Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2024 ಜೂನ್ 29: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಜನನ, ಮರಣ ಉಪ ನೋಂದಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್ಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳು ಮತ್ತು ನೋಂದಣಿಗೆ ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿದ…
ಬೆಂಗಳೂರು: 2024ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 15-07-2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಾಲಾ ಶಿಕ್ಷಣ ಕ್ಷೇತ್ರಕ್ಕೆ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ದೇಶದಾದ್ಯಂತ ಶಿಕ್ಷಕರು ನೀಡಿರುವ ಅನನ್ಯ ಸೇವೆಯನ್ನು ಸ್ಮರಿಸಿ, ಅಂತಹ ಅತ್ಯುತ್ತಮ ಶಿಕ್ಷಕರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವತಿಯಿಂದ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರತಿ ವರ್ಷ ಪ್ರದಾನ ಮಾಡಲಾಗುತ್ತಿದೆ. ಅದರಂತೆ, 2024 ನೇ ಸಾಲಿನ “ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರು / ಉಪನ್ಯಾಸಕರು / ಮುಖ್ಯ ಶಿಕ್ಷಕರು / ಪ್ರಾಂಶುಪಾಲರು ಆನ್ ಲೈನ್ ಪೋರ್ಟಲ್ (https://nationalawardstoteachers.education.gov.in) ಮೂಲಕ ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ ವ್ಯಾಪ್ತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಉಲ್ಲೇಖಿತ ಪತ್ರ & ಅದರೊಂದಿಗಿನ ಪೂರಕ ದಾಖಲೆಗಳ…
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಹೆಗ್ಗನಹಳ್ಳಿ ಕ್ರಾಸ್ ನಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿನ ಬಸ್ಸುಗಳಿಗೆ ಬೆಂಕಿ ತಗುಲಿದ ಪರಿಣಾಮ ಐದು ಬಸ್ಸುಗಳು ಬೆಂಕಿಗೆ ಆಹುತಿಯಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ಖಾಸಗಿ ನರ್ಸಿಂಗ್ ಹೋಂ ಕಾಲೇಜು ಬಳಿ ನಿಲ್ಲಿಸಿದ್ದ ಐದು ಬಸ್ ಗಳಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಮಧ್ಯಾಹ್ನ 2:40 ರ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿದವು. ಕಾಲೇಜಿಗೆ ಸೇರಿದ ಜಾಗದಲ್ಲಿ ನಿಲ್ಲಿಸಿದ್ದ ಬಸ್ ಗಳು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿವೆ ಎಂದು ವರದಿಯಾಗಿದೆ. ಬೆಂಕಿಯು ನಿಂತಿದ್ದ ಬಸ್ಸಿನಿಂದ ಪಕ್ಕದ ವಾಹನಗಳಿಗೆ ವೇಗವಾಗಿ ಹರಡಿತು, ಕಾಲೇಜು ಅಧಿಕಾರಿಗಳು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತವಾಗಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಹಾನಿ ಸಂಭವಿಸುವ ಮೊದಲು ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದರು. ರಾಜಗೋಪಾಲ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು…
ಬೆಂಗಳೂರು: ಎಸ್ಐಟಿ ವಶದಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ನಾಲ್ಕನೇ ಪ್ರಕರಣದಲ್ಲಿ ತಮ್ಮ ವಶಕ್ಕೆ ಪಡೆದಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ಹಾಜರು ಪಡಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜುಲೈ.8ರವಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವಂತೆ ಅವರ ಪರ ವಕೀಲ ಅರುಣ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆ ಮನವಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸುವಂತೆ ಕೋರ್ಟ್ ಸೂಚಿಸಿತು. ಅಲ್ಲದೇ ಈ ಪ್ರಕರಣವನ್ನು ಸೋಮವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತೇನೆ. ಜೈಲು ಅಧಿಕಾರಿಗಳು ಮನವಿ ಸ್ವೀಕರಿಸದೇ ಇದ್ದರೇ ತಿಳಿಸುವಂತೆ ಹೇಳಿದೆ. https://kannadanewsnow.com/kannada/sda-accepts-bribe-through-phonepe-in-education-ministers-constituency/
ಪ್ರತಿಯೊಂದು ಶುಭ ಸಂದರ್ಭದಲ್ಲೂ ಪಂಚದೇವರನ್ನು ಪ್ರಾರ್ಥಿಸುವುದು ಕಡ್ಡಾಯವಾಗಿರಬೇಕು. ಸೂರ್ಯ, ಗಣೇಶ, ದುರ್ಗಾ, ಶಿವ ಮತ್ತು ವಿಷ್ಣು ದೇವರು ಸೇರಿ ಪಂಚದೇವರು ಎಂದು ಕರೆಯಲಾಗುತ್ತದೆ. ದೈನಂದಿನ ಪ್ರಾರ್ಥನೆಯಲ್ಲಿ ಅವುಗಳನ್ನು ಸೇರಿಸುವುದರಿಂದ ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಲು ಸಹ ನಿಮಗೆ ಸಹಾಯ ಮಾಡುತ್ತದೆ. ಅಲ್ಲದೆ, ನೀವು ಈ ನಿಯಮವನ್ನು ಸರಿಯಾಗಿ ಪಾಲಿಸಿದರೆ ಸಂಪತ್ತು, ಆರೋಗ್ಯ ಮತ್ತು ಸಂತೋಷ ಯಾವಾಗಲೂ ನಿಮ್ಮ ಸುತ್ತಲೂ ಇರುತ್ತದೆ. ಗಣೇಶ, ಶಿವ ಮತ್ತು ಭೈರವ ದೇವರಿಗೆ ತುಳಸಿ ಪತ್ರೆಯನ್ನು ಅರ್ಪಿಸಬಾರದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…
ನವದೆಹಲಿ: ಲೇಹ್ನ ದೌಲತ್ ಬೇಗ್ ಓಲ್ಡಿ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಶನಿವಾರ ಮುಂಜಾನೆ ನದಿ ದಾಟುವ ಅಭ್ಯಾಸದ ಸಮಯದಲ್ಲಿ ಟ್ಯಾಂಕ್ ಅಪಘಾತಕ್ಕೀಡಾದ ಪರಿಣಾಮ ಭಾರತೀಯ ಸೇನೆಯ ಐವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಕೂಡ ಸೇರಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸೈನಿಕರು ವಾಡಿಕೆಯ ವ್ಯಾಯಾಮದಲ್ಲಿದ್ದರು. ಲೇಹ್ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್ಹ್ ಬಳಿ ಬೋಧಿ ನದಿಯನ್ನು ತಮ್ಮ ಟಿ -72 ಟ್ಯಾಂಕ್ನಲ್ಲಿ ದಾಟುವಾಗ, ನೀರಿನ ಮಟ್ಟವು ಇದ್ದಕ್ಕಿದ್ದಂತೆ ಏರಲು ಪ್ರಾರಂಭಿಸಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ. https://twitter.com/firefurycorps/status/1806948446739280068 ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಉಕ್ಕಿ ಹರಿದ ಪರಿಣಾಮ, ಟ್ಯಾಂಕರ್ ಹಾಗೂ ಸೈನಿಕರು ನೀರಿನಲ್ಲಿ ಮುಳುಗಿ ಹುತಾತ್ಮರಾಗಿದ್ದಾರೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಎಲ್ಲಾ ಐದು ಶವಗಳನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹುತಾತ್ಮರಾದಂತ…
ಬೆಂಗಳೂರು: KMFನಿಂದ ಎರಡು ದಿನಗಳ ಹಿಂದೆ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲಾಗಿತ್ತು. ರೂ.2 ಏರಿಕೆ ಮಾಡಿದ್ದರಿಂದ ವಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿ, ದರ ಇಳಿಕೆಗೂ ಒತ್ತಾಯಿಸಲಾಗಿತ್ತು. ಇದರ ನಡುವೆ ಕೆಲವು ವರ್ತಕರು ನಂದಿನಿ ಹಾಲಿನ ದರವನ್ನು ಎಂಆರ್ ಪಿಗಿಂತ ಹೆಚ್ಚಿಗೆ ಮಾರಾಟ ಮಾಡುತ್ತಿರೋದು ತಿಳಿದು ಬಂದಿದೆ. ಇಂತವರಿಗೆ ನಂದಿನಿ ಹಾಲನ್ನು ಎಂಆರ್ ಪಿ ದರಕ್ಕಿಂತ ಹೆಚ್ಚು ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದುಗೊಳಿಸೋದಾಗಿ ಕೆಎಂಎಫ್ ಎಚ್ಚರಿಕೆ ನೀಡಿದೆ. ನಂದಿನಿ ಹಾಲಿನ ಪ್ಯಾಕೇಟ್ 500 ಎಂಎಲ್ ನಿಂದ 550 ಎಂಎಲ್ ಹೆಚ್ಚಳ ಮಾಡಿ ಕೆಎಂಎಫ್ ದರವನ್ನೂ ರೂ.2 ಏರಿಕೆ ಮಾಡಲಾಗಿತ್ತು. ಒಂದು ಲೀಟರ್ ಹಾಲನ್ನು 1050 ಎಂಎಲ್ ಗೆ ಹೆಚ್ಚಳ ಮಾಡಿ ರೂ.2 ಏರಿಕೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ 500 ಎಂಎಲ್ ಇದ್ದಂತ ನಂದಿನಿ ಹಾಲಿನ ದರ 550 ಆದ ಬಳಿಕ ರೂ.22ರಿಂದ 24ಕ್ಕೆ ಏರಿಕೆಯಾಗಿತ್ತು. ಇನ್ನೂ ನಂದಿನಿ 1 ಲೀಟರ್ ಹಾಲು 1050 ಎಂಎಲ್ ಗೆ ಏರಿಕೆಯಾಗಿ ರೂ.46 ಇದ್ದದ್ದೂ ರೂ.48ಕ್ಕೆ…
ಬೆಂಗಳೂರು: ಸಿಎಂ ಬದಲಾವಣೆ, ಮೂವರು ಡಿಸಿಎಂ ಸೃಷ್ಠಿಯ ವಿವಾದ ರಾಜ್ಯದಲ್ಲಿ ತಾರಕಕ್ಕೇರಿದೆ. ಈ ವಿಚಾರವನ್ನು ಮಾತನಾಡದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದರು. ಆದ್ರೇ ಸಚಿವ ಕೆ.ಎನ್ ರಾಜಣ್ಣ ಮಾತ್ರ ಡಿಕೆಶಿ ವಾರ್ನಿಂಗ್ ನಾನು ಕೇಳ್ತೀನಾ? ನೋಟಿಸ್ ಕೊಡಲಿ ಆಮೇಲೆ ಮಾತಾಡ್ತೀನಿ ಅಂತ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಡಿದಂತ ಅವರು, ಡಿಕೆ ಶಿವಕುಮಾರ್ ನೋಡಿಸ್ ಕೊಟ್ಟ ಮೇಲೆ ನಾನು ಮಾತಾಡುತ್ತೇನೆ. ಸಲಹೆ ನೀಡುವಾಗ ಸಾರ್ವಜನಿಕವಾಗಿ ವಿವಾದ ಆಗಬಾರದು ಎಂದರು. ನಾನು ವಿವಾದ ಆಗಬಾರದು ಎನ್ನುವ ಮಾತನ್ನು ಒಪ್ಪುತ್ತೇನೆ. ನಾನು ಡಿಸಿಎಂ ಬಗ್ಗೆ ತಪ್ಪಾಗಿ ಏನು ಹೇಳಿಲ್ಲ. ನಾವು ಕೇಳಬಾರದಾ ಅಂತ ಪ್ರಶ್ನಿಸಿದಂತ ಅವರು, ನಾವು ಕೇಳಿದ್ದೇ ತಪ್ಪಾಗುತ್ತದೆಯೇ? ಕೇಳಿದ್ದೇ ತಪ್ಪು ಅಂದ್ರೆ ಯಾವುದೇ ಕ್ರಮ ತೆಗೆದುಕೊಂಡರು ಎದುರಿಸೋದಕ್ಕೆ ನಾನು ತಯಾರಿದ್ದೇನೆ ಅಂತ ಹೇಳಿದರು. ನಾನು ಡಿಕೆಶಿ ವಾರ್ನಿಂಗ್ ಕೇಳ್ತೀನಾ? ನಾನು ನಾನೇ,. ರಾಜಣ್ಣ, ರಾಜಣ್ಣನೇ. ಅಧಿಕಾರಕ್ಕೆ ನಾನು ಅಂಟಿಕೊಂಡಿಲ್ಲ. ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್…
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದರು. ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದರು. ಒಂದು ಕುಟುಂಬಕ್ಕೆ…
ನವದೆಹಲಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪತ್ರಕರ್ತನನ್ನು ಬಂಧಿಸಿದೆ. ಶಂಕಿತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದೆ. ಅವರು ‘ಪ್ರಭಾತ್ ಖಬರ್’ ಎಂಬ ಹಿಂದಿ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಂಧಿಸಲ್ಪಟ್ಟ ಹಜಾರಿ ಬಾಗ್ನ ಒಯಾಸಿಸ್ ಶಾಲೆಯ ಇಬ್ಬರು ಆರೋಪಿಗಳ ಸಹಚರ ಎಂದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ನಿನ್ನೆಯಷ್ಟೇ ಜಾರ್ಖಂಡ್ ನ ಹಜಾರಿಬಾಗ್ನ ಒಯಾಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಶುಕ್ರವಾರ ಬಂಧಿಸಿತ್ತು. ಆರೋಪಿ ಪ್ರಾಂಶುಪಾಲ ಡಾ.ಎಹ್ಸಾನುಲ್ ಹಕ್ ಹಜಾರಿಬಾಗ್ನಲ್ಲಿ ನೀಟ್ ಪರೀಕ್ಷೆಯ ಜಿಲ್ಲಾ ಸಂಯೋಜಕರಾಗಿದ್ದರು ಮತ್ತು ಅವರ ಡೆಪ್ಯೂಟಿ ಇಮ್ತಿಯಾಜ್ ಆಲಂ ಎನ್ಟಿಎ ವೀಕ್ಷಕರಾಗಿರುವುದರ ಜೊತೆಗೆ ಒಯಾಸಿಸ್ ಶಾಲೆಯಲ್ಲಿ ಕೇಂದ್ರದ ಅಧೀಕ್ಷಕರಾಗಿದ್ದರು. https://kannadanewsnow.com/kannada/sda-accepts-bribe-through-phonepe-in-education-ministers-constituency/ https://kannadanewsnow.com/kannada/india-us-balanced-tax-treaty-extended-till-june-30/












