Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಅನರ್ಹ ಅಧಿಕಾರಿಯನ್ನು ನೇಮಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿವಾಳಪ್ಪ ಅವರನ್ನು, ಸೆ.27ರಂದು ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಪ್ರಭಾರದಲ್ಲಿ ನೇಮಿಸಿ ಸರ್ಕಾರವೇ ಆದೇಶ ಹೊರಡಿಸಿದೆ. ಇದು ವಿವಾದಕ್ಕೆ ಏಡೆಮಾಡಿಕೊಟ್ಟಿದೆ. 2006ರ ಡಿಸೆಂಬರ್‌ನಲ್ಲಿ ಇಂದಿರಾಗಾಂಧಿ ನ್ಯಾಷಿನಲ್ ಮುಕ್ತ ವಿಶ್ವವಿದ್ಯಾಲಯದಲ್ಲಿ ಇವರು, ಪಿಬಿಬಿಎಸ್ಸಿ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪಡೆದು 2013ರಲ್ಲಿ ಈ ಕೋರ್ಸ್ ಮುಗಿಸಿದ್ದಾರೆ. ಆದರೆ, 2013ರಲ್ಲಿ ಪಿಬಿಬಿಎಸ್ಸಿ ನರ್ಸಿಂಗ್ ಪದವಿಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ( ಆರ್‌ಜಿಯುಎಚ್‌ಎಸ್) ಅಧೀನದ ಕೆಎಲ್‌ಇಎಸ್ ಕಾಲೇಜಿನಲ್ಲಿ ಓದಿರುವುದಾಗಿ ಸರ್ಕಾರಕ್ಕೆ ನಕಲಿ ದಾಖಲೆ ಸಲ್ಲಿಸಿದ್ದಾರೆ. ಅಲ್ಲದೆ, ನಕಲಿ ದಾಖಲೆಯ ಆಧಾರದ ಮೇರೆಗೆ ಸರ್ಕಾರಿ ಖೋಟಾದಲ್ಲಿ ನೂರ್ ಕಾಲೇಜು ಆಫ್ ನರ್ಸಿಂಗ್‌ನಲ್ಲಿ ಎಂಎಸ್ಸಿ ಪದವಿ ಮುಗಿಸಿದ್ದಾರೆ. ನಂತರ, ಕರ್ನಾಟಕ ರಾಜ್ಯ ನರ್ಸಿಂಗ್ ಪರಿಷತ್ತಿನಲ್ಲಿ ದೃಢೀಕರಣ ಪತ್ರ ಪಡೆದಿದ್ದಾರೆ. ಸರ್ಕಾರಕ್ಕೆ ನಕಲಿ…
ಬೆಂಗಳೂರು: ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು. ಈ ಬಗ್ಗೆ X ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಇಂಥ ಆಸಕ್ತರನ್ನು ಸರಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ…
ಬೆಂಗಳೂರು: ಇಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಈ ಮೂಲಕ ಮೋದಿ ಕರೆಗೆ ಓಗೊಟ್ಟರು. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ‘ರಾಮಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ’ ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಕರೆ ಮೇರೆಗೆ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು ಎಂದಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ, ಶಾಸಕ ಸಿ ಕೆ ರಾಮಮೂರ್ತಿ, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. https://twitter.com/RAshokaBJP/status/1746414962610757833 https://kannadanewsnow.com/kannada/congress-trying-to-cover-up-hanagal-rape-case-r-ashoka/ https://kannadanewsnow.com/kannada/anantkumar-hegde-pradeep-easwar/
ಬೆಂಗಳೂರು: ಹಾನಗಲ್ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಹಾನಗಲ್ ಅತ್ಯಾಚಾರ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲಿನ ರಾಜಕೀಯ ನಾಯಕರು ಭೇಟಿಗೆ ಅವಕಾಶ ಮಾಡಿಕೊಡುತ್ತಿಲ್ಲ. ಪೊಲೀಸರ ಮೂಲಕ ಅವರನ್ನು ಬೇರೆ ಕಡೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನೈತಿಕ ಪೊಲೀಸ್‌ಗಿರಿ, ದಾದಾಗಿರಿ, ದೌರ್ಜನ್ಯ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಬೆಳಗಾವಿಯಲ್ಲಿ ಬೆತ್ತಲೆ ಮಾಡಿದ ಪ್ರಕರಣವೂ ಹೀಗೆಯೇ ಆಗಿದೆ. ಸರ್ಕಾರ ಸತ್ತುಹೋಗಿದೆ ಎಂದು ಜನರು ಅಂದುಕೊಂಡಿದ್ದಾರೆ. ಬರಗಾಲ ಹಾಗೂ ಕಾನೂನು ಸುವ್ಯವಸ್ಥೆ ಕುಸಿತದ ವಿರುದ್ಧ ಹೋರಾಟ ಮಾಡುತ್ತೇವೆ. ನಾನು ಎಲ್ಲ ಜಿಲ್ಲೆಗಳಲ್ಲಿ ಓಡಾಡಿ ರೈತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು. ರಾಜ್ಯದ ಎಲ್ಲಾ ಭಾಗಗಳಲ್ಲಿ ದೇವಾಲಯಗಳಲ್ಲಿ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಜನವರಿ 22 ರಂದು ವಿಶೇಷ ಪೂಜೆ ನಡೆಯಲಿದೆ. ಪದ್ಮನಾಭನಗರ ಶಾಸಕರ ಕಚೇರಿಯ ಬಳಿ ದೇವಸ್ಥಾನ ನಿರ್ಮಿಸುತ್ತಿದ್ದು, ಅಲ್ಲಿಯೇ ಶ್ರೀರಾಮ…
ಬೆಂಗಳೂರು: ದೇಶದಲ್ಲಿ ನ್ಯಾಯಾಂಗವನ್ನು ದಮನ ಮಾಡಿದ ಕಾಂಗ್ರೆಸ್ ನಾಯಕರು ಈಗ ನ್ಯಾಯ ಯಾತ್ರೆ ಮಾಡುತ್ತಿರುವುದು ಢೋಂಗಿತನ. ತುರ್ತು ಪರಿಸ್ಥಿತಿ ಹೇರಿಕೆಯಿಂದ ಪ್ರಜಾಪ್ರಭುತ್ವವನ್ನು ದಮನ ಮಾಡಿದ ಇವರ ಯಾತ್ರೆಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು. ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ, ಜನವರಿ 14 ರಿಂದ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದರಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ನೇತೃತ್ವದಲ್ಲಿ ಜಯನಗರ 4 ನೇ ಹಂತದ ಗಣೇಶ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಈ ವೇಳೆ ಮಾತನಾಡಿದ ಆರ್.ಅಶೋಕ, ಕಾಂಗ್ರೆಸ್ ನಾಯಕರು ದಕ್ಷಿಣ ಭಾಗದಿಂದ ಜೋಡೋ ಯಾತ್ರೆ ಶುರು ಮಾಡಿದ್ದರು. ನಂತರ ಉತ್ತರ ಭಾಗದ ಮೂರು ರಾಜ್ಯಗಳಲ್ಲಿ ಚುನಾವಣೆಯಲ್ಲಿ ಸೋತರು. ರಾಹುಲ್ ಗಾಂಧಿ ಎಲ್ಲೆಲ್ಲಿ ಪಾದಯಾತ್ರೆ ಮಾಡಿ ನೆಲವನ್ನು ಸ್ಪರ್ಶಿಸುತ್ತಾರೋ ಅಲ್ಲೆಲ್ಲ ಕಾಂಗ್ರೆಸ್ ಅವನತಿ ಕಾಣುತ್ತದೆ. ಈಗ ನ್ಯಾಯ ಯಾತ್ರೆಯನ್ನು…
ಬೆಂಗಳೂರು: ಇಷ್ಟು ದಿನ ಅಡ್ರೆಸ್ ಇಲ್ಲದಂತೆ ಕಳೆದು ಹೋಗಿದ್ದ ತಾವು ಈಗ ಚುನಾವಣೆ ಸಮಯದಲ್ಲಿ ಮತ ಗಳಿಸಲು ರೋಷ, ಆವೇಶದ ಮಾತುಗಳನ್ನು ಆಡುತ್ತಿದ್ದೀರಿ ಎಂಬುದನ್ನು ಅರ್ಥ ಮಾಡಿಕೊಳ್ಳದೆ ಇರುವಷ್ಟು ಜನ ದಡ್ಡರಲ್ಲ. ಈ ಬಾರಿ ತಮಗೆ ತಕ್ಕ ಪಾಠ ಕಲಿಸುತ್ತಾರೆ. ನಿಮ್ಮನ್ನು ಶಾಶ್ವತವಾಗಿ ಅಡ್ರೆಸ್ ಗೆ ಇಲ್ಲದಂತೆ ಮಾಡುತ್ತಾರೆ. ನೋಡ್ತಾ ಇರಿ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ಅವರು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆಯವರೇ, “ಕುಲವಂ ಪೇಳ್ವುದು ನಾಲ್ಗೆ” ಎಂಬ ಮಾತಿನಂತೆ ನಿಮ್ಮ ಸಂಸ್ಕಾರ ಏನು ಎಂಬುದನ್ನು ನೀವಾಡಿರುವ ಮಾತು ಪ್ರತಿಬಿಂಬಿಸುತ್ತಿದೆ. ಇದೇ ಏನು ಬಿಜೆಪಿ, ಆರ್ ಎಸ್ ಎಸ್, ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ. ಇದೇ ಏನು ನಿಮ್ಮ ಆಚಾರ-ವಿಚಾರ? ಎಂದು ಪ್ರಶ್ನಿಸಿದ್ದಾರೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ’ ಎಂಬ ದಾಸರವಾಣಿಯನ್ನು ಪರಿಪಾಲಿಸಬೇಕಾದ ಸ್ಥಿತಿಗೆ ನೀವು…
ಚಿಕ್ಕಬಳ್ಳಾಪುರ: ಅನಂತ್ ಕುಮಾರ್ ಹೆಗಡೆ ಅವರೇ ನಾಲಿಗೆ ಹಿಡಿತದಲ್ಲಿ ಇರಲಿ. ಒಬ್ಬ ಅಹಿಂದಾ ಲೀಡರ್ ನೀವು. ರಾಜ್ಯ, ರಾಷ್ಟ್ರ ರಾಜಕಾರಣದ ವ್ಯಕ್ತಿ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು. ನಿಮಗೆ ಮಾನ ಮರ್ಯಾಧೆ ಇಲ್ವ ಅನಂತಕುಮಾರ್ ಹೆಗಡೆ ಅವರೇ. ಏನು ಹಿಂದೂ ಧರ್ಮ ನಿಮ್ಮಪ್ಪನ ಮನೆ ಸ್ವತ್ತಾ? ಎಂಬುದಾಗಿ ಶಾಸಕ ಪ್ರದೀಪ್ ಈಶ್ವರ್ ಕಿಡಿಕಿಡಿಯಾಗಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾವು ಹಿಂದೂಗಳೆ ರೀ. ನಮ್ಮ ಎದೆ ಸೀಳಿದ್ರೆ ಶ್ರೀರಾಮನೂ ಕಾಣಿಸ್ತಾನೆ. ಸಿದ್ಧರಾಮಯ್ಯನೂ ಕಾಣಿಸ್ತಾರೆ. ಬಾಬಾ ಸಾಹೇಬ್ ಅಂಬೇಡ್ಕ್ ಕಾಣಿಸ್ತಾರೆ. ದೇವರಾಜ್ ಅರಸ್ ಅವರು ಕಾಣಿಸ್ತಾರೆ. ನನ್ನಂಥವರ ಎದೆಯಲ್ಲಿ ಶಿವಕುಮಾರ್ ಸ್ವಾಮೀಜಿನೂ ಕಾಣಿಸ್ತಾರೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ವಾಗ್ಧಾಳಿ ನಡೆಸಿದರು. ಏನೋ ಅನಂತ್ ಕುಮಾರ್ ಹೆಗಡೆ ಅವರೇ ಹಿಂದೂ ಧರ್ಮನ ನಿಮ್ಮಪ್ಪನ ಮನೆ ಆಸ್ತಿ ಥರ ಆಡ್ತಿದ್ದೀರಲ್ಲ. ನಿನಗೆ ಹೆಂಗೆ ರಕ್ತದಲ್ಲಿ ಹಿಂದೂ ಧರ್ಮ ಇದೆಯೋ, ನಮಗೂ ನಮ್ಮ ರಕ್ತದಲ್ಲಿ ಹಂಗೆ ಇದೆ. ಮೈಂಡ್ ಯುವರ್ ಟಂಗ್.…
ದಾವಣಗೆರೆ: ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ಜೀವ ಬೆದರಿಕೆ ಹಾಕಿರೋದಾಗಿ ಗಂಭೀರ ಆರೋಪವನ್ನು ಸ್ವತಹ ಸಂಸದರೇ ಬಹಿರಂಗ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಸಂಸದ ಜಿ.ಎಂ ಸಿದ್ದೇಶ್ವರ್ ಅವರು, ತಮಗೆ ಜೀವ ಬೆದರಿಕೆ ಹಾಕಲಾಗಿದೆ. ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಕಾಲು ತೆಗೆಯಬೇಕು. ವಿಷ ಹಾಕಿ ಸಾಯಿಸಬೇಕು ಅಂತ ಸಂಚು ರೂಪಿಸಿದ್ದಾರೆ. ಹೀಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ನಾನು ತಿನ್ನೋದಿಲ್ಲ. ಅಷ್ಟು ಜಾಗ್ರತೆಯನ್ನು ವಹಿಸಿರೋದಾಗಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. https://kannadanewsnow.com/kannada/suo-motu-case-filed-against-anant-kumar-hegde/ https://kannadanewsnow.com/kannada/anantkumar-hegde-pradeep-easwar/
ಮಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ಹಾಗೂ ಬಾಬ್ರಿ ಮಸೀದಿಯಂತೆ ಚಿನ್ನಪಲ್ಲಿ ಮಸೀದಿ ಧ್ವಂಸವಾಗೋದಾಗಿ ಹೇಳಿಕೆ ನೀಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಮಂಗಳೂರಿನ ಕುಮಟಾ ಪೊಲೀಸ್ ಠಾಣೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಕಾರಣ ಅವರು ಭಟ್ಕಳದಲ್ಲಿರುವಂತ ಚಿನ್ನಪಲ್ಲಿ ಮಸೀದಿ ಬಾಬ್ರಿ ಮಸೀದಿಯಂತೆ ದ್ವಂಸ ಆಗಲಿದೆ ಅಂತ ಅಶಾಂತಿ ಮೂಡಿಸೋ ಆರೋಪದ ಹೇಳಿಕೆ ನೀಡಿದ್ದಕ್ಕಾಗಿ ಆಗಿದೆ. ದ್ವೇಷ ಭಾಷಣ ಮಾಡಿದ್ದಾರೆ ಎಂಬುದಾಗಿ ಸುಮೋಟೋ ಕೇಸ್ ದಾಖಲಿಸಲಾಗಿದೆ. ದ್ವೇಷ ಭಾಷಣ, ಅಶಾಂತಿ ಮೂಡಿಸಲು ಯತ್ನ ಆರೋಪದ ಮೇಲೆ ಕೇಸ್ ಬುಕ್ ಮಾಡಿದ್ದಾರೆ. ಐಪಿಸಿ ಸೆಕ್ಷನ್ 505, 153 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾಧ್ಯಮಗಳಲ್ಲಿ ಹೇಳಿಕೆ ಪ್ರಸಾರವಾದ ಮೇಲೆ ಕೇಸ್ ಹಾಕಲಾಗಿದೆ. ಚಿನ್ನಪಲ್ಲಿ ಮಸೀದಿ ನಿರ್ನಾಮ ಆಗಲಿದೆ. ಬಾಬ್ರಿ ಮಸೀದಿ ಸಾಲಿಗೆ ಚಿನ್ನಪಲ್ಲಿ ಮಸೀದಿ ಸೇರಲಿದೆ ಅಂತ ಹೇಳಿದ್ದರು. ಅಲ್ಲದೇ ಸಿಎಂ ಸಿದ್ಧರಾಮಯ್ಯ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದರು. https://kannadanewsnow.com/kannada/anantkumar-hegde-pradeep-easwar/…
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಚಾಕುವನಿಂದ ಹಲ್ಲೆ ನಡೆಸಿರುವಂತ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೇ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕಂಡಕ್ಟರ್ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಿಪೋ ನಂ.40ಕ್ಕೆ ಸೇರಿದಂತೆ ಬಿಎಂಟಿಸಿ ಬಸ್ಸಿನಲ್ಲಿ ಮಹಿಳಾ ಕಂಡಕ್ಟರ್ ಮೇಲೆ ಮಹಿಳಾ ಪ್ರಯಾಣಿಕರು ಚಾಕುವಿನಿಂದ ಹಲ್ಲೆ ನಡೆಸಿರೋ ಘಟನೆ ನಡೆದಿದೆ. ಬಸ್ಸಿನಲ್ಲಿ ಟಿಕೆಟ್ ಪಡೆಯದೇ ಕುಳಿತಿದ್ದಂತವನ್ನು ಬಿಎಂಟಿಸಿ ಮಹಿಳಾ ಕಂಡಕ್ಟರ್ ಸುಕನ್ಯಾ ಪ್ರಶ್ನಿಸಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದು, ಆ ಬಳಿಕ ಮಹಿಳಾ ಬಿಎಂಟಿಸಿ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಮಹಿಳಾ ಪ್ರಯಾಣಿಕರಿಂದ ಚಾಕುವಿನಿಂದ ಹಲ್ಲೆಗೆ ಒಳಗಾದಂತ ಬಿಎಂಟಿಸಿ ಬಸ್ ಕಂಡಕ್ಟರ್ ಅನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/airtel-5g-jio/ https://kannadanewsnow.com/kannada/anantkumar-hegde-pradeep-easwar/