Author: kannadanewsnow09

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಕನೀಜ್ ಫಾತೀಮಾ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸೌಧದ ಕಚೇರಿಯಲ್ಲಿ ಸಚಿವರು ನಡೆಸಿದ ಸಭೆಯಲ್ಲಿ ಜವಳಿ ಪಾರ್ಕ್‌ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧದಲ್ಲಿ ಚರ್ಚಿಸಲಾಯಿತು. ಪಾರ್ಕ್‌ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದ್ದು, ಮದಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪಾರ್ಕ್‌ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯಲು…

Read More

ಬೆಂಗಳೂರು: ಭಾರತದ ನಗರಗಳನ್ನು ವಾಸಯೋಗ್ಯ ಮಾಡದೇ ಹೋದರೆ ಜನರು ಗ್ರಾಮೀಣ ಪ್ರದೇಶಗಳಿಗೆ ಮರಳುತ್ತಾರೆ ಹಾಗೂ ಅಲ್ಲಿನ ಭೂಮಿಯನ್ನು ಕಸಿದು ಹಳ್ಳಿಗಳನ್ನು ನಗರಗಳಾಗಿ ಪರಿವರ್ತಿಸುತ್ತಾರೆ ಎಂದು ಲೇಖಕಿ ಮತ್ತು ಸರೋವರ ಕಾರ್ಯಕರ್ತೆ ಉಷಾ ರಾಜಗೋಪಾಲನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್ 27ರಿಂದ 29ರವರೆಗೆ ಹೊಸದಿಲ್ಲಿಯ ಡಾ.ಅಂಬೇಡ್ಕರ್ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ (ಡಿಎಐಸಿ) ನಡೆದ ಕಾಮನ್ಸ್ ಕನ್ವೀನಿಂಗ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಮನ್ಸ್ (ಮುಕ್ತ ಭೂವಲಯ) ಎಂಬ ಪದವನ್ನು ಸಾಮಾನ್ಯವಾಗಿ ಗ್ರಾಮೀಣ ಪ್ರದೇಶದ ಜನಜೀವನಕ್ಕೆ ಸಂಬಂಧಿಸಿದಂತೆ ಅರ್ಥೈಸಲಾಗುತ್ತದೆ. ಆದರೆ ಅದು ಅರಣ್ಯ ಮತ್ತು ಗ್ರಾಮೀಣ ಪ್ರದೇಶದ ನೈಸರ್ಗಿಕ ಸಂಪನ್ಮೂಲಗಳಿಗೆ ಸೀಮಿತವಾಗಿಲ್ಲ. ನಗರ ಪ್ರದೇಶಕ್ಕೂ ಅದು ಅನ್ವಯವಾಗುತ್ತದೆ. ಹೀಗಾಗಿ ನಗರ ಪ್ರದೇಶವನ್ನೂ ಜನರ ವಾಸಕ್ಕೆ ಯೋಗ್ಯವಾಗಿ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಜನರು ತಮ್ಮ ಮೂಲಕ್ಕೆ ಮರಳಿ ಅಲ್ಲಿನ ನೈಸರ್ಗಿಕ ಸಂಪತ್ತುಗಳನ್ನು ಕಬಳಿಸಲಿದ್ದಾರೆ ಎಂದು ಹೇಳಿದರು. ‘ಚೇಂಜ್ ಮೇಕರ್ಸ್ ಫಾರ್ ಕಾಮನ್ಸ್: ಸೆಲೆಬ್ರೇಟಿಂಗ್ ಅಂಡ್ ಲರ್ನಿಂಗ್ ಫ್ರಮ್ ದಿ ಕಾಮನ್ಸ್ ಕನ್ವೀನಿಂಗ್’ ಎಂಬ ಶೀರ್ಷಿಕೆಯಡಿ ನಡೆದ ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ,…

Read More

ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯುವುದಾಗಿ ತಿಳಿಸಿದ್ದಾರೆ. https://twitter.com/KarnatakaVarthe/status/1830906396788822484 https://kannadanewsnow.com/kannada/shivamogga-power-supply-will-be-disrupted-in-these-areas-of-nadadu-district-tomorrow-adds/ https://kannadanewsnow.com/kannada/big-news-what-media-actor-darshan-who-is-accused-of-murder-wants-a-tv-in-jail/

Read More

ಶಿವಮೊಗ್ಗ: ಸೆಪ್ಟೆಂಬರ್.4ರ ನಾಳೆ, ಸೆಪ್ಟೆಂಬರ್.5ರ ನಾಡಿದ್ದು ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ತುರ್ತು ವಿದ್ಯುತ್ ನಿರ್ವಹಮಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ದಿನಾಂಕ 04-09-2024 ಮತ್ತು 05-09-2024ರಂದು ಜಿಲ್ಲೆಯ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ. ಸೆ. 04: ವಿದ್ಯುತ್ ವ್ಯತ್ಯಯ ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯಲ್ಲಿನ ಫೀಡರ್-3ರ 11 ಕೆ.ವಿ. ಮಾರ್ಗಕ್ಕೆ ತಗುಲುವ ಮರಗಳ ಕಡಿತಲೆ ಕಾಮಗಾರಿ ಇರುವುದರಿಂದ ಸೆ. 04 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಚಿಕ್ಕಲ್, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ ನಗರ, ಸುಬ್ಬಯ್ಯ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ. ಸೆ. 05: ವಿದ್ಯುತ್ ವ್ಯತ್ಯಯ ಶಿವಮೊಗ್ಗದ ಎಂ.ಆರ್.ಎಸ್. 220 ಕೆವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೇಂದ್ರದ ಮಾರ್ಗಗಳಲ್ಲಿ ಸೆ.…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ ಮಾಡಲಿದೆ. ಅಲ್ಲದೇ ಕೃಷ್ಣರಾಜಪುರಂನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಮಯ ಪರಿಷ್ಕರಣೆ ಮಾಡಲಾಗಿದೆ.  ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಮೆಯಲ್ಲಿ ಮಾಹಿತಿ ಹಂಚಿಕೊಂಡಿದೆ. I. ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಭುವನೇಶ್ವರ-ಬೆಳಗಾವಿ ನಿಲ್ದಾಣಗಳ ನಡುವೆ ಸಾಪ್ತಾಹಿಕ ವಿಶೇಷ (ರೈಲು ಸಂಖ್ಯೆ 02813/02814) ರೈಲುಗಳನ್ನು ಓಡಿಸಲಾಗುತ್ತಿದೆ ಎಂದು ಪೂರ್ವ ಕರಾವಳಿ ರೈಲ್ವೆ ಸೂಚಿಸಿದೆ. ರೈಲು ಸಂಖ್ಯೆ 02813: ಈ ರೈಲು ಸೆಪ್ಟೆಂಬರ್ 7, 14, 21 ಮತ್ತು 28, 2024 ರಂದು ಪ್ರತಿ ಶನಿವಾರ ಭುವನೇಶ್ವರದಿಂದ ಸಾಯಂಕಾಲ 07:15 ಗಂಟೆಗೆ ಹೊರಟು, ಸೋಮವಾರ ಬೆಳಗಿನ ಜಾವ 03:00 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಆಗಮಿಸಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 02814: ಈ ರೈಲು ಸೆಪ್ಟೆಂಬರ್ 9, 16, 23 ಮತ್ತು 30, 2024 ರಂದು…

Read More

ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ. ಹಾವೇರಿ ಯಲ್ಲಿ ಹಾವೇರಿ -ಗದಗ ಜಿಲ್ಲೆಗಳ ವಖ್ಫ್ ಅದಾಲತ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಖ್ಫ್ ಬೋರ್ಡ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಯಿಂದ ಮಸೀದಿ ಅಭಿವೃದ್ಧಿ, ಕಬಾರಸ್ಥಾನ ನಿರ್ವಹಣೆ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಅನುದಾನದ ಹಣ ದುರ್ಬಳಕೆ ಆಗುತ್ತಿರುವ ದೂರುಗಳು ಬಂದಿವೆ. ಅದೇ ರೀತಿ ಅನುದಾನ ಕೊಡಿಸಿದ್ದೇವೆ ಎಂದು ಲಂಚ ಪಡೆಯುತ್ತಿರುವ ಬಗ್ಗೆಯೂ ಮಾಹಿತಿ ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು. ಯಾರಾದರೂ ಲಂಚ ಕೇಳಿದರೆ ಮೊದಲು ಪೊಲೀಸ್ ಠಾಣೆಗೆ ದೂರು ನೀಡಿ ನನ್ನ ಗಮನಕ್ಕೆ ತನ್ನಿ. ಅವರನ್ನು ಜೈಲಿಗೆ ಹಾಕಿಸುವ ಕೆಲಸ ನಾನೇ ಮಾಡುತ್ತೇನೆ. ಯಾರೇ ಆಗಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಖ್ಫ್ ಆಸ್ತಿ…

Read More

ಧಾರವಾಡ : ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಯ ವಖ್ಫ್ ಆಸ್ತಿಗಳಿಗೆ ಒಂದು ತಿಂಗಳಲ್ಲಿ ಖಾತೆ ಮಾಡಿಕೊಡಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಗಳ ಸಭಾಂಗಣ ದಲ್ಲಿ ಅಧಿಕಾರಿ ಗಳ ಸಭೆ ನಡೆಸಿದ ಅವರು, ವಖ್ಫ್ ಆಸ್ತಿ ಗಳ ವಿಚಾರದಲ್ಲಿ ಅಧಿಕಾರಿಗಳು ಗಂಭೀರ ವಾಗಿ ಪರಿಗಣಿಸಬೇಕು. ಒತ್ತುವರಿ ತಡೆದು ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಹುಬ್ಬಳ್ಳಿ -ಧಾರವಾಡ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಕಿ ಇದ್ದ 190 ಆಸ್ತಿಗಳ ಪೈಕಿ 100 ಆಸ್ತಿಗಳ ಖಾತೆ ಗಳನ್ನು ಇದೇ ಸಂದರ್ಭದಲ್ಲಿ ಹಸ್ತಾಂತರ ಮಾಡಲಾಯಿತು. ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ವಖ್ಫ್ ಆಸ್ತಿಗಳ ವಿಚಾರದಲ್ಲಿ ಅರಣ್ಯ ಇಲಾಖೆ ತಗಾದೆ ಇರುವ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ, ಹದಿನೈದು ದಿನಗಳಲ್ಲಿ ಅರಣ್ಯ ಸಚಿವರ ಜತೆ ಈ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಖ್ಫ್ ಅಧಿಕಾರಿಗಳು ಸಹ ಆಸ್ತಿಗಳಿಗೆ ಖಾತೆ…

Read More

ಬೆಂಗಳೂರು: ರಾಜ್ಯಪಾಲರ ವಿರುದ್ಧ ವಿವಿಧ ಪ್ರಗತಿಪರ ಮುಖಂಡರು ಸಿಡಿದೆದ್ದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಅವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ. ಇದಲ್ಲರೇ ರಾಜ್ಯಪಾಲರ ನಡೆದೆ ಘೇರಾವ್ ಆಂದೋಲನಕ್ಕೂ ಕರೆ ನೀಡಿರುವುದಾಗಿ ಪ್ರಗತಿಪರ ಚಿಂತಕರು, ಮುಖಂಡರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಪ್ರಗತಿಪರ ಚಿತಂಕರರು, ಕರ್ನಾಟಕದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲಟ್ ಅವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಜಾತಿವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್‌ ಪಕ್ಷಗಳ ಕಛೇರಿಯನ್ನಾಗಿ ರಾಜಭವನವನ್ನು ಪರಿವರ್ತಿಸಿಕೊಂಡಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತಾಗಿದೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ-ಷಡ್ಯಂತ್ರಗಳ ಭಾಗವಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ…

Read More

ಕೋಲ್ಕತಾ: ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ಮೂವರನ್ನು ಕೋಲ್ಕತಾ ನ್ಯಾಯಾಲಯ ಮಂಗಳವಾರ ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ. ಸಂದೀಪ್ ಘೋಷ್ ಮತ್ತು ಇತರ ಮೂವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಸಿಬಿಐ ಕೋರಿತ್ತು, ಭ್ರಷ್ಟಾಚಾರ ಪ್ರಕರಣದಲ್ಲಿ ದೊಡ್ಡ ನಂಟು ಒಳಗೊಂಡಿದೆ, ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕಾಗಿದೆ ಎಂದು ವಾದಿಸಿತ್ತು. “ನಾವು ಈಗಷ್ಟೇ ನಾಲ್ವರನ್ನು ಬಂಧಿಸಿದ್ದೇವೆ. ಬಹಿರಂಗಪಡಿಸಬೇಕಾದ ದೊಡ್ಡ ಸಂಬಂಧವಿದೆ, ಆದ್ದರಿಂದ ನಾವು ಅವರ ವಿಚಾರಣೆಯನ್ನು ಕೇಳುತ್ತಿದ್ದೇವೆ. ಸಂಪೂರ್ಣ ಸಂಬಂಧವನ್ನು ಬಹಿರಂಗಪಡಿಸಲು ನಮಗೆ ಅವರ ಕಸ್ಟಡಿ ಬೇಕು” ಎಂದು ಸಿಬಿಐ ಅಲಿಪೋರ್ ನ್ಯಾಯಾಧೀಶರ ನ್ಯಾಯಾಲಯಕ್ಕೆ ತಿಳಿಸಿದೆ. ಕಳೆದ ತಿಂಗಳು 31 ವರ್ಷದ ತರಬೇತಿ ವೈದ್ಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಘೋಷ್, ಅವರ ಭದ್ರತಾ ಸಿಬ್ಬಂದಿ ಮತ್ತು ಆಸ್ಪತ್ರೆಗೆ ಸಾಮಗ್ರಿಗಳನ್ನು ಸರಬರಾಜು ಮಾಡುತ್ತಿದ್ದ ಇಬ್ಬರು…

Read More