Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸೆ.22ರಂದು ನಡೆಸಲು ನಿಗದಿ ಪಡಿಸಿರುವಂತ ಪಿಎಸ್ಐ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಸೆಪ್ಟೆಂಬರ್ 22 ರಂದು ಯುಪಿಎಸ್ಸಿ ನಾಗರಿಕ ಸೇವೆಗಳ ಮುಖ್ಯ ಮತ್ತು ಎಸ್ಎಸ್ಸಿ ಸಿಜಿಎಲ್ ಶ್ರೇಣಿ 1 ರಂತಹ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳೊಂದಿಗೆ ಸ್ಪಷ್ಟ ವೇಳಾಪಟ್ಟಿಯ ಘರ್ಷಣೆಗಳ ಹೊರತಾಗಿಯೂ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಲು ನಿರಾಕರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ವರ್ತನೆಯನ್ನು ಪ್ರದರ್ಶಿಸುತ್ತಿದೆ. ಯುಪಿಎಸ್ಸಿ ಪರೀಕ್ಷೆಗೂ ಮುನ್ನವೇ ಪಿಎಸ್ಐ ಪರೀಕ್ಷೆ ನಿಗದಿಯಾಗಿದೆ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆ ಶುದ್ಧ ಸುಳ್ಳು ಎಂದಿದ್ದಾರೆ. ಯುಪಿಎಸ್ಸಿ ಪರೀಕ್ಷೆಯ ಕ್ಯಾಲೆಂಡರ್ ಅನ್ನು ಮೇ 10, 2023 ರಂದು ಮುಂಚಿತವಾಗಿ ಬಿಡುಗಡೆ ಮಾಡಲಾಯಿತು. ಏತನ್ಮಧ್ಯೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆರಂಭದಲ್ಲಿ ಪಿಎಸ್ಐ ಪರೀಕ್ಷೆಯನ್ನು ಮಾರ್ಚ್ 8, 2024 ರಂದು ನಿಗದಿಪಡಿಸಿತ್ತು. ಆದರೆ ಅದನ್ನು ಮಾರ್ಚ್ 21, 2024 ರಂದು ಮುಂದೂಡಲಾಯಿತು. ಇದಲ್ಲದೆ,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 06 ಎಸ್ಆರ್ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ 06 ಎಸ್ಆರ್ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ…
ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು ಎಂದು ಆಗ್ರಹಿಸಿದರು. ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ…
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಲಾಜಿಸ್ಟಿಕ್ಸ್ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯೊಂದಿಗೆ, ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ವಡೋದರಾದ ಗತಿ ಶಕ್ತಿ ವಿಶ್ವವಿದ್ಯಾಲಯದೊಂದಿಗೆ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದರು. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಭಾಗವಹಿಸಿದ್ದರು. ಈ ತಿಳಿವಳಿಕೆ ಒಪ್ಪಂದವು ಭಾರತದ ಮಿಲಿಟರಿ ಕಾರ್ಯಾಚರಣೆಗಳ ವ್ಯವಸ್ಥಾಪನಾ ಬೆನ್ನೆಲುಬನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಪಿಎಂ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ 2021 ಮತ್ತು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿ 2022 ಸೇರಿದಂತೆ ಸರ್ಕಾರದ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳೊಂದಿಗೆ ಹೊಂದಿಕೆಯಾಗುವ ಮೂಲಕ ಎರಡೂ ಸೇವೆಗಳ ಸಿಬ್ಬಂದಿಯ ಲಾಜಿಸ್ಟಿಕ್ಸ್ ಪರಿಣತಿಯನ್ನು ಹೆಚ್ಚಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಸುಧಾರಿತ ಲಾಜಿಸ್ಟಿಕ್ಸ್, ಶಿಕ್ಷಣ ಮತ್ತು ಸಂಶೋಧನೆಯೊಂದಿಗೆ ಸಶಸ್ತ್ರ ಪಡೆಗಳನ್ನು ಸಬಲೀಕರಣಗೊಳಿಸುವಲ್ಲಿ ವಿಶ್ವವಿದ್ಯಾಲಯದ ಪಾತ್ರದ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದರು. ಸೈದ್ಧಾಂತಿಕ ಜ್ಞಾನ ಮತ್ತು ನೈಜ-ಪ್ರಪಂಚದ ಅನ್ವಯದ…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿರುವಂತ ಅವರು, ಆಧುನಿಕ ಕಾಲಘಟ್ಟದಲ್ಲಿ ಭಾಷಾಭಿಮಾನ ಎನ್ನುವುದು ನೇಪಥ್ಯಕ್ಕೆ ಸರಿಯುತ್ತಿರುವುದು ಸಾಮಾಜಿಕ ಸ್ವಾಸ್ಥ್ಯದ ದೃಷ್ಠಿಯಿಂದ ಆರೋಗ್ಯಕರ ಬೆಳವಣಿಗೆ ಆಗಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಸಾಂಸ್ಥಿಕ ಪ್ರಯತ್ನಗಳು ಮಾತ್ರ ನಿರೀಕ್ಷಿತ ಪರಿಣಾಮವನ್ನು ದೊರಕಿಸಿ ಕೊಡುವುದಲ್ಲದೇ ರಾಜ್ಯಭಾಷೆಯ ಉಳಿವಿಗೆ ಮಹತ್ವದ ಕೊಡುಗೆಯನ್ನು ನೀಡುತ್ತವೆ. ಇತ್ತೀಚಿಗೆ ನಾನು ರಾಯಚೂರಿಗೆ ಕಾರ್ಯನಿಮಿತ್ತ ತೆರಳದ ಸಂದರ್ಭದಲ್ಲಿ ಜಿಲ್ಲೆಯ ವೈದ್ಯರು ತಮ್ಮ ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕೆಂದು ಪ್ರೇರೇಪಿಸಿ ಅಲ್ಲಿನ ಜಿಲ್ಲಾಧಿಕಾರಿಯವರಿಗೆ ಈ ಕುರಿತಂತೆ ಅಗತ್ಯ ಸೂಚನೆಗಳನ್ನು ಹೊರಡಿಸಲು ನಿರ್ದೇಶನವನ್ನು ನೀಡಿದ್ದೆ ಎಂದಿದ್ದಾರೆ. ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಗಮನಿಸಿ ನೂರಾರು ವೈದ್ಯರು ಸ್ವಯಂಪ್ರೇರಿತರಾಗಿ ತಾವು ಕನ್ನಡ ಭಾಷೆಯನ್ನು ಉಳಿಸಲು ಔಷಧಿ ಚೀಟಿಗಳನ್ನು ಕನ್ನಡದಲ್ಲಿ…
ಬೆಂಗಳೂರು: ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡು ಯೋಜನೆಯನ್ನು ಪುನರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದಂತ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ. ಈ ಕುರಿತಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವಂತ ಅವರು, ಭಾರತ ಸರ್ಕಾರದ ರೈಲ್ವೆ ಮಂತ್ರಾಲಯದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆ ಈ ಮೊದಲು ಜಾರಿಯಲ್ಲಿದ್ದು. ಇದರಿಂದಾಗಿ ಶೇ.50ರಷ್ಟು ರಿಯಾಯಿತಿ ದರದಲ್ಲಿ ರೈಲು ಪ್ರಯಾಣ ಮಾಡುವ ಸೌಲಭ್ಯವನ್ನು ಪತ್ರಕರ್ತರಿಗೆ ಕಲ್ಪಿಸಲಾಗಿತ್ತು ಎಂದಿದ್ದಾರೆ. ಕೋವಿಡ್ ನಂತ್ರ ಪತ್ರಕರ್ತರ ರೈಲ್ವೆ ಪಾಸ್ ಸೌಲಭ್ಯವನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರದಿಂದ ಪತ್ರಕರ್ತರಿಗೆ ಲಭ್ಯವಿದ್ದ ಯೋಜನೆಯು ಇಲ್ಲದಂತಾಗಿದೆ. ಆದುದರಿಂದ ತಾವುಗಳು ಈ ಬಗ್ಗೆ ಮರುಚಿಂತನೆ ಮಾಡಿ, ಮಾನ್ಯತೆ ಪಡೆದ ಪತ್ರಕರ್ತರಿಗೆ ಈ ಮೊದಲು ಇದ್ದಂತೆ ರೈಲ್ವೆ ಪಾಸ್ ಸೌಲಭ್ಯವನ್ನು ಕೂಡಲೇ ಪುನರಾರಂಭಿಸುವಂತೆ ವಿನಂತಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/orr-business-corridor-to-be-implemented-in-bengaluru-at-a-cost-of-rs-25000-crore-h-k-patil/ https://kannadanewsnow.com/kannada/there-is-no-competition-for-cms-post-in-karnataka-there-is-a-fight-going-on-bommai/
ಬೆಂಗಳೂರು: ನಗರದಲ್ಲಿ 25,000 ಕೋಟಿ ವೆಚ್ಚದಲ್ಲಿ ಒ ಆರ್ ಆರ್, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1833137265754653148 ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 285 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ಪಾರಂಪರಿಕ ಮತ್ತು ಶ್ರದ್ಧಾ ಪ್ರವಾಸೋದ್ಯಮದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ ಎಂದು ಮಾನ್ಯ ಸಚಿವರು ವಿವರಿಸಿದರು. ಕರ್ನಾಟಕದ 5 ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರ್ಪಡೆಯಾಗಿದ್ದು ಡೆಕ್ಕನ್ ಸುಲ್ತನೇಟ್ನ ಕೋಟೆಗಳು, ಶ್ರೀರಂಗಪಟ್ಟಣದ ಸ್ಮಾರಕಗಳು, ಐಹೊಳೆ-ಬಾದಾಮಿಯ ಮಂದಿರಗಳ ಶಿಲ್ಪಕಲೆ, ಹಿರೆಬೆಣಕಲ್ನ ಮೆಗಾಲಿಟಿಕ್ ಸೈಟ್ ಮತ್ತು ಬೀದರ್ನ ಕರೇಜ್ ವ್ಯವಸ್ಥೆ ಹಾಗೂ ಲಕ್ಕುಂಡಿಯ ಪಾರಂಪರಿಕ ಶಿಲ್ಪಕಲಾ ವೈಭವಗಳು ಯುನೆಸ್ಕೋದ ವಿಶ್ವಪಾರಂಪರಿಕ ತಾಣಗಳ…
ಗದಗ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿಧ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ ನನಗೆ ಕೆಟ್ಟ ಅನಿಸತ್ತದೆ. ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗಲೇ ಎಲ್ಲರೂ ಸಿಎಂ ಟಾವೆಲ್ ಹಾಕುವುದು, ನಾನು ಸಿಎಂ, ನಾನು ಸಿಎಂ ಅಂತಾ ಪೈಪೋಟಿ ಮಾಡುತ್ತಿದ್ದಾರೆ. ಒಬ್ಬ ನಾಯಕನ ಬಗ್ಗೆ ಅವಿಶ್ವಾಸ ಏನಿದೆ ಅನ್ನುವುದು ಇದರಿಂದ ಗೊತ್ತಾಗತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ಮೊದಲು ತಮ್ಮ ಸಚಿವ ಸಂಪುಟ ಸರಿ ಮಾಡಿಕೊಳ್ಳಬೇಕು. ಆಮೇಲೆ ತನ್ನಿಂದ ತಾನೇ ಆಡಳಿತ ಬಿಗಿಯಾಗತ್ತದೆ. ಒಬ್ಬ ಮಂತ್ರಿಯೂ ಅಭಿವೃದ್ಧಿ ಬಗ್ಗೆ ಗಮನ ಹರಿಸ್ತಿಲ್ಲ. ಬರೀ ರಾಜಕಾರಣ, ಅಧಿಕಾರ ಹಿಡಿಯುವಂತಹ ವ್ಯಾಮೋಹದಲ್ಲಿದ್ದಾರೆ ಎಂದರು. ರಾಜ್ಯದಲ್ಲಿ ಅತಿ ಹೆಚ್ಚು ಮಳೆ ಆಗಿ ರೈತರು ಸಂಕಷ್ಟದಲ್ಲಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆ ಇದೆ, ಹುದ್ದೆಗಳ ಭರ್ತಿ ಸರಿಯಾಗ್ತಾ ಇಲ್ಲ. ಪರೀಕ್ಷೆಗಳು ಸರಿ ಆಗುತ್ತಿಲ್ಲ, ಅಂಗನವಾಡಿಯವರಿಗೆ…
ಮಂಡ್ಯ : ತೀವ್ರ ಕುತೂಹಲ ಕೆರಳಿಸಿದ್ದ ಮದ್ದೂರು ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನ ಕೈ ವಶವಾಗಿದ್ದು, ಸ್ಪಷ್ಟ ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ಮೈತ್ರಿ ನಾಯಕರು ವಿಫಲವಾಗಿ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಜೆಡಿಎಸ್ ನ 12 ಮಂದಿ ಸದಸ್ಯರ ಪೈಕಿ 6 ಮಂದಿ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಜೆಡಿಎಸ್ – ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ. ಆದರೇ ಕಾಂಗ್ರೆಸ್ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದೆ. ಕೇವಲ 3 ಮಂದಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಜೊತೆಗೆ 6 ಮಂದಿ ಜೆಡಿಎಸ್, 4 ಪಕ್ಷೇತರ ಹಾಗೂ 1 ಬಿಜೆಪಿ ಸದಸ್ಯರ ಜೊತೆಗೆ ಶಾಸಕ ಕೆ.ಎಂ.ಉದಯ್ ಅವರ ಮತಗಳ ಬೆಂಬಲದೊಂದಿಗೆ ಪುರಸಭೆಯ ಅಧ್ಯಕ್ಷರಾಗಿ ಕೋಕಿಲ ಅರುಣ್ ಹಾಗೂ ಉಪಾಧ್ಯಕ್ಷರಾಗಿ ಟಿ.ಆರ್.ಪ್ರಸನ್ನಕುಮಾರ್ ಅವರುಗಳು 15 ಮತ ಪಡೆದು ಆಯ್ಕೆಯಾಗಿದ್ದು, ಪುರಸಭೆಯ ಅಧಿಕಾರ ಹಿಡಿಯುವಲ್ಲಿ ಕೆ.ಎಂ.ಉದಯ್ ಯಶಸ್ವಿಯಾಗಿದ್ದಾರೆ. ಜೆಡಿಎಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಶೋಭಾರಾಣಿ, ಉಪಾಧ್ಯಕ್ಷ ಸ್ಥಾನಕ್ಕೆ ಮನೋಜ್ ಕುಮಾರ್ ನಾಮಪತ್ರ ಸಲ್ಲಿಸಿದರು. ಚುನಾವಣಾ ಪ್ರಕ್ರಿಯೆ ಕಾಲಕ್ಕೆ…
ಬೆಂಗಳೂರು: ಯುವ ಸಬಲೀಕರಣ ಮತ್ತು ಉದ್ಯೋಗ ಉಪಕ್ರಮವಾಗಿ ಜಾಗತಿಕ ಪಾತ್ರಗಳಿಗಾಗಿ ಯುವಕರಿಗೆ ಐಟಿ ಕೌಶಲ್ಯಗಳಲ್ಲಿ ತರಬೇತಿ ನೀಡಲು ನಿಪುಣ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಕೂಡ ಅನುಮೋದನೆ ನೀಡಿದೆ. ಹಾಗಾದ್ರೇ ಏನಿದು ನಿಪುಣ ಕರ್ನಾಟಕ ಯೋಜನೆ? ಇದರ ಜಾರಿಯಿಂದ ಪ್ರಯೋಜನ ಏನು ಎನ್ನುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದು, ಮುಂದಿದೆ ಓದಿ. ಕರ್ನಾಟಕದಲ್ಲಿ ಯುವಕರಿಗೆ ಕೌಶಲ್ಯಭರಿತ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ದೃಷ್ಟಿಯಿಂದ ರಾಜ್ಯ ಐಟಿ-ಬಿಟಿ, ಎಲೆಕ್ಟ್ರಾನಿಕ್ಸ್ ಇಲಾಖೆ ವತಿಯಿಂದ “ನಿಪುಣ ಕರ್ನಾಟಕ’ ಶೀರ್ಷಿಕೆಯಡಿ “ಸ್ಕಿಲ್ ಲೋಕಲ್-ಗೋ ಗ್ಲೋಬಲ್” ಎಂಬ ವಿನೂತನ ಕಾರ್ಯಕ್ರಮ ಜಾರಿಗೊಳಿಸಲು ಮುಂದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಹಿಂದಿನಿಂದಲೂ ರಾಜ್ಯದಲ್ಲಿ ಉದ್ಯಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಒತ್ತು ನೀಡುತ್ತಾ ಬಂದಿದೆ. ಇದೀಗ, ಯುವಕರಿಗೆ ಎಲ್ಲಾ ಕ್ಷೇತ್ರದಲ್ಲೂ ಅದರಲ್ಲೂ ಐಟಿ ವಲಯದಲ್ಲಿ ಗಣನೀಯ ಉದ್ಯೋಗಾವಕಾಶ…














