Author: kannadanewsnow09

ಬೆಂಗಳೂರು : “ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸ ಹಾಗೂ ವಿ.ಆರ್ ಸುದರ್ಶನ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ವರದಿ ಸ್ವೀಕರಿಸಿದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ಕೆಲ ನಾಯಕರ ದೆಹಲಿ ಭೇಟಿಯಿಂದ ಸಿಎಂ ಬದಲಾವಣೆ ವದಂತಿ ಮೂಡುತ್ತಿರುವ ಬಗ್ಗೆ ಕೇಳಿದಾಗ, “ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಮ್ಮ ರಾಜ್ಯದವರು ಎಐಸಿಸಿ ಅಧ್ಯಕ್ಷರಾಗಿದ್ದು, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ” ಎಂದು ಪುನಃರುಚ್ಚರಿಸಿದರು. ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆಯೇ ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ” ಎಂದು ತಿಳಿಸಿದರು. ನೀವು ದೆಹಲಿಗೆ ಭೇಟಿ ನೀಡುತ್ತೀರಾ ಎಂದು ಕೇಳಿದಾಗ, “ಸಧ್ಯಕ್ಕೆ ನಾನು ದೆಹಲಿಗೆ ಹೋಗುವ…

Read More

ಬೆಂಗಳೂರು : “ಬಗರ್ ಹುಕುಂ” ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದರು. ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, “ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು. “ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ…

Read More

ಇಸ್ರೇಲ್: ಹತ್ಯೆಗೀಡಾದ ನಾಯಕ ಹಸನ್ ನಸ್ರಲ್ಲಾ ಅವರ ಉತ್ತರಾಧಿಕಾರಿ ಮತ್ತು ಮುಂದಿನ ಹಿಜ್ಬುಲ್ಲಾ ಮುಖ್ಯಸ್ಥ ಹಶೀಮ್ ಸಫಿಯುದ್ದೀನ್ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೈರುತ್ನಲ್ಲಿ ಶುಕ್ರವಾರ ನಡೆದ ವೈಮಾನಿಕ ದಾಳಿಯಲ್ಲಿ ಸಫಿಯುದ್ದೀನ್ ಸಾವನ್ನಪ್ಪಿರುವುದನ್ನು ಇಸ್ರೇಲ್ ದೃಢಪಡಿಸಿದೆ ಎಂದು ಸೌದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಶುಕ್ರವಾರದಿಂದ ಸಫಿಯುದ್ದೀನ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಮೂಲವೊಂದು ರಾಯಿಟರ್ಸ್ಗೆ ತಿಳಿಸಿದೆ. ಬೈರುತ್ನಲ್ಲಿರುವ ಹಿಜ್ಬುಲ್ಲಾದ ಗುಪ್ತಚರ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿ ಸಫಿಯುದ್ದೀನ್ ಅವರನ್ನು ಗುರಿಯಾಗಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ಶುಕ್ರವಾರ ತಿಳಿಸಿದೆ. ಸಫಿಯುದ್ದೀನ್ ನಸ್ರಲ್ಲಾನ ಉತ್ತರಾಧಿಕಾರಿ ಎಂದು ವ್ಯಾಪಕವಾಗಿ ನಂಬಲಾಗಿತ್ತು. ದಾಳಿ ನಡೆದಾಗ ಭೂಗತ ಸಂಕೀರ್ಣದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ನಾಯಕರಲ್ಲಿ ಅವರು ಒಬ್ಬರಾಗಿದ್ದರು ಎಂದು ವರದಿಯಾಗಿದೆ. ಜೆರುಸಲೇಮ್ ಪೋಸ್ಟ್ ವರದಿಯ ಪ್ರಕಾರ, ಸಭೆಯ ಭಾಗವಾಗಿದ್ದ ಯಾರಾದರೂ ಜೀವಂತವಾಗಿ ಹೊರಬರುವ ಸಾಧ್ಯತೆಯಿಲ್ಲ. ಆಕ್ಸಿಯೋಸ್ನ ವರದಿಗಾರ ಬರಾಕ್ ರಾವಿದ್, ಸಫಿಯುದ್ದೀನ್ ಅವರನ್ನು ಇಸ್ರೇಲ್ ಗುರಿಯಾಗಿಸಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ,…

Read More

ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದರು ಅವರು. ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ‌ಹೆದರಿಸೋಕೆ ಯಾರಿಂದಲೂ ಆಗಲ್ಲ. ನಾನು ಯಾರಿಗೂ ಹೆದರಲ್ಲ. ಹೆದರೋದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ‌ ಬೆಳೆಸಿರುವ ನಾಡಿನ‌ ಜನಕ್ಕೆ. ಇಂತಹ ಸಿದ್ದರಾಮಯ್ಯಗೆ ನಾನು ಹೆದರುತ್ತೀನಾ? ಎಂದು ಸಚಿವರು ತಿರುಗೇಟು ನೀಡಿದರು. ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ‌, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ…

Read More

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಇಂದು ಮೂವರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಅಕ್ಟೋಬರ್.8ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದಂತ ಎ.3 ಪವನ್, ಎ4 ರಾಘವೇಂದ್ರ ಹಾಗೂ ಎ7 ಅನುಕುಮಾರ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ನಡೆಸಿತು. ಈ ವೇಳೆ ಎ.7 ಆರೋಪಿ ಅನುಕುಮಾರ್ ಪರ ವಾದಿಸಿದಂತ ವಕೀಲ ರಾಮ್ ಸಿಂಗ್ ಅವರು, ರೇಣುಕಾಸ್ವಾಮಿ ಕೊಲೆಗೆ ತಮ್ಮ ಕಕ್ಷಿದಾರ ಕಾರಣನಲ್ಲ. ಇತರೆ ಆರೋಪಿಗಳೊಂದಿಗೆ ಸಂಪರ್ಕದಲ್ಲಿ ಇದ್ದ ಮಾತ್ರಕ್ಕೆ ಆರೋಪಿಯಾಗಿ ಮಾಡಲಾಗಿದೆ. ಕಾಲ್ ರೆಕಾರ್ಡಿಂಗ್ ನಲ್ಲಿ ಕೊಲೆಗೆ ಪೂರಕ ಸಾಕ್ಷ್ಯಗಳಲಿಲ್ಲ. ಬಲವಂತವಾಗಿ ಕಿಡ್ನಾಪ್ ಮಾಡಿದ ಬಗ್ಗೆ ಹಾಗೂ ಕೊಲೆ ಸಂಚಿನ ಬಗ್ಗೆಯೂ ಸಾಕ್ಷಿಯಿಲ್ಲ ಎಂದು ವಾದಿಸಿದರು. ರೇಣುಕಾಸ್ವಾಮಿ ಜೊತೆಯಲ್ಲೇ ಡಾಬಾದಲ್ಲಿ ಊಟ ಮಾಡಿದ್ದಾರೆ. ಕೊಲೆಯಲ್ಲಿ ಅನುಕುಮಾರ್ ಪಾತ್ರವಿಲ್ಲ. ಎ.7 ಅನುಕುಮಾರ್ ರೇಣುಕಾಸ್ವಾಮಿ ಕೊಲೆಗೆ ಕಾರಣನಲ್ಲ. ಪ್ರಕರಣದಲ್ಲಿ ಅನುಕುಮಾರ್ ಅವರನ್ನು ಬಲಿಪಶು ಮಾಡಲಾಗಿದೆ ಎಂಬುದಾಗಿ ವಾದಿಸಿ, ಜಾಮೀನು ಕೋರಿದರು.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಸಿಎಂ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಬಿ.ಬಿ ಕಾವೇರಿ ಅವರನ್ನು ನೇಮಕ ಮಾಡಲಾಗಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಕೆ.ವಿ., ಐಎಎಸ್ (ಕೆ.ಎನ್: 2007) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಶಾಲಾ ಶಿಕ್ಷಣ ಆಯುಕ್ತರಾಗಿ ನೇಮಿಸಲಾಗಿದೆ. ಬೆಂಗಳೂರಿನ ಶಾಲಾ ಶಿಕ್ಷಣ ಆಯುಕ್ತರಾದ ಕಾವೇರಿ ಬಿ.ಬಿ., ಐಎಎಸ್ (ಕೆ.ಎನ್: 2008) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಕಾವೇರಿ ಬಿ.ಬಿ., ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. https://kannadanewsnow.com/kannada/shimoga-people-power-outages-in-these-areas-of-the-district-tomorrow-tomorrow/ https://kannadanewsnow.com/kannada/pune-court-summons-rahul-gandhi-on-october-23-in-savarkar-defamation-case/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಮೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಅಕ್ಟೋಬರ್ 6ರ ನಾಳೆ, ಅಕ್ಟೋಬರ್ 7ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅ.6ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಸವಾಯಿಪಾಳ್ಯ ಪವರ್ ಕಟ್ ಆಗಲಿದೆ. ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಕ್ರಾಸ್ ವರೆಗೆ, 100 ಅಡಿ ರಸ್ತೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಅಗಸವಳ್ಳಿ, ಐಹೊಳೆ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತರಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9380663606/ 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/job-news-apply-for-medical-paramedical-posts/ https://kannadanewsnow.com/kannada/pune-court-summons-rahul-gandhi-on-october-23-in-savarkar-defamation-case/

Read More

ಶಿವಮೊಗ್ಗ : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು. ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30 ರವರೆಗೆ ನಡೆಸಲಾಗುವುದು. ವೈದ್ಯರು, ಸಿಹೆಚ್, ಐಸಿಯು- ಹೆಚ್‌ಡಿಯು, ಎಮ್‌ಹೆಚ್, ಐಸಿಯು- ಹೆಚ್‌ಡಿಯು, ಎನ್‌ಆರ್‌ಸಿ ವಿಭಾಗಕ್ಕೆ 28 ಹುದ್ದೆಗಳು, ವಿದ್ಯಾರ್ಹತೆ- ಎಂ.ಬಿ.ಬಿಎಸ್, ಐಸಿಯು ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್ನ್ಶಿಪ್ ಪೂರೈಸಿರಬೇಕು ಹಾಗೂ ಕೆ.ಎಂ.ಸಿ ಯ ನೋಂದಣಿಯನ್ನು ಹೊಂದಿರತಕ್ಕದ್ದು. ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಎನ್‌ಪಿಪಿಸಿಡಿ ವಿಭಾಗ 01 ಹುದ್ದೆ, ವಿದ್ಯಾರ್ಹತೆ ಒಂದು ವರ್ಷದ…

Read More

ಬೆಂಗಳೂರು: ರಾಜ್ಯ ಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಒಂದು ವೇಳೆ ಅನುಸರಿಸದೇ ಹೋದ್ರೆ, ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದಾಗಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ಪಾಠಕ್ರಮ, ಪಠ್ಯವಸ್ತು ಹಾಗೂ ಪಠ್ಯಪುಸ್ತಕಗಳನ್ನು ನಿಗದಿಪಡಿಸಬಹುದಾಗಿರುತ್ತದೆ. O Karnataka Educational Institutions [classification, Regulation and Prescription of Curricula etc] Rules-1995ರ ನಿಯಮ-19. ರ ಉಪನಿಯಮ-3 ರಂತೆ ರಾಜ್ಯವಠ್ಯ ಕ್ರಮವನ್ನು ಅನುಸರಿಸುತ್ತಿರುವ ಎಲಾ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರವು ನಿಗದಿಪಡಿಸುವ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನೇ ಕಡ್ಡಾಯವಾಗಿ ಅನುಸರಿಸುವುದು ಮತ್ತು ಹೆಚ್ಚುವರಿಯಾಗಿ ಯಾವುದೇ ಇತರ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ…

Read More