Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಪಿತೂರಿ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ ಮಾಡಿದ್ದಾರೆ. ಜೆಡಿಎಸ್ ಕಚೇರಿ ಜೆಪಿ ಭವನದ ಬಳಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿ ಮಾತನಾಡಿದ ಅವರು; ಅಶ್ಲೀಲ ವಿಡಿಯೋಗಳನ್ನು ಯಾರು ಸೋರಿಕೆ ಮಾಡಿದರು ಎನ್ನುವ ಅಂಶವನ್ನು ಬಿಜೆಪಿ ನಾಯಕ, ವಕೀಲ ದೇವರಾಜ್ ಗೌಡ ಅವರು ಬಹಿರಂಗ ಮಾಡಿದ್ದಾರೆ. ಅವರು ನೇರವಾಗಿಯೇ ಸಾಕ್ಷಿ ಸಮೇತ ಡಿಕೆಶಿ ಹೆಸರು ಹಾಗೂ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರ ಹೆಸರನ್ನು ಹೇಳಿದ್ದಾರೆ ಎಂದರು. ಇಷ್ಟು ಸೂಕ್ಷ್ಮ ಪ್ರಕರಣದ ಬಗ್ಗೆ ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ಉಪ ಮುಖ್ಯಮಂತ್ರಿ, ರಾಜಕೀಯ ಸ್ವಾರ್ಥಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು, ಅದಕ್ಕಾಗಿ ಜೆಡಿಎಸ್ ಬಿಜೆಪಿ ಮೈತ್ರಿಗೆ ಧಕ್ಕೆ ಉಂಟು ಮಾಡುವ ಏಕೈಕ ಉದ್ದೇಶದಿಂದ ಈ ಸಂಚು ನಡೆಸಿದ್ದಾರೆ. ಹೀಗಾಗಿ ಅವರನ್ನು…
ಬೆಂಗಳೂರು: ನಗರದಲ್ಲಿ ಇಂದು ರೌಡಿ ಶೀಟರ್ ಒಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ರೌಡಿ ಶೀಟರ್ ಕಾರ್ತಿಕೇಯನ್ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ನಂತ್ರ, ದುಷ್ಕರ್ಮಿಗಳು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದಂತ ಬಾಣಸವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/former-minister-hd-revanna-hospitalised-after-health-deteriorates/ https://kannadanewsnow.com/kannada/108-employees-call-off-strike-resume-work-as-usual/
ಬಳ್ಳಾರಿ: ಜಿಲ್ಲೆಯಲ್ಲಿ ಗೌಪ್ಯ ಮತದಾನದ ನಿಯಮ ಉಲ್ಲಂಘಿ ಬಿಜೆಪಿಗೆ ಮತದಾನ ಮಾಡಿದಂತ ಪೋಟೋ ಹಂಚಿಕೊಂಡಂತ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ 10ನೇ ವಾರ್ಡ್ ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಅವರು ಮತ ಚಲಾಯಿಸುವಾಗ ಇವಿಎಂ ಮಿಷಿನ್ ಮೇಲೆ ಕಮಲದ ಚಿನ್ನೆ ಒತ್ತಿದಂತ ಪೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ಪೋಟೋವನ್ನು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದರು. ಪಾಲಿಕೆ ಸದಸ್ಯ ಲೋಕಸಭಾ ಚುನಾವಣೆಯ ಗೌಪ್ಯ ಮತದಾನದ ನಿಯ ಉಲ್ಲಂಘಿಸಿ ಪೋಟೋ ಕ್ಲಿಕ್ ಮಾಡಿದ್ದರ ಬಗ್ಗೆ ಚುನಾವಣಾ ಆಯೋಗದಿಂದ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/former-minister-hd-revanna-hospitalised-after-health-deteriorates/ https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/
ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, ಅವರ ವಶದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಮೇ.8ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ. ಇಂದು ಅವರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಈ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಹೊಟ್ಟೆ ಉರಿ ಕೂಡ ಹೆಚ್ಚಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು ಹೆಚ್.ಡಿ ರೇವಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/ https://kannadanewsnow.com/kannada/tushar-girinath-asks-officials-to-ensure-that-bengaluru-is-not-affected-by-rain/
ಬೆಂಗಳೂರು: ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಿತು. ಸಂಜೆ 5 ಗಂಟೆಯವರೆಗೆ ಶೇ.66.05ರಷ್ಟು ಮತದಾನ ನಡೆದಿದ್ದರೇ, ಇದೀಗ ಸಿಕ್ಕಿರುವಂತ ಮಾಹಿತಿಯಂತೆ ಶೇ.66.74ರಷ್ಟು ಮತದಾನ ನಡೆದಿರುವುದಾಗಿ ತಿಳಿದು ಬಂದಿದೆ. ಕೇಂದ್ರ ಚುನಾವಣಾ ಆಯೋಗದಿಂದ ಕ್ಷಣ ಕ್ಷಣದ ಅಪ್ ಡೇಟ್ ಅನ್ನು Voter Tournout ಆಪ್ ನಲ್ಲಿ ನೀಡಲಾಗುತ್ತಿದೆ. ಈಗ ಸಿಕ್ಕಿರುವಂತ ಮಾಹಿತಿಯಂತೆ ರಾಜ್ಯದಲ್ಲಿ ಇಂದು ನಡೆದಂತ 2ನೇ ಹಂತದ ಲೋಕಸಭಾ ಕ್ಷೇತ್ರಗಳಲ್ಲಿ ಶೇ.66.74ರಷ್ಟು ಮತದಾನ ನಡೆದಿದೆ. ಹೀಗಿದೆ 14 ಲೋಕಸಭಾ ಕ್ಷೇತ್ರಗಳ ಜಿಲ್ಲಾವಾರು ಶೇಕಡವಾರು ಪ್ರಮಾಣ ಬಾಗಲಕೋಟೆ – ಶೇ.66.17 ಬೆಳಗಾವಿ – ಶೇ.69.23 ಬಳ್ಳಾರಿ – ಶೇ.69.13 ಬೀದರ್ – ಶೇ.60.17 ವಿಜಯಪುರ- ಶೇ.61.49 ಚಿಕ್ಕೋಡಿ- ಶೇ.72.75 ದಾವಣಗೆರೆ – ಶೇ.71.36 ಧಾರವಾಡ- ಶೇ.67.91 ಗುಲ್ಬರ್ಗ- ಶೇ.57.20 ಹಾವೇರಿ – ಶೇ.72.59 ಕೊಪ್ಪಳ- ಶೇ.66.17 ರಾಯಚೂರು- ಶೇ.60.06 ಶಿವಮೊಗ್ಗ- ಶೇ.72.47 ಉತ್ತರ ಕನ್ನಡ – ಶೇ.70.13 https://kannadanewsnow.com/kannada/108-employees-call-off-strike-resume-work-as-usual/ https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/
ಬೆಂಗಳೂರು: 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಸರ್ಕಾರದಿಂದ ಯಾವುದೇ ವೇತನವನ್ನ ಬಾಕಿ ಉಳಿಸಿಕೊಂಡಿಲ್ಲ ಎಂದರು. ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು. ಸಂಸ್ಥೆಯವರೊಂದಿಗೆ ಒಡಂಬಡಿಕೆಯ ಪ್ರಕಾರ ಸರ್ಕಾರದಿಂದ ಕೊಡಬೇಕಾದ ಅನುದಾನವನ್ನ ಪಾವತಿಸಲಾಗಿದೆ. ಅನಗತ್ಯವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ. ಏಜನ್ಸಿಯವರಿಂದ ಸಿಬ್ಬಂದಿಗಳಿಗೆ ವೇತನ ಪಾವತಿಯಲ್ಲಿ ವ್ಯತ್ಯಾಸಗಳಾಗಿದ್ದರೆ ಅದನ್ನು ಸರಿಪಡಿಸುವಂತೆ ಸಂಸ್ಥೆಯವರಿಗೆ ತಿಳಿಸಲಾಗಿದೆ. 108 ಸಿಬ್ಬಂದಿಗಳ ಇನ್ನತರ ಕೆಲವು ಬೇಡಿಕೆಗಳಿವೆ. ಅದನ್ನು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಚರ್ಚಿಸೋಣ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದರು. ಅಂಬ್ಯುಲೆನ್ಸ್ ಸಿಬ್ಬಂದಿಗಳ…
ಬೆಂಗಳೂರು: ಗ್ಯಾರಂಟಿಗಳಿಂದ ಪಾಪರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪಾಪರ್ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಹಿಂದೆ ಸರ್ಕಾರ ಪಾರ್ಕಿಂಗ್ ಕಾಂಪ್ಲೆಕ್ಸ್, ಹಾಕಿ ಸ್ಟೇಡಿಯಂನ ಕಟ್ಟಡವನ್ನು ಗುತ್ತಿಗೆಗೆ ನೀಡಿ ಮಾರಾಟ ಮಾಡಿತ್ತು. ಈಗ ಆರು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಸುಮಾರು ಐವತ್ತು ವರ್ಷಕ್ಕೆ ಗುತ್ತಿಗೆಗೆ ನೀಡಲಾಗುತ್ತಿದೆ. ಇದು ಮಾರಾಟದ ಮಾದರಿಯಲ್ಲೇ ಇದೆ. ಇಂದಿರಾನಗರ, ಎಚ್‌ಎಸ್‌ಆರ್ ಲೇಔಟ್, ಆಸ್ಟಿನ್ ಟೌನ್, ಕೋರಮಂಗಲ, ವಿಜಯನಗರ, ಆರ್.ಟಿ.ನಗರ, ಸದಾಶಿವನಗರ ಕಾಂಪ್ಲೆಕ್ಸ್‌ಗಳು ಬಿಡಿಎ…
ಜೀವನವು ಪ್ರತಿದಿನ ಹೋರಾಟವಾಗಿದೆ. ಯಾವುದೇ ಪ್ರಗತಿ ಕಾಣುತ್ತಿಲ್ಲ, ಯಾವುದೇ ಪ್ರಯೋಜನವಾಗುತ್ತಿಲ್ಲ, ಅಪಘಾತಗಳು ಸಂಭವಿಸುತ್ತಿವೆ ಮತ್ತು ಕಷ್ಟದ ಪರಿಸ್ಥಿತಿಗೆ ಸಿಲುಕುತ್ತಿದ್ದಾರೆ ಎಂದು ಹಲವರು ಹಲವು ರೀತಿಯಲ್ಲಿ ದುಃಖಿಸುತ್ತಾರೆ. ಅಂತಹವರು ತಮ್ಮ ಜಾತಕದಲ್ಲಿ ಶನಿ ಮತ್ತು ಮಂಗಳ ಗ್ರಹಗಳ ಸಂಯೋಗ ಹೇಗಿದೆ ಎಂಬುದನ್ನು ಒಮ್ಮೆ ಜ್ಯೋತಿಷಿಯನ್ನು ಸಂಪರ್ಕಿಸಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಎಸ್ ಐಟಿ ವಿಚಾರಣೆಗೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಮಾಧ್ಯಮಗೋಷ್ಠಿಯಲ್ಲಿ ಪ್ರಮುಖವಾಗಿ ಈ ವಿಷಯ ಪ್ರಸ್ತಾಪ ಮಾಡಿದ ಅವರು; ರಾಹುಲ್ ಗಾಂಧಿ ಅವರು ಅಂಕಿ ಅಂಶಗಳ ಸಮೇತ ಈ ವಿಷಯ ಹೇಳಿದ್ದಾರೆ. ಎಲ್ಲರಿಗಿಂತ ಮೊದಲೇ ಈ ಮಾಹಿತಿ ಅವರಿಗೆ ಸಿಕ್ಕಿರಬೇಕು. ಪೆನ್ ಡ್ರೈವ್ ನಲ್ಲಿದ್ದ ವಿಡಿಯೋಗಳನ್ನು ಅವರು ನೋಡಿರಬೇಕು. ಹೀಗಾಗಿ ಅವರಿಂದ ತನಿಖಾ ತಂಡ ಮಾಹಿತಿ ಪಡೆಯಬೇಕು. ಕೂಡಲೇ ಅವರಿಗೆ ಸಮನ್ಸ್ ಜಾರಿ ಮಾಡಬೇಕು ಎಂದು ಅವರು ಆಗ್ರಹಪಡಿಸಿದರು. ರಾಹುಲ್ ಗಾಂಧಿ ಅವರು ಅತ್ಯಾಚಾರಕ್ಕೆ ಒಳಗಾದವರಲ್ಲಿ 16 ವರ್ಷದೊಳಗಿನ ಹೆಣ್ಣುಮಕ್ಕಳಿದ್ದಾರೆ ಎಂದು ಹೇಳಿದ್ದಾರೆ. ಅವರು ಯಾವ ಆಧಾರದಲ್ಲಿ ಈ ಹೇಳಿಕೆ ಕೊಟ್ಟರು? ಪೋಕ್ಸೋ ಪ್ರಕರಣದಲ್ಲಿ ಕೇಸ್ ಹಾಕಬೇಕೆಂದು ಅವರು ಒತ್ತಾಯ ಮಾಡಿದ್ದಾರೆ. “ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರೇ. ಯಾಕಪ್ಪಾ.. ಇನ್ನೂ ರಾಹುಲ್ ಗಾಂಧಿಗೆ…
ಶಿವಮೊಗ್ಗ: ಇಂದು ಲೋಕಸಭಾ ಚುನಾವಣೆಗೆ 1ನೇ ಹಂತದಲ್ಲಿ ಜಿಲ್ಲೆಯಲ್ಲಿ ಮತದಾನ ನಡೆಯುತ್ತಿದೆ. ಮತಗಟ್ಟೆ ಒಳಗೆ ಚುನಾವಣಾ ಆಯೋಗವು ಮೊಬೈಲ್ ತೆಗೆದುಕೊಂಡು ಹೋಗೋದಕ್ಕೆ ನಿರ್ಬಂಧ ವಿಧಿಸಿತ್ತು. ಮತದಾನದ ವೀಡಿಯೋ, ಪೋಟೋ ತೆಗೆದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿಯೂ ಎಚ್ಚರಿಕೆ ನೀಡಿತ್ತು. ಈ ನಿರ್ಬಂಧದ ನಡುವೆಯೂ ಶಿವಮೊಗ್ಗ ಜಿಲ್ಲೆಯಲ್ಲಿ ಕಿಡಿಗೇಡಿಯೊಬ್ಬ ಮತದಾನದ ವೀಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ದಾನೆ. ಆ ವೀಡಿಯೋ ವೈರಲ್ ಕೂಡ ಆಗಿದೆ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವಂತ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದ ವೇಳೆಯಲ್ಲಿ ಕಿಡಿಗೇಡಿಗಳು ಮತದಾನ ಮಾಡಿದಂತ ವೀಡಿಯೋ ಮಾಡಿ, ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿದ್ದಾರೆ. ಈಗ ಎರಡು ಮತದಾನ ಮಾಡಿದಂತ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ವೈರಲ್ ಆಗಿರುವಂತ ಒಂದು ವೀಡಿಯೋ ಭದ್ರಾವತಿಯ ಮತಗಟ್ಟೆಯೊಂದರದ್ದು ಎನ್ನಲಾಗುತ್ತಿದೆ. ವಿವಿಪ್ಯಾಟ್ ನಲ್ಲಿ ಯಾರಿಗೆ ವೋಟು ಹಾಕಲಾಗಿದೆ ಎಂಬುದನ್ನು ವೀಡಿಯೋ ಮಾಡಿಕೊಳ್ಳಲಾಗಿದೆ. ಅಲ್ಲದೇ ಇವಿಎಂ ಮೆಷಿನ್ ನಲ್ಲಿ ಬಟನ್ ಒತ್ತಿ ಬಳಿಕ ರೆಡ್ ಲೈಟ್…