Author: kannadanewsnow09

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರ ಕೊಡೋದಕ್ಕೆ ಶುರು ಮಾಡಿದರು. ಆಗ ವಿಪಕ್ಷಗಳಿಂದ ಗಲಾಟೆ ಶುರು ಮಾಡಲಾಯಿತು. ವಿಪಕ್ಷಗಳ ವಿರುದ್ಧ ಸಿಟ್ಟಾದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಗೂಂಡಾಗಳು ಎಂಬುದಾಗಿ ಹೇಳಿದರು. ಇದಕ್ಕೆ ಕೆಂಡಾಮಂಡಲರಾದಂತ ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿ ಪ್ರತಿಭಟನೆ ನಡೆಸಿದರು. ವಿಧಾನಪರಿಷತ್ತಿನಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಸಿದ್ಧರಾಮಯ್ಯ ಉತ್ತರದ ವೇಳೆಯಲ್ಲಿ ಗದ್ದಲ ಕೋಲಾಹಲವೇ ನಡೆದಿದೆ. ಸಿಎಂ ಸಿದ್ಧರಾಮಯ್ಯ ಗೂಂಡಾಗಳು ಹೇಳಿಕೆ ವಿರುದ್ಧ ಸಿಡೆದ್ದಂತ ವಿಪಕ್ಷಗಳು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆಗೂ ಸಾಕ್ಷಿಯಾಯಿತು. ಸಿಎಂ ಸಿದ್ಧರಾಮಯ್ಯ ಅವರ ಗೂಂಡಾಗಳು ಹೇಳಿಕೆ ಖಂಡನೀಯ ಎಂಬುದಾಗಿ ಹೇಳಿದಂತ ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು, ಪರಿಷತ್ ಕಲಾಪದಿಂದ ಸಭಾತ್ಯಾಗ ಮಾಡಿದರು. ವಿಧಾನಪರಿಷತ್ತಿನಲ್ಲಿ ನಡೆದಿದ್ದೇನು.? ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಸಿದ್ಧರಾಮಯ್ಯ ಉತ್ತರಿಸೋ ವೇಳೆಯಲ್ಲಿ ವಿಪಕ್ಷಗಳ ಸದಸ್ಯರಿಂದ ಗದ್ದಲ ಉಂಟು ಮಾಡಲಾಯಿತು. ಇದಕ್ಕೆ ಸಿಟ್ಟಾದಂತ ಸಿಎಂ ಸಿದ್ಧರಾಮಯಯ್ ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದವರದ್ದೇನು…

Read More

ಇಸ್ಲಮಾಬಾದ್: ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಪ್ರಧಾನ ಕಾರ್ಯದರ್ಶಿ ಒಮರ್ ಅಯೂಬ್ ಅವರನ್ನು ತನ್ನ ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಪಿಟಿಐ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಅತಿದೊಡ್ಡ ಬಣವನ್ನು ರೂಪಿಸಿದ್ದಾರೆ. ಆದಾಗ್ಯೂ, ಸ್ವತಂತ್ರರು 101 ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳನ್ನು ಗೆದ್ದರೂ, ಮಾನ್ಯತೆ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದಿಂದ ಮಾತ್ರ ಸರ್ಕಾರವನ್ನು ರಚಿಸಬಹುದು, ಆದ್ದರಿಂದ ಅವರು ಪರಿಣಾಮಕಾರಿ ಬಣವಾಗಲು ಮತ್ತೊಂದು ಗುಂಪಿಗೆ ಸೇರಬೇಕಾಗುತ್ತದೆ. ನವಾಜ್ ಷರೀಫ್ ಅವರ ಪಿಎಂಎಲ್-ಎನ್ ಮತ್ತು ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಸಮ್ಮಿಶ್ರ ಸರ್ಕಾರ ರಚಿಸುವ ಪ್ರಯತ್ನಗಳ ಮಧ್ಯೆ ಈ ಪ್ರಕಟಣೆ ಬಂದಿದೆ. ಒಮರ್ ಅಯೂಬ್ ಯಾರು? ಜನವರಿ 26, 1970 ರಂದು ಜನಿಸಿದ ಒಮರ್ ಅಯೂಬ್ ಪ್ರಸಿದ್ಧ ಅಯೂಬ್ ಖಾನ್ ಕುಟುಂಬಕ್ಕೆ ಸೇರಿದವರು, ಅವರ ಅಜ್ಜ ಜನರಲ್ ಮುಹಮ್ಮದ್ ಅಯೂಬ್ ಖಾನ್, ಪಾಕಿಸ್ತಾನದ ಎರಡನೇ ಅಧ್ಯಕ್ಷರಾಗಿದ್ದರು. ಅವರ ತಂದೆ,…

Read More

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾನೂನಿನಲ್ಲಿರುವ ಎಲ್ಲ ಅಧಿಕಾರ ಹಾಗೂ ಹಣಕಾಸನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಕುರಿತಂತೆ ನಿಯಮ 330 ರಡಿ ವಿಧಾನ‌ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಮಂಡಿಸಿದ ಸೂಚನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಸ್ಥಳೀಯ ಸಂಸ್ಥೆಗಳನ್ನು ಸ್ವಯಂ ಆಡಳಿತ ಸಂಸ್ಥೆಗಳನ್ನಾಗಿ ರೂಪಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ . ಗ್ರಾಮಾಂತರ ಪ್ರದೇಶದ ಜನರ ಜೀವನಮಟ್ಟ ಸುಧಾರಿಸಲು ಹಾಗೂ ಮೂಲ ಸೌಕರ್ಯ ಒದಗಿಸಲು ಆಯಾ ಗ್ರಾಮ ಪಂಚಾಯತಿಗಳಿಗೆ ಅಧಿಕಾರ ನೀಡಲಾಗಿದೆ ಎಂದರು. ಉದ್ಯೋಗ ಖಾತ್ರಿ ಯೋಜನೆ, 15 ನೇ ಹಣಕಾಸು ಯೋಜನೆ, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಾಪುಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಸುಮಾರು 72 ಸೇವೆಗಳನ್ನು ನೀಡಲಾಗುತ್ತಿದೆ ಎಂದರು. ರಾಜ್ಯದಲ್ಲಿ ಗಾಮ ಪಂಚಾಯತಿ ಗಳ ಕಾರ್ಯನಿರ್ವಹಣೆ ಯನ್ನು ಪ್ರೋತ್ಸಾಹಿಸುವ ಸಲುವಾಗಿ ಉತ್ತಮ ಸಾಧನೆ…

Read More

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಇಂದು ಇಲ್ಲಿ ನಾಮಪತ್ರ ಸಲ್ಲಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಜೆಡಿಎಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್, ಇಬ್ಬರೂ ಅಭ್ಯರ್ಥಿಗಳು ಉಪಸ್ಥಿತರಿದ್ದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ವಿಜಯೇಂದ್ರ ಅವರು, ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರ ಅತ್ಯುತ್ತಮ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕರ್ನಾಟಕ ರಾಜ್ಯದಲ್ಲೂ ಬಿಜೆಪಿ ಸರಕಾರವು ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತ ಬಂದಿದೆ. ಹಿಂದೆ ಬಿಜೆಪಿ ಸರಕಾರವು ರಾಜ್ಯ ಬಜೆಟ್‍ನಲ್ಲಿ ಕೃಷಿ ಕ್ಷೇತ್ರಕ್ಕೆ 7500 ಕೋಟಿ ರೂಪಾಯಿಯನ್ನು ಮೀಸಲಿಟ್ಟಿತ್ತು. ಸಿದ್ದರಾಮಯ್ಯನವರ ಸರಕಾರವು 4,500 ಕೋಟಿ ಮೀಸಲಿಟ್ಟು, ಕೃಷಿ ಕ್ಷೇತ್ರಕ್ಕೂ…

Read More

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬವನ್ನು ಮಾತ್ರವೇ ಆಚರಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರವೇ ಆಚರಿಸುವಂತೆ ತಿಳಿಸಲಾಗಿದೆ. ಈ ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ಹೊರಡಿಸಿದೆ. ಆ ಸುತ್ತೋಲೆಯಲ್ಲಿ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ಆಚರಿಸಬೇಕು. ಧಾರ್ಮಿಕ ಹಬ್ಬ ಆಚರಿಸದಂತೆ ಸೂಚಿಸಲಾಗಿದೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಿದ್ರೇ ಪ್ರಾಂಶುಪಾಲರು, ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ. ಅಂದಹಾಗೇ ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾಂತಿ, ಯುಗಾದಿ, ರಂಜಾನ್ ಸೇರಿದಂತೆ…

Read More

ಅವರು ಪ್ರತಿ ತಿಂಗಳು ವಾಕ್ಸರಿಪರದಂದು ಬರುವ ಷಷ್ಠಿಯ ದಿನ ದೊಡ್ಡ ಷಷ್ಠಿಯಂದು ಮುರುಗನನ್ನು ಪೂಜಿಸುತ್ತಾರೆ. ಅಂದಹಾಗೆ ಇಂದು ಗುರುವಾರದೊಂದಿಗೆ ಬರುವ ಈ ಷಷ್ಠಿಯನ್ನು ಕುಬೇರ ಷಷ್ಠಿ ಎನ್ನುತ್ತಾರೆ. ಈ ಷಷ್ಠಿಯನ್ನು ನಮಗೆ ಸಂಪತ್ತನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಅಲ್ಲದೆ, ಗುರುವಾರವನ್ನು ಗುರು ಭಗವಾನ್‌ಗೆ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ನಾಳೆಯ ಷಷ್ಠಿ ದಿನವೂ ಗುರುವಾರದ ಜೊತೆಗಿರುವುದರಿಂದ ಗುರುವಿನ ಕೃಪೆಗೆ ಪಾತ್ರರಾಗುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…

Read More

ಬೆಂಗಳೂರು: ಕೃಷಿ ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ರಾಜಧಾನಿ ದೆಹಲಿಯಲ್ಲಿ ಭಾರೀ ಹೋರಾಟ ನಡೆಸಲು ಮುಂದಾಗಿರುವ, ಹಾಗೂ ‘ಭಾರತ್ ಬಂದ್’ಗೆ ಕರೆ ನೀಡಿರುವ ರೈತರ ಬಗ್ಗೆ ಅನುಕಂಪ ಇದೆ ಆದರೆ ಹೋರಾಟದ ಸಂದರ್ಭ ಹಾಗೂ ವೈಖರಿಯನ್ನು ಒಪ್ಪಲಾಗದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ವಿವಿಧ ರೈತ ಸಂಘಟನೆಗಳ ಬೆಂಬಲದೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾವು ದೇಶವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದು ಉತ್ತರ ಭಾರತದಲ್ಲಿ ರೈತರು ಹೋರಾಟದ ಅಖಾಡಕ್ಕೆ ಧುಮುಕಿದ್ದಾರೆ. ದೆಹಲಿಯಲ್ಲಿನ ಹೋರಾಟಕ್ಕೆ ಧಾವಿಸುವ ಸನ್ನಿವೇಶದಿಂದಾಗಿ ಅಲ್ಲಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿವೆ. ಇದರಿಂದಾಗಿ ಸಾರ್ವಜನಿಕರು ಹಾಗೂ ಶ್ರಮಿಕವರ್ಗ ಸಂಕಷ್ಟದಲ್ಲಿ ಸಿಲುಕಿದ್ದು, ಇದು ಇಂತಹಾ ಹೋರಾಟಕ್ಕೆ ಸೂಕ್ತ ಸಮಯವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ನಡುವೆ ಫೆಬ್ರವರಿ 16 ರಂದು ‘ಭಾರತ್ ಬಂದ್’ ಕರೆ ನೀಡಲಾಗಿದ್ದು, ಈ ಕರೆಯಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಗೊಂಡಿದ್ದಾರೆ. ಇದು ಶೈಕ್ಷಣಿಕ ವರ್ಷಾಅಂತ್ಯದ ಪರೀಕ್ಷಾ ಸಂದರ್ಭವಾಗಿದೆ. ಹೋರಾಟ ನ್ಯಾಯಯುತವಾಗಿದ್ದರೂ…

Read More

ಬೆಂಗಳೂರು: ಫೆ.16ರ ನಾಳೆ ಬೆಂಗಳೂರು ಶಿಕ್ಷಕ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರು, ಬಿಬಿಎಂಪಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ(ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ) ದಿನಾಂಕ:16.02.2024ರ ಶುಕ್ರವಾರದಂದು ಉಪ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ದಿನಾಂಕ: 16.02.2024ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಮುಖಾಂತರ ಆದೇಶಿಸಿದೆ. ಮುಂದುವರಿದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಿಕ್ಷಕ‌…

Read More

ಬೆಂಗಳೂರು: ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ ರೂ. 5 ಲಕ್ಷದವರೆಗೆ ಸರ್ಕಾರಿ ಸಹಾಯಧನ ನೀಡುವ ಸ್ವಾವಲಂಬಿ ಯೋಜನೆ ಫೆ.25ರ ವರೆಗೆ ವಿಸ್ತರಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದಿದೆ. ಘಟಕ ವೆಚ್ಚ/ಗರಿಷ್ಠ ಸಾಲದ ಮೊತ್ತ ರೂ. 5 ಲಕ್ಷದವರೆಗೆ ಇದ್ದಲ್ಲಿ ಈ ಸಾಲದ ಮೊತ್ತದ ಶೇ.20ರಷ್ಟು ಹಣವನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸಹಾಯಧನವನ್ನಾಗಿ ನೀಡಲಿದೆ. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿ‌ಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ. ಅರ್ಹರು ಅರ್ಜಿ…

Read More

ಬೆಂಗಳೂರು: ರಾಜ್ಯದಲ್ಲಿನ ಪಿಡಿಓ ವರ್ಗಾವಣೆಗೆ ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹಂಚಿಕೊಂಡಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವರ್ಗಾವಮೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪಿಡಿಒಗಳು ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು ಒಪ್ಪಿಗೆ ಕೊಡುತ್ತಿಲ್ಲ. ಇದರಿಂದ ಗ್ರಾಮಗಳಲ್ಲಿನ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. 60 ರಿಂದ 70 ಜನ ಪಿಡಿಒಗಳು ಆಪ್ತ ಸಹಾಯಕರಾಗಿ ಹೋದರೆ, ದೊಡ್ಡ ಮಟ್ಟದಲ್ಲಿ ಕೊರತೆ ಆಗುತ್ತದೆ. ಆದ್ದರಿಂದ ಆಪ್ತ ಸಹಾಯಕರನ್ನಾಗಿ ತೆಗೆದುಕೊಳ್ಳುವುದನ್ನು ನಿಲ್ಲಿಸುವುದು ಒಳ್ಳೆಯದು. ಪಿಡಿಒಗಳ ವರ್ಗಾವಣೆಯಲ್ಲಿ ಸಮಸ್ಯೆ ಆಗುತ್ತಿದೆ. ಇದನ್ನು ತಪ್ಪಿಸಲು ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More