Subscribe to Updates
Get the latest creative news from FooBar about art, design and business.
Author: kannadanewsnow09
ಶಿರಸಿ: ಹಾವೇರಿ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಹಲವರನ್ನು ಬಂಧಿಸಿದ್ದಾರೆ. ಬಂಧಿತ 6 ಜನರಲ್ಲಿ ಇಬ್ಬರು ಬೇರೆಯವರಾಗಿದ್ದಾರೆ. ಅವರು ಅತ್ಯಾಚಾರ ಎಸಗಿಲ್ಲ. ಇನ್ನುಳಿದವರು ಪ್ರಕರಣದಲ್ಲಿ ಭಾಗಿಯಾಗಿಲ್ಲ. ಪೊಲೀಸರು ಬೇರೆಯವರನ್ನು ಅರೆಸ್ಟ್ ಮಾಡಿದ್ದಾರೆ ಎಂಬುದಾಗಿ ಅತ್ಯಾಚಾರ ಸಂತ್ರಸ್ತೆ ಹೇಳುವು ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಇಂದು ಶಿರಸಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಂತ್ರಸ್ತ ಮಹಿಳೆ, ಪೊಲೀಸರು ಬೇರೆಯವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ 6 ಆರೋಪಿಗಳಲ್ಲಿ ಇಬ್ಬರು ಬೇರೆಯವರು. ಆ ಇಬ್ಬರು ಲೈಂಗಿಕ ದೌರ್ಜನ್ಯ ಎಸಗಿಲ್ಲ. ಜೀವ ಭಯವಿದ್ದರೂ ನನ್ನ ರಕ್ಷಣೆಗೆ ಪೊಲೀಸರನ್ನು ನಿಯೋಜಿಸಿಲ್ಲ ಎಂಬುದಾಗಿ ತಿಳಿಸಿದರು. ವೀಡಿಯೋದಲ್ಲಿ ಇರೋರನ್ನ ಹಿಡಿದಿಲ್ಲ. ಬೇರೆಯವರನ್ನು ಹಿಡಿದಿದ್ದಾರೆ. ಇಬ್ಬರು ಮಾತ್ರವೇ ಸಿಕ್ಕಿದ್ದಾರೆ. ಬಾಕಿಯವರು ಸಿಕ್ಕಿಲ್ಲ. ನನಗೆ ಇಬ್ಬರ ಪೋಟೋ ತೋರಿಸಿದ್ರು. ಅವರು ಇಬ್ಬರೂ ಅಲ್ಲ. ಶಿಕ್ಷೆ ಆಗಬೇಕು ಸರ್ ಅವರಿಗೆ. ಅವರಿಗೆ ಬಿಡಬಾರದು ಎಂಬುದಾಗಿ ಹೇಳಿದರು. https://kannadanewsnow.com/kannada/pm-modi-performs-gau-seva-on-makar-sankranti-pics-go-viral/ https://kannadanewsnow.com/kannada/mallikarjun-kharge-rahul-gandhi-launch-bharat-jodo-nyay-yatra-in-manipur/
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 113 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 114 ಮಂದಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ( Covid19 Report ) ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 3208 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ 113 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದೆ. ಬೆಂಗಳೂರು ನಗರದಲ್ಲಿ 40, ಬಳ್ಳಾರಿ 03, ಬೆಳಗಾವಿ 01, ಬೆಂಗಳೂರು ಗ್ರಾಮಾಂತರ 02, ಬೀದರ್, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಚಾಮರಾಜನಗರ 04, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 05 ಜನರಿಗೆ ಕೊರೋನಾ ಸೋಂಕು ( Coronavirus Case ) ತಗುಲಿರೋದಾಗಿ ಹೇಳಿದೆ. ಗದಗ 03, ಕಲಬುರ್ಗಿ 04, ಮಂಡ್ಯ 05, ಮೈಸೂರು 12, ರಾಯಚೂರು 04, ತುಮಕೂರು 10 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ 113 ಜನರಿಗೆ…
ದಾವಣಗೆರೆ: ಪಬ್ ನಲ್ಲಿ ತಡರಾತ್ರಿ ನಿಯಮ ಮೀರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಮಾಡಿದಂತ ನಟ ದರ್ಶನ್ ಸೇರಿದಂತೆ ವಿವಿಧ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಯ ಶಾಕ್ ನೀಡಿದ್ದರು. ವಿಚಾರಣೆಗೂ ಹಾಜರಾಗಿದ್ದರು. ಇದೇ ಹೊತ್ತಲ್ಲಿ ನಟ ದರ್ಶನ್ ಅಭಿಮಾನಿಯೊಬ್ಬ ಯುವಕನೊಬ್ಬನ ಮೇಲೆ ವಿಕೃತಿ ಮೆರೆದಿರೋ ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ಗೀತಾಂಜಲಿ ಚಿತ್ರಮಂದಿರದ ಮುಂದೆ ನಟ ದರ್ಶನ್ ಅಭಿಮಾನಿಯೊಬ್ಬ ಯುವಕನೊಬ್ಬನ ಬರಿ ಕೈ ಮೇಲೆ ಕರ್ಪೂರ ಹಚ್ಚಿ, ನಟ ದರ್ಶನ್ ಬ್ಯಾನರ್ ಗೆ ಆರತಿ ಮಾಡುವಂತೆ ಸೂಚಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಬರಿ ಕೈ ಮೇಲೆ ಕರ್ಪೂರ ಹಚ್ಚಿರುವಂತ ದರ್ಶನ್ ಅಭಿಮಾನಿ, ಪೋಸ್ಟರ್ ಗೆ ಮಂಗಳಾರತಿ ಥರ ಬೆಳಗಿಸಿ ವಿಕೃತಿ ಮೆರೆದಿರೋದಾಗಿ ವೀಡಿಯೋದಿಂದ ತಿಳಿದು ಬಂದಿದೆ. ಇದಷ್ಟೇ ಅಲ್ಲದೇ ಆ ಯುವಕನನ್ನು ಬಸ್ಕಿ ಕೂಡ ಹೊಡೆಸಿದ್ದಾನೆ. ಎರಡು ಕಿವಿ ಹಿಡಿದು ಯುವಕ ಬಸ್ಕಿ ಹೊಡೆಯುತ್ತಿರೋದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರೋ…
ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಒಬ್ಬರು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಎಂಬುವರು ಇಂದಿರಾ ಅವಾಸ್ ಯೋಜನೆಯಡಿ ಮಂಜೂರಾಗಿದ್ದಂತ ಮನೆಯ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಲಂಚದ ಹಣವಾಗಿ 30 ಸಾವಿರ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೀಗ ಬಿಲ್ ಕಲೆಕ್ಟರ್ ಆನಂದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವಂತ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. https://kannadanewsnow.com/kannada/mallikarjun-kharge-rahul-gandhi-launch-bharat-jodo-nyay-yatra-in-manipur/ https://kannadanewsnow.com/kannada/old-woman-crawls-5-km-for-maasana-says-hdk-says-govt-has-no-mercy-for-giving-guarantee/
ಜೀವನದಲ್ಲಿ ಏನಾಗುತ್ತದೋ ಇಲ್ಲವೋ ಎಂಬ ಭಯದಲ್ಲಿ ಬದುಕುತ್ತಿರುವವರು ಅನೇಕರಿದ್ದಾರೆ. ಮನದಲ್ಲಿ ಭಯವಿದ್ದರೆ ಚಿಂತೆ, ಅವಾಂತರಗಳು.. ಎಂತಹ ಭಯ, ಚಿಂತೆ, ಕಷ್ಟಗಳು ಬಂದರೂ ಅವೆಲ್ಲವನ್ನೂ ಹೋಗಲಾಡಿಸುವ ಆಪದ್ಬಾಂಧವನಾಗಿ ಸಹಾಯಕ್ಕೆ ಬರುವವನು ನರಸಿಂಹ. ಮನೆಯಲ್ಲಿ ನರಸಿಂಹನನ್ನು ಪೂಜಿಸಿ ಪೂಜೆ ಮಾಡಿದರೆ ಹೇಗೆ ಫಲ ಸಿಗುತ್ತದೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನೋಟದಲ್ಲಿ ಉಗ್ರನಾದರೂ ನರಸಿಂಹ ಹೃದಯದಲ್ಲಿ…
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಅನರ್ಹ ಅಧಿಕಾರಿಯನ್ನು ನೇಮಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿವಾಳಪ್ಪ ಅವರನ್ನು, ಸೆ.27ರಂದು ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಪ್ರಭಾರದಲ್ಲಿ ನೇಮಿಸಿ ಸರ್ಕಾರವೇ ಆದೇಶ ಹೊರಡಿಸಿದೆ. ಇದು ವಿವಾದಕ್ಕೆ ಏಡೆಮಾಡಿಕೊಟ್ಟಿದೆ. 2006ರ ಡಿಸೆಂಬರ್ನಲ್ಲಿ ಇಂದಿರಾಗಾಂಧಿ ನ್ಯಾಷಿನಲ್ ಮುಕ್ತ ವಿಶ್ವವಿದ್ಯಾಲಯದಲ್ಲಿ ಇವರು, ಪಿಬಿಬಿಎಸ್ಸಿ ನರ್ಸಿಂಗ್ ಕೋರ್ಸ್ಗೆ ಪ್ರವೇಶ ಪಡೆದು 2013ರಲ್ಲಿ ಈ ಕೋರ್ಸ್ ಮುಗಿಸಿದ್ದಾರೆ. ಆದರೆ, 2013ರಲ್ಲಿ ಪಿಬಿಬಿಎಸ್ಸಿ ನರ್ಸಿಂಗ್ ಪದವಿಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ( ಆರ್ಜಿಯುಎಚ್ಎಸ್) ಅಧೀನದ ಕೆಎಲ್ಇಎಸ್ ಕಾಲೇಜಿನಲ್ಲಿ ಓದಿರುವುದಾಗಿ ಸರ್ಕಾರಕ್ಕೆ ನಕಲಿ ದಾಖಲೆ ಸಲ್ಲಿಸಿದ್ದಾರೆ. ಅಲ್ಲದೆ, ನಕಲಿ ದಾಖಲೆಯ ಆಧಾರದ ಮೇರೆಗೆ ಸರ್ಕಾರಿ ಖೋಟಾದಲ್ಲಿ ನೂರ್ ಕಾಲೇಜು ಆಫ್ ನರ್ಸಿಂಗ್ನಲ್ಲಿ ಎಂಎಸ್ಸಿ ಪದವಿ ಮುಗಿಸಿದ್ದಾರೆ. ನಂತರ, ಕರ್ನಾಟಕ ರಾಜ್ಯ ನರ್ಸಿಂಗ್ ಪರಿಷತ್ತಿನಲ್ಲಿ ದೃಢೀಕರಣ ಪತ್ರ ಪಡೆದಿದ್ದಾರೆ. ಸರ್ಕಾರಕ್ಕೆ ನಕಲಿ…
ಬೆಂಗಳೂರು: ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು. ಈ ಬಗ್ಗೆ X ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಇಂಥ ಆಸಕ್ತರನ್ನು ಸರಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ…
ಬೆಂಗಳೂರು: ಇಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಈ ಮೂಲಕ ಮೋದಿ ಕರೆಗೆ ಓಗೊಟ್ಟರು. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ‘ರಾಮಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ’ ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಕರೆ ಮೇರೆಗೆ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು ಎಂದಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ, ಶಾಸಕ ಸಿ ಕೆ ರಾಮಮೂರ್ತಿ, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. https://twitter.com/RAshokaBJP/status/1746414962610757833 https://kannadanewsnow.com/kannada/congress-trying-to-cover-up-hanagal-rape-case-r-ashoka/ https://kannadanewsnow.com/kannada/anantkumar-hegde-pradeep-easwar/
ಬೆಂಗಳೂರು: ಹಾನಗಲ್ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಹಾನಗಲ್ ಅತ್ಯಾಚಾರ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲಿನ ರಾಜಕೀಯ ನಾಯಕರು ಭೇಟಿಗೆ ಅವಕಾಶ ಮಾಡಿಕೊಡುತ್ತಿಲ್ಲ. ಪೊಲೀಸರ ಮೂಲಕ ಅವರನ್ನು ಬೇರೆ ಕಡೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನೈತಿಕ ಪೊಲೀಸ್ಗಿರಿ, ದಾದಾಗಿರಿ, ದೌರ್ಜನ್ಯ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಬೆಳಗಾವಿಯಲ್ಲಿ ಬೆತ್ತಲೆ ಮಾಡಿದ ಪ್ರಕರಣವೂ ಹೀಗೆಯೇ ಆಗಿದೆ. ಸರ್ಕಾರ ಸತ್ತುಹೋಗಿದೆ ಎಂದು ಜನರು ಅಂದುಕೊಂಡಿದ್ದಾರೆ. ಬರಗಾಲ ಹಾಗೂ ಕಾನೂನು ಸುವ್ಯವಸ್ಥೆ ಕುಸಿತದ ವಿರುದ್ಧ ಹೋರಾಟ ಮಾಡುತ್ತೇವೆ. ನಾನು ಎಲ್ಲ ಜಿಲ್ಲೆಗಳಲ್ಲಿ ಓಡಾಡಿ ರೈತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು. ರಾಜ್ಯದ ಎಲ್ಲಾ ಭಾಗಗಳಲ್ಲಿ ದೇವಾಲಯಗಳಲ್ಲಿ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಜನವರಿ 22 ರಂದು ವಿಶೇಷ ಪೂಜೆ ನಡೆಯಲಿದೆ. ಪದ್ಮನಾಭನಗರ ಶಾಸಕರ ಕಚೇರಿಯ ಬಳಿ ದೇವಸ್ಥಾನ ನಿರ್ಮಿಸುತ್ತಿದ್ದು, ಅಲ್ಲಿಯೇ ಶ್ರೀರಾಮ…
ಬೆಂಗಳೂರು: ದೇಶದಲ್ಲಿ ನ್ಯಾಯಾಂಗವನ್ನು ದಮನ ಮಾಡಿದ ಕಾಂಗ್ರೆಸ್ ನಾಯಕರು ಈಗ ನ್ಯಾಯ ಯಾತ್ರೆ ಮಾಡುತ್ತಿರುವುದು ಢೋಂಗಿತನ. ತುರ್ತು ಪರಿಸ್ಥಿತಿ ಹೇರಿಕೆಯಿಂದ ಪ್ರಜಾಪ್ರಭುತ್ವವನ್ನು ದಮನ ಮಾಡಿದ ಇವರ ಯಾತ್ರೆಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು. ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ, ಜನವರಿ 14 ರಿಂದ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದರಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ನೇತೃತ್ವದಲ್ಲಿ ಜಯನಗರ 4 ನೇ ಹಂತದ ಗಣೇಶ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಈ ವೇಳೆ ಮಾತನಾಡಿದ ಆರ್.ಅಶೋಕ, ಕಾಂಗ್ರೆಸ್ ನಾಯಕರು ದಕ್ಷಿಣ ಭಾಗದಿಂದ ಜೋಡೋ ಯಾತ್ರೆ ಶುರು ಮಾಡಿದ್ದರು. ನಂತರ ಉತ್ತರ ಭಾಗದ ಮೂರು ರಾಜ್ಯಗಳಲ್ಲಿ ಚುನಾವಣೆಯಲ್ಲಿ ಸೋತರು. ರಾಹುಲ್ ಗಾಂಧಿ ಎಲ್ಲೆಲ್ಲಿ ಪಾದಯಾತ್ರೆ ಮಾಡಿ ನೆಲವನ್ನು ಸ್ಪರ್ಶಿಸುತ್ತಾರೋ ಅಲ್ಲೆಲ್ಲ ಕಾಂಗ್ರೆಸ್ ಅವನತಿ ಕಾಣುತ್ತದೆ. ಈಗ ನ್ಯಾಯ ಯಾತ್ರೆಯನ್ನು…