Author: kannadanewsnow09

ಬೆಂಗಳೂರು: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ ಉತ್ತರಿಸಿದಂತ ಅವರು,  “ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು. ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದರು. https://kannadanewsnow.com/kannada/bescom-launches-whatsapp-number-to-solve-power-crisis-heres-the-district-wise-number/ https://kannadanewsnow.com/kannada/pm-has-become-racist-by-bringing-skin-colour-in-election-debate-chidambaram/

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದಿದೆ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು…

Read More

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಅಂದರೆ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದಲ್ಲಿ 4.93.900 ವಿದ್ಯಾರ್ಥಿಗಳಲ್ಲಿ 35.97.703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. (72.83%) ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 3.66.067 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು 5.906 ಸರ್ಕಾರಿ ಶಾಲೆಗಳಲ್ಲಿ 72.46% , 3.666 ಅನುದಾನ ಶಾಲೆಗಳಲ್ಲಿ 72.22%, 6.144 ಅನುದಾನ ರಹಿತ ಶಾಲೆಗಳು ಫಲಿತಾಂಶವಾಗಿದೆ. 625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದಿದ್ದಾರೆ. 7…

Read More

ಬೆಳಗಾವಿ: ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಗಳಿಸುವ ಮೂಲಕ ರೈತನ ಮಗನೊಬ್ಬ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು  625 ಅಂಕಗಳಿಗೆ 624 ಅಂಕವನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಅಂದಹಾಗೇ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ. ಇಲ್ಲಿನ ಸುಬಲಸಾಗರ ಪ್ರೌಢ ವಿದ್ಯಾಮಂದಿರದ ಶಾಲೆಯಲ್ಲಿ ಸಿದ್ದಾಂತ ನಾಯಿಕಬಾ ಗಡಗೆ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದರು. ಈತ ರೈತನ ಮಗ ಎಂಬುದಾಗಿ ತಿಳಿದು ಬಂದಿದೆ. ಹೀಗಿದ್ದೂ ಇಂಗ್ಲೀಷಿನಲ್ಲಿ 99 ಪಡೆದಿದ್ದು, ಉಳಿದ ವಿಷಯಗಳಲ್ಲಿ ಔಟ್ ಆಫ್ ಔಟ್ ಅಂಕ ಪಡೆದಿದ್ದಾನೆ. https://kannadanewsnow.com/kannada/pm-has-become-racist-by-bringing-skin-colour-in-election-debate-chidambaram/ https://kannadanewsnow.com/kannada/kumaraswamy-married-a-girl-of-his-daughters-age-congress-mla-sr-srinivas/

Read More

ಬೆಂಗಳೂರು: ನಗರದಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ರಸ್ತೆ ಕುಸಿದಿದ್ದು, ಬೋರ್ ಬ್ಯಾಂಕ್ ರಸ್ತೆ ಸಂಪೂರ್ಣ ಬಂದ್ ಆಗಿದೆ. ಕಳೆದ ಹಲವಾರು ಗಂಟೆಗಳಿಂದ ನಗರದ ನಿವಾಸಿಗಳು ಅನುಭವಿಸುತ್ತಿರುವ ಭಾರಿ ಮಳೆಯ ನಡುವೆ ಬುಧವಾರ ಸಂಜೆ ಈ ಘಟನೆ ನಡೆದಿದೆ. ರಸ್ತೆ ಕುಸಿದ ನಂತರ, ಸಂಬಂಧಪಟ್ಟ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಿ ಸುರಕ್ಷತಾ ಕ್ರಮವಾಗಿ ರಸ್ತೆಯನ್ನು ನಿರ್ಬಂಧಿಸಿತು. ಸಂಚಾರವನ್ನು ಬೇರೆಡೆಗೆ ತಿರುಗಿಸಲು ಸಂಚಾರ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಸಂಜೆ 5.45 ರ ಸುಮಾರಿಗೆ ಭಾರಿ ಮಳೆಯಿಂದಾಗಿ ಈ ಘಟನೆ ಸಂಭವಿಸಿದೆ. ಇದರಿಂದಾಗಿ ಪಾಟರಿ ಟೌನ್ ಮೆಟ್ರೋ ನಿಲ್ದಾಣದಲ್ಲಿ ಮಣ್ಣು ಅಗೆದು ಸರಿ ಮಾಡುವ ತಾತ್ಕಾಲಿಕ ಪ್ರಯತ್ನ ವಿಫಲವಾಗಿವೆ. ಈ ಘಟನೆಯಿಂದ ಬೆಂಗಳೂರಿನ ಬೋರ್ ಬ್ಯಾಂಕ್ ರಸ್ತೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋರ್ ಬ್ಯಾಂಕ್ ರಸ್ತೆ ಸಂಚಾರ ಬಂದ್ ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಬಿಎಂಆರ್ ಸಿಎಲ್, ಇಂದು ಭಾರೀ ಮಳೆಯಿಂದಾಗಿ ಪಾಟರಿ ಟೌನ್ ಮೆಟ್ರೋ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಸ್ಥಳದ ಬಳಿ ಬುಧವಾರ ಭಯೋತ್ಪಾದಕ ಸಂಘಟನೆಯ ಸದಸ್ಯ ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂರನೇ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಒಂದೇ ಸ್ಥಳದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.  ಕುಲ್ಗಾಮ್ನ ರೆಡ್ವಾನಿ ಪ್ರದೇಶದಲ್ಲಿ ಎನ್ಕೌಂಟರ್ ಸ್ಥಳದ ಬಳಿಯ ಮನೆಗಳಲ್ಲಿ ಶೋಧ ನಡೆಸಿದಾಗ, ಭದ್ರತಾ ಪಡೆಗಳು ಮತ್ತು ಅಲ್ಲಿ ಅಡಗಿದ್ದ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊನೆಯ ವರದಿಗಳು ಬರುವವರೆಗೂ ಗುಂಡಿನ ದಾಳಿ ನಡೆಯುತ್ತಿದೆ ಎಂದು ಅವರು ಹೇಳಿದರು. ಕುಲ್ಗಾಂನಲ್ಲಿ ಇಬ್ಬರು ಉಗ್ರರ ಹತ್ಯೆ ಇದಕ್ಕೂ ಮೊದಲು, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಮತ್ತು ನಾಗರಿಕರ ಹತ್ಯೆಯ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಲಷ್ಕರ್-ಎ-ತೈಬಾ ಶಾಖೆ ಟಿಆರ್ಎಫ್ನ ಉನ್ನತ “ಕಮಾಂಡರ್” ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ರೆಸಿಸ್ಟೆನ್ಸ್ ಫ್ರಂಟ್…

Read More

ಜಮ್ಮು-ಕಾಶ್ಮೀರ: ಇಲ್ಲಿನ ಪುಲ್ವಾಮಾ ಬಳಿಯ ನದಿಯೊಂದರಲ್ಲಿ ದೋಣಿಯೊಂದು ಮುಳುಗಿ ಘೋರ ದುರಂತವೊಂದು ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ನಾಪತ್ತೆಯಾಗಿದ್ದು, 7 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದುರಂತ ಘಟನೆಯಲ್ಲಿ, ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಝೀಲಂ ನದಿಯಲ್ಲಿ ಮುಳುಗಿದೆ. ಈ ಘಟನೆಯಲ್ಲಿ ಒಂಬತ್ತು ಪ್ರಯಾಣಿಕರಲ್ಲಿ ಏಳು ಮಂದಿಯನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. https://twitter.com/ANI/status/1788235057888399728 ಸವಾಲಿನ ಪರಿಸ್ಥಿತಿಗಳ ನಡುವೆ ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಉಳಿಸಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/former-minister-hd-revanna-is-now-prisoner-no-4567/

Read More

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ, ಕೋರ್ಟ್ ಇಂದು 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಈಗ ಕೇಂದ್ರ ಕಾರಾಗೃಹದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಖೈದಿ ನಂ.4567 ಆಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋದಲ್ಲಿ ಸಂತ್ರಸ್ತೆಯಾಗಿದ್ದಂತ ಮಹಿಳೆಯೊಬ್ಬರನ್ನು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡ್ನ್ಯಾಪ್ ಮಾಡಿಸಿದ್ದಾರೆ ಎಂಬುದಾಗಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅವರ ಮಗ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಹೆಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಈ ಕೇಸ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ರೂ, ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಎಸ್ಐಟಿ ಅಧಿಕಾರಿಗಳು ಬಂಧನದ ಬಳಿಕ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಇಂದಿನವರೆಗೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು. ಇಂದು ಎಸ್ಐಟಿ ವಶಕ್ಕೆ…

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ಮುಗಿಯುತ್ತಿದ್ದಂತೆ, ರಾಜಕೀಯ ನಾಯಕರು ರಿಲ್ಯಾಕ್ಸ್ ಮೂಡಿಗೆ ತೆರಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಊಟಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂತಹ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ನಿಮ್ಮ ಸರ್ಕಾರದ ಎಡವಟ್ಟುಗಳು ಯಾವುವು ಅಂತ ನೋಡಿ ಎಂಬುದಾಗಿ ಮುಂದಿಟ್ಟಿದ್ದಾರೆ. ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಊಟಿಯಲ್ಲಿ ಪಾರ್ಟಿ ಮಾಡುತ್ತಿರುವ ಸೋಗಲಾಡಿ ಸಿಎಂ ಸಿದ್ಧರಾಮಯ್ಯನವರೇ, ತಾವು ಊಟಿಯಲ್ಲಿ ಪಾರ್ಟಿ ಮಾಡುತ್ತಿರುವಾಗ ಇಲ್ಲಿ ಕನ್ನಡಿಗರು ನಿಮ್ಮ ಸರ್ಕಾರದ ಎಡವಟ್ಟುಗಳಿಂದ, ದುರಾಡಳಿತದಿಂದ, ಬೇಜವಾಬ್ದಾರಿಯಿಂದ ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆಯೂ ಒಮ್ಮೆ ನೆನಪಿಸಿಕೊಳ್ಳಿ ಎಂದಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರದ ಎಡವಟ್ಟುಗಳು… 1. ಕೇಂದ್ರ ಸರ್ಕಾರ ರೈತರಿಗೆ ಬರ ಪರಿಹಾರ ನೀಡಲು 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿ 2 ವಾರ ಕಳೆದರೂ ಒಂದು ನಯಾ ಪೈಸೆ ಬರ ಪರಿಹಾರ ಇನ್ನೂ ರೈತರ ಕೈಸೇರಿಲ್ಲ. 2. ಹೈನುಗಾರರಿಗೆ 7 ತಿಂಗಳಿಂದ ಬಾಕಿ ಇರುವ 700 ಕೋಟಿ ರೂಪಾಯಿ ಇನ್ನೂ ಪಾವತಿ ಆಗಿಲ್ಲ. 3. ತೆಂಗು…

Read More

ಬೆಂಗಳೂರು: ನಗರದಲ್ಲಿ ಪೂರ್ವ ಮುಂಗಾರು ಮಳೆ ಆರಂಭವಾಗುತ್ತಿದ್ದಂತೇ, ಅವಾಂತರ ಆರಂಭಗೊಂಡಿದೆ. ನಮ್ಮ ಮೆಟ್ರೋದ ಮಾರ್ಗವೊಂದರಲ್ಲಿ ಮಣ್ಣು ಕುಸಿತದಿಂದ ಹಾನಿಯಾದ ಪರಿಣಾಮ, ಬೋರ್ ಬ್ಯಾಂಕ್ ರಸ್ತೆಯ ಒಂದು ಭಾಗವನ್ನು ಮುಚ್ಚಲಾಗಿದೆ. ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಇಂದು ಭಾರೀ ಮಳೆಯಿಂದಾಗಿ ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕಾಗಿ ಮಣ್ಣು ಅಗೆಯಲು ಮಾಡಿದ ತಾತ್ಕಾಲಿಕ ತಡೆ ಪೈಲ್ ವ್ಯವಸ್ಥೆಯು ಸಂಜೆ 5.45 ರ ಸುಮಾರಿಗೆ ವಿಫಲವಾಗಿದೆ. ಇದರ ಪರಿಣಾಮವಾಗಿ ಬೋರ್ ಬ್ಯಾಂಕ್ ರಸ್ತೆಯ ಒಂದು ಭಾಗವು ಹಾನಿಯಾಗಿರುವ ಕಾರಣ ಬೋರ್ ಬ್ಯಾಂಕ್ ರಸ್ತೆಯನ್ನು ಮುಚ್ಚಲಾಗಿದೆ ಎಂದು ತಿಳಿಸಿದೆ. ಇನ್ನೂ ಮರುಸ್ಥಾಪನೆ ಮಾಡುವವರೆಗೆ ರಸ್ತೆ ಮುಚ್ಚಿರುತ್ತದೆ. ವಾಹನ ಚಲನೆಗೆ ಪರ್ಯಾಯ ಮಾರ್ಗ ಮಾಡಲಾಗಿದೆ. ಯಾವುದೇ ವ್ಯಕ್ತಿಗಳು ಗಾಯಗೊಂಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/these-accounts-will-be-closed-after-this-period-punjab-national-bank-to-customers/

Read More