Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಸಿ.ಪಿ ಯೋಗೇಶ್ವರ್, ಬಿಜೆಪಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಮಾಜವಾದಿ ಪಕ್ಷದ ನಾಯಕರಿದಂ ಬಿ-ಫಾರಂ ಪಡೆದಂತ ಪೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಬಿಜೆಪಿಯಿಂದ ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೇ ಚನ್ನಪಟ್ಟಣದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಈ ವಿಷಯದಿಂದ ಸಿಟ್ಟಾಗಿರುವಂತ ಸಿ.ಪಿ ಯೋಗೇಶ್ವರ್ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ನಾಮನಿರ್ದೇಶನಗೊಂಡಿದ್ದಂತ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೊರ ನಡೆದಿದ್ದರು. ನಿನ್ನೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಂತ ಅವರು, ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬುದಾಗಿ ಸುದ್ದಿಗಳು ವೈರಲ್ ಆಗಿತ್ತು. ಆದರೇ ಇಂದು ಸಮಾಜವಾದಿ ಪಕ್ಷದಿಂದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಮಾಜವಾದಿ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲಿನಲ್ಲಿರುವಂತ ನಟ ದರ್ಶನ್ ಗೆ ಬೆನ್ನುನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ಕರೆತಂದಿದ್ದಾರೆ. ಬಳ್ಳಾರಿಯ ಕೇಂದ್ರ ಕಾರಾಗೃಹದಿಂತ ವಾಹನದಲ್ಲಿ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ನಟ ದರ್ಶನ್ ಅವರನ್ನು ಕರೆತಂದಿದ್ದಾರೆ. ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದಲ್ಲಿ ನಟ ದರ್ಶನ್ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ನಡೆಸಲಿದ್ದಾರೆ. ಬೆನ್ನು ನೋವಿಗೆ ಕಾರಣವೇನು. ಅದಕ್ಕೆ ಚಿಕಿತ್ಸೆ ಯಾವ ರೀತಿಯಲ್ಲಿ ನೀಡಬೇಕು ಸೇರಿದಂತೆ ವಿವಿಧ ಪರೀಕ್ಷೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದ ವೈದ್ಯರು ನಡಸಲಿದ್ದಾರೆ. ಈ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ. https://kannadanewsnow.com/kannada/7-public-schools-to-be-opened-for-the-children-of-police-personnel-in-the-state-siddaramaiah/ https://kannadanewsnow.com/kannada/legal-action-will-be-taken-against-those-selling-banned-firecrackers-minister-ishwar-khandre/
ಬೆಂಗಳೂರು: ಪೊಲೀಸರ ಮಕ್ಕಳಿಗಾಗಿ ರಾಜ್ಯದ ಏಳು ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. https://twitter.com/KarnatakaVarthe/status/1848720767711908290 ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 100 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತದೆ. ಅಲ್ಲದೇ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿ 10,000 ವಸತಿ ಗೃಹ ನಿರ್ಮಾಣ ಮಾಡಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದರು. ದೇಶದಲ್ಲಿ…
ಬೆಂಗಳೂರು : ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿ ಗೆ ಟಿಕೆಟ್ ನೀಡಲು ಒತ್ತಾಯಿಸಿದರು. ಕಳೆದ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆ ಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರ ನಿಂತಿದ್ದು ಶಿಗ್ಗಾವ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಬೇಕೇ ಬೇಕು ಎಂದು ಪಟ್ಟು ಹಿಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಈ ಬಗ್ಗೆ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಬೇಡಿಕೆ ಇಟ್ಟಿತ್ತು. https://kannadanewsnow.com/kannada/legal-action-will-be-taken-against-those-selling-banned-firecrackers-minister-ishwar-khandre/ https://kannadanewsnow.com/kannada/shocking-young-man-died-tragically-after-falling-from-the-3rd-floor-to-escape-from-the-dog-video-viral/
ಬೆಂಗಳೂರು: ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹಸಿರು ಪಟಾಕಿಯನ್ನೇ ಬಳಸಿ ಎಂಬುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ದೀಪದಿಂದ ದೀಪ ಹಚ್ಚಿ ದೀಪಾವಳಿ ಹಬ್ಬವನ್ನು ಆಚರಿಸಿ. ಹೆಚ್ಚು ಶಬ್ದ ಮಾಡುವ ಹಾಗೂ ಹೊಗೆ ಹೊರಹೊಮ್ಮುವ ರಾಸಾಯನಿಕ ಪಟಾಕಿಗಳನ್ನು ಸಿಡಿಸಬೇಡಿ. ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. https://twitter.com/KarnatakaVarthe/status/1848723798008471957 https://kannadanewsnow.com/kannada/13-swr-employees-honoured-with-safety-person-of-the-month-award/ https://kannadanewsnow.com/kannada/schools-anganwadi-centres-in-bengaluru-to-remain-closed-tomorrow-dc/
ಹುಬ್ಬಳ್ಳಿ: ನೈರುತ್ಯ ರೈಲ್ವೆಯ 13 ಸಿಬ್ಬಂದಿಗಳಿಗೆ ಜನರಲ್ ಮ್ಯಾನೇಜರ್ ಅವರು ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿಯನ್ನು ನೀಡಿ, ಅವರ ಕರ್ತವ್ಯವನ್ನು ಶ್ಲಾಘಿಸಿ, ಗೌರವಿಸಿದರು. ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲ್ ಸೌಧ ಸಭಾಭವನದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ ಅವರು ಮಂಗಳವಾರ ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರೊಂದಿಗೆ ಸುರಕ್ಷತಾ ಸಭೆ ನಡೆಸಿದರು. ರೈಲ್ವೆ ಸುರಕ್ಷತೆಯನ್ನು ಖಾತ್ರಿಪಡಿಸುವ ಈ ನಿರ್ಣಾಯಕ ಚರ್ಚೆಯ ನಂತರ, ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದ, ಜಾಗರೂಕತೆ ವಹಿಸಿದ ಹಾಗೂ ಕರ್ತವ್ಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡ, ಅನುಕರಣೀಯ ಸುರಕ್ಷತಾ ಪ್ರಜ್ಞೆ ತೋರಿದ ವಲಯದ ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ವಿಭಾಗಳ ನೌಕರರಿಗೆ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ್ ಅವರು ಉದ್ಯೋಗಿಗಳಿಗೆ “ತಿಂಗಳ ಸುರಕ್ಷತಾ ವ್ಯಕ್ತಿ” ಪ್ರಶಸ್ತಿ ನೀಡಿ ಗೌರವಿಸಿದರು. ಅಪಾಯಕಾರಿ ಸಂದರ್ಭಗಳು ಗಂಭೀರ ಅಪಘಾತಗಳಾಗಿ ಬದಲಾಗುವ ಮೊದಲು ಅದನ್ನು ನಿಲ್ಲಿಸಲು ನೌಕರರು ತ್ವರಿತವಾಗಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದವರು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಆಯಾ ವಿಭಾಗವಾರು ಈ…
ಬೆಂಗಳೂರು: ನಗರದಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆರೇಂಜ್ ಅಲರ್ಟ್ ಕೂಡ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೇ ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಇಂದು ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ಆದರೇ ನಾಳೆ ಕಾಲೇಜುಗಳಿಗೆ ರಜೆ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಅಂದಹಾಗೆ ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ,…
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ಅವಾಂತರವೇ ಸೃಷ್ಠಿಯಾಗಿದೆ. ಮನೆಯಿಂದ ಹೊರ ಬರಲು ಸಾಧ್ಯವಾಗದಂತ ಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ಅಂದಹಾಗೆ ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಇದರ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದರೇ ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ…
ಶತ್ರುಗಳನ್ನು ದಮನ ಮಾಡುವ ಸಲುವಾಗಿ ಈ ಒಂದ ತಂತ್ರವು ಹೀಗಿದೆ. ಮೂರು ಸೋಮವಾರ ಅಥವಾ ಏಳು ಸೋಮವಾರದ ಈ ಪ್ರಯೋಗವನ್ನು ಮಾಡಬೇಕಾಗುತ್ತದೆ. ಏನು ಮಾಡಬೇಕೆಂದರು ಬಿಳಿ ಎಕ್ಕದ ಹೂವನ್ನು 108 ಪೋಣಿಸಿ ಹಾರ ಮಾಡಿ ಈಶ್ವರನಿಗೆ ಹಾಕಬೇಕು. ಹಾಗೂ ಶತ್ರುವಿಗೆ ನೀನೇ ನೋಡಿಕೋ, ಈ ರೀತಿಯಾಗಿ ಪರಿಪರಿಯಾಗಿ ನನ್ನನ್ನು ಕಾಡುತ್ತಿದ್ದಾನೆ. ಎಂದು ಹೇಳಿ ದೇವರ ಮುಂದೆ ನಿವೇದನೆ ಮಾಡಿಕೊಳ್ಳಿ ಹಾಗೂ ಪರಶಿವನ ಪಾದದ ಕೆಳಗೆ ಶತ್ರುವಿನ ಹೆಸರಿನಲ್ಲಿ ಎಷ್ಟು ಅಕ್ಷರವಿದೆಯೋ ಅಷ್ಟೇ ಪ್ರಮಾಣದ ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಉದಾರಣೆಗೆ ರಾಮಕೃಷ್ಣ ನಾಲ್ಕು ಅಕ್ಷರ ಅಲ್ಲಿಗೆ ನಾಲ್ಕು ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಎಂಬುದಾಗಿ ಅರ್ಥ ಈ ರೀತಿಯಾಗಿ ಮೂರು ಸೋಮವಾರ ಅಥವಾ ಏಳು ಸೋಮವಾರ ನಿರಂತರವಾಗಿ ಶತ್ರು ಧ್ವಂಸ ಆಗಲಿ ಎಂದು ಸಂಕಲ್ಪ ಮಾಡಿಕೊಂಡು ಮಾಡಿದ್ದೆ ಆದಲ್ಲಿ 100ಕ್ಕೆ 100% ಅಷ್ಟು ಆತ ಉಚ್ಚಾಟನೆಗೊಳ್ಳುವನು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ…













