Author: kannadanewsnow09

ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ನಂತರ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಶ್ರೀಗಳ ದರ್ಶನಕ್ಕೆ ಬಂದಿದ್ದೇವೆ. ಒಳ್ಳೆಯ ಕಾರ್ಯ ಮಾಡುವಂತೆ ಶ್ರೀಗಳು ತಿಳಿಸಿದ್ದಾರೆ. ನಾನು ಅದೇ ರೀತಿ ಕೆಲಸ‌ ಮಾಡಿಕೊಂಡು ಬಂದಿದ್ದೇನೆ ಎಂದರು‌. ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಕುರಿತು ಪಾರ್ಲಿಮೆಂಟ್ರಿ ಬೋರ್ಡ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮಾದಾರ ಚೆನ್ನಯ್ಯ ಶ್ರೀಗಳ ಹೆಸರು ಕೇಳಿಬಂದ ವಿಚಾರ ನಾನು ಎಲ್ಲೂ ಚರ್ಚೆ ಮಾಡಿಲ್ಲ. ಹಾಲಿ ಎಂಪಿಗೆ ಟಿಕೆಟ್ ತಪ್ಪುತ್ತದೆ ಅನ್ನುವುದು ಊಹಾಪೋಹಾ ಎಂದು ಹೇಳಿದರು. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಭೆ ಕರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಅವರೊಂದಿಗೆ ನಾನು, ನಮ್ಮ ವರಿಷ್ಠರು ಮಾತನಾಡಿದ್ದೇವೆ. ಎಲ್ಲಾ ಸರಿಹೋಗತ್ತದೆ‌ ಏನು ಆಗುವುದಿಲ್ಲ. ಹಾವೇರಿ ಸಂಸದ…

Read More

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಉಚಿತವಾಗಿ ಟಿವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ಥಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ದಿನಾಂಕ 10-04-2024 ರಿಂದ 09-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಟಿವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ಥಿ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ. ವಾಟ್ಸಾಪ್ ಮೂಲಕವೂ…

Read More

ಧಾರವಾಡ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ 17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರೋ ಸಂಬಂಧ ಪ್ರಕರಣ ದಾಖಲಾಗಿದೆ. ಈ ನಡುವೆ ನನಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಅಪಾರವಾದ ನಂಬಿಕೆಯಿದೆ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾರೇ ಯಾವುದೇ ವಿಚಾರವಾಗಿ ಪೊಲೀಸರಿಗೆ ದೂರು ಕೊಟ್ಟರೂ ಅದನ್ನು ದಾಖಲು ಮಾಡಬೇಕು. ಈಗ ಬಿಎಸ್ ಯಡಿಯೂರಪ್ಪ ಅವರ ವಿಚಾರದಲ್ಲಿ ಅದೇ ಆಗಿದೆ. ಸಂತ್ರಸ್ತೆ ತಾಯಿ ನೀಡಿದಂತ ದೂರಿನ ಆಧಾರದ ಮೇಲೆ ಪೋಕ್ಸೊ ಕೇಸ್ ದಾಖಲಾಗಿದೆ ಎಂದರು. ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಚಾರ ಗೊತ್ತಾಗಿದೆ. ಆದರೇ ಅವರ ಮೇಲೆ ನನಗೆ ಅಪಾರವಾದಂತ ನಂಬಿಕೆಯಿದೆ. ಸಂತ್ರಸ್ತೆ ತಾಯಿ ಮಾನಸಿಕ ಅಸ್ವಸ್ಥೆ ಅಂತ ಹೇಳಲಾಗುತ್ತಿದೆ. ಸ್ವಲ್ಪ ದಿನ ಕಾದು ನೋಡೋಣ. ನಾನು ಈ ಪ್ರಕರಣದ ಬಗ್ಗೆ ಏನು ಮಾತನಾಡೋದಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/dy-cm-dk-shivakumars-big-plan-for-congress-candidates-victory-in-lok-sabha-elections-know-what/ https://kannadanewsnow.com/kannada/breaking-massive-fire-breaks-out-due-to-cylinder-blast-at-tent-house-in-bhopal/

Read More

ಬೆಂಗಳೂರು : “ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸ ಮತ್ತು ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಬಿಜೆಪಿ- ದಳದವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಸುಮಾರು 5- 6 ಕ್ಷೇತ್ರಗಳಲ್ಲಿ ನಮಗೂ ಮತ್ತು ದಳಕ್ಕೂ ನೇರಾ- ನೇರ ಸ್ಪರ್ಧೆ ಇತ್ತು. ಆದರೆ ಈಗ ದಳ ಎಲ್ಲಿದೆ? ಎರಡೂ ಪಕ್ಷಗಳ ನಾಯಕರುಗಳು ನಮ್ಮ ವಿರುದ್ಧ ಹೋರಾಟ ಮಾಡಿದವರು. ಅವರೂ ಸಹ ಮುಂದಿನ ರಾಜಕೀಯ ಭವಿಷ್ಯವನ್ನು ನೋಡುತ್ತಾರಲ್ಲವೇ? ಎಂದು ಪ್ರಶ್ನಿಸಿದರು. ದೇವೆಗೌಡರು ಮತ್ತು ಕುಮಾರಸ್ವಾಮಿ ಅವರ ಕುಟುಂಬವೇ ಬಿಜೆಪಿ ಸೇರುತ್ತಿದೆ. ಹೀಗಾದರೆ ನಮ್ಮ ಗತಿ ಏನು ಎಂದು ದಳದ ಕಾರ್ಯಕರ್ತರು ನಮ್ಮ ಪಕ್ಷದ ನಾಯಕರ ಸಂಪರ್ಕ ಮಾಡುತ್ತಿದ್ದಾರೆ. ನಾನು ಸಹ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನಾಯಕ. ನಮ್ಮ ಚುನಾವಣಾ…

Read More

ನವದೆಹಲಿ: ಹೊಸದಾಗಿ ನೇಮಕಗೊಂಡ ಇಬ್ಬರು ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಭಾರತದ ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆ 2024 ರ ವೇಳಾಪಟ್ಟಿಯನ್ನು ರಾಜ್ಯ ವಿಧಾನಸಭೆಗಳೊಂದಿಗೆ ಪ್ರಕಟಿಸಲಿದೆ. ಇದೇ ಹೊತ್ತಿನಲ್ಲಿ ಚುನಾವಣಾ ಆಯೋಗಕ್ಕೆ ಇಬ್ಬರನ್ನು ಹೊಸದಾಗಿ ಚುನಾವಣಾ ಆಯೋಕ್ತರನ್ನಾಗಿ ನೇಮಿಸಿದ್ದಂತ ನೇಮಕಾತಿಗೆ ತಡೆ ನೀಡಲು ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಅಲ್ಲದೇ ಇಬ್ಬರು ಹೊಸ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಂದಹಾಗೇ ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಭಾರತದ ಚುನಾವಣಾ ಆಯೋಗದ (Election Commission) ಉನ್ನತ ಸಮಿತಿಯಲ್ಲಿ ಖಾಲಿ ಇರುವ ಎರಡು ಹುದ್ದೆಗಳಿಗೆ ಅಧಿಕಾರಿಗಳಾದ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. https://kannadanewsnow.com/kannada/breaking-massive-fire-breaks-out-due-to-cylinder-blast-at-tent-house-in-bhopal/ https://kannadanewsnow.com/kannada/centre-grant-discrimination-has-created-economic-challenges-for-state-krishna-byre-gowda/

Read More

ನವದೆಹಲಿ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಶುಕ್ರವಾರ (ಮಾರ್ಚ್ 15, 2024) ಬೆಳಿಗ್ಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದಿದ್ದಾರೆ ಎಂದು ವರದಿಯಾಗಿದೆ. 81 ವರ್ಷದ ನಟ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾರ್ಯವಿಧಾನಕ್ಕೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ, ಬಿಗ್ ಬಿ ಅವರನ್ನು ಹೆಚ್ಚಿನ ಭದ್ರತೆಯ ನಡುವೆ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ. “ನಿಮ್ಮ ಅಭಿಮಾನಕ್ಕೆ ಕೃತಜ್ಞ ಎಂಬುದಾಗಿ ಅವರು ಎಕ್ಸ್ ಮಾಡಿ ಪೋಸ್ಟ್ ಮಾಡಿದ್ದಾರೆ. https://twitter.com/SrBachchan/status/1768525624639967501 ಶಸ್ತ್ರಚಿಕಿತ್ಸೆಯ ನಂತರ ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ನಂಬಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಐಎಸ್ಪಿಎಲ್ ಪಂದ್ಯದ ಗೆಲುವನ್ನು ಸಂಭ್ರಮಿಸಿದ ಅಮಿತಾಭ್ ಗುರುವಾರ (ಮಾರ್ಚ್ 14, 2024) ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ತಮ್ಮ ತಂಡವು ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ಐಎಸ್ಪಿಎಲ್) ಫೈನಲ್ಗೆ ಅರ್ಹತೆ ಪಡೆದ ನಂತರ ಸಂಭ್ರಮದ ಮನಸ್ಥಿತಿಯಲ್ಲಿ ಕಾಣಿಸಿಕೊಂಡರು. ಥಾಣೆಯ ದಾಡೋಜಿ ಕೊಂಡದೇವ್…

Read More

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ದೂರು ನೀಡಿದಂತ ಮಹಿಳೆ ಮಾನಸಿಕ ಅಸ್ವಸ್ಥೆ. ಆ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳೋದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪೋಕ್ಸೋ ಕೇಸ್ ಬಹಳ ಸೂಕ್ಷ್ಮವಾದಂತ ವಿಚಾರವಾಗಿದೆ. ನಾವು ರಾಜಕೀಯ ಇದರಲ್ಲಿ ಮಾಡೋದಿಲ್ಲ. ಯಾವುದೇ ವಿಷಯ ತಿಳಿಸೋದಕ್ಕೂ ಆಗಲ್ಲ. ಮಹಿಳೆಯ ದೂರು ಆಧರಿಸಿ, ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ನೀಡಿದಂತ ಮಹಿಳೆ ಮಾನಸಿಕವಾಗಿ ಅಸ್ವಸ್ಥೆ ಎಂಬುದಾಗಿ ಹೇಳಲಾಗುತ್ತಿದೆ. ಜೊತೆಗೆ ಆಕೆ ಕೈ ಬರಹದಿಂದ ದೂರು ನೀಡಿಲ್ಲ. ಬದಲಾಗಿ ಟೈಪ್ ಮಾಡಿಸಿದಂತ ದೂರನ್ನು ಪೊಲೀಸರಿಗೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯ ನಂತ್ರ ಇನ್ನಷ್ಟು ಮಾಹಿತಿ ತಿಳಿಸುತ್ತೇನೆ. ಅಲ್ಲಿಯವರೆಗೆ ನಾನು ಈ ಪ್ರಕರಣ ಕುರಿತಂತೆ ಏನೂ ಮಾತನಾಡುವುದಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/bmrcl-plans-to-build-double-decker-model-for-expansion-of-namma-metro-phase-iii/ https://kannadanewsnow.com/kannada/breaking-massive-fire-breaks-out-due-to-cylinder-blast-at-tent-house-in-bhopal/

Read More

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್, ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ. ವಿಶೇಷ ರೈಲುಗಳ ವಿವರಗಳು ಈ ಕೆಳಗಿನಂತಿವೆ: 1.ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06557/06558) ರೈಲುಗಳ ಸಂಚಾರ: ಮಾರ್ಚ್ 19 ಮತ್ತು 26, 2024 ರಂದು ರೈಲು ಸಂಖ್ಯೆ 06557 ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:55 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2:00 ಗಂಟೆಗೆ ಕಣ್ಣೂರು ನಿಲ್ದಾಣವನ್ನು ತಲುಪಲಿದೆ. ಮಾರ್ಚ್ 20 ಮತ್ತು 27ರಂದು ರೈಲು ಸಂಖ್ಯೆ 06558 ಕಣ್ಣೂರಿನಿಂದ ರಾತ್ರಿ 8 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 1 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.…

Read More

ಒಂದು ವೇಳೆ ಉದ್ಯೋಗದಲ್ಲಿ,ವ್ಯಾಪಾರದಲ್ಲಿ ಅಥವಾ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ತೊಂದರೆ ಇದ್ದರೆ ಸೋಮವಾರ ಹಾಗೂ ಶುಕ್ರವಾರ ದಿನ ನಾವು ಹೇಳುವ ಈ ಉಪಾಯವನ್ನು ಮಾಡಿದರೆ ನಿಮ್ಮ ಎಲ್ಲಾ ಸಮಸ್ಯೆಗಳಿಂದಲೂ ಮುಕ್ತಿಯನ್ನು ಹೊಂದಬಹುದು. ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564. ಈ ಉಪಾಯವನ್ನು ಸಾಯಂಕಾಲ ದೀಪವನ್ನು ಹಚ್ಚಿದ ನಂತರ ರಾತ್ರಿ ಮಲಗುವ ಮುನ್ನ 2 ರೂಪಾಯಿಯ ನಾಣ್ಯದಿಂದ ಮಾಡಬೇಕು. ಮೊದಲಿಗೆ 2 ರೂಪಾಯಿಯ ನಾಣ್ಯವನ್ನು ಕೈಯಲ್ಲಿ ಹಿಡಿದುಕೊಂಡು ಮಲಗುವ ಮುನ್ನ ಇಷ್ಟದೇವರು ಅಥವಾ ಕುಲದೇವರ ಬಳಿ ಸಂಕಲ್ಪವನ್ನು…

Read More

ಬೀದರ್: ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಕಳೆದ 3 ದಿನಗಳ ಹಿಂದೆ ಎದೆಬಡಿತದಲ್ಲಿ ಏರುಪೇರಾಗಿ ಮುಂಬೈನ ಬಾಂದ್ರಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎದೆ ಬಡಿತದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಔರಾದ್ ನ ನಿವಾಸದಲ್ಲಿ ಇದ್ದಂತ ವೇಳೆಯಲ್ಲಿ ಎದೆಬಡಿತದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ. 2022ರಲ್ಲೇ ಇದೇ ರೀತಿ ಎದೆಬಡಿತದಲ್ಲಿ ಏರುಪೇರಾಗಿ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಮಾಜಿ ಸಚಿವ, ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.…

Read More