Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಕೆಪಿಎಸ್ ಸಿ ಮಹತ್ವದ ಕ್ರಮ ಕೈಗೊಂಡಿದ್ದು, ಪರೀಕ್ಷೆಗಳಲ್ಲಿ ನೀಲಿ ಬಣ್ಣದ ಬಾಲ್ ಪೆನ್ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಎಸ್ ಸಿ ಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೀಗ ಸೂಚನೆಯಲ್ಲಿ ಮಾರ್ಪಾಡು ಮಾಡಿ  ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ. ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ…

Read More

ನರಗುಂದ: ರಾಮಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಂತ ಆರೋಪಿಗೆ 60 ದಿನಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ನರಗುಂದದ ಸಿಜೆ ಮತ್ತು ಜೆಎಂಎಫ್ ಸಿ ಕೋರ್ಟ್ ರಾಮ ಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಂತ ವ್ಯಕ್ತಿಗೆ 60 ದಿನಗಳ ಜೈಲು ವಾಸ ಹಾಗೂ 5000 ದಂಡವನ್ನು ವಿಧಿಸಿದೆ. ನರಗುಂದದ ನಿವಾಸಿ ಅಕ್ಬರಸಾಬ ಖಾನ್ ಎಂಬುವರು ಅ.24, 2014ರಂದು ರಾಮಮಂದಿರ ಚಿತ್ರದ ಮೇಲೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಅಕ್ಷೇಪಾರ್ಹ ಸಾಲುಗಳ್ನು ಬರೆದು ಪೋಸ್ಟ್ ಮಾಡಿದ್ದರು. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ವಿವಾದ ಆಲಿಸಿದಂತ ನ್ಯಾಯಧೀಶರು ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. https://kannadanewsnow.com/kannada/sub-registrars-to-go-on-strike-from-feb-27-boycott-service/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಶಿವಮೊಗ್ಗ: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ಭೂ ಮಾಫಿಯಾ ದಂಧೆ. ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸಿ ಅನಾಮಧೇಯ ವ್ಯಕ್ತಿಯ ಹೆಸರಿಗೆ ಮಾಡಲು ಪ್ರಯತ್ನ. ಈ ಘಟನೆ ಸಾಗರದಲ್ಲಿ ಬೆಳಕಿಗೆ ಬಂದಿದೆ. ಅದೂ ಸರ್ಕಾರಿ ಅಧಿಕಾರಿಯಿಂದಲೇ ಭೂಗಳ್ಳರ ಜೊತೆಗೆ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ತಹಶೀಲ್ದಾರರಿಗೆ ಬರೆದಿರುವಂತ ಪತ್ರದಿಂದಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟದ ಸಮೀಪದ ಸರ್ವೆ ನಂ.12ರ ಸರ್ಕಾರಿ ಭೂಮಿಯನ್ನೇ ಭೂಗಳ್ಳರಿಗೆ ನಕಲಿ ದಾಖಲೆ ಸೃಷ್ಠಿಸಿ ಲಪಟಾಯಿಸೋದಕ್ಕೆ ಯತ್ನಿಸಿದಂತ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಾಗರದ ಹಿರಿಯ ಪತ್ರಕರ್ತ ಮಹೇಶ್ ಹೆಗಡೆ ಅವರು ಜನ ಹೋರಾಟ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ವರದಿಯನ್ನು ಮಾಡಿದ್ದರಿಂದ ಇಡೀ ಪ್ರಕರಣ ಬಟಾ ಬಯಲಾಗಿದೆ. ಸರ್ಕಾರಿ ಭೂಮಿ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿಯ ಬಹುದೊಂಡ ಹಗರಣ ಬೆಳಕಿಗೆ ಬಂದಿದೆ. ಏನಿದು ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸೋ ಕೇಸ್? ಸಾಗರ ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವಂತ ಭೂಗಳ್ಳರು ಸರ್ಕಾರಿ ಜಾಗ…

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಫೆಬ್ರವರಿ 27ರಿಂದ ಸಬ್ ರಿಜಿಸ್ಟ್ರಾರ್ ಗಳು ಮುಷ್ಕರ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಫೆಬ್ರವರಿ 27ರಿಂದ ರಾಜ್ಯಾಧ್ಯಂತ ಆಸ್ತಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೌಕರರ ಸಂಘವು ಶುಕ್ರವಾರದಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಸಲ್ಲಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೇ ಫೆಬ್ರವರಿ 27ರಿದಂ ಮುಷ್ಕರ ನಡೆಸುವುದಾಗಿ ಪತ್ರದಲ್ಲಿ ತಿಳಿಸಿದೆ. ಅಂದಹಾಗೇ ಕಾವೇರಿ-2 ತಂತ್ರಾಂಶದಲ್ಲಿನ ಸಮಸ್ಯೆ, ಇಸಿ, ಸರ್ವಸ್ ಸಮಸ್ಯೆ, ಐಟಿ ಅಧಿಕಾರಿಗಳ ಮಾಹಿತಿ ಹೆಸರಿನಲ್ಲಿ ಉಪ ನೋಂದಣಾಧಿಕಾರಿಗಳಿಗೆ ನೀಡುತ್ತಿರುವ ಕಿರುಕುಳ ಹಾಗೂ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆಗೆ ಪ್ರತ್ಯೇಕ ನಿಯಮಗಳ್ನು ರೂಪಿಸಲುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಫೆಬ್ರವರಿ.27ರಿಂದ ನೋಂದಣಿ ಪ್ರತ್ರಿಯೆ ಸ್ಥಗಿತಗೊಳ್ಳೋ ಸಾಧ್ಯತೆ ಇದೆ. https://kannadanewsnow.com/kannada/bengaluru-night-nakabandi-all-police-patrolling-mandatory/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ವಿರೋಧ…

Read More

ಬೆಂಗಳೂರು: ನಗರದಲ್ಲಿ ರಾತ್ರಿ ವೇಳೆಯಲ್ಲಿ ನಡೆಯುತ್ತಿರುವಂತ ಅಪರಾಧ ತಡೆಗಾಗಿ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಎಲ್ಲಾ ಹಂತದ ಪೊಲೀಸರಿಗೆ ರಾತ್ರಿ ಗಸ್ತು ಕಡ್ಡಾಯಗೊಳಿಸಲಾಗಿದೆ. ಜೊತೆಗೆ ನಾಕಾಬಂದಿ ನಡೆಸುವಂತೆಯೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಬಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ನಾಕಾಬಂದಿ ಹಾಕುವುದಾಗಿ ತಿಳಿಸಿದರು. ನಗರದಲ್ಲಿ ಪೊಲೀಸರ ರಾತ್ರಿ ಗಸ್ತು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಮಾಡಿ ಚರ್ಚಿಸಲಾಗಿದೆ ಎಂದರು. ಬೆಂಗಳೂರಲ್ಲಿ ರಾತ್ರಿ ಗಸ್ತು, ಇ-ಬೀಟ್ ವ್ಯವಸ್ಥೆಯನ್ನು ಸುಧಾರಣೆಗೆ ತರುವ ನಿಟ್ಟಿನಲ್ಲಿ ಸಿಬ್ಬಂದಿಗೆ ವೀಡಿಯೋ ಕಾನ್ಫೆರೆನ್ಸ್ ಮುಖಾಂತರ ತರಬೇತಿ ನೀಡಲಾಗುವುದು ಎಂದು ಹೇಳಿದರು. https://kannadanewsnow.com/kannada/bengaluru-man-stabbed-to-death-by-mobile-thieves-in-majeschik/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಬೆಂಗಳೂರು: 66/11 kV ಬ್ಯಾಡರಹಳ್ಳಿ, 66/11 ಕೆವಿ ಶ್ರೀಗಂಧಕಾವಲು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.02.2025ರ ಭಾನುವಾರದ ಇಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಬ್ಯಾಡರಹಳ್ಳಿ, ಅಂಜಾನಗರ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಏ 8ನೇ, 9ನೇ ಬ್ಲಾಕ್, ರೈಲ್ವೆ ಲೇಔಟ್, ಉಪಕಾರ ಲೇಔಟ್, ಬಾಲಾಜಿ ಲೇಔಟ್, ಭವಾನಿಲೇಔಟ್, ಗೊಲ್ಲರಹಟ್ಟಿ, ರತ್ನನಗರ, ಮಾರ್ಡನ್ ಲೇಔಟ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ತುಂಗಾನಗರ, ಕೇಪೇಗೌಡನಗರ, ಪೋಲಿಸ್ ಕ್ವಾಟ್ರಸ್, ಬೈರವೇಶ್ವರನಗರ ಇಂಡಸ್ಟ್ರೀಯಲ್ ಏಸ್ಟೇಟ್, ಹೊಸಹಳ್ಳಿ, ಚಿಕ್ಕ ಗೊಲ್ಲರಹಟ್ಟಿ, ಕಲ್ಲಹಳ್ಳಿ, ಹೊಸಹಳ್ಳಿ, ಬಿ.ಎಂ.ಟಿಸಿ. ಡಿಪೋ, ಅನಿಕೇತನನಗರ, ಪಂಮುಖಿ ಲೇಔಟ್, ನಡೇಕೇರಪ್ಪ ಇಂಡಸ್ಟ್ರೀಯಲ್ ಎಸ್ಟೇಟ್, ಮಹದೇಶ್ವರನಗರ, ಮಾರುತಿನಗರ, ನಾಗರಹೊಳೆನಗರ, ಮುನೇಶ್ವರ ನಗರ, ಸಂಜೀವ್ ನಗರ, ಅನ್ನಪೂರ್ಣೇಶ್ವರು ನಗರ, ಹೆಲ್ತ್ ಲೇಔಟ್, ಸುಂಕದಕಟ್ಟೆ ಇಂಡಸ್ಟ್ರೀಯಲ್ ಏರಿಯಾ ಕರೆಂಟ್…

Read More

ಬೆಂಗಳೂರು: 2024-25ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ 2023-24 ಹಾಗೂ 2024-25ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಬಿಡುಗಡೆಯಾದ ರೂ.200.00 ಲಕ್ಷಗಳನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈಗಾಗಲೇ ಬಿಡುಗಡೆ ಮಾಡಲಾಗಿರುತ್ತದೆ’ ಹಾಗೊ ದಿನಾಂಕ 7-08-2025 ರಿಂದ 9-08-2025 ರವರೆಗೂ 2023-24 ಹಾಗೂ 2024- 25 ನೇ ಸಾಲಿನ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ಜರುಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಾಂಕ: 03-02-2025ರಂದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷಾ ಅಕ್ರಮ ನಡೆಸಿದ್ರೇ ಕಾನೂನು ಕ್ರಮ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1ರಿಂದ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21ರಿಂದ ಆರಂಭವಾಗಲಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಅಥವಾ ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾವಹಿಸಲಾಗಿದೆ. ಪರೀಕ್ಷಾ ಕೇಂದ್ರದ 200ಮೀ ಸುತ್ತಲು ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡುವುದು. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್ ಹಾಗೂ ಗೇಮ್ಸ್ ಸೆಂಟರ್ ಕೇಂದ್ರಗಳ ಮೇಲೆ ವಿಶೇಷ ನಿಗಾವಹಿಸಲು ಸೂಚಿಸಿದ್ದಾರೆ.…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಮೊಬೈಲ್ ಕಳ್ಳತನಕ್ಕೆ ಯತ್ನಿಸಿದಾಗ ವ್ಯಕ್ತಿಯೊಬ್ಬ ಪ್ರತಿರೋದ ವ್ಯಕ್ತ ಪಡಿಸಿದ್ದಾರೆ. ಈ ವೇಳೆಯಲ್ಲಿ ಮೊಬೈಲ್ ಕಳ್ಳರು ಆತನ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವಂತ ಘಟನೆ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಹೌದು ಮೊಬೈಲ್ ಕದಿಯಲು ಪ್ರಯತ್ನಿಸಿದಾಗ ಎಚ್ಚರಗೊಂಡು ಪ್ರತಿರೋಧ ಒಡ್ಡಿದ ವ್ಯಕ್ತಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ಬೆಂಗಳೂರಿನ ಹೃದಯ ಭಾಗದ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಕಾಮಾಕ್ಷಿ ಪಾಳ್ಯದ ವೃಷಭಾವತಿ ನಗರದ ನಿವಾಸಿ ಚಂದ್ರ(45) ಎಂಬುವರೇ ಮೊಬೈಲ್ ಕಳ್ಳರಿಂದ ಹತ್ಯೆಯಾದಂತ ವ್ಯಕ್ತಿಯಾಗಿದ್ದಾರೆ. ಇವರು ಮೆಜೆಸ್ಟಿಕ್ ನಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಟರ್ಮಿನಲ್ 1ರ 15ನೇ ಪ್ಲಾಟ್ ಫಾರ್ಮ್ ನಲ್ಲಿ ಗುರುವಾರ ಮಧ್ಯಾಹ್ನ ಸುಮಾರು 1.30ಕ್ಕೆ ಬಸ್ ಗಾಗಿ ಕಾಯುತ್ತಿದ್ದಾಗ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.…

Read More