Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಂಡ್ಯ: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಹಿಯನ್ನೇ ನಕಲು ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ಪೀಕಿದ್ದಂತ ವಂಚಕ ವೆಂಕಟೇಶನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವೆಂಕಟೇಶ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಲವರಿಗೆ ನಂಬಿಸಿದ್ದನು. ಅಲ್ಲದೇ ಅವರಿಂದ ಲಕ್ಷಾಂತರ ರೂ ಹಣವನ್ನು ಪಡೆದು, ನಕಲಿ ಸಹಿ ಮಾಡಿದಂತ ನೇಮಕಾತಿ ಆದೇಶ ಪತ್ರ ನೀಡಿ ವಂಚಿಸಿದ್ದನು. ವಂಚನೆಗೆ ಒಳಗಾದಂತ ಅಭ್ಯರ್ಥಿಗಳು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದಂತ ಪೊಲೀಸರು ಸಿಎಂ ಸಿದ್ಧರಾಮಯ್ಯ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನೀಡಿರುವಂತ ನಕಲಿ ಆದೇಶ ಪತ್ರವನ್ನು ಕಂಡು ಶಾಕ್ ಆಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಮಂಡ್ಯದ ಪೂರ್ವ ಠಾಣೆಯ ಪೊಲೀಸರು, ಸತತ ಮೂರು ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸಿ, ಕೊನೆಗೂ ವಂಚಕ ವೆಂಕಟೇಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಡ್ಯದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. https://kannadanewsnow.com/kannada/delhis-new-cm-likely-to-take-oath-at-ramlila-maidan-on-feb-20/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/ https://kannadanewsnow.com/kannada/centre-to-take-major-steps-for-crowd-control-at-railway-stations-ai-technology-to-be-used-report/

Read More

ನವದೆಹಲಿ: ಫೆಬ್ರವರಿ 20 ರಂದು ದೆಹಲಿಯ ಅಪ್ರತಿಮ ಮೈದಾನವಾದ ರಾಮ್ ಲೀಲಾ ಮೈದಾನದಲ್ಲಿ ಹೊಸ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಐತಿಹಾಸಿಕ ವಿಜಯವನ್ನು ಆಚರಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಭವ್ಯ ಸಮಾರಂಭವನ್ನು ಯೋಜಿಸುತ್ತಿದೆ. ಇದು ರಾಷ್ಟ್ರ ರಾಜಧಾನಿಯಲ್ಲಿ 27 ವರ್ಷಗಳ ಸುದೀರ್ಘ ಬರಗಾಲವನ್ನು ಕೊನೆಗೊಳಿಸುತ್ತದೆ. ಫೆ.19ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ದೆಹಲಿಯ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಬಿಜೆಪಿಯ ಹೊಸದಾಗಿ ಆಯ್ಕೆಯಾದ ಶಾಸಕರು ಫೆಬ್ರವರಿ 19 ರಂದು ನವದೆಹಲಿಯಲ್ಲಿ ಸಭೆ ಸೇರುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಶಾಸಕಾಂಗ ಪಕ್ಷದ ಸಭೆಗೆ ತನ್ನ ವೀಕ್ಷಕರನ್ನು ಕಳುಹಿಸುತ್ತದೆ. ಇದರಲ್ಲಿ ದೆಹಲಿ ವಿಧಾನಸಭೆಯಲ್ಲಿ ಸದನದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸದನದ ನಾಯಕ ದೆಹಲಿಯ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ. ಫೆಬ್ರವರಿ 20 ರಂದು ಮುಖ್ಯಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ…

Read More

ಮೈಸೂರು: ನಗರದಲ್ಲಿ ನಡೆದಿದ್ದಂತ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ಚೇತನ್ ತನ್ನ ಇಬ್ಬರು ಮಕ್ಕಳಿಗೆ, ಪತ್ನಿಗೆ ವಿಷ ಉಣಿಸಿ ಹತ್ಯೆಗೈದು, ಆ ಬಳಿಕ ತಾನೂ ನೇಣಿಗೆ ಶರಣಾಗರಿವ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಚೇತನ್ ಹತ್ಯೆಗೂ ಮುನ್ನ ಅಮೇರಿಕಾದಲ್ಲಿರುವಂತ ತನ್ನ ಸಹೋದರ ಭರತ್ ಗೆ ಕರೆ ಮಾಡಿ, ತಾನೂ ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದು, ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ತಿಳಿಸಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ. ಅಂದಹಾಗೇ ಚೇನ್ ಮೊದಲು ಕುಟುಂಬಸ್ಥರಿಗೆ ವಿಷ ಉಣಿಸಿದ್ದಾರೆ. ಆದರೇ ಆಗಲೂ ಸಾಯದಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಆ ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ಈ ವಿಷಯವನ್ನು ಮೃತ ಚೇತನ್ ಸಹೋದರ ಭರತ್, ಚೇತನ್ ಪತ್ನಿಯ ತಾಯಿಗೆ ತಿಳಿಸಿದ್ದಾರೆ. ಅವರು ಅಪಾರ್ಮೆಂಟ್ ಬಳಿ ತೆರಳಿ ನೋಡುವ ವೇಳೆಗೆ ಈ ದುರಂತ ನಡೆದು ಹೋಗಿದೆ. ಅಂದಹಾಗೇ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಚೇತನ್ (45), ರೂಪಾಲಿ (43), ಪ್ರಿಯಂವದ ಮತ್ತು…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಂಕ್ ಲೈನ್ ಮಾರ್ಗದಲ್ಲಿ ಈ ವರ್ಷದಿಂದಲೇ ಮೆಟ್ರೋ ರೈಲು ವಾಣಿಜ್ಯ ಸಂಚಾರ ಸೇವೆ ಆರಂಭಗೊಳ್ಳಲಿದೆ ಎಂಬುದಾಗಿ ಬಿಎಂಆರ್ ಸಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ 21 ಕಿಲೋಮೀಟರ್ ಪಿಂಕ್ ಲೈನ್ ರೈಲು ಮಾರ್ಗದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಸುರಂಗ ಮಾರ್ಗದ ಕೆಲಸ ಕೂಡ ಭರದಿಂದ ಸಾಗಿದ್ದು, ಮಾರ್ಚ್ ವೇಳೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇನ್ನೂ ಕಾಳೇನ ಅಗ್ರಹಾರ ಅಂದರೆ ಗೊಟ್ಟಿಗೆರೆಯಿಂದ ನಾಗಾವರದವರೆಗೆ 21 ಕಿಲೋಮೀಟರ್ ನಮ್ಮ ಮೆಟ್ರೋ ಮಾರ್ಗವೇ ಪಿಂಕ್ ಲೈನ್ ಆಗಿದೆ. ಈ ಮಾರ್ಗದಲ್ಲಿ ರೈಲು ಸಂಚಾರವು ಈ ವರ್ಷದಲ್ಲೇ ಆರಂಭಗೊಳ್ಳುವ ನಿರೀಕ್ಷೆಯಿದೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/bjp-cms-ct-round-was-a-photoshoot-dk-shivakumar/ https://kannadanewsnow.com/kannada/a-woman-suffering-from-leptospira-endometriosis-a-rare-disease-was-successfully-treated-at-fortis-hospital/

Read More

ಬೆಂಗಳೂರು: “ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರು ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್ ಎಂದು ಟೀಕಿಸಿರುವ ಬಗ್ಗೆ ಕೇಳಿದಾಗ, “ಬಿಜೆಪಿವರು ಇರುವುದೇ ಟೀಕೆ ಮಾಡಲು. ಬಿಜೆಪಿಗೆ ಬೇರೆ ಏನು ಕೆಲಸ ಇದೆ. ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದು ದೊಡ್ಡ ಮೊತ್ತದ ಯೋಜನೆ, ಇದರ ಗುಣಮಟ್ಟ ಸರಿಯಾಗಿದೆಯೇ? ಸಧ್ಯ 150 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಯುತ್ತಿದೆ. 1,700 ಕೋಟಿ ಮೊತ್ತದ ಯೋಜನೆ. ಇದನ್ನು ಕಾಲಮಿತಿಯೊಳಗೆ ಮುಗಿಸುವ ಗುರಿ ಹೊಂದಿದ್ದೇವೆ. ಮುಂದೆಯೂ ಇಂತಹ ಯೋಜನೆ ಕೈಗೆತ್ತಿಕೊಳ್ಳುವ ಉದ್ದೇಶವಿದೆ. ಈ ವಿಚಾರವಾಗಿ ಸ್ಥಳೀಯ ಶಾಸಕರ ಅಭಿಪ್ರಾಯ ಏನಿದೆ ಎಂದು ಚರ್ಚೆ ಮಾಡಿದ್ದೇನೆ. ಮತ್ತೆ…

Read More

ಉತ್ತರ ಪ್ರದೇಶ: ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದಂತ ಕಾಲ್ತುಳಿತದ ನಂತ್ರ ರೈಲ್ವೆ ಸಚಿವಾಲಯ ಎಚ್ಚೆತ್ತುಕೊಂಡಿದೆ. ಮತ್ತೆಲ್ಲೂ ಈ ದುರಂತ ಮರುಕಳಿಸದಂತೆ ಪ್ರಯಾಗ್ ರಾಜ್ ರೈಲ್ವೆ ನಿಲ್ದಾಣದಲ್ಲಿ ಎಮರ್ಜೆನ್ಸಿ ಜಾರಿಗೊಳಿಸಿದೆ. ಈ ಸಂಬಂಧ ರೈಲ್ವೆ ಇಲಾಖೆಯಿಂದ ಪ್ರಯಾಗ್ ರಾಜ್ ನಿಲ್ದಾಣದಲ್ಲಿ ಎಮರ್ಜೆನ್ಸಿ ಜಾರಿಗೊಳಿಸಿ ಆದೇಶಿಸಿದೆ. ಆದೇಶದಲ್ಲಿ ಜನಸಂದಣಿ ಆಗದಂತೆ ಎಚ್ಚರಿಕೆ ವಹಿಸಬೇಕು. ಹೆಚ್ಚು ಜನರು ಸೇರದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂಬುದಾಗಿ ಸೂಚಿಸಿದೆ. ಇನ್ನೂ ಸಾಧ್ಯವಾದಷ್ಟು ವಿಶೇಷ ರೈಲು ಓಡಿಸಲು ಸೂಚಿಸಿರುವಂತ ಇಲಾಖೆ ಫೆಬ್ರವರಿ.28ರವರೆಗೆ ಈ ನಿಯಮ ಪಾಲಿಸುವಂತೆ ಖಡಕ್ ಆದೇಶ ಮಾಡಿದೆ. ಈ ಮೂಲಕ ಪ್ರಯಾಗ್ ರಾಜ್ ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ನಿಯಂತ್ರಣಕ್ಕೆ ಮಹತ್ವದ ಕ್ರಮ ವಹಿಸಿದೆ. https://kannadanewsnow.com/kannada/a-woman-suffering-from-leptospira-endometriosis-a-rare-disease-was-successfully-treated-at-fortis-hospital/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/

Read More

ಬೆಂಗಳೂರು: ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡಲಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಎಂಬುದಾಗಿ ಭರವಸೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು… ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡುವುದಾಗಿ ಸಿ.ಎಂ.ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಅಂತ ಸಿ.ಎಂ ಭರವಸೆ ನೀಡಿದರು. ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ…

Read More

ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕಾರಣದಿಂದಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಹೇಳಲಾಗುತ್ತಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ವೈದ್ಯರ ಸೂಚನೆಯ ಮೇರೆಗೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ನಿರಂತರ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಅವರು ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಸದಸ್ಯ ಅಪೋಲೋ ಆಸ್ಪತ್ರೆಯ ವೈದ್ಯರಿಂದ ಹೆಚ್.ಡಿ ಕುಮಾರಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಯಾರೂ ಭಯಪಡಬೇಕಾಗಿಲ್ಲ ಎಂಬುದಾಗಿಯೂ ಹೇಳಿದ್ದಾರೆ. ಇನ್ನೂ ಅನಾರೋಗ್ಯದಿಂದ ಆಸ್ಪತ್ರೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ದಾಖಲಾದ ಕಾರಣ ಅವರ ಈ ವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರೋದಾಗಿ ಹೇಳಲಾಗುತ್ತಿದೆ. ಚಿಕಿತ್ಸೆ ಬಳಿಕ ಬುಧವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ ಎಂಬುದಾಗಿ…

Read More

ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗವು ಪ್ರಪಂಚದಾದ್ಯಂತ ವಿನಾಶವನ್ನುಂಟು ಮಾಡಿದೆ ಮತ್ತು ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಈ ಸಾಂಕ್ರಾಮಿಕ ರೋಗವು ನಮ್ಮೆಲ್ಲರ ಜೀವನದಲ್ಲಿ ಬದಲಾವಣೆಗಳನ್ನು ತಂದಿತು ಮತ್ತು ವಿಶ್ವಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಿತು. ಆದರೆ ಕರೋನವೈರಸ್ ಹೊರತಾಗಿ, ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗಗಳಾಗಬಹುದಾದ ಇನ್ನೂ ಅನೇಕ ರೋಗಗಳಿವೆ. ಆ ಬಗ್ಗೆ ಮುಂದೆ ಓದಿ. ಪ್ರಪಂಚದಾದ್ಯಂತದ ಆರೋಗ್ಯ ತಜ್ಞರು ಮತ್ತು ವಿಜ್ಞಾನಿಗಳು ಈ ಬೆದರಿಕೆಗಳ ಬಗ್ಗೆ ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಕಳೆದ ವರ್ಷ 2024 ರಲ್ಲಿ, ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ, ತಜ್ಞರು ‘ಡಿಸೀಸ್ ಎಕ್ಸ್’ ಬಗ್ಗೆ ಚರ್ಚಿಸಿದರು. ಇದು ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗಕ್ಕೆ ಕಾರಣವಾಗಬಹುದಾದ ಅಪರಿಚಿತ ಕಾಯಿಲೆಯನ್ನು ಸೂಚಿಸುತ್ತದೆ. ಕರೋನಾದಂತಹ ಸಾಂಕ್ರಾಮಿಕ ರೋಗದ ರೂಪವನ್ನು ತೆಗೆದುಕೊಳ್ಳಬಹುದಾದ ಆ 8 ಅಪಾಯಕಾರಿ ರೋಗಗಳ ಬಗ್ಗೆ ಕಲಿಯೋಣ. 1. ಮೆರ್ಸ್-ಸಿಒವಿ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡ್ರೋಮ್ ಕರೋನವೈರಸ್) ಮೆರ್ಸ್-ಸಿಒವಿ ಒಂದು ಕರೋನವೈರಸ್ ಆಗಿದ್ದು, ಇದು ಪ್ರಾಥಮಿಕವಾಗಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಈ ರೋಗವು ಮೊದಲು…

Read More

ಬೆಂಗಳೂರು: ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳಬೇಡಿ ಅಂತ ಹೇಳಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ಅದು ಹೇಳಿಕೆ ಅಷ್ಟೇ. ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯೋದಿಲ್ಲ. ಈಗ ಎಚ್ಚರಿಕೆನ ಯಾರು ಕೇಳ್ತಾರೆ ಎಂಬುದಾಗಿ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಅವರ ಹೆಸರನ್ನು ಹೇಳುತ್ತಿದ್ದಾರೆ. ಅವರು ಆ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಅಂತ ಗುಡುಗಿದರು. ನನ್ನದು ಇದು ಆರೋಪವಲ್ಲ. ವಾಸ್ತವ ಸಂಗತಿಯಾಗಿದೆ. ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ. 50 ವರ್ಷ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನಾನು ಮಾತನಾಡಿದರೇ ಸತ್ಪರಿಣಾಮ ಬೀರುವ ಮಾತನಾಡುತ್ತೇನೆಯೇ ಹೊರತು, ದುಷ್ಪರಿಣಾಮ ಬೀರುವಂತೆ ಮಾತನಾಡಲ್ಲ ಎಂಬುದಾಗಿ ತಿಳಿಸಿದರು. ನಾನು ಸಿಎಂ ಪೂರ್ಣಾವಧಿ ವಿಚಾರದಲ್ಲಿ ಹಠಕ್ಕೆ ಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಗೆ…

Read More