Author: kannadanewsnow09

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2023 ರ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶಗಳನ್ನು ಏಪ್ರಿಲ್ 16 ರಂದು ಬಿಡುಗಡೆ ಮಾಡಿದೆ. ಆಯೋಗದ ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ಲಭ್ಯವಿದೆ. ಬಹಿರಂಗಗೊಳಿಸಲಾದ ಪಟ್ಟಿಯಲ್ಲಿ ಒಟ್ಟು 1016 ಪ್ರಸ್ತಾವಿತ ನೇಮಕಾತಿಗಳು ಸೇರಿವೆ. ಯುಪಿಎಸ್ಸಿ ಸಿಎಸ್ಇ 2023 ಅಭ್ಯರ್ಥಿಗಳಲ್ಲಿ, ಆದಿತ್ಯ ಶ್ರೀವಾಸ್ತವ ಅಖಿಲ ಭಾರತ 1 ನೇ ರ್ಯಾಂಕ್ ಗಳಿಸಿದ್ದಾರೆ. ಲಕ್ನೋ ಮೂಲದ ಆದಿತ್ಯ ಶ್ರೀವಾಸ್ತವ ಅವರು ಸಿವಿಲ್ ಪರೀಕ್ಷೆಗೆ ಸಿದ್ಧರಾಗುವತ್ತ ಗಮನ ಹರಿಸಿ ಅಕ್ಟೋಬರ್ 2017 ರಲ್ಲಿ ತಮ್ಮ ಪರೀಕ್ಷಾ ಸಿದ್ಧತೆಯನ್ನು ಪ್ರಾರಂಭಿಸಿದರು. 2022 ರ ಯುಪಿಎಸ್ಸಿ ಸಿಎಸ್ಇ ಪರೀಕ್ಷೆಯಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಆಯ್ಕೆಯಾಗುವ ಮೂಲಕ ಅವರ ಮೊದಲ ಗಮನಾರ್ಹ ಸಾಧನೆ ಕಂಡುಬಂದಿದೆ. ಆ ವರ್ಷ ಅವರು ರಾಷ್ಟ್ರದಲ್ಲಿ 216 ನೇ ಸ್ಥಾನದಲ್ಲಿದ್ದರು. ಪ್ರಸ್ತುತ, ಶ್ರೀವಾಸ್ತವ ಬಂಗಾಳ ಕೇಡರ್ಗೆ ಸೇರಿದ ಐಪಿಎಸ್ ಅಧಿಕಾರಿಯಾಗಲು ತರಬೇತಿ ಪಡೆಯುತ್ತಿದ್ದಾರೆ. ಆದಿತ್ಯ ಶ್ರೀವಾಸ್ತವ ಅವರು ತಮ್ಮ ಐಪಿಎಸ್ ತರಬೇತಿಯ ಜೊತೆಗೆ ಯುಪಿಎಸ್ಸಿ ಸಿಎಸ್ಇ 2023…

Read More

ಬೆಂಗಳೂರು: ರಾಜ್ಯದಲ್ಲಿ ನರೇಂದ್ರ ಮೋದಿಯವರ ಅಲೆ ಕಿಂಚಿತ್ತೂ ಇಲ್ಲ. ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಲಿದೆ. 400 ಸ್ಥಾನ ಗೆಲ್ಲುತ್ತೇವೆ ಎಂದು ಬೀಗುತ್ತಿರುವ ಬಿಜೆಪಿ ದೇಶದಲ್ಲಿ 200 ಕ್ಷೇತ್ರಗಳನ್ನೂ ಗೆಲ್ಲುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ನಿವಾಸದಲ್ಲಿ ತಮ್ಮ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ನಾನು ವಿಜಯಪುರ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಓಡಾಡಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುವುದು ನಮ್ಮ ಕರ್ತವ್ಯ. ಜನರು ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್ ಪರವಾಗಿ ಸ್ಪಂದಿಸುತ್ತಿದ್ದಾರೆ. ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ ಮುಂತಾದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮೋದಿಯವರ 10 ವರ್ಷಗಳ ಆಡಳಿತ ಜನರಿಗೆ ಸಾಕಾಗಿ ಹೋಗಿದೆ’ ಎಂದರು. ಮೋದಿ ಅಚ್ಛೇ ದಿನ್ ಬಗ್ಗೆ ಮಾತನಾಡಿದರು. ಆದರೆ ಅದು ಯಾವತ್ತೂ ಬರಲಿಲ್ಲ. ರಾಜ್ಯದ ಕಾಂಗ್ರೆಸ್…

Read More

ಬೆಂಗಳೂರು: ಹಣ, ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಜನತೆ ಈಗ ತಕ್ಕ ಉತ್ತರ ನೀಡಲು ಸಜ್ಜಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಳವಳ್ಳಿಯಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎನ್‍ಡಿಎ ಅಭ್ಯರ್ಥಿ ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಜನಬಲದಿಂದ ಗೆಲ್ಲಲಿದ್ದಾರೆ. ಜನರ ಆಶೀರ್ವಾದ, ತಾಯಂದಿರ ಆಶೀರ್ವಾದದಿಂದ ಎನ್‍ಡಿಎ ಅಭ್ಯರ್ಥಿಗಳಿಗೆ ಗೆಲುವಾಗಲಿದೆ ಎಂದು ಇಲ್ಲಿ ಸೇರಿದ ಜನರು ಸಂದೇಶ ನೀಡಿದ್ದಾರೆ ಎಂದು ವಿಶ್ಲೇಷಿಸಿದರು. ಲೋಕಸಭಾ ಚುನಾವಣೆಯಲ್ಲಿ ದೇಶದ ಸುರಕ್ಷತೆ, ಅಭಿವೃದ್ಧಿ ಕಾರ್ಯಕ್ಕಾಗಿ ಮೋದಿಜೀ ಮತ್ತೊಮ್ಮೆ ಎಂದು ದೇಶ- ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ ಎಂದು ಅವರು ತಿಳಿಸಿದರು. ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮಣ್ಣು ಹಾಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಅವರು ಟೀಕಿಸಿದರು. ಪ್ರಧಾನಿ ಮೋದಿಜೀ ಅವರ ನೇತೃತ್ವದ ಎನ್‍ಡಿಎ ಕೂಟದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ ಎಂದ ಅವರು, ಸಿದ್ದರಾಮಯ್ಯನವರು ಅಧಿಕಾರಕ್ಕೆ ಬರಲು 10 ಕೆಜಿ ಅಕ್ಕಿ…

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಜೊತೆಗೆ ಕಾಲರಾ ಆರ್ಭಟಿಸುತ್ತಿದೆ. ಇಂದು ಬೆಂಗಳೂರು ನಗರದಲ್ಲಿ ಮತ್ತೊಬ್ಬರಿಗೆ ಕಾಲರಾ ದೃಢಪಟ್ಟಿದ್ದು, ರೋಗಿಗಳ ಸಂಖ್ಯೆ ರಾಜ್ಯಾಧ್ಯಂತ 27ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಜನವರಿಯಿಂದ ಮಾರ್ಚ್ ವರೆಗೆ ಬೆಂಗಳೂರು ನಗರದಲ್ಲಿ ಇಬ್ಬರಿಗೆ ಕಾಲರಾ ದೃಢಪಟ್ಟಿದೆ. ಏಪ್ರಿಲ್ 2024ರವರೆಗೆ 7 ಕೇಸ್ ಜೊತೆಗೆ ಇಂದು ಒಬ್ಬರಿಗೆ ಕಾಲರಾ ದೃಢಪಟ್ಟ ಕಾರಣ, 10 ಮಂದಿಗೆ ಕಾಲರಾ ದೃಢಪಟ್ಟಂತೆ ಆಗಿದೆ ಎಂದಿದೆ. ಈವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 13 ಜನರಿಗೆ ಕಾಲರಾ ದೃಢಪಟ್ಟಿದ್ದರೇ, ಮೈಸೂರಲ್ಲಿ ಮೂವರಿಗೆ, ರಾಮನಗರದಲ್ಲಿ ಒಬ್ಬರು ಸೇರಿದಂತೆ ಒಟ್ಟು 27 ಜನರಿಗೆ ರಾಜ್ಯಾಧ್ಯಂತ ಕಾಲರಾ ದೃಢಪಟ್ಟಿದೆ ಎಂದು ತಿಳಿಸಿದೆ. https://kannadanewsnow.com/kannada/breaking-7-killed-as-auto-collides-with-jcb-in-road-accident-in-patna/ https://kannadanewsnow.com/kannada/kichcha-sudeep-condoles-the-death-of-actor-dwarakish/

Read More

ಬೆಂಗಳೂರು: ಇಂದು ನಟ ದ್ವಾರಕೀಶ್ ಅವರು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇಂದು ಟ್ವಿಟ್ ಮಾಡಿರುವಂತ ಅವರು, ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು ಎಂದು ಹೇಳಿದ್ದಾರೆ. ನಟ ದ್ವಾರಕೀಶ್ ಅವರ ಕುಟುಂಬಕ್ಕೆ ತೀವ್ರವಾದ ಸಂತಾಪಗಳು. ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ತಿಳಿಸಿದ್ದಾರೆ. https://twitter.com/KicchaSudeep/status/1780146449713664246 https://kannadanewsnow.com/kannada/kannada-film-industry-to-shut-down-tomorrow-after-actor-dwarakishs-death/ https://kannadanewsnow.com/kannada/lok-sabha-elections-rahul-gandhi-to-campaign-in-mandya-kolar-tomorrow/

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಪ್ರಚಾರದಲ್ಲಿ ತೊಡಗಿದೆ. ನಾಳೆ ಮಂಡ್ಯ, ಕೋಲಾರದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ರಣಕಹಳೆಯನ್ನು ಮೊಳಗಿಸಲಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ವಿಚಾರವಾಗಿ ಕೇಳಿದಾಗ, “ರಾಹುಲ್ ಗಾಂಧಿ ಅವರು ನಾಳೆ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದರು. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು. https://kannadanewsnow.com/kannada/kannada-film-industry-to-shut-down-tomorrow-after-actor-dwarakishs-death/ https://kannadanewsnow.com/kannada/breaking-7-killed-as-auto-collides-with-jcb-in-road-accident-in-patna/

Read More

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಇಂದು ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನ ಹೊಂದಿದ್ದಾರೆ. ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ. ಈ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಒಂದು ದಿನ ಕನ್ನಡ ಚಿತ್ರರಂಗದ ಎಲ್ಲಾ ಕಾರ್ಯವನ್ನು ಬಂದ್ ಮಾಡಿ, ಸಂತಾಪ ಸೂಚಿಸೋ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಂತೆ ನಟ ದ್ವಾರಕೀಶ್ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಅವರು, ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಗುತ್ತಿದೆ ಎಂದರು. ಎಲ್ಲಾ ಕಲಾವಿಧರಿಗೂ ನಾನು ಮನವಿ ಮಾಡುತ್ತೇನೆ. ನಾಳೆ ಒಂದು ದಿನ ಚಿತ್ರರಂಗದ ಎಲ್ಲಾ ಕಾರ್ಯವನ್ನು ಬಂದ್ ಮಾಡಲು ಮನವಿ ಮಾಡುವೆ. ನಾಳೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಮನವಿ ಮಾಡುತ್ತೇನೆ ಎಂದರು. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ…

Read More

ಬೆಂಗಳೂರು : ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ನೀವು ಕೊಟ್ಟಿರುವ ಚರ್ಚೆ ಸವಾಲನ್ನು ಕುಮಾರಸ್ವಾಮಿ ಅವರು ಸ್ವೀಕರಿಸುತ್ತಿಲ್ಲ ಯಾಕೆ ಎಂದು ಮಾಧ್ಯಮಗಳು ಕೇಳಿದಾಗ ಉತ್ತರಿಸಿದಂತ ಅವರು, “ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುವುದೇ ಅವರಿಂದಲೂ ಅದನ್ನು ಸ್ವೀಕರಿಸಲು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ…

Read More

ನವದೆಹಲಿ: ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಂತಾವ ಸೂಚಿಸಿದ್ದಾರೆ. ಅವರೊಂದಿಗಿನ ನಟನೆಯ ನೆನಪು ಮಾಡಿಕೊಂಡು, ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನದ ಸುದ್ದಿ ಕೇಳಿ ನೋವು ತಂದಿದೆ. ಅವರೊಂದಿಗೆ ನಾನು ಹಲವು ಚಿತ್ರಗಳಲ್ಲಿ ನಟಿಸಿದ್ದೇನೆ ಎಂದಿದ್ದಾರೆ. ನನ್ನ ಬಹುಕಾಲದ ಆತ್ಮೀಯ ಸ್ನೇಹಿತ ದ್ವಾರಕೇಶ್ ಅವರ ನಿಧನ ನನಗೆ ತುಂಬಾ ನೋವುಂಟು ಮಾಡಿದೆ. ಹಾಸ್ಯನಟನಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು ದೊಡ್ಡ ನಿರ್ಮಾಪಕ ಮತ್ತು ನಿರ್ದೇಶಕರಾಗಿ ಬೆಳೆದರು. ಪ್ರೀತಿಯ ನೆನಪುಗಳು ನನ್ನ ಮನಸ್ಸಿಗೆ ಬರುತ್ತವೆ.. ಅವರ ಕುಟುಂಬ ಮತ್ತು ಆತ್ಮೀಯರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದಿದ್ದಾರೆ. https://twitter.com/rajinikanth/status/1780160300060115354

Read More

ಬೆಂಗಳೂರು: ಇಂದು ನಿಧನರಾದಂತ ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವರ ನಿವಾಸದಲ್ಲೇ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಇಂದು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವಂತ ನಟ ದ್ವಾರಕೀಶ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಂದು ಇಡೀ ದಿನ ದ್ವಾರಕೀಶ್ ನಿವಾಸದಲ್ಲಿ ಸಾರ್ವಜನಿಕರಿಗೆ ನಟನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಜನರು ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದಿದ್ದಾರೆ. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಕೂಡ ಅಂತಿಮ ದರ್ಶನ ಪಡೆದಿದ್ದಾರೆ. ಇನ್ನೂ ನಾಳೆ ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರಕ್ಕೆ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಅಲ್ಲಿಯೂ ಸಾರ್ವಜನಿಕರ ದರ್ಶನಕ್ಕೆ…

Read More