Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಗಾವಿ, ಕಲಬುರ್ಗಿಯಲ್ಲದೇ ಇತರೆ ಜಿಲ್ಲೆಗಳಲ್ಲಿಯೂ ಅಷ್ಟೇ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ವರ್ಷ ಬಿಸಿಲಿನ ತಾಪಮಾನ ತೀವ್ರತರವಾಗಿರುತ್ತದೆ. ರಾಜ್ಯದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸರ್ಕಾರವು ಈ ಹಿಂದೆ ಸರ್ಕಾರಿ ಕಛೇರಿ ಕೆಲಸದ ವೇಳೆಯನ್ನು ಬೆಳಿಗ್ಗೆ 08-00 ರಿಂದ ಮಧ್ಯಾಹ್ನ 01-30ರವರೆಗೆ ನಿಗಧಿಪಡಿಸಿತ್ತು ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಮೇಲ್ಕಂಡ ವಿಭಾಗದ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಿಸಿಲಿನ ತಾಪಮಾನ ಬೆಳಿಗ್ಗೆ 09.00 ಗಂಟೆಗೆ ತೀವ್ರತರವಾಗಿ 40-44 ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಸರ್ಕಾರಿ ನೌಕರರು ಕಛೇರಿಗೆ ತೆರಳಲು ಮತ್ತು ಸಾರ್ವಜನಿಕರೂ ಸಹ ಸರ್ಕಾರಿ…

Read More

ಶಿವಮೊಗ್ಗ: ಇಂದು ನಗರದಲ್ಲಿ ಲೋಕಸಭಾ ಚುನಾವಣೆ ಬೆನ್ನಲ್ಲೇ ಹಳೇ ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳು ಸದ್ದು ಮಾಡಿವೆ. ಹೆಳೆಯ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಇಬ್ಬರನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಬಳಿಯಲ್ಲಿ ಇರುವಂತ ಮೀನು ಮಾರುಕಟ್ಟೆಯ ಬಳಿ, ಇಬ್ಬರನ್ನು ಗುಂಪೊಂದು ಹಾಡು ಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹತ್ಯೆಯಾದವರನ್ನು ಶೋಯಬ್ ಆಲಿಯಾಸ್ ಸೆಬು ಎಂದು ಗುರುತಿಸಲಾಗಿದೆ. ಇನ್ನಬ್ಬರ ಗುರುತು ಪತ್ತೆಯಾಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/prajwal-video-case-minister-krishna-byre-gowda-challenges-hd-kumaraswamy/

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು ಕಾಂಗ್ರೆಸ್ ನ ಸಚಿವದ್ವಯರು ಸುದ್ದಿಗೋಷ್ಠಿ ನಡೆಸಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಸಚಿವ ಕೃಷ್ಣಭೈರೇಗೌಡ ಅವರು, ಹೆಚ್.ಡಿ ಕುಮಾರಸ್ವಾಮಿಗೆ ನೇರವಾಗಿ ಸವಾಲೊಂದನ್ನು ಹಾಕಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದರು. ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದು ಎಚ್ಚರಿಸಿದರು. ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀವ ವೀಡಿಯೋ ಪ್ರಕರಣದಲ್ಲಿ ಪದೇ ಪೇದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಎಳೆದು ತರಲಾಗುತ್ತಿದೆ. ಇದು ಸರಿಯಲ್ಲ. ಎಸ್ಐಟಿಯಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಅವರದ್ದು ತಪ್ಪಿಲ್ಲ ಎಂದರೆ ಆಚೇ ಬರುತ್ತಾನೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, “ಇದು ಹೊಳೆನರಸೀಪುರಕ್ಕೆ ಸಂಬಂಧಿಸಿದ ವಿಚಾರ. ಕಾರ್ತಿಕ್, ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಅವರ ನಡುವೆ ನಡೆದ ಜಗಳದಿಂದ ಆಚೆ ಬಂದ ವಿಚಾರ. ಇಂತಹ ಸಂಧರ್ಭದಲ್ಲಿ ರೇವಣ್ಣ, ಕುಮಾರಸ್ವಾಮಿ ಅವರು ಪ್ರಜ್ವಲ್ ಗೆ ಬಂಧನಕ್ಕೆ ಒಳಗಾಗು ಎಂದು ಕಿವಿ ಮಾತು ಹೇಳಬೇಕಾಗಿತ್ತು ಎಂದರು. ದೇವರಾಜೇಗೌಡರು ಅನೇಕ ದಿನಗಳಿಂದ ವಿಡಿಯೋ ವಿಚಾರದಲ್ಲಿ ಆರೋಪ ಮಾಡುತ್ತಲೇ ಬಂದಿದ್ದರು. ಎಸ್ ಐಟಿಯನ್ನು ಅವರು ಸಹ ಸ್ವಾಗತ ಮಾಡಿದ್ದರು. ಆದರೆ ಇದ್ದಕ್ಕಿದ್ದಂತೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಎಳೆದು ತಂದರೋ ಗೊತ್ತಿಲ್ಲ ಎಂದು ಹೇಳಿದರು. ಅಶೋಕ್ ಅವರು ಪದೇ,…

Read More

ಬೆಂಗಳೂರು : “ವಿಡಿಯೋ ಮಾಡಿಕೊಂಡವರ ಕೃತ್ಯದ ಬಗ್ಗೆ ಮಾತನಾಡುವುದು ಬಿಟ್ಟು, ವಿಡಿಯೋ ಹಂಚಿಕೆಯ ಬಗ್ಗೆ ಮಾತನಾಡಲಾಗುತ್ತಿದೆ. ಇದರಲ್ಲಿ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶವಾಗಿಲ್ಲ” ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕಿಡಿಕಾರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಅವರು ಮಧ್ಯ ಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ. ಅವರು ಟೀಕೆ ಮಾಡಿದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ ಇಬ್ಬರ ನಡುವೆ ಟೀಕೆ, ಟಿಪ್ಪಣಿಗಳು ನಡೆದಿವೆ ಎಂದರು. ಈ ಅನಾಚಾರವನ್ನು ಯಾರೋ ವಿಡಿಯೋ ಮಾಡಿದ್ದಲ್ಲ. ಸ್ವತಃ ಅವರೇ ಮಾಡಿಕೊಂಡಿರುವುದು. ಇದು ಹಾಸನದಲ್ಲಿಯೇ ಎಲ್ಲರಿಗೂ ಹಂಚಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಿಗೆ ಸೋರಿಕೆಯಾದ ನಂತರ ಯಾವುದೂ ಸಹ ಯಾರ ಹಿಡಿತಕ್ಕೂ ಸಿಗುವುದಿಲ್ಲ. ವಿಚಾರ ಗಾಳಿಗೆ ಹೋದ ಮೇಲೆ ಯಾವ ದಿಕ್ಕಿಗೆ ಹೋಗುತ್ತದೆ ಎನ್ನುವುದು ಯಾರಿಗೂ ತಿಳಿದಿಲ್ಲ ಎಂದರು. ಇಂತಹ ಸೂಕ್ಷ್ಮವಾದ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ.…

Read More

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ(79) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ಮೂಲಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಇನ್ನಿಲ್ಲವಾಗಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು ಜನವರಿ.15, 1946ರಲ್ಲಿ ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್ ಎಸ್ ಎಲ್ ಸಿ ವ್ಯಾಸಂಗ ಮುಗಿಸಿದಂತ ಅವರು ಮುಲ್ಕಿ, ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು. 1972ರಲ್ಲೇ ಚುನಾವಣಾ ರಾಜಕೀಯಕ್ಕೆ ಧುಮುಕಿದಂತ ವಸಂತ ಬಂಗೇರ ಅವರು, ಕುವೆಟ್ಟು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ, ಸದಸ್ಯರಾಗಿ, ಆನಂತ್ರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983ರಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿದರು. ಪ್ರಥಮ ಬಾರಿಗೆ ವಿಧಾನಸಭೆಯ ಸದಸ್ಯರಾಗಿಯೂ ಪ್ರವೇಶ ಮಾಡಿದ್ದರು.…

Read More

ಬೆಂಗಳೂರು: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇಡೀ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು ಎಂದು ಕಿಡಿ ಕಾರಿದರು. ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರಕಾರ ರಕ್ಷಣೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಡಿ.ಕೆ.ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ. ಐದು ಜನರನ್ನು ಇಟ್ಟಕೊಂಡಿದ್ದೀನಿ ಅಂತ ಹೇಳಿದ್ದೀಯಾ ಅಲ್ಲವೇ ನೀನು? ನಿಮ್ಮ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದೆಯಾ? ಡಾ.ಜಿ.ಪರಮೇಶ್ವರ ಅವರೇ ನಿಮಗೆ ಬೆನ್ನು ಮೂಳೆ ಇದೆಯಾ? ನನ್ನನ್ನು…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆದ ಕೆಲವು ದಿನಗಳ ನಂತರ, ಇಂಡಿಯಾ ಟುಡೇ ಟಿವಿ ದಾಳಿಯ ಹಿಂದಿನ ಮೂವರು ಭಯೋತ್ಪಾದಕರ ವಿವರಗಳನ್ನು ರಿವೀಲ್ ಮಾಡಿದೆ. ಭಯೋತ್ಪಾದಕ ದಾಳಿಯಲ್ಲಿ ಐಎಎಫ್ ಕಾರ್ಪೊರಲ್ ಭಾರತೀಯ ವಾಯುಪಡೆಯ ಸೈನಿಕ ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಪೂಂಚ್ ದಾಳಿಯ ತನಿಖೆಯಲ್ಲಿ ಮೂರು ಹೆಸರುಗಳು ಹೊರ ಬಂದಿವೆ. ಇಲಿಯಾಸ್ (ಮಾಜಿ ಪಾಕಿಸ್ತಾನ ಸೇನಾ ಕಮಾಂಡೋ), ಅಬು ಹಮ್ಜಾ (ಲಷ್ಕರ್ ಕಮಾಂಡರ್) ಮತ್ತು ಹಡೂನ್ ಎಂಬುದಾಗಿ ತಿಳಿದು ಬಂದಿವೆ. ವಿಶೇಷವೆಂದರೆ, ಇಲಿಯಾಸ್ ‘ಫೌಜಿ’ ಎಂಬ ಕೋಡ್ ಹೆಸರಿನಿಂದಲೂ ಹೋಗುತ್ತಾನೆ. ಜೈಶ್-ಎ-ಮೊಹಮ್ಮದ್ನ ಅಂಗಸಂಸ್ಥೆಯಾದ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್ಎಫ್) ಗಾಗಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರನ್ನು ಪತ್ತೆಹಚ್ಚಲು ರಾಜೌರಿ ಮತ್ತು ಪೂಂಚ್ ಕಾಡುಗಳಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಹಲವಾರು ಶಂಕಿತರನ್ನು ಹೆಡೆಮುರಿ ಕಟ್ಟಿದ್ದಾರೆ. ಮೂವರು ಭಯೋತ್ಪಾದಕರೊಂದಿಗಿನ ಸಂಪರ್ಕದ ಬಗ್ಗೆ ಅನೇಕರನ್ನು…

Read More

ಬೆಂಗಳೂರು: ವಕೀಲರಾದ ದೇವರಾಜೇಗೌಡ ಎಂಬುವವರು ನಿಯಮಾವಳಿಗಳ ವಿರುದ್ಧವಾಗಿ ವಕೀಲ ವೃತ್ತಿಗೆ ಅಗೌರವ ತಂದು ತನ್ನ ಕಕ್ಷಿದಾರ ನೀಡಿದ ಮಾಹಿತಿ ಮತ್ತು ದಾಖಲೆಗಳನ್ನು ಸಾರ್ವಜನಿಕಗೊಳಿಸಿ ಸಮಾಜದಲ್ಲಿ ಅಶಾಂತಿಯುಂಟು ಮಾಡಿರುವುದರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ತುರ್ತಾಗಿ ಕ್ರಮಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್ತಿಗೆ ದೂರು ನೀಡಲಾಗಿದೆ. ಇಂದು ಈ ಕುರಿತಂತೆ ವಕೀಲ ಸೂರ್ಯ ಮುಕುಂದರಾಜ್, ಟಿ.ಎಸ್ ಸತ್ಯಾನಂದ ಅವರು ರಾಜ್ಯ ವಕೀಲರ ಪರಿಷತ್ತಿಗೆ ದೂರು ನೀಡಿದ್ದಾರೆ. ಅದರಲ್ಲಿ  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ವ್ಯವಸ್ಥೆಗೆ ತನ್ನದೇ ಆದ ಘನತೆ ಮತ್ತು ಗೌರವವಿದ್ದು, ವಕೀಲ ವೃತ್ತಿ ಸದರಿ ವ್ಯವಸ್ಥೆಯ ಭಾಗವಾಗಿ ತನ್ನದೇ ಆದ ವೃತ್ತಿ ಗಾಂರ್ಭೀಯತೆಯನ್ನು ಹೊಂದಿದೆ. ವಕೀಲರಾದ ನಾವುಗಳು ನಮ್ಮ ವೃತ್ತಿಗೆ ಸಂಬಂಧಿಸಿದಂತೆ ಸಾಂವಿಧಾನಿಕವಾಗಿ ಹಲವು ನಿಯಮಗಳನ್ನು ರೂಪಿಸಿಕೊಂಡಿದ್ದು, ರಾಷ್ಟ್ರೀಯ ವಕೀಲ ಪರಿಷತ್ತು ಹಾಗೂ ರಾಜ್ಯ ವಕೀಲ ಪರಿಷತ್ತ್ ಅನ್ನು ರೂಪಿಸಿಕೊಂಡು ಸಾಂಸ್ಥಿಕ ಸ್ವಾಯತ್ತ ಸಂಸ್ಥೆಗಳನ್ನು ಹೊಂದಿದ್ದು, ಅದರ ಮೂಲಕ ಹಲವು ನಿಯಮಾವಳಿಗಳನ್ನು ವಕೀಲ ವೃತ್ತಿಗೆ ಸಂಬಂಧಿಸಿದಂತೆ ರೂಪಿಸಿಕೊಂಡಿದ್ದೇವೆ ಎಂದಿದ್ದಾರೆ. ಮೇಲ್ಕಂಡ ಸ್ವಾಯತ್ತ ಸಂಸ್ಥೆಗಳ ಜೊತೆಗೆ…

Read More

ಬೆಂಗಳೂರು: ವಿವಾದಾತ್ಮಕವಾದಂತ ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ಮಾಡಿದಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿಯ ಅಮಿತ್ ಮಾಳವೀಯ ಅವರಿದೆ ಕರ್ನಾಟಕ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಮುಖಂಡ ಅಮಿತ್ ಮಾಳವೀಯ ಅವರಿಗೆ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿವಾದಾತ್ಮಕ ಪೋಸ್ಟ್ ಸಂಬಂಧ 7 ದಿನಗಳಲ್ಲಿ ಉತ್ತರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಅಮಿತ್ ಮಾಳವೀಯ ಅವರಿಗೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಸೂಚಿಸಲಾಗಿದೆ. https://twitter.com/ANI/status/1788165375269507449 https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/these-accounts-will-be-closed-after-this-period-punjab-national-bank-to-customers/

Read More