Author: kannadanewsnow09

ಬೆಂಗಳೂರು: ಜ.17ರಂದು ನಗರದಲ್ಲಿ ನಡೆಯುವ ಟಿ-20 ಕ್ರಿಕೆಟ್ ಪಂದ್ಯಾವಳಿಯ ಪ್ರಯುಕ್ತ ದಿನಾಂಕ 17.01.2024 ರಂದು  ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಟಿ20 ಕ್ರಿಕೆಟ್ ಪ್ರಿಯರಿಗೆ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 17-01-2024ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ, ಬಿ.ಎಂ.ಆರ್.ಸಿ.ಎಲ್ ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ರೈಲು ಸೇವೆಗಳನ್ನು ರಾತ್ರಿ 11.45 ಗಂಟೆಯವರೆಗೆ ವಿಸ್ತರಿಸಲಿದೆ ಎಂದು ತಿಳಿಸಿದೆ. ಪ್ರಯಾಣಿಕರ ಅನೂಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ದಿನಾಂಕ 17ನೇ ಜನವರಿ 2024 ಬುಧವಾರ ಮಧ್ಯಾಹ್ನ 2.00 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಈ ಕಾಗದದ ಟಿಕೆಟ್‌ಗಳು ರಾತ್ರಿ 8.00  ಗಂಟೆಯಿಂದ  ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತೃತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತವಾಗಿರುತ್ತದೆ…

Read More

ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗುತ್ತದೆಯೇ ಎಂದು ಕೇಳಿದಾಗ, “ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಅನಂತ ಕುಮಾರ್ ಹೆಗಡೆಗೆ ಮಾನಸಿಕ ಸ್ಥಿರತೆ ಇಲ್ಲ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು,…

Read More

ಬೆಂಗಳೂರು : ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಹಾಗೂ ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಸಂಕ್ರಾಂತಿ ಹಬ್ಬದ ಶುಭಾಶಯಗಳು ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷ ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು…

Read More

ಬೆಂಗಳೂರು: ನಗರದಲ್ಲಿ ಜನವರಿ 19ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿಗದಿ ಪಡಿಸಲಾಗಿದೆ. ಈ ಸಭೆ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತ್ರ ನಡೆಯುತ್ತಿರುವಂತ ಮೊದಲ ಸಭೆಯಾಗಿದೆ. ಈ ಸಂಬಂಧ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಹತ್ವದ ಪೂರ್ವಭಾವಿ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆಯಲ್ಲಿ ಯಾವೆಲ್ಲ ವಿಷಯಗಳನ್ನು ಚರ್ಚಿಸಬೇಕು ಎನ್ನುವ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಸಿದ್ರು ಎನ್ನಲಾಗುತ್ತಿದೆ. ವಿಜಯೇಂದ್ರ ರಾಜ್ಯ ಬಿಜೆಪಿಯ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವಂತ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಯ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನೀಲ್ ಕುಮಾರ್, ಪಿ.ರಾಜೀವ್, ಪ್ರೀತಂ ಗೌಡ, ಶಾಸಕರಾದಂತ ಎಸ್ ಆರ್ ವಿಶ್ವನಾಥ್ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಭಾಗಿಯಾಗಿದ್ದರು. https://kannadanewsnow.com/kannada/big-news-hanagal-rape-case-no-question-of-protecting-anyone-says-cm-siddaramaiah/ https://kannadanewsnow.com/kannada/eminent-malayalam-music-director-k-j-joy-passes-away-at-77/

Read More

ಬೆಂಗಳೂರು: ರಾಜ್ಯದಲ್ಲಿ ಸಂಕ್ರಾಂತಿ ಹಬ್ಬದ ( Sankranti Festivel ) ದಿನವೇ ರಾಜ್ಯದಲ್ಲಿ ಸರಣಿ ಅಪಘಾತ ( Accident ) ಸಂಭವಿಸಿದೆ. ಈ ಅಪಘಾತದಲ್ಲಿ ವಿವಿಧ ಜಿಲ್ಲೆಗಳಲ್ಲಿ 11 ಮಂದಿ ಸಾವನ್ನಪ್ಪಿರೋ ಧಾರುಣ ಘಟನೆ ನಡೆದಿದೆ. ಚಾಮರಾಜ ನಗರದಲ್ಲಿ ರಜೆಯ ಹಿನ್ನಲೆಯಲ್ಲಿ ಸಫಾರಿಗೆ ಹೊರಟಿದ್ದಂತ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ದಾವಣಗೆರೆಯಲ್ಲಿ ಮೂವರು ಸಾವನ್ನಪ್ಪಿದ್ರೇ, ತುಮಕೂರಿನಲ್ಲಿ ಇಬ್ಬರು ಅಪಘಾತದಲ್ಲಿ ಬಲಿಯಾಗಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ಯುವಕನೋರ್ವ ಅಪಘಾತದಲ್ಲಿ ಬಲಿಯಾಗಿದ್ದಾನೆ. ಹಾವೇರಿಯಲ್ಲೂ ಬೈಕ್ ಸವಾರನೊಬ್ಬ ಧಾರುಣವಾಗಿ ದುರ್ಮರಣ ಹೊಂದಿದ್ದಾರೆ. ಈ ಮೂಲಕ ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದಲ್ಲಿ ಸರಣಿ ಅಪಘಾತಕ್ಕೆ ಒಂದೇ ದಿನ 11 ಮಂದಿ ಬಲಿಯಾಗಿದ್ದಾರೆ. https://kannadanewsnow.com/kannada/big-news-hanagal-rape-case-no-question-of-protecting-anyone-says-cm-siddaramaiah/ https://kannadanewsnow.com/kannada/eminent-malayalam-music-director-k-j-joy-passes-away-at-77/

Read More

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ ತಿಂಗಳಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದರು. ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ರೈತರಿಗೆ ಪುನಃ ಪರಿಹಾರ ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರೈತರಿಗೆ 2000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್ ನಿಯಮಾವಳಿ ಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದರು. ಮನುಷ್ಯತ್ವ ಇರಬೇಕು ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡುವುದನ್ನು ಕಲಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ…

Read More

ಹಾವೇರಿ : ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಾಮೂಹಿಕ ಅತ್ಯಾಚಾರ ಪ್ರಕರಣ: ಅರ್ಜಿ ಪರಿಗಣಿಸಲಾಗುವುದು ಘಟನೆ ನಡೆದು ಒಂದು ತಿಂಗಳು ಆದರೂ ಸರ್ಕಾರದ ಪರವಾಗಿ ಯಾರೂ ಸಾಂತ್ವನ ಹೇಳಿಲ್ಲ ಏನೆಂಬ ಪ್ರಶ್ನೆಗೆ ಉತ್ತರಿಗೆ ಈಗ ತಾನೇ ಅರ್ಜಿ ಕೊಟ್ಟಿದ್ದಾರೆ ಅದನ್ನು ಪರಿಗಣಿಸಲಾಗುವುದು ಎಂದರು. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು. ಉಳಿದಂತೆ ನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡುತ್ತಾರೆ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದರೆ ಮಾತ್ರ ಕ್ರಮ ಇಲ್ಲದಿದ್ದರೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಮಾತನಾಡದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂದರು. ಪ್ರಾಥಮಿಕ ವರದಿ…

Read More

ಶಿವಮೊಗ್ಗ: ಅನುಭವ ಮಂಟಪದ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುಗಳ ಜನ್ಮಭೂಮಿಯ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿ(ಅಲ್ಲಮಪ್ರಭುಗಳ ಜನ್ಮಭೂಮಿ)ಹಾಗೂ ಅನಿಮಿಷಾರಣ್ಯರ ಮಾಳಗೊಂಡನಕೊಪ್ಪದ ತಪೋಭೂಮಿಗೆ ಭೇಟಿ ನೀಡಿ ಮಾತನಾಡುತ್ತಿದ್ದರು. ಹನ್ನೆರಡನೇ ಶತಮಾನದ ಪ್ರಸಿದ್ಧ ಶರಣ ಅಲ್ಲಮಪ್ರಭುಗಳು ಅದ್ವಿತೀಯ ಸಾಧಕರು. ಅವರ ಜೀವನ ಸಂದೇಶಗಳು ಇಂದಿನ ಜನರಿಗೆ ತಲುಪಿಸುವ ಸದುದ್ದೇಶದಿಂದ ಹಾಗೂ ನಮ್ಮ ಕೋರಿಕೆಯಂತೆ ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭುಗಳ ಹೆಸರನ್ನು ನಾಮಕರಣ ಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆಂದು ಅವರು ನುಡಿದರು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆ 12ನೇ ಶತಮಾನದಲ್ಲಿ ಶರಣರ ನೆಲೆವೀಡಾಗಿಯೇ ಪ್ರಸಿದ್ದವಾಗಿತ್ತು. ಅಂತಹ ಮಹಾತ್ಮರ ಪುಣ್ಯಭೂಮಿಯನ್ನು ಗುರುತಿಸಿ ಅಭಿವೃದ್ಧಿಪಡಿಸದಿರುವುದು ನೋವಿನ ಸಂಗತಿ. ಪ್ರಸ್ತುತ ಆಡಳಿತಾರೂಡ ಸರ್ಕಾರ ಈ ಕ್ಷೇತ್ರದ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು. ಈ ಕ್ಷೇತ್ರದ ವಿಕಾಸಕ್ಕೆ…

Read More

ಥೈಲ್ಯಾಂಡ್: ವುಹಾನ್ನಲ್ಲಿ ಈ ಹಿಂದೆ ನಡೆಸಿದ ಪ್ರಯೋಗಗಳಿಗೆ ಸಂಬಂಧಿಸಿದ ವಿವಾದಾತ್ಮಕ ಸಂಶೋಧನಾ ಗುಂಪು ಮಾನವರಿಗೆ ಸೋಂಕು ತಗುಲಿಸುವ ಸಾಮರ್ಥ್ಯ ಹೊಂದಿರುವ ಹೊಸ ಬಾವಲಿ ವೈರಸ್ ಅನ್ನು ಥೈಲ್ಯಾಂಡ್ನಲ್ಲಿ ಕಂಡುಹಿಡಿದಿದೆ ಎಂದು Express.co.uk ವರದಿ ಮಾಡಿದೆ. ನ್ಯೂಯಾರ್ಕ್ ಮೂಲದ ಲಾಭರಹಿತ ಇಕೋಹೆಲ್ತ್ ಅಲೈಯನ್ಸ್ನ ಮುಖ್ಯಸ್ಥ ಡಾ.ಪೀಟರ್ ಡಸ್ಜಾಕ್ ಅವರು ವಿಶ್ವ ಆರೋಗ್ಯ ಸಂಸ್ಥೆಯ ಸಭೆಯಲ್ಲಿ ಹಿಂದೆಂದೂ ಕಾಣದ ವೈರಸ್ ಅನ್ನು ಕಂಡುಹಿಡಿದಿದ್ದಾರೆ ಎಂದು ವರದಿ ಮಾಡಿದ್ದಾರೆ. ಇನ್ನೂ ಹೆಸರಿಸದ ಹೊಸ ವೈರಸ್ ಥಾಯ್ ಗುಹೆಯಲ್ಲಿ ಕಂಡುಬಂದಿದೆ. ಅಲ್ಲಿ ಸ್ಥಳೀಯ ರೈತರು ತಮ್ಮ ಹೊಲಗಳನ್ನು ಫಲವತ್ತಾಗಿಸಲು ಬಾವಲಿ ಮಲವನ್ನು ಪಡೆಯುತ್ತಾರೆ. ಡಬ್ಲ್ಯುಎಚ್ಒ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಡಸ್ಜಾಕ್, ನಾವು ಸಾಕಷ್ಟು ಸಾರ್ಸ್ ಸಂಬಂಧಿತ ಕರೋನವೈರಸ್ಗಳನ್ನು ಕಂಡುಕೊಂಡಿದ್ದೇವೆ. ಆದರೆ ನಿರ್ದಿಷ್ಟವಾಗಿ ನಾವು ಕಂಡುಕೊಂಡ ಒಂದು ಬಾವಲಿಗಳಲ್ಲಿ ಸಾಮಾನ್ಯವಾಗಿದೆ. ಅಲ್ಲಿ ಜನರು ಸಾಮಾನ್ಯವಾಗಿ ಒಡ್ಡಿಕೊಳ್ಳುತ್ತಾರೆ ಎಂದಿದ್ದಾರೆ. ನಾವು ಇದನ್ನು ಸಂಭಾವ್ಯ ಝೂನೊಟಿಕ್ ರೋಗಕಾರಕವೆಂದು ಪರಿಗಣಿಸುತ್ತೇವೆ. ಇಲ್ಲಿ ನಾವು ಬಾವಲಿಗಳಲ್ಲಿ ವೈರಸ್ ಹೊಂದಿದ್ದೇವೆ. ಇದೀಗ ಬಾವಲಿ ಮಲಕ್ಕೆ ಹೆಚ್ಚು ಒಡ್ಡಿಕೊಳ್ಳುವ…

Read More

ಶಿವಮೊಗ್ಗ : ಮೆಸ್ಕಾಂ ಗ್ರಾಮೀಣ ಉಪವಿಭಾಗ ಸಂತೇಕಡೂರು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾರ್ಗಗಳಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ ಜ. 16 ರಿಂದ 18 ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ. ಹುಲಿ-ಸಿಂಹಧಾಮ 16ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 16-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/old-woman-crawls-5-km-for-maasana-says-hdk-says-govt-has-no-mercy-for-giving-guarantee/ https://kannadanewsnow.com/kannada/former-cm-bommai-alleges-attempts-to-cover-up-hanagal-case-with-money/

Read More