Author: kannadanewsnow09

ಬೆಂಗಳೂರು: ಗೆಜೆಟ್‌ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೆ. ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಆ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಶನಿವಾರ ಇಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, `ವಿಜಯಪುರ ಜಿಲ್ಲೆಯಲ್ಲಿ 1974, 1978 ಮತ್ತು 2016ರಲ್ಲಿ ವಕ್ಫ್ ಆಸ್ತಿಗಳ ಅಧಿಸೂಚನೆ ಹೊರಬಿದ್ದಿದೆ. ವಕ್ಫ್ ಆಸ್ತಿ ಇರುವುದು ವಿಜಯಪುರ ನಗರದ ವ್ಯಾಪ್ತಿಯಲ್ಲಿರುವ ಮಹಾಲಬಾಗಾಯತದಲ್ಲಿ. ಆದರೆ 1974ರ ಗೆಜೆಟ್ ನಲ್ಲಿ ಮಹಾಲಬಾಗಾಯತದ ಪಕ್ಕ ಬ್ರ್ಯಾಕೆಟ್ ನಲ್ಲಿ ಹೊನವಾಡ ಎಂದು ಬರೆದು ಬಿಟ್ಟಿದ್ದಾರೆ. ಈ ವಿಷಯವನ್ನು ರೈತರು ನಮ್ಮ…

Read More

ಬೆಂಗಳೂರು: ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಪಿಂಚಣಿದಾರರು ಅಥವಾ ಕುಟುಂಬದ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮ್ಯಾನ್ ಮೂಲಕ ರೂ.70 ಶುಲ್ಕ ನೀಡುವುದರೊಂದಿಗೆ ಕೆಲವೇ ನಿಮಿಷಗಳಲ್ಲಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬೆರಳಚ್ಚು ಪರಿಶೀಲಿಸಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ನ.30 ರೊಳಗಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.ippbonline.com ಮತ್ತು marketing@ippbonline.in ಸಂಪರ್ಕಿಸಲು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ. https://kannadanewsnow.com/kannada/important-information-for-government-employees-state-govt-fixes-minimum-monthly-insurance-premium-rate/ https://kannadanewsnow.com/kannada/shivamogga-the-kannada-jyothi-rathyatra-at-ulavi-in-soraba-was-accorded-a-grand-welcome/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಗೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತ ಉಳವಿಯ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಉಳವಿ ಹಾಗೂ ದೂಗುರು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು, ಸಿಬ್ಬಂದಿಗಳು, ಉಳವಿಯ ಗ್ರಾಮಸ್ಥರು ಸೇರಿ ಕನ್ನಡ ಜ್ಯೋತಿ ರಥಯಾತ್ರೆಗೆ ಪೂರ್ಣಕುಂಭದೊಂದಿಗೆ ಅದ್ದೂರಿ ಸ್ವಾಗತತವನ್ನು ಕೋರಿದರು. ಈ ವೇಳೆ ಮಾತನಾಡಿದಂತ ಉಪನ್ಯಾಸಕ ಶಿವಕುಮಾರ್ ಅವರು, ಕನ್ನಡ ಭಾಷೆ, ಕನ್ನಡ ನಾಡು ಉಳಿಯಲು, ಬೆಳೆಯಲು, ನಿರಂತತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ವರ್ಷ ಮಂಡ್ಯದಲ್ಲಿ ನಡೆಯುವಂತಹ 87ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡ ಜ್ಯೋತಿ ರಥ” ಉಳವಿ ಗ್ರಾಮಕ್ಕೆ ಬಂದಿದೆ. ಅದರನ್ನು ಅದ್ದೂರಿಯಾಗಿ ಸ್ವಾಗತಿಸಿ ಬೀಳ್ಕೊಡಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದಂತ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದಂತ…

Read More

ನವದೆಹಲಿ : ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ ಅವರ ಕಂಪನಿ ರಿಲಯನ್ಸ್ ಜಿಯೋ ಈ ದೀಪಾವಳಿಗೆ ಜಿಯೋ ಭಾರತ್ 4 ಜಿ ಫೋನ್‌ಗಳ ಬೆಲೆಯನ್ನು ಶೇ 30 ರಷ್ಟು ಕಡಿತಗೊಳಿಸಿದೆ. ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ, ₹999 ನ ಜಿಯೋಭಾರತ್ ಮೊಬೈಲ್ ಫೋನ್ ಈಗ ₹699ರ ವಿಶೇಷ ಬೆಲೆಗೆ ಲಭ್ಯವಿದೆ. ಜಿಯೋಭಾರತ್ ಫೋನ್ ಅನ್ನು 123 ರೂ.ಗೆ ರೀಚಾರ್ಜ್ ಮಾಡಬಹುದು. ಈ ಮಾಸಿಕ ಟ್ಯಾರಿಫ್ ಯೋಜನೆಯಲ್ಲಿ ಅನಿಯಮಿತ ಉಚಿತ ಧ್ವನಿ ಕರೆಗಳು, 14 ಜಿಬಿ ಡೇಟಾ ಸಹ ಒಳಗೊಂಡಿದೆ. ಜಿಯೋದ ಮಾಸಿಕ ₹123ಗಳ ರೀಚಾರ್ಜ್ ಯೋಜನೆ ಇತರ ಆಪರೇಟರ್ ಗಳಿಗಿಂತ 40 ಪ್ರತಿಶತ ಅಗ್ಗವಾಗಿದೆ. ಏಕೆಂದರೆ ಇತರ ನೆಟ್‌ವರ್ಕ್‌ಗಳ ಫೀಚರ್ ಫೋನ್‌ಗಳ ಮಾಸಿಕ ರೀಚಾರ್ಜ್ ಕನಿಷ್ಠ ₹ 199 ಇದೆ. ಇದು ಜಿಯೋಗಿಂತ 76 ರೂಪಾಯಿ ಹೆಚ್ಚು ದುಬಾರಿಯಾಗಿದೆ. ಅಂದರೆ, ಜಿಯೋ ಗ್ರಾಹಕರಿಗೆ ಪ್ರತಿ ರೀಚಾರ್ಜ್ ನಲ್ಲಿ ತಿಂಗಳಿಗೆ ₹ 76 ಉಳಿಯಲಿದೆ. ತಿಂಗಳಿಗೆ ₹76 ರಂತೆ 9…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿದಂತ ವಾಹನಗಳ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಆ ಬಳಿಕ ಠಾಣಾಧಿಕಾರಿಗಳ ಬಳಿಯಲ್ಲಿ ಎಷ್ಟು ವಾಹನ ಸೀಜ್ ಮಾಡಿದ್ದೀರಿ.? ಯಾವ ಯಾವ ಕೇಸಲ್ಲಿ ವಾಹನಗಳನ್ನು ಹಿಡಿದಿಟ್ಟುಕೊಂಡಿದ್ದೀರಿ ಎಂಬುದಾಗಿ ಲೆಕ್ಕ ಕೇಳಿದರು. ಆಗ ಸರಿಯಾಗಿ ಉತ್ತರಿಸದಂತ ಠಾಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ಸೂಕ್ತವಾದ ರಿಜಿಸ್ಟಾರ್ ಇಟ್ಟು, ಎಲ್ಲಾ ಮಾಹಿತಿಯನ್ನು ದಾಖಲಿಸುವಂತೆ ಸೂಚಿಸಿದರು. ಶಾಸಕರಾದ ಗೋಪಾಲಕೃಷ್ಣ ಬೇಳೂರು, ಮಂಜುನಾಥ್ ಭಂಡಾರಿ, ಬಲ್ಕಿಶ್ ಭಾನು, ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್, SP ಮಿಥುನ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಇದ್ದರು. https://kannadanewsnow.com/kannada/big-shock-to-illegal-building-owners-in-bengaluru-deputy-cm-dk-shivakumar-announces-eviction/ https://kannadanewsnow.com/kannada/qadri-agrees-to-withdraw-from-shiggaon-seat-after-minister-zameer-ahmeds-persuasion-succeeds/

Read More

ಬೆಂಗಳೂರು : ಶಿಗ್ಗಾವ್ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂ ಪೀರ್ ಖಾದ್ರಿ ಮನವೊಲಿಸುವಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದು, ಕಣ ದಿಂದ ಹಿಂದೆ ಸರಿಯಲು ಒಪ್ಪಿದಾರೆ. ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟ್ ಗಾರ್ ಜತೆಗೂಡಿ ಖಾದ್ರಿ ಅವರನ್ನು ಶುಕ್ರವಾರ ಮಧ್ಯರಾತ್ರಿ ಶಿಗ್ಗಾವ್ ನಿಂದ ಬೆಂಗಳೂರಿಗೆ ಕರೆತಂದಿದ್ದ ಜಮೀರ್ ಅಹಮದ್ ಖಾನ್ ಅವರು, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿಸಿದರು. ಮಾತುಕತೆ ವೇಳೆ, ಖಾದ್ರಿ ಅವರಿಗೆ ರಾಜಕೀಯ ವಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನದ ಭರವಸೆ ನೀಡಲಾಗಿದ್ದು, ಅ . 30 ರಂದು ನಾಮಪತ್ರ ವಾಪಸ್ ಪಡೆಯುವುದು ಬಹುತೇಕ ಖಚಿತ ವಾಗಿದೆ. ಆದರೆ, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಮಾತನಾಡಿ ಅವರನ್ನು ಒಪ್ಪಿಸಿ ಕಾಂಗ್ರೆಸ್…

Read More

ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ ಎಂದು ಪ್ರಕಟಿಸಿದÀರು. ನಾವು ಹೋರಾಟಕ್ಕೂ ಇಳಿಯುತ್ತೇವೆ; ಆದರೆ, ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು. ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಮೊನ್ನೆ ವಿಜಾಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಸದಾ ತುಷ್ಟೀಕರಣ ಮಾಡುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಬೆಂಬಲ ವಕ್ಫ್ ಬೋರ್ಡ್‍ಗೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು…

Read More

ಬೆಂಗಳೂರು: “ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಹಾಗೂ ಕಳಪೆ ಗುಣಮಟ್ಟದ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಾಗೂ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆಯಾಯಿತು ಎಂದು ಕೇಳಿದಾಗ, “ಮಳೆಯಿಂದ ಹಾನಿಯಾಗಿರುವ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಜತೆಗೆ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ನಾವು ಮುಂದಾಗಿದ್ದೇವೆ. ಈ ಹಿಂದೆ ಅಧಿಕಾರಿಗಳಿಗೆ ಇದ್ದ ಅಧಿಕಾರವನ್ನು ಕಳೆದ ಸರ್ಕಾರ ಮೊಟಕುಗೊಳಿಸಿತ್ತು. ಈಗ ನಮ್ಮ ಸರ್ಕಾರ ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ ಅಧಿಕಾರಿಗಳಿಗೆ ಈ ಅಕ್ರಮ ಕಟ್ಟಡ ನಿರ್ಮಾಣ ತಡೆಯಲು ಅಧಿಕಾರ ನೀಡುತ್ತಿದ್ದೇವೆ. ಕೂಡಲೇ ಇಂತಹ ಆಸ್ತಿಗಳ ನೋಂದಣಿ ನಿಲ್ಲಿಸಲಾಗುವುದು. ಇದೇ ವೇಳೆ ಒತ್ತುವರಿ ತೆರವುಗೊಳಿಸುವ ಬಗ್ಗೆಯೂ ಗಮನ ಹರಿಸಲಾಗುತ್ತಿದೆ. ಈ ವಿಚಾರದಲ್ಲಿ ನಾವು ಪ್ರಮುಖ ತೀರ್ಮಾನ ಕೈಗೊಂಡಿದ್ದೇವೆ”ಎಂದು ವಿವರಿಸಿದರು. ಮಳೆಯಿಂದ ಆಗಿರುವ ತೊಂದರೆ ಬಗ್ಗೆ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಬೆಂಗಳೂರು ನಗರದಲ್ಲಿ…

Read More

ಬೆಂಗಳೂರು: ಕಾರವಾರದ ಬೇಲೆಕೇರಿ ಬಂದರಿನಲ್ಲಿದ್ದಂ 11,312 ಮೆಟ್ರಿಕ್ ಟನ್ ಅದಿರನ್ನು ಶಾಸಕ ಸತೀಶ್ ಸೈಲ್ ಅವರು ಅಕ್ರಮವಾಗಿ ನಾಪತ್ತೆ ಮಾಡಿದ್ದರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ ಇತ್ತೀಚಿಗಷ್ಟೇ ಕೋರ್ಟ್ ದೋಷಿ ಎಂಬುದಾಗಿ ತೀರ್ಪು ನೀಡಿತ್ತು. ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಯಾವ ಯಾವ ಕೇಸಲ್ಲಿ ಎಷ್ಟು ಶಿಕ್ಷೆ, ದಂಡ ವಿಧಿಸಲಾಗಿದೆ ಅಂತ ಮುಂದೆ ಓದಿ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, 2010ರಲ್ಲಿ ಕಾರವಾರದ ಬೇಲೆಕೇರಿ ಬಂಧರಿನಲ್ಲಿ ಇದ್ದಂತ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ ಸಂಬಂಧದ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂಬುದಾಗಿ ತೀರ್ಪು ನೀಡಿದ್ದರು. ಬೆಲೆಕೇರಿ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಒಟ್ಟು 6 ಕೇಸ್ ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ…

Read More

ಬೆಂಗಳೂರು: ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಕಾರವಾರ ಶಾಸಕರಾಗಿದ್ದಂತ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ಬೆನ್ನಲ್ಲೇ ಅವರ ಶಾಸಕತ್ವವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ. ಇಂದು ಬೇಲೆಕೇರಿ ಬಂದರಿನಲ್ಲಿದ್ದಂ 11,312 ಮೆಟ್ರಿಕ್ ಟನ್ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಅವರಿಗೆ ಮೊದಲ ಕೇಸಲ್ಲಿ 5 ವರ್ಷ, 2ನೇ ಕೇಸಲ್ಲಿ 7 ವರ್ಷ ಕಠಿಣ ಶಿಕ್ಷೆ ಹಾಗೂ 9.6 ಕೋಟಿ ದಂಡವನ್ನು ವಿಧಿಸಿ ಆದೇಶಿಸಿದೆ. ಇದಲ್ಲದೇ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಶಾಸಕ ಸ್ಥಾನವನ್ನು ಶಿಕ್ಷೆಯ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ರ್ದದುಗೊಳಿಸಿ ಆದೇಶಿಸಿದೆ. ಈ ಮೂಲಕ ಸತೀಸ್ ಸೈಲ್ ಜೈಲುಪಾಲಾಗುವ ಮೂಲಕ, ಶಾಸಕ ಸ್ಥಾನದಿಂದಲೂ ಅನರ್ಹಗೊಂಡಂತೆ ಆಗಿದೆ. https://kannadanewsnow.com/kannada/there-will-be-no-electricity-in-these-areas-on-october-28/ https://kannadanewsnow.com/kannada/now-applying-for-ration-card-in-karnataka-is-simpler-heres-how-to-apply-online/

Read More