್ಲಿ ಈ ಪಟ್ಟಿಯಲ್ಲಿರುವ ಜಾಗಗಳಲ್ಲಿ ಸಾರ್ವಜನಿಕರ ಮನೆಗಳು, ಶಾಲೆಗಳು ಹಾಗೂ ರೈತರ ಸಾಗುವಳಿ ಜಮೀನುಗಳಿವೆ. ಇದರ ಜೊತೆಗೆ, ನಮ್ಮ ಸರ್ಕಾರಿ ಜಮೀನುಗಳಲ್ಲಿ ಎಲ್ಲೆಲ್ಲಿ ನಿಜವಾಗಿಯೂ ಅರಣ್ಯ ಪ್ರದೇಶವಿದೆಯೋ ಅದನ್ನು ಪಟ್ಟಿ ಮಾಡುವ ಉದ್ದೇಶದಿಂದ ಮಾಹಿತಿ ಕಲೆಹಾಕುವ ಕೆಲಸ ಮಾಡಲಾಗುತ್ತಿದೆ,” ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು. ಸಿಎಂ ಮಟ್ಟದಲ್ಲಿ…

Read More

“ವಿಘ್ನನಿವಾರಕನ ಕೃಪೆ ಸದಾ ನಿಮ್ಮ ಮೇಲಿರಲಿ! ಈ ಕಲ್ಲಲ್ಲಿ ಅರಳಿದ ಗಣಪತಿಯ ದರ್ಶನದಿಂದ ನಿಮ್ಮ ದಿನ ಶುಭವಾಗಲಿ.” ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ: ​ಪೀಠಿಕೆ ಮತ್ತು ಮಹತ್ವ ​ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿರುವ ಇಡಗುಂಜಿ, ಭಾರತದ ಪ್ರಮುಖ ಗಣಪತಿ ಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ ಕ್ಷೇತ್ರಕ್ಕೆ ಸುಮಾರು 1500 ವರ್ಷಗಳಿಗೂ ಹೆಚ್ಚಿನ ಇತಿಹಾಸವಿದೆ ಎಂದು ನಂಬಲಾಗಿದೆ. ಇಲ್ಲಿ ಭಕ್ತಿಯಿಂದ ಬೇಡಿದರೆ ಕೋರಿಕೆಗಳು ಈಡೇರುತ್ತವೆ ಎಂಬ ದೃಢ ಬಲವಾದ ನಂಬಿಕೆ ಭಕ್ತರಲ್ಲಿದೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ…

Read More

ಬೆಂಗಳೂರು : ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ. ಸರ್ವಜ್ಞನಗರ ಶಾಸಕರೂ ಆಗಿರುವ ಸಚಿವರಾದ ಕೆ.ಜೆ.ಜಾರ್ಜ್ ಅವರು ಬುಧವಾರ ಕ್ಷೇತ್ರದ ಪ್ರಮುಖ ಜನವಸತಿ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ತೆರಳಿ, ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ಚರಂಡಿ ಕಾಮಗಾರಿಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಇದೇ ವೇಳೆ ರೈಲ್ವೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ, ಇದರಿಂದ ನಮ್ಮ ಕೆಲಸಗಳಿಗೆ ಅಡಚಣೆ ಆಗುತ್ತಿದೆ ಎಂದು ಜಿಬಿಎ ಅಧಿಕಾರಿಗಳು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಾರ್ಜ್, “ನೀವು ಅಧಿಕಾರಿಗಳು ಎಲ್ಲಿದ್ದರೂ ಸಂಬಳ ಬರುತ್ತದೆ. ಜನರ ಪರವಾಗಿ ಮಾನವೀಯತೆಯಿಂದ ಸ್ಪಂದಿಸಿ ಕೆಲಸ ಮಾಡಿ. ಜಿಬಿಎ…

Read More

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನಬೆಳಗಾದರೆ ಸಾಕು, ಕೇಳಿಬರುತ್ತಿರುವ ಕಹಿ ಸುದ್ದಿಗಳೆಂದರೆ ಅನಿರೀಕ್ಷಿತ ಮತ್ತು ಅಕಾಲಿಕ ಹೃದಯಾಘಾತದ ಸಾವುಗಳು. ನಿನ್ನೆ ದಿಲೀಪ್ ರಾಜ್, ಇಂದು ನಂದೀಶ್… ನಾಳೆ ನೀವೋ ಅಥವಾ ನಾನೋ? ಈ ಸಾವುಗಳ ಸರಣಿ ಹೀಗೆಯೇ ಮುಂದುವರಿಯುತ್ತಿದ್ದರೆ, ಅನಿರೀಕ್ಷಿತ ಹೃದಯಾಘಾತಕ್ಕೆ ಇನ್ನೆಷ್ಟು ಯುವ ಜೀವಗಳು ಬಲಿಯಾಗಬೇಕು ಎಂಬ ಯಕ್ಷಪ್ರಶ್ನೆ ಇಡೀ ಸಮಾಜವನ್ನು ಕಾಡುತ್ತಿದೆ. ಖ್ಯಾತ ಚಿತ್ರ ಸಾಹಿತಿ ಕವಿರಾಜ್ ಅವರು ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳ ಮೂಡಿಸಿರುವ ಈ ಗಂಭೀರ ವಿಷಯದ ಬಗ್ಗೆ ಫೇಸ್‌ಬುಕ್‌ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸರ್ಕಾರಗಳು ಮತ್ತು ಆರೋಗ್ಯ ವ್ಯವಸ್ಥೆಯ ನಿದ್ರಾಸ್ಥಿತಿಯನ್ನು ಕಟುವಾಗಿ ಪ್ರಶ್ನಿಸಿದ್ದಾರೆ. ಜಾರಿಕೊಳ್ಳುತ್ತಿರುವ ಸರ್ಕಾರಗಳು – ಪ್ರಶ್ನಿಸುತ್ತಿರುವ ಜನಸಾಮಾನ್ಯರು ಔಷಧಿ ತಯಾರಿಕಾ ಕಂಪನಿಗಳೇ ತಮ್ಮ ವ್ಯಾಕ್ಸಿನ್‌ಗಳಲ್ಲಿ ದೋಷವಿತ್ತು (ಅಡ್ಡಪರಿಣಾಮಗಳ ಸಾಧ್ಯತೆ) ಎಂದು ಒಪ್ಪಿಕೊಂಡಿದ್ದರೂ, ಅಂದು ಲಸಿಕೆಯನ್ನು ಕಡ್ಡಾಯಗೊಳಿಸಿ ಜನರಿಗೆ ನೀಡಿದ ಸರ್ಕಾರಗಳು ಇಂದು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ರಣಹೇಡಿಗಳಂತೆ ನುಣುಚಿಕೊಳ್ಳುತ್ತಿವೆ. ಸಾರ್ವಜನಿಕ ವಲಯದಲ್ಲಿ, ಕುಂತಲ್ಲಿ ನಿಂತಲ್ಲಿ ಜನರೆಲ್ಲರೂ ಈ ಅಕಾಲಿಕ ಸಾವುಗಳಿಗೆ ಕೋವಿಡ್…

Read More