Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಅವರನ್ನು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಏಪ್ರಿಲ್.1ರಂದು ವಕೀಲ ದೇವರಾಜೇಗೌಡ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಈ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಕೀಲ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆ ಬಳಿಕ ಹೊಳೆನರಸೀಪುರ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಿದ್ದರು. ಇಂದು ವಕೀಲ ದೇವರಾಜೇಗೌಡ ಅವರನ್ನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಂತ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದರು. ಬಳಿಕ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/bbmp-issues-shock-to-those-who-put-up-banners-illegally-in-bengaluru-fir-lodged/ https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/
ಬೆಂಗಳೂರು: ನಗರದಲ್ಲಿ ಕೋರ್ಟ್ ಆದೇಶದಂತೆ ಅನಧಿಕೃತವಾಗಿ ಬ್ಯಾನರ್ ಹಾಕುವುದನ್ನು ನಿಷೇಧಿಸಲಾಗಿದೆ. ಆದರೂ ಅಕ್ರಮವಾಗಿ ಬ್ಯಾನರ್ ಅಳವಡಿಸಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿ ಶಾಕ್ ನೀಡಲಾಗಿದೆ. ಬೆಂಗಳೂರು ನಗರ ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಸ್ವತ್ತಿಗೆ “ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು” ಎಂಬ ಬ್ಯಾನರ್ ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂಧರ್ಯ ವನ್ನು ಹಾಳುಮಾಡಿರುತ್ತಾರೆ. ಈ ಸಂಬಂಧ ಪ್ಲೈಯಿಂದ ಸ್ಕ್ವಾಡ್ ತಂಡದ ನಾಯಕ ಅವೀಶ್ ಹೆಚ್.ಎಂ ರವರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದಿನಾಂಕ: 10-05-2024 ರಂದು ದೂರು ನೀಡಿ ಎಫ್.ಐ.ಆರ್ ದಾಖಲಿಸಿರುತ್ತಾರೆ. ಇಂತಹ ಅಕ್ರಮ ಮತ್ತು ಅನಧಿಕೃತ ಬ್ಯಾನರ್ಗಳು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್ಗಳನ್ನು ಹಾಕಿದರೆ ಎಫ್ಐಆರ್ಗಳನ್ನು ದಾಖಲಿಸಲಾಗುತ್ತದೆ. ಅಕ್ರಮ ಬ್ಯಾನರ್ ಮತ್ತು…
ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಎಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಲೇವಡಿ ಮಾಡಿದ್ದಾರೆ. ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದು ಅವರು ಪ್ರತಿಪಾದಿಸಿದರು. ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಅವರು ವಿವರಿಸಿದರು. ಪ್ರಜ್ವಲ್ವ ರೇವಣ್ಣನವರ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ…
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಆರೋಪಿಯಾಗಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುತ್ತದೆ ಎಂಬುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು. ಹೀಗೆ ಪೊಸ್ಟರ್ ಅಂಟಿಸಿದ್ದಂತ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಸಂಸದ ಪ್ರಜ್ವಲ್ ರೇವಣ್ಮನನ್ನು ಹುಡುಕುವಲ್ಲಿ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುತ್ತದೆ ಎಂಬುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು. ಬೆಂಗಳೂರಿನ ಕೆಲವೆಡೆ ಹೀಗೆ ಪೋಸ್ಟರ್ ಅಂಟಿಸಿದಂತ ಕಾರ್ಯಕರ್ತರನ್ನು ಪೊಲೀಸರು ಈಗ ವಶಕ್ಕೆ ಪಡೆದಿದ್ದು, ಹಚ್ಚಿದ್ದಂತ ಪೋಸ್ಟರ್ ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/ https://kannadanewsnow.com/kannada/at-least-50-killed-in-afghanistan-floods/
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪೊಲೀಸರಿಂದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಿಸಿದ್ದರು. ಈ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇಂದು ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಂತ ಮಹಿಳೆಯ ಮೇಲೆಯೇ ವಕೀಲ ದೇವರಾಜೇಗೌಡ ಅವರು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಅವರನ್ನು ಹಿರಿಯೂರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/dk-shivakumar-calls-up-ankita-who-secured-first-rank-in-the-state-in-the-sslc-examination-to-congratulate-her/ https://kannadanewsnow.com/kannada/prajwal-pornography-video-case-advocate-devarajegowda-releases-3-audio-clips-from-unknown-place/
ಬೆಂಗಳೂರು: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳೊಂದಿಗೆ ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಮೊಬೈಲ್ ಕಾಲ್ ಮೂಲಕ ಸಂಪರ್ಕಿಸಿ ಶುಭ ಹಾರೈಸಿದರು. ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬರಬೇಕೆಂದು ಶಿವಕುಮಾರ್ ಅವರು ಅಂಕಿತಾ ಅವರಿಗೆ ಹೇಳಿದರು. ಅಲ್ಲದೆ ಅಂಕಿತಾ ಅವರ ತಂದೆ ಬಸಪ್ಪ ಅವರ ಜತೆಯೂ ಮಾತಾಡಿ ಮಗಳ ಸಾಧನೆಗೆ ಶುಭಾಶಯ ಹೇಳಿದರು. https://kannadanewsnow.com/kannada/scrip-direction-of-devaraj-gowdas-words-revealed-to-be-of-bjp-high-command-congress/ https://kannadanewsnow.com/kannada/prajwal-pornography-video-case-advocate-devarajegowda-releases-3-audio-clips-from-unknown-place/
ಬೆಂಗಳೂರು: ವಕೀಲ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಆಡಿಯೋವೊಂದನ್ನು ಶೇರ್ ಮಾಡಿ ಗುಡುಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ದೇವರಾಜೇಗೌಡ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಎಳೆದು ತಂದಾಗಲೇ ಇಲ್ಲೇನೋ ಮಸಲತ್ತಿದೆ ಎಂಬ ಗುಮಾನಿ ದಟ್ಟವಾಗಿತ್ತು. ಆದರೆ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ ಎಂದು ಹೇಳಿದೆ. ಒಂದೇ ಏಟಿನಲ್ಲಿ ಜೆಡಿಎಸ್ ಪಕ್ಷವನ್ನು ಮುಳುಗಿಸುವುದರ ಜೊತೆಗೆ ಕಾಂಗ್ರೆಸ್ ನಾಯಕರನ್ನೂ ಟಾರ್ಗೆಟ್ ಮಾಡುವ ಮಹಾ ಕುತಂತ್ರ ಅಮಿತ್ ಶಾ ಅವರದ್ದು, ಆದರೆ ಕಾಂಗ್ರೆಸ್ ನಾಯಕರ ಕೂದಲು ಕೊಂಕಿಸಲು ಅಸಾಧ್ಯದ ಮಾತು ಎಂಬುದನ್ನು ಅರ್ಥ ಮಾಡಿಕೊಂಡರೆ ಒಳಿತು ಎಂದಿದೆ. ಈ ಪೆನ್ ಡ್ರೈವ್ ಪ್ರಕರಣದ ಹಿಂದೆ ಬಿಜೆಪಿ ಹಾಗೂ ಬ್ರದರ್ ಸ್ವಾಮಿಯ ಬಹುದೊಡ್ಡ ಷಡ್ಯಂತ್ರ ಅಡಗಿದೆ. ಬಿಜೆಪಿ ಎಂಬ ಅನೈತಿಕ ರಾಜಕೀಯ ಪಕ್ಷಕ್ಕೆ ಕನಿಷ್ಠ ನೈತಿಕ…
ನವದೆಹಲಿ : ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ರಿಲಯನ್ಸ್ ಜಿಯೋದಿಂದ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದೆ. ಯಾರು ಒಟಿಟಿ ಪ್ಲಾಟ್ ಫಾರ್ಮ್ ಗಳನ್ನು ಅತಿಹೆಚ್ಚು ಬಳಕೆ ಮಾಡುತ್ತೀರಿ, ಇಷ್ಟ ಪಡುತ್ತೀರಿ ಅಂಥವರಿಗೆ ಹೇಳಿಮಾಡಿಸಿದಂಥ ಯೋಜನೆ ಇದಾಗಿದ್ದು, ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು ಹದಿನೈದು ಪ್ರೀಮಿಯಂ ಒಟಿಟಿ ಅಪ್ಲಿಕೇಷನ್ ಗಳನ್ನು ಪಡೆಯುತ್ತಾರೆ. ಇದರ ಜತೆಗೆ ಅನಿಯಮಿತ (ಅನ್ ಲಿಮಿಟೆಡ್) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್ ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದು. ಅಂದ ಹಾಗೆ ಈ ಪ್ಲಾನ್ ಗೆ ತಿಂಗಳಿಗೆ 888 ರೂಪಾಯಿ ಆಗಲಿದ್ದು, ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಲಭ್ಯವಿದೆ. ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು 30 ಎಂಬಿಪಿಎಸ್ (Mbps) ವೇಗವನ್ನು ಪಡೆಯುತ್ತಾರೆ. ಇದರ ಜತೆಗೆ ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ವಿರುದ್ಧವೂ ದೂರು ದಾಖಲಾಗಿದೆ. ಬಂಧನದ ಭೀತಿ ಎದುರಿಸುತ್ತಿರುವಂತ ಅವರು, ನಾಪತ್ತೆಯಾಗಿದ್ದಾರೆ. ಈ ನಡುವೆಯೂ ಅಜ್ಞಾತ ಸ್ಥಳದಿಂದ ಮೂರು ಆಡಿಯೋ ಕ್ಲಿಪ್ ಗಳನ್ನು ವಕೀಲ ದೇವರಾಜೇಗೌಡ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್.23ರಂದು ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆಗೆ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಇದೀಗ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ. ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನದ ಭೀತಿಯನ್ನು ಎದುರಿಸುತ್ತಿರುವಂತ ವಕೀಲ ದೇವರಾಜೇಗೌಡ ಅವರು ನಾಪತ್ತೆಯಾಗಿದ್ದರು. ಈಗ ನಾಪತ್ತೆಯಾಗಿ ಅಜ್ಞಾತ ಸ್ಥಳದಲ್ಲಿರುವಂತ ಅವರು, 3 ಆಡಿಯೋ ಕ್ಲಿಪ್ ಬಿಡುಗಡೆ ಮಾಡಿರೋದಾಗಿ ತಿಳಿದು ಬಂದಿದೆ. ಒಂದರಲ್ಲಿ ಶಿವರಾಮೇಗೌಡ ಜೊತೆಗೆ ಮಾತನಾಡಿರುವಂತ ಆಡಿಯೋ ಇದ್ದರೇ, ಮತ್ತೊಂದರಲ್ಲಿ ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ…
ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದಂತ ರಾಜ್ಯದ ಜನತೆಗೆ ಮಳೆಯಿಂದಾಗಿ ತಂಪೆರೆದಿತ್ತು. ಅಲ್ಲಲ್ಲಿ ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಕೂಡ ಮನೆ ಮಾಡಿತ್ತು. ಈಗ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕರ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು, ಉತ್ತರ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ನಾಳೆಯಿಂದ ಮೇ.14ರವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ. ನಾಳೆ ಶಿವಮೊಗ್ಗ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಮಳೆಯಾದ್ರೇ, ಮೇ.12ರಂದು ಬೆಳಗಾವಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದಿದೆ. ಮೇ.13ರಂದು ಬೆಳಗಾವಿ, ಬೀದರ್, ಕಲಬುರ್ಗಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಮೇ.14ರಂದು ವಿಜಯಪುರ ಜಿಲ್ಲೆಯಲ್ಲಿ…