Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಮ್ಮ ಮೆಟ್ರೋ ರೈಲುಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಮೆಟ್ರೋ ರೈಲುಗಳ ಸಂಚಾರವನ್ನು ಹೆಚ್ಚಿಸಲಾಗುತ್ತಿದೆ. 9 ಇದ್ದಂತ ಈ ಮಾರ್ಗದ ರೈಲುಗಳ ಸಂಖ್ಯೆಯನ್ನು 15ಕ್ಕೆ ಏರಿಕೆ ಮಾಡಲಾಗುತ್ತಿದೆ. ಇಂದು ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 06.07.2024 ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕಂಪೇಗೌಡ ನಿಲ್ದಾಣ – ಮೆಜೆಸ್ಟಿಕ್ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು ಎಂದು ಹೇಳಿದೆ. ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು, ರೈಲು ವೈಟ್ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ. ಅದರಂತೆ ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8.48, 8.58, 9.08, 9.18, 9.29, 9.39, 9.50, 10.00, 10.11, 10.21, 10.39,…
ಬೆಂಗಳೂರು : ಹಾಸನ ಜಿಲ್ಲೆ ಯಸಳೂರು ಅರಣ್ಯ ವಲಯದ ಡಬ್ಬಲಿ ಕಟ್ಟೆ ನೆಡುತೋಪಿನಲ್ಲಿರುವ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜು.6ರ ನಾಳೆ ಮಧ್ಯಾಹ್ನ 12.30ಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಳೆದ ಡಿಸೆಂಬರ್ 4ರಂದು ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ, ಮದವೇರಿ ದಾಳಿ ಮಾಡಿದ ಆನೆಯೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ಘೋಷಿಸಿತ್ತು, ಅದರಂತೆ ನಾಡಿದ್ದು ಶನಿವಾರ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾಧಿ ಸ್ಥಳ ಯಸಳೂರಿನಲ್ಲಿ ಮೊದಲಿಗೆ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು, ಈ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಸ್ಥಳೀಯ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಶೀಘ್ರವೇ ಅರ್ಜುನ ಆನೆಯಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಬಳ್ಳೆಯಲ್ಲಿ ಕೂಡ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಎರಡೂ ಸ್ಮಾರಕಗಳಲ್ಲಿ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಅದೇ ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದಂತ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡೋದಕ್ಕೆ ಮುಂದಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿಟ್ಟಿದ್ದಂತ ಒಟ್ಟು ಹಣದಲ್ಲಿ 14,282 ಕೋಟಿ ಹಣವನ್ನು ಬಳಸಿಕೊಳ್ಳೋದಕ್ಕೆ ಅನುಮತಿ ನೀಡಿದೆ ಎಂಬುದಾಗಿ ತಿಳಿದು ಬಂದಿದೆ. 2024-25ನೇ ಆರ್ಥಿಕ ವರ್ಷದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿಯಲ್ಲಿ ಮೀಸಲಿಟ್ಟ 39,121.46 ಕೋಟಿ ರೂ. ಹಣವನ್ನು ಖರ್ಚು ಮಾಡುವ ಪ್ರಸ್ತಾವವುಳ್ಳ ಕ್ರಿಯಾ ಯೋಜನೆಗೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ. ಅಂದಹಾಗೇ ಎಸ್ ಸಿ ಎಸ್ ಪಿ ಹಾಗೂ ಟಿ ಎಸ್ ಪಿ ಯೋಜನೆಯ…
ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಸಂಸದ ಡಾ.ರಾಧಾಮೋಹನ್ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೇಮಿಸಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸ್ವಾಗತಿಸಿದ್ದು, ಇಬ್ಬರನ್ನೂ ಅಭಿನಂದಿಸಿದ್ದಾರೆ. ಡಾ.ರಾಧಾಮೋಹನ್ದಾಸ್ ಅವರು ಕರ್ನಾಟಕದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದು, ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಸಮರ್ಥವಾಗಿ ಮಾರ್ಗದರ್ಶನ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರೂ, ಅವರ ಸಲಹೆ- ಮಾರ್ಗದರ್ಶನದೊಂದಿಗೆ ಪಕ್ಷವು 17 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ವಿವರಿಸಿದ್ದಾರೆ. ಅಗರ್ವಾಲ್ ಮತ್ತು ಸುಧಾಕರ್ ರೆಡ್ಡಿ ಅವರ ಸಲಹೆ ಮತ್ತು ಮಾರ್ಗದರ್ಶನವು ಕರ್ನಾಟಕದಲ್ಲಿ ಪಕ್ಷದ ಸಂಘಟನೆಯಲ್ಲಿ ಧನಾತ್ಮಕ ಬದಲಾವಣೆಗಳಿಗೆ ಕಾರಣವಾಗಲಿದೆ ಮತ್ತು ಮುಂದಿನ ಉಪ ಚುನಾವಣೆಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವನ್ನು ತಂದು ಕೊಡಲಿದೆ ಎಂದು ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾನ್ಯ ಜೆ.ಪಿ.ನಡ್ಡಾ ಅವರಿಗೆ ಧನ್ಯವಾದಗಳನ್ನು ಸಮರ್ಪಿಸುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/valmiki-development-corporation-scam-sit-issues-notice-to-former-minister-b-nagendra-basanagouda-daddal/ https://kannadanewsnow.com/kannada/muda-scam-exposed-by-those-who-were-eyeing-cms-chair-hdk/
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಬಿ.ನಾಗೇಂದ್ರ, ಬಸನಗೌಡ ದದ್ದಲ್ ಗೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ಅವ್ಯವಹಾರ ಪ್ರಕರಣ ಬೆಳಕಿಗೆ ಬಂದ ನಂತ್ರ, ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಪ್ರಕರಣವನ್ನು ತನಿಖೆಗೆ ಕೈಗೊಂಡಿರುವಂತ ಎಸ್ಐಟಿ ಅಧಿಕಾರಿಗಳು, ಈಗಾಗಲೇ ಹಲವರನ್ನು ವಿಚಾರಣೆ ನಡೆಸಿದ್ದಾರೆ. ಈಗ ಈ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಗೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ. ಅಂದಹಾಗೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 185 ಕೋಟಿ ಅಕ್ರಮ ನಡೆದಿದೆ ಎಂಬುದಾಗಿ ಆರೋಪಿಸಿ, ನಿಗಮದ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಬಳಿಕ ವಾಲ್ಮೀಕಿ…
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿದ್ದಂತ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಇಂತಹ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರೋಧವಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಚುನಾವಣೆಗೆ ಬಸನಗೌಡ ಬಾದರ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಹೊರತಾಗಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಅವಿರೋಧವಾಗಿ ವಿಧಾನ ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದ್ದು, ಅವಿರೋಧವಾಗಿ ವಿಧಾನಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಮಾತ್ರ ಉಳಿದಿರುವುದರಿಂದ ಅವಿರೋಧ ಆಯ್ಕೆಯಾಗಿದ್ದಾರೆ. ಇವರ ಮೇಲನೆ ಸದಸ್ಯತ್ವದ ಅವಧಿ 2028ರ ಜೂನ್ 14ರವರೆಗೆ ಇರಲಿದೆ. ಈ ಚುನಾವಣಾ ಫಲಿತಾಂಶದ ನಂತರ ಮೇಲನೆಯಲ್ಲಿ ಕಾಂಗ್ರೆಸ್ ಸದಸ್ಯರ ಬಲ 33ಕ್ಕೆ ಹೆಚ್ಚಾದಂತೆ ಆಗಿದೆ. https://kannadanewsnow.com/kannada/buckingham-palace-confirms-keir-starmer-appointed-uk-pm/ https://kannadanewsnow.com/kannada/muda-scam-exposed-by-those-who-were-eyeing-cms-chair-hdk/
ಯುಕೆ: ಕೈರ್ ಸ್ಟಾರ್ಮರ್ ಅವರನ್ನು ಯುಕೆ ಪ್ರಧಾನಿಯಾಗಿ ಕಿಂಗ್ ಚಾರ್ಲ್ಸ್ ಔಪಚಾರಿಕವಾಗಿ ನೇಮಕ ಮಾಡಿದ್ದಾರೆ. ಈ ಮೂಲಕ ಬ್ರಿಟನ್ ನೂತನ ಪ್ರಧಾನಿಯಾಗಿ ಕೈರ್ ಸ್ಟಾರ್ಮರ್ ನೇಮಕಗೊಂಡಿದ್ದಾರೆ. ರಾಜನು ಇಂದು ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಸಂಸದರನ್ನು ಸಭಿಕರಲ್ಲಿ ಬರಮಾಡಿಕೊಂಡರು ಮತ್ತು ಹೊಸ ಆಡಳಿತವನ್ನು ರಚಿಸುವಂತೆ ವಿನಂತಿಸಿದರು. ಸರ್ ಕೀರ್ ಅವರು ಮಹಾರಾಜರ ಪ್ರಸ್ತಾಪವನ್ನು ಒಪ್ಪಿಕೊಂಡರು ಮತ್ತು ಅವರನ್ನು ಪ್ರಧಾನ ಮಂತ್ರಿ ಮತ್ತು ಖಜಾನೆಯ ಮೊದಲ ಲಾರ್ಡ್ ಆಗಿ ನೇಮಿಸಲಾಯಿತು. https://twitter.com/RoyalFamily/status/1809187240259526724 ಎಡಪಂಥೀಯ ಲೇಬರ್ ಪಕ್ಷದ ವಿರುದ್ಧ ಸೋಲನ್ನು ಒಪ್ಪಿಕೊಂಡಿರುವ ನಿರ್ಗಮಿತ ಪ್ರಧಾನಿ ರಿಷಿ ಸುನಕ್, ಬ್ರಿಟಿಷ್ ಜನರು “ಗಂಭೀರವಾದ ತೀರ್ಪನ್ನು ನೀಡಿದ್ದಾರೆ” ಎಂದು ಶುಕ್ರವಾರ ಹೇಳಿದ್ದಾರೆ. ಕೈರ್ ಸ್ಟಾರ್ಮರ್ ನೇತೃತ್ವದ ಪಕ್ಷವು 14 ವರ್ಷಗಳಲ್ಲಿ ಮೊದಲ ಬಾರಿಗೆ ಕನ್ಸರ್ವೇಟಿವ್ಗಳನ್ನು ಬದಲಿಸುತ್ತಿದೆ. ಮುಂದಿನ ಐದು ವರ್ಷಗಳ ಕಾಲ ಸಂಸತ್ತಿನಲ್ಲಿ ಕುಳಿತುಕೊಳ್ಳುವ 650 ಸಂಸದರನ್ನು ಆಯ್ಕೆ ಮಾಡಲು ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಬ್ರಿಟೀಷರು ಗುರುವಾರ ಮತ ಚಲಾಯಿಸಿದರು. ಹೆಚ್ಚಿನ ಸ್ಥಾನಗಳನ್ನು ಎಣಿಕೆ ಮಾಡಲಾಗಿದ್ದು, ಸ್ಟಾರ್ಮರ್ ನೇತೃತ್ವದ…
ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಬಯಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಯಾರ ಹೆಸರನ್ನೂ ಹೇಳದೇ ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು. ಬಿಜೆಪಿ ಸ್ನೇಹಿತರು ಈ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್ನವರೇ ಒಳಗೊಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ…
ಬೆಂಗಳೂರುಛ “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, “ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು. ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ” ಎಂದು ತಿರುಗೇಟು ನೀಡಿದರು. ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ…
ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಸೋದಕ್ಕೆ ಕೆಪಿಎಸ್ಸಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದಿನಾಂಕ 25-08-2024ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಲೋಕಸೇಪಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಅಂತ ತಿಳಿಸಿದ್ದಾರೆ. ದಿನಾಂಕ 25-08-2024ರ ಭಾನುವಾರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಸಲಾಗುತ್ತಿದೆ. ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/minister-laxmi-hebbalkar-gives-good-news-to-anganwadi-workers/ https://kannadanewsnow.com/kannada/chief-minister-siddaramaiah-to-chair-cabinet-meeting-on-july-15/













