Author: kannadanewsnow09

ಚಿಕ್ಕಮಗಳೂರು: ಕಡೂರು ಹಾಗೂ ತರೀಕೆರೆ ಬಸ್ ನಿಲ್ದಾಣಕ್ಕೆ ಮತ್ತು ಕಡೂರಲ್ಲಿ ವಸತಿಗೃಹ ನಿರ್ಮಾಣಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ದಿನಾಂಕ: 24-09-2025 ರಂದು ಕಡೂರು ಬಸ್ ನಿಲ್ದಾಣದ ಆವರಣದಲ್ಲಿ ಕಡೂರು ನೂತನ ಬಸ್ ನಿಲ್ದಾಣ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಕಡೂರು ಬಸ್ ಘಟಕದಲ್ಲಿ ನಿರ್ಮಿಸಿರುವ ಸಿಬ್ಬಂದಿ ವಸತಿಗೃಹಗಳ ಉದ್ಘಾಟನೆಯನ್ನು ಹಾಗೂ ತರೀಕೆರೆ ಬಸ್ ನಿಲ್ದಾಣದ ಆವರಣದಲ್ಲಿ ತರೀಕೆರೆ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಯವರು ನೆರವೇರಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಅತ್ಯಾಧುನಿಕವಾದ, ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಿದ್ದು, ಇದರ ಸದುಪಯೋಗವಾಗಲಿ ಎಂದರು. ಕಡೂರು ಮತ್ತು ತರೀಕೆರೆ ತಾಲ್ಲೂಕು ಕೇಂದ್ರಗಳಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವುದರಿಂದ ಸಮರ್ಪಕ ವ್ಯವಸ್ಥೆ ಇರುವ ಸುಸಜ್ಜಿತ ನಿಲ್ದಾಣಗಳ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಹೊಸ ಬಸ್ ನಿಲ್ದಾಣಗಳ ನಿರ್ಮಾಣ ಕಾಮಗಾರಿಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಡೂರು ಶಾಸಕ ಆನಂದ್ ಕೆ.ಎಸ್ ಹಾಗೂ ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು…

Read More

ಮುಂಬೈ : ಆಸ್ಟ್ರೇಲಿಯಾದ ಮಾಜಿ ಮಹಿಳಾ ಕ್ರಿಕೆಟರ್ ಮತ್ತು ಎರಡು ಬಾರಿಯ ವಿಶ್ವಕಪ್ ವಿಜೇತೆ ಲಿಸಾ ಕೈಟ್ಲಿ ಅವರನ್ನು ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಗುರುವಾರ ನೇಮಕ ಮಾಡಲಾಗಿದೆ. 1997 ಮತ್ತು 2005ರಲ್ಲಿ ಮಹಿಳೆಯರ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಕೈಟ್ಲಿ, ಮಹಿಳಾ ಕ್ರಿಕೆಟ್‌ನಲ್ಲಿ ಅತ್ಯಂತ ಗೌರವಾನ್ವಿತ ತರಬೇತುದಾರರಲ್ಲಿ ಒಬ್ಬರಾಗಿದ್ದಾರೆ. ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಉನ್ನತ ಜಾಗತಿಕ ಟಿ20 ಲೀಗ್‌ಗಳಲ್ಲಿನ ಶ್ರೇಷ್ಠ ಆಟದ ವೃತ್ತಿಜೀವನ ಮತ್ತು ತರಬೇತಿ ಅನುಭವದೊಂದಿಗೆ ಅವರು, ಮುಂಬೈ ಇಂಡಿಯನ್ಸ್ ತಂಡಕ್ಕೆ ಅಪ್ರತಿಮ ಅನುಭವ ಮತ್ತು ದೃಷ್ಟಿಕೋನವನ್ನು ತರಲಿದ್ದಾರೆ. ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಈಗಾಗಲೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಕೇವಲ ಮೂರು ಆವೃತ್ತಿಗಳಲ್ಲಿ ಎರಡು ಚಾಂಪಿಯನ್‌ಷಿಪ್‌ಗಳನ್ನು ಗೆದ್ದುಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡ 2023 ಮತ್ತು 2025ರಲ್ಲಿ ಡಬ್ಲ್ಯುಪಿಎಲ್ ಚಾಂಪಿಯನ್‌ ಆಗಿದೆ. ‘ಲಿಸಾ ಕೈಟ್ಲಿ ಅವರನ್ನು ಮುಂಬೈ ಇಂಡಿಯನ್ಸ್ ಕುಟುಂಬಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಲಿಸಾ ತನ್ನ ಉತ್ಸಾಹದಿಂದ ಹೊಸ…

Read More

ನವದೆಹಲಿ: ನವರಾತ್ರಿಯ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ ಎಲ್ ಪಿ ಜಿ ಸಂಪರ್ಕಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು, ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಂದರೇ ಪಿಎಂಯುವೈ ಅಡಿಯಲ್ಲಿ 25 ಲಕ್ಷ ಹೆಚ್ಚುವರಿ LPG ಸಂಪರ್ಕಗಳನ್ನು ಉಚಿತವಾಗಿ ಮಹಿಳೆಯರಿಗೆ ನೀಡಲು ಅನುಮೋದಿಸಿದೆ ಎಂದಿದ್ದಾರೆ. ನವರಾತ್ರಿಯ ಹೊತ್ತಲ್ಲೇ ಉಜ್ವಲ ಯೋಜನೆಯ ಅಡಿಯಲ್ಲಿ 25 ಲಕ್ಷ ಠೇವಣಿ ರಹಿತ ಎಲ್ ಪಿಜಿ ಸಂಪರ್ಕಗಳನ್ನು ಮಹಿಳೆಯರಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದುರ್ಗಾ ದೇವಿಗೆ ನೀಡಿದ ಗೌರವದೊಂದಿಗೆ ಮಹಿಳೆಯರನ್ನು ನಡೆಸಿಕೊಳ್ಳುವ ಪ್ರಧಾನಿ ಮೋದಿಯವರ ಬದ್ಧತೆಗೆ ಇದು ಮತ್ತೊಂದು ಸಾಕ್ಷಿಯಾಗಿದೆ. ದೇಶದ ಮಹಿಳೆಯರು ಪಿಎಂ…

Read More

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರುವುದು ಒಂದಾಗಿತ್ತು. ನೌಕರರ ಬಹು ದಿನಗಳ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಈಡೇರಿಸಿದ್ದಾರೆ. ಅವರಿಗೆ ನೌಕರರ ಬೇಡಿಕೆ ಈಡೇರಿಸಿದ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರಿ ನೌಕರರು, ಅವರ ಅವಲಂಬಿತ ಕುಟುಂಬಸ್ಥರಿಗೆ ಶತಾಯಗತಾಯ ಜಾರಿಗೊಳಿಸಲೇ ಬೇಕು ಎನ್ನುವ ಪಣವನ್ನು ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತೊಟ್ಟಿದ್ದರು.…

Read More

ಶಿವಮೊಗ್ಗ : ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೋ ಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಭೋವಿ ಕಾಲೋನಿ, ಆದರ್ಶ ನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು,…

Read More

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2025-26 ನೇ ಸಾಲಿನ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಶ್ರಮಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಸಾಂತ್ವಾನ ಯೋಜನೆ ಹಾಗೂ ವ್ಯಾಪಾರ/ ಉದ್ಯಮಿಗಳಿಗೆ ನೇರಸಾಲ ಯೋಜನೆಯಡಿ www.kmdconline.karnataka.gov.in ಮೂಲಕ ಅ.16 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ಕುಟುಂಬ ವಾರ್ಷಿಕ ಆದಾಯ ರೂ.6 ಲಕ್ಷದೊಳಗಿರಬೇಕು. ವೃತ್ತಿ ಪ್ರೋತ್ಸಾಹ ಯೋಜನೆಗೆ ನಗರ ಪ್ರದೇಶ ರೂ.1.30ಲಕ್ಷ ಹಾಗೂ ಗ್ರಾಮೀಣ ಪ್ರದೇಶ ರೂ.81000, ಸಾಂತ್ವಾನ ಯೋಜನೆಯಲ್ಲಿ ರೂ.8 ಲಕ್ಷದೊಳಗೆ ವಾರ್ಷಿಕ ಆದಾಯ ಇರಬೇಕು. ವಯಸ್ಸು ಕನಿಷ್ಠ 18 ರಿಂದ 55 ವರ್ಷದೊಳಗಿನವರಾಗಿರಬೇಕು. ಅರ್ಜಿದಾರರ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ,…

Read More

ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC…

Read More

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ ಆದೇಶಿಸಿದೆ. ಇದಕ್ಕೆ ಕಾರಣರಾದಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರುವುದು ಒಂದಾಗಿತ್ತು. ನೌಕರರ ಬಹು ದಿನಗಳ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಈಡೇರಿಸಿದ್ದಾರೆ. ಅವರಿಗೆ ನೌಕರರ ಬೇಡಿಕೆ ಈಡೇರಿಸಿದ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರಿ ನೌಕರರು, ಅವರ ಅವಲಂಬಿತ ಕುಟುಂಬಸ್ಥರಿಗೆ ಶತಾಯಗತಾಯ ಜಾರಿಗೊಳಿಸಲೇ ಬೇಕು ಎನ್ನುವ ಪಣವನ್ನು ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತೊಟ್ಟಿದ್ದರು. ಅದರಂತೆ ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅವರ…

Read More

ಶಿವಮೊಗ್ಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಹೌದು ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಆರಂಭವಾಗಿದೆ. ಕರ್ತವ್ಯಕ್ಕೆ ಗೈರು ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಅಮಾನತು ಮಾಡಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮೀಕ್ಷೆ ನಡೆಯುತ್ತಿದ್ದರು ಕೂಡ ಎಂ ರಂಗನಾಥ ಕೆಲಸಕ್ಕೆ ರಜೆ ಹಾಕಿದ್ದಾರೆ. ಸಮೀಕ್ಷೆ ಮಾಡುವ ಒಂದಿಷ್ಟು ಜವಾಬ್ದಾರಿ ಹೊಂದಿದ್ದಾರೆ. ರಂಗನಾಥ್ ಬಿ ಆರ್ ಎಸ್ ಕೇಂದ್ರದ ಸಮನ್ವಯ ಅಧಿಕಾರಿಯಾಗಿದ್ದಾರೆ. ರಜೆ ಹಾಕಿ ಅಧಿಕಾರಿಗಳ ದೂರವಾಣಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಂಗನಾಥ್ ಅಮಾನತುಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.…

Read More

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎನ್ನುವಂತೆ 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆದೇಶ ಹೊರಡಿಸಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರೀಷ್ಕರಿಸಲು ಆದೇಶವಾಗಿರುತ್ತದೆ. ಅದರನ್ವಯ 2025- 26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಕೆಳಕಂಡಂತೆ ಪರಿಷ್ಕರಿಸಿದೆ ಎಂದು ತಿಳಿಸಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕದ ಹೆಚ್ಚಳ ವಿವರ ಎಸ್ ಎಸ್…

Read More