Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ನಕ್ಷೆಯಲ್ಲಿ ಜಮೀನು ಇರದೇ ರೈತರು ಕೃಷಿ ನಿರತರಾಗಿದ್ದಾರೆ. ಈ ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅದೇ ನಕ್ಷೆಯಿಲ್ಲದ ಜಮೀನುಗಳಲ್ಲಿ ಕೃಷಿ ನಿರತ ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ವಿಚಾರದಲ್ಲಿ ದಶಕಗಳಿಂದಲೂ ಸಮಸ್ಯೆಗಳಿವೆ. ಅರಣ್ಯಭೂಮಿಯ ಗಡಿಯನ್ನು ಗುರುತಿಸದ ಕಾರಣ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿರುವ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆರ್ಟಿಸಿ, ಪೋಡಿ, ಫೌತಿಖಾತೆ ಸೇರಿದಂತೆ ಈ ಭಾಗದಲ್ಲಿರುವವರಿಗೆ ಕಂದಾಯ ಇಲಾಖೆ ಸೇವೆಗಳನ್ನು ತಲುಪಿಸುವುದುನೀಡುವುದು ದುಸ್ಥರವಾಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೂ ಸಹ ಸವಾಲಿನ ಕೆಲಸವಾಗಿದೆ ಎಂದಿದ್ದಾರೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ರಾಜ್ಯಾದ್ಯಂತ ಜಂಟಿ ಸರ್ವೇ ನಡೆಸಿ ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಳೆದ ಚಳಿಗಾಲದ…
ಬೆಂಗಳೂರು: ಗುರುವಾರದಂದು ಹೈಕೋರ್ಟ್ ನಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಈ ಬೆನ್ನಲ್ಲೇ ನಿಗದಿತ ವೇಳಾಪಟ್ಟಿಯಂತೆ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ ಎಂದಿದ್ದಾರೆ. ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-202400 ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು…
ಬೆಂಗಳೂರು: ದಿನಾಂಕ 08-03-2024ರ ಇಂದು ನಡೆಯುವ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ಶಿವನ ದೇವಸ್ಥಾನಗಳಲ್ಲಿ ಶಿವರಾತ್ರಿ ವೈಭವ ನಡೆಸುವಂತೆ, ಶಿವಾಲಯಗಳಲ್ಲಿ ಮಹಾ ಉತ್ತವವಾಗಿ ಆಚರಿಸುವಂತೆ ಮುಜರಾಯಿ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ರಾಜ್ಯದಲ್ಲಿ ಶಾಂತಿ, ಸಂಯಮದೊಂದಿಗೆ ಜನರಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಸ್ನೇಹ ಉಂಟಾಗಲೆಂದು ಲೋಕ ಕಲ್ಯಾಣಾರ್ಥವಾಗಿ ಭಗವಂತನಾದ ಶಿವನಲ್ಲಿ ವಿಶೇಷವಾಗಿ ಪ್ರಾರ್ಥಿಸುವ ಮೂಲಕ ಮತ್ತು ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿನ ಪ್ರಾಂತೀಯ ಕಲೆಗಳು ಮರೆಯಾಗುತ್ತಿರುವ ಕಾರಣ – ಅವುಗಳನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಹಾಗೂ ಹಬ್ಬಗಳ ಆಚರಣೆಯನ್ನು ಪುನರುಜೀವನಗೊಳಿಸುವ ಸಲುವಾಗಿ ಇವುಗಳೊಂದಿಗೆ ಯಕ್ಷಗಾನ, ವೀರಭದ್ರ (ಡೊಳ್ಳು ಕುಣಿತ, ದೇಸೀಯ ವಾದ್ಯಗಳು ಭರತ ನಾಟ್ಯ, ಭಕ್ತಿ ಗೀತೆಗಳು ಸಾಂಪ್ರದಾಯಿಕ ಜಾನಪದ ಕಲೆಗಳು ಪಾರಂಪರಿಕ ಸ್ಥಳಿಯ ಕಿರು ನಾಟಕಗಳಾದ ದಕ್ಷಯಜ್ಞ ಶನಿ ಮಹಾತ್ಮ ಮುಂತಾದ ಶಿವ ಸಂಬಂಧ ಕಿರು ನಾಟಕಗಳನ್ನು ಹಾಗೂ ಶಿವ ಪುರಾಣ ಕಥಾ ಶ್ರವಣ ಇವೇ ಮುಂತಾದವುಗಳನ್ನು ನಡೆಸುವ…
ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಹೀಗಾಗಿ ನಿಗದಿತ ವೇಳಾಪಟ್ಟಿಯಂತೆ 5, 8 ಮತ್ತು 9ನೇ ತರಗತಿ ಪರೀಕ್ಷೆಯನ್ನು ನಡೆಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಿಸಿತ್ತು. ಈ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗೆ ಉತ್ತರ ಹಾಳೆಗಳನ್ನು ಇಲಾಖೆಯಿಂದಲೇ ವಿತರಿಸೋದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನವನ್ನು ನಡೆಸುವ ಸಂಬಂಧ ಘನ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿನಾಂಕ: 06.10.2023 ಮತ್ತು 09.10.2023 ರ ಅಧಿಸೂಚನೆಗಳನ್ನು ಏಕಸದಸ್ಯ ಪೀಠದಲ್ಲಿ ರದ್ದು (Quash) ಮಾಡಲಾಗಿತ್ತು ಎಂದಿದ್ದಾರೆ. ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 07.03.2024 ರಂದು ಘನ ಉಚ್ಛ…
ನವದೆಹಲಿ: ಇಂದು ಸಂಜೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ಇಂದಿನ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು ಅದ್ಯತೆಯ ಕಾರ್ಯಕ್ರಮವಾದ್ದರಿಂದ ಸಿಎಂ ಅಲ್ಲಿ ಭಾಗವಹಿಸುತ್ತಿದ್ದಾರೆ. ನಾವುಗಳು ಸೇರಿ ಈಗಾಗಲೇ ಚರ್ಚೆ ಮಾಡಿರುವುದನ್ನು ನಾನು ಈ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದರು. ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಆಗುವುದಿಲ್ಲ. ಒಂದೆರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ” ಎಂದು ತಿಳಿಸಿದರು. ಬಿಜೆಪಿ…
ಬೆಂಗಳೂರು: ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ 11 ಕಾರ್ಮಿಕ ಸಂಘಟನೆಯ ಮುಖಂಡರೊಂದಿಗೆ ಮಹತ್ವದ ಸಭೆ ನಡೆಯಿತು. ಯಾವೆಲ್ಲ ವಿಷಯಗಳ ಬಗ್ಗೆ ಚರ್ಚೆಯಾಯ್ತು. ಸಚಿವರು ಏನೆಲ್ಲ ತೀರ್ಮಾನ ಭರವಸೆಗಳನ್ನು ಸಚಿವರು ನೀಡಿದ್ರು ಅಂತ ಮುಂದೆ ಓದಿ. ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಹಾಗೂ ಅಧ್ಯಕ್ಷರು, ಕೆ ಎಸ್ ಆರ್ ಟಿ ಸಿ, ಎಸ್ ಆರ್ ಶ್ರೀನಿವಾಸ್( ವಾಸು) ರವರ ಉಪಸ್ಥಿತಿಯಲ್ಲಿ, ನಿಗಮದ 11 ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಕುಂದು ಕೊರತೆಗಳ ಸಭೆ ನಡೆಸಿದರು. ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಬೇಡಿಕೆಗಳನ್ನು ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು. ಮುಖ್ಯವಾಗಿ 01.01.2020 ರಿಂದ 28.02.2023 ರವರೆಗಿನ ವೇತನ ಬಾಕಿ ಹಣ, 01.01.2024 ರಿಂದ ಮೂಲ ವೇತನ ಹೆಚ್ಚಳ ಹಾಗೂ 01.01.2020 ರಿಂದ 28.02.2023ರ ವರೆಗಿನ ವೇತನ ಹೆಚ್ಚಳದ ಬಾಕಿಯನ್ನು ನಿವೃತ್ತ ಹಾಗೂ ಇತರೆ ಕಾರಣಗಳಿಂದ ಸಂಸ್ಥೆಗಳಿಂದ ಹೊರ ಹೋಗಿರುವ ನೌಕರರ ಹಾಗೂ ಇತರೆ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಅಂತಿಮವಾಗಿ…
ಬೆಂಗಳೂರು: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದ ಪ್ರಶಸ್ತಿ ಪ್ರಕಟಗೊಂಡಿದೆ. ಕನ್ನಡದ ನಿರ್ವಾಣಕ್ಕೆ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2024ರಲ್ಲಿ ಜೀವನ ಸಾಧನೆಗೆ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಎಂ.ಎಸ್ ಸತ್ಯುಗೆ ನೀಡಲಾಗಿರೋದಾಗಿ ತಿಳಿಸಿದೆ. ಹೀಗಿದೆ ಪ್ರಶಸ್ತಿ ಪಡೆದ ಚಿತ್ರಗಳ ಪಟ್ಟಿ ಕನ್ನಡ ಚನಚಿತ್ರ ಸ್ಪರ್ಧೆಯಲ್ಲಿ ಮೊದಲ ಅತ್ಯುತ್ತಮ ಚಿತ್ರ – ನಿರ್ವಾಣ. ನಿರ್ದೇಶನ-ಅಮರ್.ಎಲ್, ನಿರ್ಮಾಣ-ಕೆ.ಮಂಜು ಅವಿನಾಶ್ ಶೆಟ್ಟಿ. ಎರಡನೇ ಅತ್ಯುತ್ತಮ ಚಿತ್ರ – ಕಂದೀಲು. ನಿರ್ದೇಶನ, ನಿರ್ಮಾಣ- ಕೆ ಯಶೋಧ ಪ್ರಕಾಶ್ ಮೂರನೇ ಅತ್ಯುತ್ತಮ ಚಿತ್ರ – ಆಲಿಂಡಿಯಾ ರೇಡಿಯೋ. ನಿರ್ದೇಶನ -ರಾಮಸ್ವಾಮಿ, ನಿರ್ಮಾಣ- ದೇವಗಂಗಾ ಪ್ರೇಮ್ಸ್. ತೀರ್ಪುಗಾರರ ವಿಶೇಷ ಉಲ್ಲೇಖ – ಕ್ಷೇತ್ರಪತಿ. ನಿರ್ದೇಶನ-ಶ್ರೀಕಾಂತ ಕಟಗಿ, ನಿರ್ಮಾಣ-ಅಶ್ಗ ಕ್ರಿಯೇಶನ್ಸ್. ನೆಟ್ ಪ್ಯಾಕ್ ತೀರ್ಪುಗಾರರ ಪ್ರಶಸ್ತಿ – ಸ್ವಾತಿ ಮುತ್ತಿನ ಮಳೆಹನಿಯೇ. ನಿರ್ದೇಶನ -ರಾಜ್ ಬಿ ಶೆಟ್ಟಿ, ನಿರ್ಮಾಣ-ರಮ್ಯ( ಆಪಲ್ ಬಾಕ್ಸ್ ಸ್ಟುಡಿಯೋಸ್). ಹೀಗಿದೆ ಭಾರತೀಯ ಚಲನಚಿತ್ರ ಸ್ಪರ್ಧೆಯ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ UG CET-2024ಕ್ಕೆ ನೋಂದಣಿ ಮಾಡಲು ಕೊನೆಯ ಅವಕಾಶ ನೀಡಲಾಗಿದೆ. ದಿನಾಂಕ 18-04-2024 ಮತ್ತು 19-04-2024ರಂದು ನಡೆಸಲಾಗುವ ಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದಾಗಿ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಮಾಹಿತಿ ನೀಡಿದ್ದು, ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, [ಬಿ.ಎಸ್.ಸಿ (ಆನರ್ಸ್) ಕೃಷಿ, ಬಿ.ಎಸ್.ಸಿ (ಆನರ್ಸ್) (ರೇಷ್ಮೆ ಕೃಷಿ) ಮುಂತಾದ, [ಬಿ.ಎಸ್.ಸಿ (ನರ್ಸಿಂಗ್) ಬಿ.ಫಾರ್ಮ್, 2ನೇ ವರ್ಷದ ಬಿ-ಫಾರ್ಮ ಮತ್ತು ಫಾರ್ಮಾಡಿ ಮುಂತಾದ ಕೋರ್ಸುಗಳಿಗೆ ದಿನಾಂಕ 18-04-2024 ಮತ್ತು 19-04-2024 ರಂದು ನಡೆಸಲಾಗುವ ಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಹಲವು ಅಭ್ಯರ್ಥಿಗಳು ಹಾಗು ಪೋಷಕರು ಸಲ್ಲಿಸಿರುವ ಮನವಿಗಳನ್ನು ಪರಿಗಣಿಸಿ, ಪ್ರಾಧಿಕಾರವು ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ಹಾಗು ಅಂತಿಮ ಅವಕಾಶವನ್ನು ನೀಡಿದೆ. ಇಲ್ಲಿಯವರೆಗೆ ಅರ್ಜಿ ಸಲ್ಲಿಸದಿರುವ ಅಥವಾ ಅರ್ಜಿ ಪೂರ್ಣಗೊಳಿಸದೇ ಇರುವ ಅಥವಾ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರೆಯಲಾಗಿದ್ದಂತ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕೆಇಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು, ಮತ್ತು ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ದಿನಾಂಕ 28-10-2023 ಮತ್ತು 29-10-2023 ಹಾಗು 18-11-2023 ರಿಂದ 25-11-2023 ವರೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್ಸೈಟಿನಲ್ಲಿ ಇಂದು ಪ್ರಕಟಿಸಲಾಗಿದೆ ಎಂದಿದೆ. ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟಿನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಅರ್ಜಿ ಸಂಖ್ಯೆಯನ್ನು, ಅಭ್ಯರ್ಥಿಯ ಹೆಸರಿನ ಮೊದಲ 05 ಅಕ್ಷರಗಳು ಮತ್ತು ಜನ್ಮ ದಿನಾಂಕ ವನ್ನು ನಮೂದಿಸಿದಲ್ಲಿ, ಅಭ್ಯರ್ಥಿಯು ಪರೀಕ್ಷೆಗೆ ಹಾಜರಾಗಿದ್ದ ಹುದ್ದೆಗಳು ಮತ್ತು ಇಲಾಖೆಯ ವಿವರಗಳು ಹಾಗು…
ಬೆಂಗಳೂರು: ನಗರದಲ್ಲಿ ನೀರಿನ ಅಭಾವ ಹೆಚ್ಚಾದಂತೆ ನೀರಿನ ಟ್ಯಾಂಕರ್ ಗಳು ದರ ಹೆಚ್ಚಳ ಮಾಡಿ, ಜನಸಾಮಾನ್ಯರಿಗೆ ದುಬಾರಿ ದರದ ಶಾಕ್ ನೀಡಿದ್ದವು. ಇವುಗಳಿಗೆ ಮೂಗು ದಾರ ಹಾಕೋ ಸಲುವಾಗಿ ರಾಜ್ಯ ಸರ್ಕಾರದಿಂದ ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಇಂದಿನವರೆಗೆ ಡೆಡ್ ಲೈನ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಈವರೆಗೆ 1,391 ನೀರಿನ ಟ್ಯಾಂಕರ್ ಸ್ವಯಂ ನೋಂದಣಿ ಆಗಿದ್ದಾರೆ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ನೀಡಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ 1391 ಟ್ಯಾಂಕರ್ ಮಾಲೀಕರು ದಿನಾಂಕ: 6.00 ಗಂಟೆಯ ವೇಳೆಗೆ ಸ್ವಯಂ ನೋಂದಣಿ ಮಾಡಿಕೊಂಡಿರುತ್ತಾರೆ ಎಂದು ತಿಳಿಸಿದೆ. ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್ನಲ್ಲಿ https://bbmp.oasisweb.in/TankerManagement/SelfRegistration.aspx ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ದಿನಾಂಕ: 01-03-2024 ರಿಂದ 07-03-2024 ರವರೆಗೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಸಂಜೆ 6.00 ಗಂಟೆಯ ವೇಳೆಗೆ 1391 ಟ್ಯಾಂಕರ್ ಗಳು ನೊಂದಣಿ ಮಾಡಿಕೊಂಡಿರುತ್ತವೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/state-govt-orders-regularisation-of-11307-pourakarmikas/ https://kannadanewsnow.com/kannada/hc-gives-green-signal-for-class-5-8-9-and-11-board-exams/