Subscribe to Updates
Get the latest creative news from FooBar about art, design and business.
Author: kannadanewsnow09
ಮಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ತೆರಳುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಶಾಸಕ ರಾಜೇಶ್ ನಾಯ್ಕ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೆಂಕ ಎಡಪದವುನಲ್ಲಿ ಶಾಸಕ ರಾಜೇಶ್ ನಾಯಕ್ ಕಾರಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿದೆ. ಹೀಗೆ ಉಂಟಾದಂತ ಡಿಕ್ಕಿಯಲ್ಲಿ ಶಾಸಕ ರಾಜೇಶ್ ನಾಯಕ್ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ. ಸಂಕ್ರಾಂತಿಯ ಅಂಗವಾಗಿ ಎಡಪದವುನಲ್ಲಿದ್ದಂತ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ಮೂಡಬಿದ್ರಿಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ವಿಫ್ಟ್ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಆನಂತ್ರ ಆತನನ್ನು ಗುರುಪುರದಲ್ಲಿ ಹಿಡಿದು ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ. ಇದೀಗ ಸ್ವಿಫ್ಟ್ ಕಾರು ಚಾಲಕನನ್ನು ವಶಕ್ಕೆ ಪಡೆದಿರುವಂತ ಬಜ್ಪೆ ಠಾಣೆಯ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಶಾಸಕ ರಾಜೇಶ್ ನಾಯಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಫ್ಘಾನಿಸ್ತಾನದ ವಿರುದ್ಧದ 2ನೇ ಟಿ20 ಪಂದ್ಯಾವಳಿಗೆ ಟೀಂ ಇಂಡಿಯಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಭಾರತದ ತಂಡಕ್ಕೆ ವಿರಾಟ್ ಕೊಹ್ಲಿ ಕಂ ಬ್ಯಾಕ್ ಆಗಿದ್ದರೇ, ಇಬ್ಬರು ಆಟಗಾರರು ಕೈ ಬಿಡಲಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ 20 ಗಾಗಿ ವಿರಾಟ್ ಕೊಹ್ಲಿ ಬಹುನಿರೀಕ್ಷಿತ ಪ್ಲೇಯಿಂಗ್ ಇಲೆವೆನ್ಗೆ ಮರಳಿದ್ದಾರೆ. ಸರಣಿಯ ಮೊದಲ ಟಿ 20 ಯಲ್ಲಿ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ತಿಲಕ್ ವರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್ಮನ್ ಸ್ಥಾನ ಪಡೆದರು. ನವೆಂಬರ್ನಲ್ಲಿ ನಡೆದ 2022 ರ ಟಿ 20 ವಿಶ್ವಕಪ್ ಸೆಮಿಫೈನಲ್ ನಂತರ ವಿರಾಟ್ ಅವರ ಮೊದಲ ಟಿ 20 ಪಂದ್ಯ ಇದಾಗಿದೆ. 2023 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ವಿರಾಟ್ 50 ಓವರ್ಗಳು ಮತ್ತು ಟೆಸ್ಟ್ ಕ್ರಿಕೆಟ್ನತ್ತ ಗಮನ ಹರಿಸಿದ್ದಾರೆ. ಅವರು 2023 ರಲ್ಲಿ ಯಾವುದೇ ಟಿ 20 ಪಂದ್ಯವನ್ನು ಆಡಲಿಲ್ಲ. ಈ ವರ್ಷದ ಜೂನ್ನಲ್ಲಿ ಟಿ 20 ವಿಶ್ವಕಪ್ ನಡೆಯಲಿದ್ದು, ವಿರಾಟ್ ಮತ್ತು…
ಬಳ್ಳಾರಿ: ಜಿಲ್ಲೆಯಲ್ಲಿ ಬಿಸ್ಕೇಟ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಪೋಟಗೊಂಡು ಓರ್ವ ಕಾರ್ಮಿಕ ದುರ್ಮಣರ ಹೊಂದಿ, ಮತ್ತೆ ಐವರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಬಳ್ಳಾರಿಯಲ್ಲಿನ ಭರತ್ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ದಿಢೀರ್ ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಕಾರ್ಮಿಕ ಸಲೀಂ ಎಂಬುವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಇನ್ನೂ ಈ ದುರ್ಘಟನೆಯಲ್ಲಿ ಐವರು ಕಾರ್ಮಿಕರು ಕೂಡ ಗಾಯಗೊಂಡಿದ್ದು, ಇವರಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕ ಅಂತ ಹೇಳಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭರತ್ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಕ್ಕೆ ಕಾರಣ ಏನು ಅಂತ ತಿಳಿದು ಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಬಳ್ಳಾರಿ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/davanagere-shivananda-tadagur-calls-for-the-success-of-state-level-journalists-conference/ https://kannadanewsnow.com/kannada/mallikarjun-kharge-rahul-gandhi-launch-bharat-jodo-nyay-yatra-in-manipur/
ದಾವಣಗೆರೆ: ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಈವರೆಗೂ ನಡೆದ ರಾಜ್ಯ ಮಟ್ಟದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನ ಒಂದಕ್ಕಿಂತ ಒಂದು ವಿಭಿನ್ನವಾಗಿ ನಡೆದಿದ್ದು, ಫೆಬ್ರವರಿಯಲ್ಲಿ 3 ಮತ್ತು 4 ರಂದು ರಾಜ್ಯದ ಕೇಂದ್ರ ಬಿಂದು ದಾವಣಗೆರೆಯಲ್ಲಿ ನಡೆಯಲಿರುವ ಸಮ್ಮೇಳನ ಅತ್ಯಂತ ಮಹತ್ವ ಪಡೆದಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ನಗರದ ಮಾಹಾನಗರಪಾಲಿಕೆ ಆವರಣದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಗಳೂರು, ಕಲ್ಬುರ್ಗಿ ಮತ್ತು ವಿಜಯಪುರ ಸೇರಿದಂತೆ ವಿವಿಧ ಜೆಲ್ಲೆಗಳಲ್ಲಿ ನಡೆದ ಸಮ್ಮೇಳನಗಳು ಅಭೂತಪೂರ್ವವಾಗಿ ನಡೆದಿವೆ. ಮಾತ್ರವಲ್ಲ, ವಿಚಾರಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಮ್ಮೇಳನದ ವಿವಿಧ ಸಮಿತಿಗಳು ಅತಿಥಿಗಳಿಗೆ ನೀಡಿದ ಅತಿಥ್ಯ ಮತ್ತೆ ಮತ್ತೆ ನೆನಪು ಮಾಡುತ್ತಿವೆ. ಅದಕ್ಕಿಂತ ಹೆಚ್ಚು ನೆನಪು ಮಾಡುವಂತ ದಾವಣಗೆರೆ ಸಮ್ಮೇಳನ ಆಗಬೇಕು. ಇದಕ್ಕೆಲ್ಲ ಜಿಲ್ಲೆಯ ಪತ್ರಕರ್ತರು ಟೊಂಕಕಟ್ಟಿ ನಿಲ್ಲಬೇಕೆಂದು ಕಿವಿಮಾತು ಹೇಳಿದರು. ಮೈಸೂರಿನಲ್ಲಿ ನಡೆದ…
ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ನಡೆದ ನೈತಿಕ ಪೊಲಿಸ್ ಗಿರಿ ಪ್ರಕರಣವನ್ನು ಸಂತ್ರಸ್ಥರಿಗೆ ಹಣ ಕೊಟ್ಟು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾನಗಲ್ ಪ್ರಕರಣವನ್ನು ಅಲ್ಲಿನ ಪೊಲೀಸರು ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನಿಸಿದ್ದರು. ತನಿಖೆಗೆ ಎಸ್.ಐ.ಟಿ ರಚನೆ ಮಾಡಿ. ಸಿಎಂ ಸಿದ್ದರಾಮಯ್ಯ ನಾಳೆ ಹಾವೇರಿಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯಾದರೂ ಎಸ್ಐಟಿ ತನಿಖೆಗೆ ಘೋಷಿಸುತ್ತಾರೆ ಅಂತ ನಿರೀಕ್ಷೆ ಮಾಡುತ್ತೇನೆ ಎಂದರು. ತನಿಖೆ ನೆಪದಲ್ಲಿ ಸಂತ್ರಸ್ಥೆಯನ್ನು ಶಿರಸಿಗೆ ಕರದೊಯ್ಯಲಾಗುತ್ತಿದೆ. ಬಿಜೆಪಿ ಮಹಿಳಾ ನಿಯೋಗ ಅಲ್ಲಿಗೆ ಭೇಟಿ ಕೊಡುತ್ತಿದೆ ಅಂತ ಈ ರೀತಿ ಮಾಡುತ್ತಿದ್ದಾರೆ. ಇದೆಲ್ಲ ರಾಜಕಾರಣವನ್ನು ಕಾಂಗ್ರೆಸ್ ನವರು ಮಾಡುತ್ತಾರೆ. ಅವರಿಂದ ನಾವೇನು ಜಾಸ್ತಿ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಇನ್ನು ರಾಮ ಮಂದಿರ ವಿಚಾರದಲ್ಲಿ ಸಿಎಂ ಯೂಟರ್ನ್ ಹೊಡೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯಗೆ ತಡವಾಗಿಯಾದರೂ ಬುದ್ಧಿ ಬಂದಿದೆ.…
ಶಿರಸಿ: ಹಾವೇರಿ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಹಲವರನ್ನು ಬಂಧಿಸಿದ್ದಾರೆ. ಬಂಧಿತ 6 ಜನರಲ್ಲಿ ಇಬ್ಬರು ಬೇರೆಯವರಾಗಿದ್ದಾರೆ. ಅವರು ಅತ್ಯಾಚಾರ ಎಸಗಿಲ್ಲ. ಇನ್ನುಳಿದವರು ಪ್ರಕರಣದಲ್ಲಿ ಭಾಗಿಯಾಗಿಲ್ಲ. ಪೊಲೀಸರು ಬೇರೆಯವರನ್ನು ಅರೆಸ್ಟ್ ಮಾಡಿದ್ದಾರೆ ಎಂಬುದಾಗಿ ಅತ್ಯಾಚಾರ ಸಂತ್ರಸ್ತೆ ಹೇಳುವು ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಇಂದು ಶಿರಸಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಂತ್ರಸ್ತ ಮಹಿಳೆ, ಪೊಲೀಸರು ಬೇರೆಯವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ 6 ಆರೋಪಿಗಳಲ್ಲಿ ಇಬ್ಬರು ಬೇರೆಯವರು. ಆ ಇಬ್ಬರು ಲೈಂಗಿಕ ದೌರ್ಜನ್ಯ ಎಸಗಿಲ್ಲ. ಜೀವ ಭಯವಿದ್ದರೂ ನನ್ನ ರಕ್ಷಣೆಗೆ ಪೊಲೀಸರನ್ನು ನಿಯೋಜಿಸಿಲ್ಲ ಎಂಬುದಾಗಿ ತಿಳಿಸಿದರು. ವೀಡಿಯೋದಲ್ಲಿ ಇರೋರನ್ನ ಹಿಡಿದಿಲ್ಲ. ಬೇರೆಯವರನ್ನು ಹಿಡಿದಿದ್ದಾರೆ. ಇಬ್ಬರು ಮಾತ್ರವೇ ಸಿಕ್ಕಿದ್ದಾರೆ. ಬಾಕಿಯವರು ಸಿಕ್ಕಿಲ್ಲ. ನನಗೆ ಇಬ್ಬರ ಪೋಟೋ ತೋರಿಸಿದ್ರು. ಅವರು ಇಬ್ಬರೂ ಅಲ್ಲ. ಶಿಕ್ಷೆ ಆಗಬೇಕು ಸರ್ ಅವರಿಗೆ. ಅವರಿಗೆ ಬಿಡಬಾರದು ಎಂಬುದಾಗಿ ಹೇಳಿದರು. https://kannadanewsnow.com/kannada/pm-modi-performs-gau-seva-on-makar-sankranti-pics-go-viral/ https://kannadanewsnow.com/kannada/mallikarjun-kharge-rahul-gandhi-launch-bharat-jodo-nyay-yatra-in-manipur/
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 113 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 114 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ( Covid19 Report ) ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 3208 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ 113 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದೆ. ಬೆಂಗಳೂರು ನಗರದಲ್ಲಿ 40, ಬಳ್ಳಾರಿ 03, ಬೆಳಗಾವಿ 01, ಬೆಂಗಳೂರು ಗ್ರಾಮಾಂತರ 02, ಬೀದರ್, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಚಾಮರಾಜನಗರ 04, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 05 ಜನರಿಗೆ ಕೊರೋನಾ ಸೋಂಕು ( Coronavirus Case ) ತಗುಲಿರೋದಾಗಿ ಹೇಳಿದೆ. ಗದಗ 03, ಕಲಬುರ್ಗಿ 04, ಮಂಡ್ಯ 05, ಮೈಸೂರು 12, ರಾಯಚೂರು 04, ತುಮಕೂರು 10 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ 113 ಜನರಿಗೆ…
ದಾವಣಗೆರೆ: ಪಬ್ ನಲ್ಲಿ ತಡರಾತ್ರಿ ನಿಯಮ ಮೀರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಮಾಡಿದಂತ ನಟ ದರ್ಶನ್ ಸೇರಿದಂತೆ ವಿವಿಧ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಯ ಶಾಕ್ ನೀಡಿದ್ದರು. ವಿಚಾರಣೆಗೂ ಹಾಜರಾಗಿದ್ದರು. ಇದೇ ಹೊತ್ತಲ್ಲಿ ನಟ ದರ್ಶನ್ ಅಭಿಮಾನಿಯೊಬ್ಬ ಯುವಕನೊಬ್ಬನ ಮೇಲೆ ವಿಕೃತಿ ಮೆರೆದಿರೋ ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ಗೀತಾಂಜಲಿ ಚಿತ್ರಮಂದಿರದ ಮುಂದೆ ನಟ ದರ್ಶನ್ ಅಭಿಮಾನಿಯೊಬ್ಬ ಯುವಕನೊಬ್ಬನ ಬರಿ ಕೈ ಮೇಲೆ ಕರ್ಪೂರ ಹಚ್ಚಿ, ನಟ ದರ್ಶನ್ ಬ್ಯಾನರ್ ಗೆ ಆರತಿ ಮಾಡುವಂತೆ ಸೂಚಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಬರಿ ಕೈ ಮೇಲೆ ಕರ್ಪೂರ ಹಚ್ಚಿರುವಂತ ದರ್ಶನ್ ಅಭಿಮಾನಿ, ಪೋಸ್ಟರ್ ಗೆ ಮಂಗಳಾರತಿ ಥರ ಬೆಳಗಿಸಿ ವಿಕೃತಿ ಮೆರೆದಿರೋದಾಗಿ ವೀಡಿಯೋದಿಂದ ತಿಳಿದು ಬಂದಿದೆ. ಇದಷ್ಟೇ ಅಲ್ಲದೇ ಆ ಯುವಕನನ್ನು ಬಸ್ಕಿ ಕೂಡ ಹೊಡೆಸಿದ್ದಾನೆ. ಎರಡು ಕಿವಿ ಹಿಡಿದು ಯುವಕ ಬಸ್ಕಿ ಹೊಡೆಯುತ್ತಿರೋದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರೋ…
ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಒಬ್ಬರು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಎಂಬುವರು ಇಂದಿರಾ ಅವಾಸ್ ಯೋಜನೆಯಡಿ ಮಂಜೂರಾಗಿದ್ದಂತ ಮನೆಯ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಲಂಚದ ಹಣವಾಗಿ 30 ಸಾವಿರ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೀಗ ಬಿಲ್ ಕಲೆಕ್ಟರ್ ಆನಂದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವಂತ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. https://kannadanewsnow.com/kannada/mallikarjun-kharge-rahul-gandhi-launch-bharat-jodo-nyay-yatra-in-manipur/ https://kannadanewsnow.com/kannada/old-woman-crawls-5-km-for-maasana-says-hdk-says-govt-has-no-mercy-for-giving-guarantee/
ಜೀವನದಲ್ಲಿ ಏನಾಗುತ್ತದೋ ಇಲ್ಲವೋ ಎಂಬ ಭಯದಲ್ಲಿ ಬದುಕುತ್ತಿರುವವರು ಅನೇಕರಿದ್ದಾರೆ. ಮನದಲ್ಲಿ ಭಯವಿದ್ದರೆ ಚಿಂತೆ, ಅವಾಂತರಗಳು.. ಎಂತಹ ಭಯ, ಚಿಂತೆ, ಕಷ್ಟಗಳು ಬಂದರೂ ಅವೆಲ್ಲವನ್ನೂ ಹೋಗಲಾಡಿಸುವ ಆಪದ್ಬಾಂಧವನಾಗಿ ಸಹಾಯಕ್ಕೆ ಬರುವವನು ನರಸಿಂಹ. ಮನೆಯಲ್ಲಿ ನರಸಿಂಹನನ್ನು ಪೂಜಿಸಿ ಪೂಜೆ ಮಾಡಿದರೆ ಹೇಗೆ ಫಲ ಸಿಗುತ್ತದೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನೋಟದಲ್ಲಿ ಉಗ್ರನಾದರೂ ನರಸಿಂಹ ಹೃದಯದಲ್ಲಿ…