Author: kannadanewsnow09

ಬೆಂಗಳೂರು: ಬಿರು ಬಿಸಿಲಿನಿಂದ ತತ್ತರಿಸಿರೋ ಜನತೆಗೆ, ಬೆಳೆ ಒಳಗುತ್ತಿರೋ ಆತಂಕದಲ್ಲಿರೋ ರೈತರಿಗೆ ಸಂತಸದ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು ರಾಜ್ಯಾಧ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಏಪ್ರಿಲ್.18ರ ಇಂದಿನಿಂದ ಏಪ್ರಿಲ್.22ರವರೆಗೆ ಸಾಧಾರಣ ಮಳೆಯಾಗಲಿದೆ. ಏಪ್ರಿಲ್.21ರಂದು ಮಾತ್ರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದೂ, ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ತಿಳಿಸಿದೆ. ಇಂದು ಶಿವಮೊಗ್ಗ, ದಾವಣಗೆರೆ, ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗೋ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. https://kannadanewsnow.com/kannada/breaking-sc-asks-ec-to-explain-evm-vvpat-verification-process/ https://kannadanewsnow.com/kannada/vote-for-congress-darshan-campaigns-for-star-chandru-in-mandya/

Read More

ಮಂಡ್ಯ: ಸುಮಲತಾ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದು, ಕಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕಣದಲ್ಲಿದ್ದಾರೆ. ಇದೀಗ ಹಿಂದೆ ಸುಮಲತಾ ಬೆನ್ನಿಗೆ ನಿಂತಿದ್ದಂತ ಡಿ ಬಾಸ್, ಈಗ ಅವರ ಪರ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಜೊತೆ ನಿಂತು ಪ್ರಚಾರ ಮಾಡದೇ, ಅವರ ವಿರುದ್ಧದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಪರ ಅಬ್ಬರದ ಪ್ರಚಾರಕ್ಕೆ ಇಳಿದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ನಟ ದರ್ಶನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಮತ ಯಾಚನೆ ಮಾಡಿದ್ರು. ಈ ವೇಳೆ ಮಾತನಾಡಿದಂತ ಅವರು, ನಾನು ಯಾವುದೇ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ನಾನು ಸ್ಟಾರ್ ಚಂದ್ರು ಪರ ಮತಯಾಚಿಸಲು ಇಲ್ಲಿಗೆ ಬಂದಿದ್ದೀನಿ ಅಷ್ಟೇ ಎಂದರು. ಸುಮಲತಾ ಟಿಕೆಟ್ ಸಿಕ್ಕಿಲ್ಲ ಎಂದರೇ ಪ್ರಚಾರಕ್ಕೆ ಬನ್ನಿ ಎಂದು ಶಾಸಕ ಉದಯ್ ಕೇಳಿದ್ರು. ಆ ಕಾರಣಕ್ಕಾಗಿ ವ್ಯಕ್ತಿಯ ಪರವಾಗಿ ಈ ಪ್ರಚಾರಕ್ಕೆ ಬಂದಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಸ್ವಾಮಿ…

Read More

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ “ಜೈ ಶ್ರೀರಾಮ್” ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ “ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ…

Read More

ಕಲಬುರಗಿ‌ : ಅಫಜಲ್ ಪುರ ಕ್ಷೇತ್ರ ಪ್ರಮುಖ ಕ್ಷೇತ್ರವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಲ್ಲಿಂದ ಆಯ್ಕೆಯಾಗಿ ಹೋಗಿದ್ದಾರೆ. ತಮ್ಮನ್ನು ಆಯ್ಕೆ ಮಾಡಿ ಕಳಿಸಿದರೆ ಸೇವೆ ಮಾಡುವುದಾಗಿ ಕಲಬುರಗಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು. ಅಫಜಲ್ ಪುರ ಮತಕ್ಷೇತ್ರದ ಗೊಬ್ಬೂರು ( ಬಿ ) ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕನಸಿದ್ದು. ಕಳೆದ ಐದು ವರ್ಷದಲ್ಲಿ ಅಭಿವೃದ್ದಿ ಕಾರ್ಯಗಳು ನಡೆದಿರಲಿಲ್ಲ. ನನ್ನನ್ನು ಆಯ್ಕೆ ಮಾಡಿ ಕಳಿಸಿದರೆ ಜಿಲ್ಲೆಯ ಅಭಿವೃದ್ದಿಗೆ ದುಡಿಯುವುದಾಗಿ ಅವರು ಹೇಳಿದರು‌. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 5.28 ಲಕ್ಷ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೆ ಅಕ್ಕಿ ಖರೀದಿಸಲು ರೂ 178 ರೂ ಹಣ ನೇರವಾಗಿ ಹಾಕಲಾಗುತ್ತಿದೆ. 19.12 ಲಕ್ಷ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಹೋಗುತ್ತಿದೆ. ಯುವನಿಧಿ ಯೋಜನೆಯಡಿಯಲ್ಲಿ 20,000 ಯುವಕರಿಗೆ ತಲಾ ರೂ 1500 ರಿಂದ ರೂ 3000…

Read More

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ಬಿ.ವೈ ರಾಘವೇಂದ್ರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಿಸಲಾಗುತ್ತದೆ. ಅಲ್ಲಿಂದ ಡಿಸಿ ಕಚೇರಿಗೆ ನೂರಾರು ಮಂದಿ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಾಗುತ್ತದೆ ಎಂದರು. ಅದಕ್ಕೂ ಮೊದಲು ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ನಾಳೆ ಬೆಳಿಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ತೆರಳಿ, ನಾಮಪತ್ರವನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ನಾಳೆ ನಾಮಪತ್ರ ಸಲ್ಲಿಕೆಯ ವೇಳೆಯಲ್ಲಿ ತಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಇತರೆ ರಾಜಕೀಯ ನಾಯಕರು ಸಾಥ್ ನೀಡಲಿದ್ದಾರೆ ಎಂದು ಹೇಳಿದರು. https://kannadanewsnow.com/kannada/breaking-ec-stays-west-bengal-governors-visit-to-behar/

Read More

ಬೆಂಗಳೂರು: ಬೀದರ್ ಜಿಲ್ಲೆಯ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ ಪಾಂಡೆ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು 1999ರಿಂದ 2003ರವರೆಗೆ ಬೀದರ ಕ್ಷೇತ್ರದ ಶಾಸಕರಾಗಿ ಕೆಲಸ ಮಾಡಿದ್ದರು. ಬೀದರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜತೆಗೆ ಆರ್‍ಆರ್‍ಕೆ ಸಂಸ್ಥೆಯ ಅಧ್ಯಕ್ಷರಾಗಿ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದ್ದಾರೆ. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. https://kannadanewsnow.com/kannada/congress-will-win-20-seats-in-karnataka-in-lok-sabha-elections-siddaramaiah/ https://kannadanewsnow.com/kannada/private-bus-catches-fire-near-majestic-in-bengaluru/

Read More

ಕಲಬುರಗಿ: ಸಂಸದ ಉಮೇಶ ಜಾಧವ ಅವರ ಕಾರ್ಯವೈಖರಿ ವಿರುದ್ದ ಬಿಜೆಪಿ ಪಕ್ಷದ ಕಾರ್ಯಕರ್ತರೇ ‘ ಗೋಬ್ಯಾಕ್ ‘ ಅಭಿಯಾನ ಪ್ರಾರಂಭಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ದಿಗ್ಗಾಂವ ಜಿಲ್ಲಾ ಪಂಚಾಯತ ವ್ಯಾಪ್ತಿಯ ಅಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸಂಸದರಾದ ನಂತರ ಜಾಧವ ಏನು ಕೆಲಸ ಮಾಡಿದ್ದೀರಿ ಪಟ್ಟಿ ಕೊಡಿ ಎಂದು ಅವರದೇ ಪಕ್ಷದ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಆದರೆ ಜಾಧವ ಬಳಿ ಉತ್ತರವಿಲ್ಲ. ಆದರೆ, ನಾವು ನಿಮಗೆ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ ಜೊತೆಗೆ ರೂ 431 ಕೋಟಿ ವೆಚ್ಚದ ಕಾಮಗಾರಿಗಳನ್ನು ಈ ಗ್ರಾಮಕ್ಕೆ ತಂದು ನಿಮ್ಮ ಬಳಿ ಮತ ಕೇಳುತ್ತಿದ್ದೇವೆ. ಇದು ನಮ್ಮ ಬದ್ದತೆ ಎಂದರು. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಜೆಡಿಎಸ್ ನಾಯಕರಿಗೆ ಹೊಟ್ಟೆಯುರಿ ಶುರುವಾಗಿದೆ. ಹಾಗಾಗಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ನೀವೆಲ್ಲ ದಾರಿ ತಪ್ಪಿದ್ದೀರಾ ? ಎಂದು ಮಹಿಳೆಯರಿಗೆ ಪ್ರಶ್ನಿಸಿದರು.…

Read More

ಕೋಲಾರ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಈ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಹೆಚ್ .ಡಿ. ದೇವೇಗೌಡ ಹಾಗೂ ಹೆಚ್ .ಡಿ.ಕುಮಾರಸ್ವಾಮಿಯವರು ಮೊನ್ನೆಯವರೆಗೂ ದ್ವೇಷದ ಪಕ್ಷ, ಕ್ರಿಮಿನಲ್ ಪಕ್ಷ, ನರೇಂದ್ರ ಮೋದಿ ಯವರು ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದಿದ್ದರು. ಈಗ ನರೇಂದ್ರ ಮೋದಿ ಯವರನ್ನು ಸೇರಿಕೊಂಡಿದ್ದಾರೆ. ದೇವೇಗೌಡರು ನರೇಂದ್ರ ಮೋದಿ ಯವರನ್ನು ಬಹಳ ಹೊಗಳುತ್ತಿದ್ದಾರೆ. ಅಲ್ಲದೆ ಚುನಾವಣೆಯಾದ ಮೇಲೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಲಿದೆ ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ ಎಂದರು. ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದರು. ಜನ ಕಾಂಗ್ರೆಸ್ ಕೈಹಿಡಿಯಲ್ಲಿದ್ದಾರೆ ಕ್ರಿಮಿನಲ್ ಪಕ್ಷ ದ…

Read More

ಬೆಂಗಳೂರು: ಕಳೆದ ಹನ್ನೊಂದು ತಿಂಗಳುಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಮಾನ್ಯ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 1,800 ಕೋಟಿ ರೂ ಅನುದಾನವನ್ನು ಮಂಡ್ಯದ ಅಭಿವೃದ್ಧಿಗೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಕೆ.ಆರ್.ಪೇಟೆಯಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರ ಬಂದ ನಂತರ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಭೀಕರ ಬರಗಾಲ ಇದ್ದರೂ, 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಈ ಸರಕಾರಕ್ಕೆ ಕನಿಕರ ಬರುತ್ತಿಲ್ಲ ಎಂದು ಟೀಕಿಸಿದರು. ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದರು. ಹಿಂದೆ ಭೀಕರ ಪ್ರವಾಹ ಆದಾಗ ಬಿಎಸ್‍ವೈ ಅವರು ಉತ್ತರ ಕರ್ನಾಟಕದ ರೈತರಿಗೆ ನ್ಯಾಯ ಕೊಡುವ ಕೆಲಸ ಮಾಡಿದರು. ಮನೆ ಕಳೆದುಕೊಂಡ ರೈತರಿಗೆ 5 ಲಕ್ಷ ರೂ ಪರಿಹಾರ ಕೊಟ್ಟಿದ್ದರು. ಬಡ ರೈತರ…

Read More

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವಂತ ಮೆಜೆಸ್ಟಿಕ್ ಬಳಿಯಲ್ಲಿ ರಸ್ತೆ ಬದಿಯಲ್ಲಿ ಖಾಸಗಿ ಬಸ್ ಒಂದನ್ನು ಪಾರ್ಕ್ ಮಾಡಲಾಗಿತ್ತು. ಈ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ರಸ್ತೆಯಲ್ಲಿ ನಿಲ್ಲಿಸಿದ್ದಂತ ಖಾಸಗಿ ಬಸ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗಿಸಿ ಹೊತ್ತಿ ಉರಿದಿದೆ. ಕೆಎ 22, ಬಿ 5235 ಎಂಬ ಸಂಖ್ಯೆ ಬಸ್ ಹೊತ್ತಿ ಉರಿದಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ. ಬಸ್ ಗೆ ಬೆಂಕಿಯು ತಾಂತ್ರಿಕ ಕಾರಣದಿಂದ ಹೊತ್ತಿಕೊಂಡಿರಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-ec-stays-west-bengal-governors-visit-to-behar/

Read More