Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ 2ನೇ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ದೇಶ/ವಿದೇಶಿ ಪ್ರವಾಸಿಗರಿಗೆ ನೀಡಲು “ಒಂದು ರಾಜ್ಯ-ಹಲವು ವಿಸ್ಮಯಗಳು” ಎಂಬುದನ್ನು ಪರಿಚಯಿಸುವುದರ ಮೂಲಕ ಜಿಲ್ಲೆಯ ಭವ್ಯ ಸಂಸ್ಕøತಿ, ವೈವಿಧ್ಯತೆಗಳ ವಿಭಿನ್ನ ಕಲೆ-ವಾಸ್ತುಶಿಲ್ಪ ಹಾಗೂ ಜಿಲ್ಲೆಯ ಸಮಗ್ರತೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿವಿಧ ಆಯಾಮಗಳ ಮೂಲಕ ಪ್ರವಾಸಿಗರನ್ನು ಸೆಳೆಯುವಂತಿರಬೇಕು. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್ 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿದ ಜುಲೈ 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-251444 / 7019740132…
ಬೆಂಗಳೂರು: ಯುವ ರಾಜ ಕುಮಾರ ಹಾಗೂ ಶ್ರೀದೇವಿ ಭೈರಪ್ಪ ದಾಂಪತ್ಯದಲ್ಲಿ ಬಿರುಕು ಕಂಡಿತ್ತು. ವಿವಾಹ ವಿಚ್ಛೇದನ ನೀಡುವಂತೆ ಯುವ ರಾಜಕುಮಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಶ್ರೀದೇವಿ ಭೈರಪ್ಪ, ನಟಿ ಸಪ್ತಮಿ ಗೌಡ ಜೊತೆಗೆ ಯುವ ರಾಜಕುಮಾರ ಸಂಬಂಧ ಹೊಂದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧಕಾಜ್ಞೆ ನೀಡಿದೆ. ಯುವ ರಾಜಕುಮಾರ ವಿವಾಹ ವಿಚ್ಛೇದನ ಪ್ರಕರಣದಲ್ಲಿ ಪತ್ನಿ ಶ್ರೀದೇವಿ ಭೈರಪ್ಪ ಅವರು ನಟಿ ಸಪ್ತಮಿ ಗೌಡ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಯುವ ಹಾಗೂ ಸಪ್ತಮಿ ಗೌಡಗೆ ಸಂಬಂಧವಿದೆ. ಅವರಿಬ್ಬರು ಒಟ್ಟಿಗೆ ಓಡಾಡುತ್ತಿದ್ದಾರೆ ಸೇರಿದಂತೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಶ್ರೀದೇವಿ ಭೈರಪ್ಪ ಅವರ ಅವಹೇಳನಕಾರಿ ಹೇಳಿಕೆ ವಿರುದ್ಧ ನಟಿ ಸಪ್ತಮಿ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಶ್ರೀದೇವಿ ಭೈರಪ್ಪ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದಂತ ಬೆಂಗಳೂರು ಸಿಟಿ ಸಿವಿಲ್…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಕರೆತಂದು, ಶೆಡ್ ಒಂದರಲ್ಲಿ ಕೂಡಿ ಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ನಡೆಸಿ ಹತ್ಯೆಗೈದು, ಮೋರಿಗೆ ಮೃತದೇಹವನ್ನು ಎಸೆದಿದ್ದರು. ಈ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂತಹ ಆರೋಪಿಗಳನ್ನು ಇಂದು ಪೊಲೀಸರು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಮತ್ತಷ್ಟು ವಿಚಾರಣೆಗಾಗಿ ಪೊಲೀಸರು ಕೋರಿಕೊಂಡ ಹಿನ್ನಲೆಯಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಂತ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಅಪಹರಿಸಿಕೊಂಡು ಬರಲಾಗಿತ್ತು. ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ, ಮರ್ಮಾಂಗಕ್ಕೆ ಒದ್ದು ಹತ್ಯೆಗೈಯಲಾಗಿತ್ತು. ಆ ಬಳಿಕ ಮೋರಿಗೆ ಮೃತದೇಹವನ್ನು ಎಸೆಯಲಾಗಿತ್ತು. ಈ ಮೃತದೇಹವನ್ನು ಕಂಡಂತ ಡಿಲಿವರಿ ಬಾಯ್ ಒಬ್ಬರು ಕಾಮಾಕ್ಷಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ…
ಬೆಂಗಳೂರು: ಕೇಂದ್ರ ಸಚಿವರಾದ ನಂತ್ರ ಹೆಚ್.ಡಿ ಕುಮಾರಸ್ವಾಮಿ, ಸಂಸದರಾದ ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಗಳನ್ನು ಸ್ಪೀಕರ್ ಯು.ಟಿ ಖಾದರ್ ಅಂಗೀಕರಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್.ಡಿ ಕುಮಾರಸ್ವಾಮಿ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ಸಂಚೂರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇ.ತುಕಾರಾಂ ರಾಜೀನಾಮೆ ಸಲ್ಲಿಸಿದ್ದರು ಎಂದಿದ್ದಾರೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರು ಶಾಸಕ ಸ್ಥಾನಕ್ಕೆ ಸಲ್ಲಿಸಿದ್ದಂತ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಹೀಗಾಗಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಗಳು ಖಾಲಿ ಉಳಿದಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/actor-darshan-and-other-accused-in-murder-case-sent-to-5-day-police-custody/ https://kannadanewsnow.com/kannada/state-govt-hikes-taxes-on-petrol-diesel-rates-to-go-up-soon/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ಬೆಂಗಳೂರಿಗೆ ಕರೆತಂದು, ಶೆಡ್ ಒಂದರಲ್ಲಿ ಕೂಡಿ ಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ನಡೆಸಿ ಹತ್ಯೆಗೈದು, ಮೋರಿಗೆ ಮೃತದೇಹವನ್ನು ಎಸೆದಿದ್ದರು. ಈ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂತಹ ಆರೋಪಿಗಳನ್ನು ಇಂದು ಪೊಲೀಸರು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಮತ್ತಷ್ಟು ವಿಚಾರಣೆಗಾಗಿ ಪೊಲೀಸರು ಕೋರಿಕೊಂಡ ಹಿನ್ನಲೆಯಲ್ಲಿ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಂತ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಅಪಹರಿಸಿಕೊಂಡು ಬರಲಾಗಿತ್ತು. ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ, ಮರ್ಮಾಂಗಕ್ಕೆ ಒದ್ದು ಹತ್ಯೆಗೈಯಲಾಗಿತ್ತು. ಆ ಬಳಿಕ ಮೋರಿಗೆ ಮೃತದೇಹವನ್ನು ಎಸೆಯಲಾಗಿತ್ತು. ಈ ಮೃತದೇಹವನ್ನು ಕಂಡಂತ ಡಿಲಿವರಿ ಬಾಯ್ ಒಬ್ಬರು ಕಾಮಾಕ್ಷಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿ, ಆತನ ಬಗ್ಗೆ ಮಾಹಿತಿ…
ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ ದರ್ಶನ್ ಪರ ವಕೀಲ ಅನಿಲ್ ಬಾಬು ಅವರು, ಎ.5, ಎ13 ಆರೋಪಿಗಳು ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಎ.5 ನಂದೀಶ್, ಎ13 ಆರೋಪಿ ದೀಪಕ್ ಅವರು, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಈ ಬಳಿಕ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಸಿ, ಪವಿತ್ರಾ ಗೌಡರನ್ನು 6 ದಿನಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅನುಮತಿ ಪಡೆಯದೇ ಆರೋಪಿಗಳ ಮೊಬೈಲ್…
ಮಂಡ್ಯ: ಇಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಮಂಡ್ಯಕ್ಕೆ ಆಗಮಿದರು. ಈ ವೇಳೆಯಲ್ಲಿ ಮೈತ್ರಿ ಕಾರ್ಯಕರ್ತರಿಂದ ಹೆಚ್.ಡಿ ಕುಮಾರಸ್ವಾಮಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಮಂಡ್ಯಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗಮಿಸಿದರು. ಕೇಂದ್ರ ಸಚಿವರಾದ ಬಳಿಕ ಮಂಡ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದರು. ಮಂಡ್ಯ ಜಿಲ್ಲೆ ಗಡಿ ಮದ್ದೂರಿನ ನಿಡಘಟ್ಟಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗಮಿಸಿದರು. ಈ ವೇಳೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪಟಾಕಿ ಸಿಡಿಸಿ, ತಮಟೆ ವಾದ್ಯಗಳ ಮೂಲಕ ಗ್ರ್ಯಾಂಡ್ ವೆಲ್ ಕಮ್ ಮಾಡಲಾಯಿತು. ಅಲ್ಲದೇ ಹೆಚ್.ಡಿಕೆ ಆಗಮಿಸುತ್ತಿದ್ದಂತೆ ಜೈಕಾರದ ಸುರಿಮಳೆಯನ್ನು, ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹೆಚ್ಡಿಕೆಗೆ ಪುತ್ರ ನಿಖಿಲ್, ಜಿ.ಟಿ.ದೇವೇಗೌಡ, ಜಿಲ್ಲೆಯ ಜೆಡಿಎಸ್, ಬಿಜೆಪಿ ನಾಯಕರ ಸಾಥ್ ನೀಡಿದರು. ನಿಡಘಟ್ಟದಿಂದ ಮಂಡ್ಯದ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ತೆರೆದ ವಾಹನಗಳ ಮುಂದೆ ಸಾಗಿದ ನೂರಾರು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಅಂಡ್ ಟೀಂನಿಂದ 10 ಮೊಬೈಲ್ ಸೀಜ್ ಮಾಡಲಾಗಿದೆ. ಅಲ್ಲದೇ 30 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ ಅಂತ ರಾಜ್ಯ ಸರ್ಕಾರದ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ಇಂದು ನ್ಯಾಯಪೀಠದ ಗಮನಕ್ಕೆ ತಂದರು. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್ ಮತ್ತು ಸಹಚರರನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಕೋರ್ಟ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಎಸ್ ಪಿಪಿ ಪಿ.ಪ್ರಸನ್ನ ಕುಮಾರ್ ಬಂಧಿತ ಆರೋಪಿಗಳಿಂದ 10 ಮೊಬೈಲ್, 30 ಲಕ್ಷ ಸೀಜ್ ಮಾಡಲಾಗಿದೆ ಅಂತ ತಿಳಿಸಿದರು. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಿಡಿ ಸಲ್ಲಿಸಿದರು. ಮತ್ತಷ್ಟು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ದರ್ಶನ್, ಆರೋಗಿಳನ್ನು ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಪೊಲೀಸರ ಕಸ್ಟಡಿಗೆ…
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಬೆಳಿಗ್ಗೆ ಪಾಟ್ನಾದ ಮೇದಾಂತ ಆಸ್ಪತ್ರೆಗೆ ಭೇಟಿ ನೀಡಿದರು. ಆದಾಗ್ಯೂ, ಅವರು ಆಸ್ಪತ್ರೆಯಲ್ಲಿ ತಪಾಸಣೆಯ ನಂತರ ಮರಳಿದರು. ಸುದ್ದಿ ಸಂಸ್ಥೆಯ ಪ್ರಕಾರ, ಅವರು ಮೂಳೆ ವಿಭಾಗದಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಬೆಳಿಗ್ಗೆ 8: 33 ಕ್ಕೆ ಪಾಟ್ನಾದ ಮೇದಾಂತ ಆಸ್ಪತ್ರೆಗೆ ತಲುಪಿದರು. ಮಾಹಿತಿಯ ಪ್ರಕಾರ, ಅವರ ಕೈಯಲ್ಲಿ ನೋವು ಇತ್ತು, ಇದನ್ನು ಆಸ್ಪತ್ರೆಯ ಮೂಳೆ ವಿಭಾಗದಲ್ಲಿ ಚಿಕಿತ್ಸೆ ನೀಡಲಾಯಿತು. ತಪಾಸಣೆಯ ನಂತರ, ಅವರು ಬೆಳಿಗ್ಗೆ 10: 30 ರ ಸುಮಾರಿಗೆ ಮರಳಿದರು. ಸಭೆ ಕರೆದ ನಿತೀಶ್ ಕುಮಾರ್ ಲೋಕಸಭಾ ಚುನಾವಣೆ ಮುಗಿದ ನಂತರ ನಿತೀಶ್ ಕುಮಾರ್ ಶುಕ್ರವಾರ ಕ್ಯಾಬಿನೆಟ್ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 25 ಕಾರ್ಯಸೂಚಿಗಳಿಗೆ ಅನುಮೋದನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸೇರಿದಂತೆ ಇತರ ಸಚಿವರು ಉಪಸ್ಥಿತರಿದ್ದರು. ಬಾಕಿ ಇರುವ ಅನೇಕ ಕಾರ್ಯಸೂಚಿಗಳನ್ನು ಅನುಮೋದಿಸಲಾಗಿದೆ,…
ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿಯಷ್ಟು ಮೊತ್ತದ ದೊಡ್ಡ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ರಾಜ್ಯದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ನೇತೃತ್ವದ ಸಭೆಯು ತೀರ್ಮಾನ ಕೈಗೊಂಡಿದೆ ಎಂದು ಪ್ರಕಟಿಸಿದರು. 28ರಂದು ಎಲ್ಲ ಜಿಲ್ಲೆಗಳು, ತಾಲ್ಲೂಕು ಮಟ್ಟದಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ವಿವರ ನೀಡಿದರು. ಹಣಕಾಸಿನ ಸಚಿವರೂ ಆಗಿರುವ, 14ಕ್ಕೂ ಹೆಚ್ಚು ಬಾರಿ ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮೊತ್ತ ಬೇರೆಡೆ ವರ್ಗಾವಣೆ ಆದುದು ಹೇಗೆ? ಆದ್ದರಿಂದ, ಈ ಹಗರಣದಲ್ಲಿ ಸಿದ್ದರಾಮಯ್ಯನವರ ಮೇಲೆ ಅನುಮಾನ ಬರುತ್ತಿದೆ ಎಂದು ನುಡಿದರು. ಸಿದ್ದರಾಮಯ್ಯನವರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಚಂದ್ರಶೇಖರ್ ಎಂಬ ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವರ ಮೌಖಿಕ ಆದೇಶದನ್ವಯ…













