Author: kannadanewsnow09

ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನದ ಕಾರಣ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿಷೇಧಾಜ್ಞೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ. ಸೋ ಬೆಂಗಳೂರಲ್ಲಿ ಎರಡು ದಿನ ಎಣ್ಣೆ ಕೂಡ ಸಿಗೋದಿಲ್ಲ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್.24ರ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಿಷೇಧಾಜ್ಞೆಯ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿ, ಬೆಂಬಲಿಗರು ಸೇರಿ 2ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗೆ ಪ್ರಚಾರ ನಿಷೇಧಿಸಲಾಗಿದೆ. ಪೋಸ್ಟರ್, ಬ್ಯಾನರ್ ಗಳ ಬಳಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ. ಇನ್ನೂ ಪ್ರಚೋದನಕಾರಿ ಭಾಷಣ, ರಾಜಕೀಯ ಸಂಬಂಧಿಸಿದಂತ ಘೋಷಣೆ, ಉದ್ರೇಕಕಾರಿ ಹಾಡು, ಕೂಗಾಟ, ಧ್ವನಿ ವರ್ಧಕ ಬಳಕೆಗೂ ಲೋಕಸಭಾ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ…

Read More

ಬೆಂಗಳೂರು: ತುಮಕೂರಿನಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ.ದೇವೇಗೌಡ ಅವರು ಭಾಗಿಯಾಗಿದ್ದ ಚುನಾವಣಾ ಪ್ರಚಾರ ಸಭೆಗೆ ಕಾಂಗ್ರೆಸ್‌ ಕಾರ್ಯಕರ್ತೆಯರು ನುಗ್ಗಿ ದಾಂಧಲೆ ಮಾಡಿರುವುದು ಗಂಭೀರ ಭದ್ರತಾ ಲೋಪವಾಗಿದೆ ಎಂದು ದೂರಿ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಕೇಂದ್ರ ಚುನಾವಣೆ ಆಯೋಗದ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದಾರೆ. ಅಲ್ಲದೆ; ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಬೆಂಬಲಿಗರು ಈ ದಾಂಧಲೆ ನಡೆಸಿದ್ದಾರೆ. ತಮ್ಮ ಬೆಂಬಲಿಗರಿಗೆ ಡಿಕೆಶಿ ಅವರೇ ಕುಮ್ಮಕ್ಕು ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಆಯೋಗಕ್ಕೆ ಮನವಿ ಮಾಡಲಾಗಿದೆ. ಮಾಜಿ ಸಚಿವರಾದ ಎಸ್.‌ಸುರೇಶ್‌ ಕುಮಾರ್‌, ಜೆಡಿಎಸ್‌ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್‌, ತುಮಕೂರು ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು, ಬಿಜೆಪಿ ಕಾನೂನು ಘಟಕದ ಅಧ್ಯಕ್ಷ ವಸಂತ್‌ ಕುಮಾರ್‌, ಮುಖಂಡರಾದ ಹಿಮಾನಂದ, ದೇವರಾಜ್‌ ಅವರಿದ್ದ ನಿಯೋಗವು ಆಯೋಗಕ್ಕೆ ದೂರು ಸಲ್ಲಿಸಿದೆ.  ಇಂಥ ಘಟನೆಗಳಿಂದ…

Read More

ಬೆಂಗಳೂರು: ಚಿತ್ರದುರ್ಗದಲ್ಲಿ ಭೋವಿ ಮಠದಲ್ಲೇ ರಾಜಕೀಯ ಭಾ,ಣ ಮಾಡಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದಂತ ಸಂಸದ ಬಿವೈ ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಚಿತ್ರದುರ್ಗ ಭೋವಿ ಮಠದಲ್ಲಿ ರಾಜಕೀಯ ಭಾಷಣ ಮಾಡುವ ಮೂಲಕ, ಚುನಾವಣಾ ನೀತಿ ಸಂಹಿತೆಯನ್ನು ಸಂಸದ ಬಿವೈ ರಾಘವೇಂದ್ರ ಉಲ್ಲಂಘನೆ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.  ಈ ಪ್ರಕರಣ ರದ್ದು ಕೋರಿ ಸಂಸದ ಬಿವೈ ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು, ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿದ್ದಾರೆ. ಅಂದಹಾಗೇ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಸಂದೀಪ್ ಎಸ್. ಪಾಟೀಲ್, ಅರ್ಜಿದಾರರು ಎಸಗಿದ್ದಾರೆ ಎನ್ನಲಾದ ಅಪರಾಧಗಳ ಕುರಿತು ಎಫ್‌ಐಆರ್‌ನಲ್ಲಿ ಮಾಹಿತಿ ಉಲ್ಲೇಖಿಸಲಿಲ್ಲ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ…

Read More

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ನೀಡಿದ್ದಾರೆ. ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಎನ್ನುವಂತೆ ಗುಡ್ ಬೈ ಹೇಳಿರುವಂತ ಅವರು, ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ನಾಳೆ ಸಂಸದ ಕರಡಿ ಸಂಗಣ್ಣ ಅವರು ಕೆಸಿಪಿಸಿ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ‘ಕರಡಿ ಸಂಗಣ್ಣ’ ರಾಜೀನಾಮೆ ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕರಡಿ ಸಂಗಣ್ಣ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸಂಸದ ಕರಡಿ ಸಂಗಣ್ಣ ಸೇರಲಿದ್ದಾರೆ ಎನ್ನಲಾಗುತ್ತಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ರಾಜೀನಾಮೆ ನೀಡಿದ್ದಾರೆ.…

Read More

ಧಾರವಾಡ: ಜಿಲ್ಲೆಯಲ್ಲಿ ಇಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಫ್ಲ್ಯಾಟ್ ನಲ್ಲಿ ಇದ್ದಂತ ಬರೋಬ್ಬರಿ 18 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಧಾರವಾಡ ನಗರದಲ್ಲಿ ಖಚಿತ ಮಾಹಿತಿಯ ಮೇರೆಗೆ ಬಸವರಾಜ್ ದತ್ತನವರ್ ಎಂಬುವರ ಫ್ಲ್ಯಾಟ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ದಾಸನಕೊಪ್ಪ ಕ್ರಾಸ್ ಬಳಿಯಲ್ಲಿ ಇರುವಂತ ಅರ್ನಾ ರೆಸಿಡೆನ್ಸಿಯಲ್ಲಿರುವಂತ ಬಸವರಾಜ್ ದತ್ತನವರ್ ಎಂಬುವರ ಫ್ಲ್ಯಾಟ್ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಐಟಿ ಅಧಿಕಾರಿಗಳ ದಾಳಿಯ ವೇಳೆಯಲ್ಲಿ ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ಹಣ ಸಿಕ್ಕಿರೋದಾಗಿ ತಿಳಿದು ಬಂದಿದೆ. ಅದನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. https://kannadanewsnow.com/kannada/kichcha-sudeep-condoles-the-death-of-actor-dwarakish/ https://kannadanewsnow.com/kannada/aamir-khan-files-complaint-against-fake-political-advertisement-fir-filed/

Read More

ಋತುಮಾನಕ್ಕನುಗುಣವಾಗಿ ನೆಡಬೇಕು ಎನ್ನುತ್ತಾರೆ ಹಿರಿಯರು. ಮನುಷ್ಯನಿಗೆ ಯಾವುದೇ ಅವಧಿಯಲ್ಲಿ ಏನಾಗಬೇಕೋ ಅದು ಅವನ ಆಯಾ ವಯಸ್ಸಿನಲ್ಲಿ ಆಗಬೇಕು. ಎಲ್ಲಾ ಹಣವನ್ನು ನಂತರ ಹೊಂದಿಸಬಹುದು. ಆದರೆ ಅದು ವಯಸ್ಸಿನೊಂದಿಗೆ ಹಿಂತಿರುಗುತ್ತದೆಯೇ? ನಾವು ಮತ್ತೆ ಬದುಕಬೇಕಾಗಿದ್ದ ಜೀವನವನ್ನು ನಾವು ಬದುಕಬಹುದೇ? ಆದ್ದರಿಂದ, ಮದುವೆಯು ನಿರ್ದಿಷ್ಟ ವಯಸ್ಸಿನಲ್ಲಿ ನಡೆಯಬೇಕಾದರೆ, ಆ ನಿರ್ದಿಷ್ಟ ವಯಸ್ಸಿನೊಳಗೆ ಮದುವೆ ನಡೆಯಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ…

Read More

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಹೆಣ್ಣುಮಕ್ಕಳನ್ನು ಅಪಹರಿಸಿ (ಕಿಡ್ನಾಪ್) ಅವರ ಅಪ್ಪ-ಅಮ್ಮನಿಂದ ಜಮೀನು ಲಪಟಾಯಿಸಿರುವುದು ನಿಜ. ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿಯ ವಿರುದ್ಧ ನೇರ ಆರೋಪ ಮಾಡಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು; ಹೆಣ್ಣು ಮಗಳ ಆಯಾ ವ್ಯಕ್ತಿ ಕಿಡ್ನಾಪ್ ಮಾಡಿ, ಅವರ ಪೋಷಕರನ್ನು ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಇದು 1996-1997ರಲ್ಲಿ ನಡೆದ ಘಟನೆ. ನನ್ನ ಬಳಿ ಅದರ ದಾಖಲೆಗಳಿವೆ. ಒಂದು ಮಗುವನ್ನು ಕಿಡ್ನಾಪ್ ಮಾಡಿ ಏನು ಮಾಡಿದರು ಎನ್ನುವುದು ತಿಳಿದಿದೆ ಎಂದರು. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿದ್ದ ಜಮೀನು ಬರೆಸಿಕೊಳ್ಳಲು ನೀವು ಏನೆಲ್ಲಾ ಮಾಡಿದರಿ ಎನ್ನುವ ಮಾಹಿತಿಯೂ ನನ್ನ ಬಳಿ ಇದೆ. ಭೂಮಿ ಖರೀದಿ ಮಾಡುತ್ತೇವೆ ಚೆಕ್‌ ಕೊಟ್ಟಿದ್ದೀರಿ. ಆಮೇಲೆ ನೀವು ಕೊಟ್ಟ ಚೆಕ್‌ ನಗದು ಆಗಿಲ್ಲ. ಚೆಕ್ ಡಿಸ್ ಆನರ್ ಮಾಡಿರುವ ದಾಖಲೆ ಇದೆ. ಎಲ್ಲ ಇಟ್ಟಿದ್ದೇನೆ ಎಂದರು. ಸೋಮವಾರದ ದಿನ…

Read More

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕರಡಿ ಸಂಗಣ್ಣ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸಂಸದ ಕರಡಿ ಸಂಗಣ್ಣ ಸೇರಲಿದ್ದಾರೆ ಎನ್ನಲಾಗುತ್ತಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ಕರಡಿ ಸಂಗಣ್ಣ ರಾಜೀನಾಮೆ ನೀಡಿದ್ದಾರೆ. ಇ-ಮೇಲ್ ಮೂಲಕ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಪತ್ರವನ್ನು ಕಳುಹಿಸಿದ್ದರೇ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

Read More

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮತಗಟ್ಟೆ ಸಿಬ್ಬಂದಿಗಳಿಗೆ ಮಂಗಳವಾರ ಸಹ್ಯಾದ್ರಿ ವಾಣಿಜ್ಯ ಮತ್ತು‌ ನಿರ್ವಹಣಾ ಕಾಲೇಜಿನಲ್ಲಿ ಒಂದನೇ ಹಂತದ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳ ಕೇಂದ್ರಸ್ಥಾನಗಳಲ್ಲಿ ಮತಗಟ್ಟೆಗೆ ನಿಯೋಜಿಸಲಾಗುವ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ನಡೆಸಲಾಯಿತು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು, ಭದ್ರಾವತಿ ವಿಧಾನಸಭಾ ಕ್ಷೇತ್ರ ಸಂಚಿಹೊನ್ನಮ್ಮ ಬಾಲಿಕ ಪದವಿ ಪೂರ್ವ ಕಾಲೇಜು, ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಶಾಂತವೇರಿ ಗೋಪಾಲಗೌಡ ರಂಗ ಮಂದಿರ, ಶಿಕಾರಿಪುರ ವಿಧಾನಸಭಾ ಕ್ಷೇತ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಸೊರಬ ವಿಧಾನಸಭಾ ಕ್ಷೇತ್ರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಾಗರ ವಿಧಾನಸಭಾ ಕ್ಷೇತ್ರ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜು, ಕೇಂದ್ರಗಳಲ್ಲಿ ತರಬೇತಿ ಕಾರ್ಯಾಗಾರವನ್ನು ನಡೆಸಲಾಯಿತು. https://kannadanewsnow.com/kannada/install-voter-service-centres-and-signboards-in-places-where-there-are-more-than-three-polling-stations-tushar-giri-nath/ https://kannadanewsnow.com/kannada/kichcha-sudeep-condoles-the-death-of-actor-dwarakish/

Read More

ಬೆಂಗಳೂರು: ನಗರದಲ್ಲಿ 3ಕ್ಕಿಂತ ಹೆಚ್ಚು ಮತಗಟ್ಟೆಗಳಿರುವ ಸ್ಥಳಗಳಲ್ಲಿ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತದಾರರ ಸೇವಾ ಕೇಂದ್ರ ಹಾಗೂ ಮತಗಟ್ಟೆಯ ಎಲ್ಲಾ ಮಾಹಿತಿಯುಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ವಿಷಯಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ 1409 ಕಡೆ 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರಲಿದ್ದು, 3ಕ್ಕಿಂತ ಹೆಚ್ಚು ಮತಗಟ್ಟೆಗಳು ಬರುವ ಕಡೆ ಮತದಾರರ ಸೇವಾ ಕೇಂದ್ರ ಸ್ಥಾಪಿಸಬೇಕು. ಜೊತೆಗೆ ಮಾಡಲ್ ಲೇಔಟ್ ಪ್ಲಾನ್ ಮಾಡಿಕೊಂಡು ಮತಗಟ್ಟೆಗಳ ಸ್ಥಳದಲ್ಲಿ ಏನೆಲ್ಲಾ ವ್ಯವಸ್ಥೆಯಿದೆ, ಎಲ್ಲೆಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬುದರ ಸಂಪೂರ್ಣ ವಿವರಗಳುಳ್ಳ ನಿರ್ದೇಶನ ಫಲಕಗಳನ್ನು ಅಳವಡಿಸಬೇಕು. ಅಲ್ಲದೆ ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು ಎಂದು ಹೇಳಿದರು. ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಮಾಡಿ: ಪಾರ್ಕಿಂಗ್ ವ್ಯವಸ್ಥೆಯಿರುವ ಮತಗಟ್ಟೆಗಳ ಸ್ಥಳದಲ್ಲಿ ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸಬೇಕು. ಜೊತೆಗೆ ಪಾರ್ಕಿಂಗ್ ಸ್ಥಳದಲ್ಲಿ ಎಷ್ಟು…

Read More