Subscribe to Updates
Get the latest creative news from FooBar about art, design and business.
Author: kannadanewsnow09
ಸಿಡ್ನಿ: ಆಸ್ಟ್ರೇಲಿಯಾದ ಬಿಷಪ್ ಒಬ್ಬರನ್ನು ಸೇವೆಯ ಸಮಯದಲ್ಲಿ ಅನೇಕ ಬಾರಿ ಇರಿತಕ್ಕೊಳಗಾದ ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು news.com.au ವರದಿಯಲ್ಲಿ ತಿಳಿಸಿದ್ದಾರೆ. ಸಿಡ್ನಿಯ ವೇಕ್ಲಿಯಲ್ಲಿ ಧರ್ಮೋಪದೇಶ ನೀಡುವಾಗ ಬಿಷಪ್ ಮಾರ್ ಮಾರಿ ಮೇಲೆ ಹಲ್ಲೆ ನಡೆಸಲಾಯಿತು. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ತುಣುಕಿನಲ್ಲಿ ಬಿಷಪ್ ಮಾತನಾಡುತ್ತಿರುವುದನ್ನು ತೋರಿಸುತ್ತದೆ. ಒಬ್ಬ ವ್ಯಕ್ತಿಯು ಅವನ ಬಳಿಗೆ ಬಂದು ಅವನ ಮುಖ ಮತ್ತು ಕುತ್ತಿಗೆಗೆ ಇರಿದು ಕೊಲ್ಲಲು ಪ್ರಾರಂಭಿಸುತ್ತಾನೆ. ಬಿಷಪ್ ಅವರ ಸ್ಥಿತಿ ಇನ್ನೂ ತಿಳಿದಿಲ್ಲ. ವೀಡಿಯೊ ತುಣುಕಿನಲ್ಲಿ, ಜನಸಮೂಹದಿಂದ ಕಿರುಚಾಟಗಳು ಕೇಳುತ್ತವೆ ಮತ್ತು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಲು ಅನೇಕರು ಮುಂದೆ ಧಾವಿಸಿದರು. https://kannadanewsnow.com/kannada/minister-zameer-ahmeds-health-deteriorates-during-election-campaign-hospitalised/ https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/
ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿರು ಬಿಸಿಲ ನಡುವೆಯೂ ಲೋಕಸಭಾ ಚುನಾವಣೆಯ ಪ್ರಚಾರದ ಕಾವೇರಿದೆ. ಚಿತ್ರದುರ್ಗದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಂತ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆ ನೋವಿನಿಂದ ಬಳಲುತ್ತಿದ್ದಂತ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ನವದೆಹಲಿ: ಇಸ್ರೇಲ್ ಮೇಲಿನ ಇರಾನ್ ದಾಳಿಯ ನಂತರ, ವಿಶ್ವದಾದ್ಯಂತದ ಷೇರು ಮಾರುಕಟ್ಟೆಗಳ ಕುಸಿತದ ಪರಿಣಾಮವು ಭಾರತೀಯ ಷೇರು ಮಾರುಕಟ್ಟೆಯಲ್ಲೂ ಕುಸಿತ ಕಂಡುಬಂದಿದೆ. ವಾರದ ಮೊದಲ ವಹಿವಾಟಿನಲ್ಲಿ ಹೂಡಿಕೆದಾರರ ಮಾರಾಟದಿಂದಾಗಿ ಭಾರತೀಯ ಮಾರುಕಟ್ಟೆ ತೀವ್ರ ಕುಸಿತದೊಂದಿಗೆ ಕೊನೆಗೊಂಡಿತು. ಬ್ಯಾಂಕಿಂಗ್, ಐಟಿ ಮತ್ತು ಎಫ್ ಎಂಸಿಜಿ ಷೇರುಗಳ ಮಾರಾಟದಿಂದಾಗಿ ಮಾರುಕಟ್ಟೆಯಲ್ಲಿ ಈ ಕುಸಿತ ಕಂಡುಬಂದಿದೆ. ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಷೇರುಗಳು ಸಹ ಕುಸಿದವು. ಇಂದಿನ ವಹಿವಾಟಿನ ಅಂತ್ಯಕ್ಕೆ ಬಿಎಸ್ಇ ಸೆನ್ಸೆಕ್ಸ್ 845 ಪಾಯಿಂಟ್ಸ್ ಕುಸಿದು 73,399 ಕ್ಕೆ ತಲುಪಿದೆ. ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ 247 ಪಾಯಿಂಟ್ಸ್ ಕುಸಿದು 22,272 ಪಾಯಿಂಟ್ಸ್ ತಲುಪಿದೆ. ನಿಫ್ಟಿಯ ಮಿಡ್ ಕ್ಯಾಪ್ ಸೂಚ್ಯಂಕವು 786 ಪಾಯಿಂಟ್ ಗಳಷ್ಟು ಕುಸಿದಿದೆ. ಹೂಡಿಕೆದಾರರಿಗೆ 5 ಲಕ್ಷ ಕೋಟಿ ನಷ್ಟ ಷೇರು ಮಾರುಕಟ್ಟೆಯಲ್ಲಿ ತೀವ್ರ ಕುಸಿತದಿಂದಾಗಿ, ಪಟ್ಟಿ ಮಾಡಲಾದ ಷೇರುಗಳ ಮಾರುಕಟ್ಟೆ ಬಂಡವಾಳೀಕರಣವು 5 ಲಕ್ಷ ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ. ಬಿಎಸ್ಇ ಅಂಕಿಅಂಶಗಳ ಪ್ರಕಾರ, ಮಾರುಕಟ್ಟೆ ಕ್ಯಾಪ್ ಹಿಂದಿನ…
ಬೆಳಗಾವಿ: “ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಮಹಿಳೆಯರಿಗೆ ಡಿ.ಕೆ.ಶಿವಕುಮಾರ್ ರೇಟ್ ಫಿಕ್ಸ್ ಮಾಡುತ್ತಾರೆ, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ” ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು= ಹೀಗೆ; “ಅವನಿಗೆ ಪಿಕ್ ಪಾಕೆಟ್ ಮಾಡಿ ರೂಡಿ ಅಲ್ಲವೇ? ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ. ಮಹಿಳೆಯರು ತಿರುಗಿ ಬಿದ್ದಿರುವ ಕಾರಣ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸುತ್ತಿದ್ದು ನನ್ನ ವಿರುದ್ಧ ಟೀಕಿಸುತ್ತಿದ್ದಾರೆ. ಹೆದರಿಕೊಂಡು ಪಕ್ಕದ ಜಿಲ್ಲೆಗೆ ಹೋಗಿರುವ ಮಿಸ್ಟರ್ ಕುಮಾರಸ್ವಾಮಿ, ನೀನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ” ಎಂದು ತಿರುಗೇಟು ನೀಡಿದರು. ಕಾಂಗ್ರೆಸ್…
ಬೆಳಗಾವಿ: ಬಿಜೆಪಿ ನಡೆಸಿದ ಸಮೀಕ್ಷೆಯಲ್ಲೇ ಬಿಜೆಪಿ ಗೆಲ್ಲುವುದಿಲ್ಲ ಎಂದು ವರದಿ ಬಂದಿದೆ ಎಂಬುದಾಗಿ . ಬಿಜೆಪಿ ಸಂಸದರು ಉತ್ತಮವಾಗಿ ಕೆಲಸ ಮಾಡಿದ್ದರೆ 14 ಜನ ಅಭ್ಯರ್ಥಿಗಳನ್ನು ಬದಲಿಸಿದ್ದೇಕೆ? ಸದಾನಂದ ಗೌಡ, ಪ್ರತಾಪ್ ಸಿಂಹ, ಕರಡಿ ಸಂಗಣ್ಣ, ಶ್ರೀನಿವಾಸ್ ಪ್ರಸಾದ್, ಕಟೀಲ್ ಅವರಿಗೆ ಏಕೆ ಕೊಡಲಿಲ್ಲ? ಶೋಭಕ್ಕ ಅವರಿಗೆ ಗೋ ಬ್ಯಾಕ್ ಎಂದು ಏಕೆ ಕಳುಹಿಸಲಾಯಿತು? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕುರುಬರಿಗೆ, ಅಲ್ಪಸಂಖ್ಯಾತರಿಗೆ ಒಂದೇ ಒಂದು ಸ್ಥಾನ ಕೊಟ್ಟಿಲ್ಲ. ಇದು ಸಾಮಾಜಿಕ ನ್ಯಾಯವೇ? ಇದರ ಅರ್ಥ ನಿಮ್ಮ ಸೋಲು ನಿಮಗೆ ಅರ್ಥವಾಗಿದೆ. “ಕಳೆದ ಒಂದು ವರ್ಷದ ಹಿಂದೆ ಮೈಸೂರಿನ ಅದೇ ಮೈದಾನದಲ್ಲಿ ದೇಶದ ಪ್ರಧಾನಿ ತಂದೆ, ಮಗನ ಬಗ್ಗೆ ಏನು ಮಾತನಾಡಿದರು. ಗೌಡ್ರು ಏನು ಮಾತನಾಡಿದರು, ಬಿಜೆಪಿಯವರು ಏನು ಮಾತನಾಡಿದರು. ಅಮಿತ್ ಶಾ ವಿರುದ್ಧ ಏನೂ ಮಾತನಾಡಿದರು ಎಂದು ಮಾಧ್ಯಮದವರು ಜನರಿಗೆ ತೋರಿಸಬೇಕು ಎಂದರು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎಂದು ಜೆಡಿಎಸ್ ಗೆ…
ಮಂಗಳೂರು: ಇಂದು ಜಿಲ್ಲೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ನಿರ್ಮಾಣ ಹಂತದ ಸೇತುವೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡಿರೋ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಏಕಾಏಕಿ ಕುಸಿತಗೊಂಡಿದೆ. ಇದರಿಂದಾಗಿ ಕಟ್ಟಡದ ಅವಶೇಷಗಳಡಿ ಸಿಲುಕಿ 7 ಕಾರ್ಮಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮಲ್ಲಿಪ್ಪಾಡಿ ಸಮೀಪದಲ್ಲಿನ ನಿರ್ಮಾಣ ಹಂತದ ಸಂಪರ್ಕ ಕಲ್ಲಿಸೋ ಸೇತುವೆ ಇದಾಗಿದೆ. ಬರೆಂಜ ಹಾಗೂ ಕುರುಡಕಟ್ಟೆ ನಡುವೆ ಸಂಪರ್ಕ ಕಲ್ಪಿಸೋ ನಿಟ್ಟಿನಲ್ಲಿ ಈ ಸೇತುವೆ ನಿರ್ಮಿಸಲಾಗುತ್ತಿತ್ತು. ಇಂದು ದಿಢೀರ್ ಕುಸಿತಗೊಂಡ ಪರಿಣಾಮ, 7 ಕಾರ್ಮಿಕರು ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/modiji-dont-you-remember-karnataka-at-a-different-time-if-you-leave-at-the-time-of-elections-cms-question/ https://kannadanewsnow.com/kannada/breaking-21-retired-judges-write-to-cji-condemning-attempts-to-weaken-judiciary/
ಚಿತ್ರದುರ್ಗ: ಮತದಾರರನ್ನು ಆಮಿಷ ಒಡ್ಡುವಂತ ಹೇಳಿಕೆ ನೀಡುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಹೀಗಿದ್ದರೂ ಸಚಿವ ಸುಧಾಕರ್ ಮಾತ್ರ 70 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ರೆ, ನಿಮ್ಮ ಕ್ಷೇತ್ರಕ್ಕೆ 20 ಕೋಟಿ ಅನುದಾನ ಕೊಡಿಸೋದಾಗಿ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತ ಸಚಿವ ಸುಧಾಕರ್ ಅವರು, ನಾಯಕನಹಟ್ಟಿಯ ತಳುಕಿನಲ್ಲಿ ಚುನಾವಣಾ ಪ್ರಚಾರವನ್ನು ಇಂದು ನಡೆಸಿದರು. ಈ ಸಂದರ್ಭದಲ್ಲಿ ತಳುಕಿಗೆ ಅನುದಾನ ಒದಗಿಸೋದಕ್ಕಾಗಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಮಾತನಾಡಿರೋದಾಗಿ ತಿಳಿಸಿದರು. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. 70 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇ ಆದಲ್ಲಿ ತಳುಕು ಅಭಿವೃದ್ಧಿಗಾಗಿ 20 ಕೋಟಿ ಅನುದಾನವನ್ನು ಸರ್ಕಾರ ನೀಡಲಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಈ ಬಗ್ಗೆ ಮಾತನಾಡಿದ್ದಾಗಿ ಹೇಳಿದ್ದಾರೆ. ಈ ಮೂಲಕ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/modiji-dont-you-remember-karnataka-at-a-different-time-if-you-leave-at-the-time-of-elections-cms-question/ https://kannadanewsnow.com/kannada/the-bjp-is-against-the-constitution-bjp-parivars-plan-to-change-constitution-cm-siddaramaiah/
ಶಿವಮೊಗ್ಗ : ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಅದ್ಭುತ ಚಿಂತಕ – ಮಹಾ ಯೋಗಿ ಸಿದ್ದರಾಮೇಶ್ವರರು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬೋವಿ ವಿದ್ಯಾವರ್ಧಕ ಸಂಘ ಇವರ ಸಂಯುಕ್ತಾ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ನಡೆದ ಶಿವಯೋಗಿ ಸಿದ್ದರಾಮೇಶ್ವರರ 852ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಸಕಲ ಜೀವಾವಳಿಯ ನೆಮ್ಮದಿಯ ಬದುಕಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಕಾಯಕದಲ್ಲಿ ತೊಡಗಿದ್ದ ಕರ್ಮಯೋಗಿ ಎಂದೇ ಖ್ಯಾತನಾಮರಾಗಿದ್ದ ಸಿದ್ಧರಾಮರು ಜಾತಿ, ಧರ್ಮವನ್ನು ಮೀರಿದ ಅನುಭಾವಿಗಳು. ಇವರು ಕಾಲಾನಂತರದಲ್ಲಿ ತಮ್ಮ ನಿರಂತರ ಸಾಧನೆಯಿಂದಾಗಿ ಮಹಾಶಿವಯೋಗಿಯಾದರು ಎಂದರು. ಭೋವಿ ಸಮುದಾಯದವರು ತಮ್ಮ ಕಾಯಕದಿಂದಾಗಿ ಚದುರಿ ಹೋಗಿದ್ದು, ತಮ್ಮ ಅಸ್ಮಿತತೆಗಾಗಿ, ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತಿತರ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ಸಂಘಟಿತರಾಗಬೇಕಾದ ಅಗತ್ಯವಿದೆ. ಇದು ಶಕ್ತಿಯುತ ಸಂಘಟನೆಯಾಗಿ…
ಹಾವೇರಿ : ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904 ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಂತರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ರಮ ವಹಿಸಬೇಕು ಎಂದರು. 96-97 ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದರು ಎಂದು ಮರೆಯಬಾರದು ಎಂದರು. ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲುಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ…
ಬೆಂಗಳೂರು: ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಳಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯರಶ್ಮಿಯ ಚಮತ್ಕಾರವೇ ನಡೆಯಿತು. ಈ ಬೆಳಕಿನ ವಿಸ್ಮಯದ ಕೌತುಕವನ್ನು ಕಂಡ ಭಕ್ತರು, ಪುಳಕಿತರಾದರು. ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಿದೆ. ಇದು ಪ್ರತಿವರ್ಷ ಸಂಕ್ರಾಂತಿ ಹಬ್ಬದ ದಿನದಂದೇ ವಿಸ್ಮಯ ಹಾಗೂ ಕೌತುಕ ಘಟನೆ ನಡೆಯಲಿದೆ. ಇದನ್ನು ನೆರೆಸಿದ್ದಂತ ಅಪಾರ ಪ್ರಮಾಣದ ಭಕ್ತರು ಕಣ್ತುಂಬಿಕೊಂಡಿದ್ದಾರೆ. ಇಂದು ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಿತು. ಸುಮಾರು ಮೂರು ನಿಮಿಷಗಳ ಕಾಲ ಸೂರ್ಯನ ಕಿರಣಗಳು ಗಂವಿ ಗಂಗಾಧರೇಶ್ವರ ಮೂರ್ತಿಯನ್ನು ಸ್ಪರ್ಶಿಸಿತು. ಈ ಸೂರ್ಯ ರಶ್ಮಿಯ ಚಮತ್ಕಾರವನ್ನು ನೆರೆದಿದ್ದಂತ ನೂರಾರು ಭಕ್ತರು ಕಣ್ ತುಂಬಿಕೊಂಡರು. ಇನ್ನು ದೇವಸ್ಥಾನದಲ್ಲಿ ಬೆಳಿಗ್ಗೆ 5 ಗಂಟೆಗೆ…