Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನೈತಿಕತೆಯ ಪ್ರಜ್ಞೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ನೀತಿ ಮತ್ತು ನ್ಯಾಯದ ಹಾದಿಯನ್ನು ಬಿಟ್ಟು ಎಷ್ಟು ದೂರ ಹೋದರೂ, ಒಂದು ದಿನ ಬಂದು ಸತ್ಯದ ಎದುರು ಶರಣಾಗಬೇಕಾಗುತ್ತದೆ. ಸಿದ್ದರಾಮಯ್ಯ ಅವರ ನಿವೇಶನ ಹಿಂದಿರುಗಿಸುವ ನಿರ್ಧಾರಕ್ಕೆ “ಕತ್ತಲು ಕಟ್ಟಿ ಹೋದ ಮೇಲೆ ದೀಪ ಹಚ್ಚಿದಂತೆ” ಎಂಬ ಗಾದೆ ನಿಖರವಾಗಿ ಅನ್ವಯಿಸುತ್ತದೆ ಎಂದಿದ್ದಾರೆ. ಒಳ್ಳೆಯದ್ದನ್ನು ಮಾಡಬೇಕಾದ ಸಮಯವು ಕಳೆದುಹೋದ ಮೇಲೆ ಬಂದ ಜ್ಞಾನ, ಅನಿವಾರ್ಯವಾಗಿ ಪಶ್ಚಾತ್ತಾಪವನ್ನೇ ತರುತ್ತದೆ ಎಂಬುದು ಮಾನ್ಯ ಸಿದ್ದರಾಮಯ್ಯ ರವರ ನಡೆಯಿಂದ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅವರ ತಪ್ಪುಗಳನ್ನು ಒಪ್ಪಿಕೊಳ್ಳದೆ, ಬಿಜೆಪಿ ಮೇಲೆ ನಿರಂತರ ಆರೋಪ ಮಾಡಿ, ಗೌರವಾನ್ವಿತ ರಾಜ್ಯಪಾಲರನ್ನು ಮತ್ತು ಅವರ ಹುದ್ದೆಯನ್ನು ಅಪಮಾನಿಸುವಂತ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡಿ, ನಮ್ಮ ಪಕ್ಷದ ಮೈಸೂರು…
ಶಿವಮೊಗ್ಗ : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಣಯಗಳನ್ನು ಕೈಗೊಂಡು ಅನುಷ್ಠಾನಗೊಳಿಸಿದೆ. ಈ ಕಾರ್ಯಕ್ರಮದ ಭಾಗವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 01 ರಿಂದ 10ನೇ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಾರದ 06 dinagala kaala ಮಧ್ಯಾಹ್ನದ ಬಿಸಿ ಊಟದ ಜೊತೆಗೆ ಮೊಟ್ಟೆಯನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಅನವಟ್ಟಿಯ ಸರ್ಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಕಾರ್ಯಕ್ರಮದ ವ್ಯವಸ್ಥಿತ ಅನುಷ್ಠಾನಕ್ಕಾಗಿ ವಿಪ್ರೊ ಮುಖ್ಯಸ್ಥ ಹಾಗೂ ಪ್ರತಿಸ್ಥಿತ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ್ನೊಂದಿಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು,1591ರೂ. ಗಳ ಆರ್ಥಿಕ ನೆರವನ್ನು ಪಡೆದುಕೊಳ್ಳಲಾಗುತ್ತಿದೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಸವಿತಾ ಸಮಾಜದ ಮುಖಂಡರಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಅವರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇಂತಹ ಕಿಶೋರ್ ಕುಮಾರ್ ಅವರಿಗೆ ವಿಧಾನ ಪರಿಷತ್ ಉಪ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿತ್ತು. ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಇನ್ನೂ…
ಬೆಂಗಳೂರು: ರಾಜ್ಯದ ಒಂದು ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಮತದಾನ ನಡೆದು, ಅಂದೇ ಮತ ಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ. ಈ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಉಪ ಚುನಾವಣೆ ನಿಗದಿ ಪಡಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿತ್ತು. ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್…
ಬೆಂಗಳೂರು : ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ .ಹಿರಿಯರ ಬದುಕು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2024 ಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ‘ಘನತೆಯ ಬಾಳಿನೊಂದಿಗೆ ವಯೋಪಕ್ವತೆ: ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ’ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು. ವಿಶ್ವಮಾನವರಾಗಲು ಹಿರಿಯರ ಅನುಭವ ದಾರಿದೀಪ ಹಿರಿಯನ್ನು ಗೌರವದಿಂದ ಕಾಣಬೇಕು. ಅವರ ಅನುಭವಗಳನ್ನು ಗೌರವರಿಸಿ ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹಿರಿಯ ಕೊಡುಗೆಗಳು ಹಾಗೂ ಅವರ ಮಾರ್ಗದರ್ಶನದಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು. ಬಾಲ್ಯ , ಯೌವ್ವನ, ವೃದ್ಧಾಪ್ಯ, ಮಾನವನ ಜೀವನದ ಸಹಜ ಘಟ್ಟಗಳು. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ಧೇಶದಿಂದ…
ಬೆಂಗಳೂರು: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಸಾಶನ ಹೆಚ್ಚಿಸುವ ಬಗ್ಗೆ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024 ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಹಿರಿಯರನ್ನು ಗೌರವಿಸಿ, ಅವರನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಹಿರಿಯರು ಮಾಡಿದ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಬೇಕು. ಹಿರಿಯರ ನಾಗರಿಕರನ್ನು ಕೇವಲ ಗೌರವಿಸಲಷ್ಟೇ ಮೀಸಲಿರಿಸಬಾರದು, ಅವರ ಸಾಧನೆಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದೇ ನಾವು ಸಮಾಜಕ್ಕೆ ಕೊಡುವ ದೊಡ್ಡ ಕೊಡುಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಮನೆಗಳಲ್ಲಿ ಅನುಕೂಲಕರ ವಾತಾವರಣವಿದ್ದರೂ ವೃದ್ಧಾ ಶ್ರಮ ಸೇರುವುದು ಜಾಸ್ತಿಯಾಗುತ್ತಿದೆ. ಏಕೆಂದರೆ, ಮಕ್ಕಳು ವಿದೇಶದಲ್ಲಿ ನೆಲೆಸಿರುತ್ತಾರೆ. ಇದರಿಂದ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ…
ಬೆಂಗಳೂರು: ಕಳವು ಮಾಡಿದಂತ ವಸ್ತುಗಳನ್ನು ರಿಕವರಿ ಮಾಡಿದ ನಂತ್ರ ಸಂಬಂಧ ಪಟ್ಟ ವಾರಸುದಾರರಿಗೆ ನೀಡಬೇಕಾಗಿದ್ದು ಪೊಲೀಸರ ಕರ್ತವ್ಯ. ಆದರೇ ಇಲ್ಲೊಬ್ಬ ಇನ್ಸ್ ಪೆಕ್ಟರ್ ಜಪ್ತಿ ಮಾಡಿದಂತ ವಸ್ತುಗಳನ್ನು ಮಾಲೀಕರಿಗೆ ಹಿಂದಿರುಗಿಸದೇ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಕಾರಣದಿಂದಲೇ ಬೆಂಗಳೂರಲ್ಲಿ ಇನ್ಸ್ ಪೆಕ್ಟರ್ ಒಬ್ಬರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜೆಪಿ ನಗರದ ಠಾಣೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಈ ಹಿಂದೆ ಹಿತೇಂದ್ರ ಎಂ.ಎಸ್ ಎಂಬುವರು ಕರ್ತವ್ಯ ನಿರ್ವಹಿಸಿದ್ದರು. ಇಂತಹ ಪೊಲೀಸ್ ಇನ್ಸ್ ಪೆಕ್ಟರ್ ಕಳವು ಮಾಡಿದ್ದಂತ ಕೆಲ ವಸ್ತುಗಳನ್ನು ಜಪ್ತಿ ಮಾಡಿದ್ದರು. ಹೀಗೆ ಜಪ್ತಿ ಮಾಡಿದ್ದಂತ ವಸ್ತುಗಳನ್ನು ಹಿಂದಿರುಗಿಸಲೇ ದುರುಪಯೋಗ ಮಾಡಿಕೊಂಡಿದ್ದರು. ಈ ಕಾರಣದಿಂದ ವಾಪಾಸ್ ನೀಡುವಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನ ಪತ್ರವನ್ನು ನೀಡಿದ್ದರು. ಡಿಸಿಪಿ ಜಪ್ತಿ ಮಾಡಿದ್ದಂತ ವಸ್ತುಗಳನ್ನು ಹಿಂದಿರುಗಿಸುವಂತೆ ಸೂಚಿಸಿದ್ದರೂ ಡೋಂಟ್ ಕೇರ್ ಎನ್ನುವಂತೆ ಪೊಲೀಸ್ ಇನ್ಸ್ ಪೆಕ್ಟರ್ ಹಿತೇಂದ್ರ ನಡೆದುಕೊಂಡಿದ್ದರು. ಈ ಹಿನ್ನಲೆಯಲ್ಲಿ ಜಪ್ತಿ ಮಾಡಿದ್ದ ವಸ್ತುಗಳನ್ನು ವಾಪಾಸ್ ಕೊಡದೇ ದುರುಪಯೋಗ ಮಾಡಿಕೊಂಡಂತ ಕಾರಣ,…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಮಾರ್ಚ್.2025ರಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನಡೆಸುತ್ತಿರುವ ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಉಲ್ಲೇಖಿತ ಸರ್ಕಾರದ ಆದೇಶಗಳನ್ವಯ ಪಿಯುಸಿ ಶಿಕ್ಷಣ ಬೋಧಿಸುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು – ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅದರಂತೆ ಮಾರ್ಚ್ 2025 ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ: 01-10-2024 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದಿದೆ. 1. ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಕಡ್ಡಾಯವಾಗಿ ಇರಬೇಕಾದ ಅರ್ಹತೆಗಳು ಹಾಗೂ ಸೂಚನೆಗಳು: 1. ದಿನಾಂಕ: 31-03-2025 ಕ್ಕೆ 17 ವರ್ಷಗಳು ತುಂಬಿರಬೇಕು. (31-03-2008 ರಂದು ಅಥವಾ ಅದಕ್ಕಿಂತ ಹಿಂದೆ ಜನಿಸಿರಬೇಕು.…
ಬೆಂಗಳೂರು: ದಯವಿಟ್ಟು ನಿಮ್ಮ ರಾಜಕೀಯ ದ್ವೇಷಕ್ಕೆ ರಾಜಕೀಯದಿಂದ ದೂರವಿರುವಂತ ಕುಟುಂಬದ ಹೆಣ್ಣುಮಕ್ಕಳನ್ನು ವಿವಾದದ ಕಣಕ್ಕೆ ತಂದು ಗೌರವ, ಘನತೆ ಹಾಳು ಮಾಡಬೇಡಿ. ನಾನು ಪಡೆದಿರುವಂತ ಮುಡಾದ 14 ಸೈಟುಗಳನ್ನು ವಾಪಾಸ್ ಕೊಡಲು ನಿರ್ಧರಿಸಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಘೋಷಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ಎಂದಿದ್ದಾರೆ. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು ಎಂದು ತಿಳಿಸಿದ್ದಾರೆ. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ…
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಈ ಕುರಿತಂತೆ ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು, ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು…











