Subscribe to Updates
Get the latest creative news from FooBar about art, design and business.
Author: kannadanewsnow09
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದರು. ಇಂಥಾ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಸ್ಪರ್ಧಿಸುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ವಿನಯ್ ಗೆ ಓಟು ಹಾಕಿದರೆ,ಬಿಜೆಪಿಗೆ ಓಟು ಹಾಕಿದಂತೆ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀವುಗಳು ಹಾಕುವ ಪ್ರತೀ ಓಟು ನನಗೇ ಹಾಕಿದಂತೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಕಣದಲ್ಲಿ ಇದ್ದೇನೆ ಎಂದುಕೊಂಡು ಮತ ಹಾಕಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಕರೆ ನೀಡಿದರು. 15 ಲಕ್ಷ ರೂಪಾಯಿ ಪ್ರತಿಯೊಬ್ಬ ಭಾರತೀಯರ ಖಾತೆಗೆ ಹಾಕ್ತೀನಿ ಎಂದು ನಂಬಿಸಿದ ಮೋದಿ ಈ ಹತ್ತು ವರ್ಷದಲ್ಲಿ…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಬೆನ್ನಲ್ಲೇ, ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯೊಬ್ಬರ ಪುತ್ರ ಕಿಡ್ನ್ಯಾಪ್ ಆರೋಪದಲ್ಲಿ ದೂರು ನೀಡಿದ್ದರು. ಇದೀಗ ಕಿಡ್ನ್ಯಾಪ್ ಆಗಿರೋ ಸಂತ್ರಸ್ತೆ ಮಡಿಕೇರಿಯ ತೋಟದ ಮನೆಯೊಂದರಲ್ಲಿ ಅಡಗಿಸಿಟ್ಟಿರೋ ಶಂಕೆ ವ್ಯಕ್ತವಾಗಿದೆ. ಹೌದು, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಕಿಡ್ನ್ಯಾಪ್ ಮಾಡಿದ್ದಾರೆ ಎನ್ನಲಾಗಿರುವಂತ ಸಂತ್ರಸ್ತೆ ಮಡಿಕೇರಿಯಲ್ಲಿರುವ ಅನುಮಾನ ಈಗ ವ್ಯಕ್ತವಾಗಿದೆ. ಮಡಿಕೇರಿಯ ತೋಟದ ಮನೆಯೊಂದರಲ್ಲಿ ಅಡಗಿಸಿ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಮಹಿಳೆಯನ್ನು ಜೆಡಿಎಸ್ ನಾಯಕರೊಬ್ಬರ ಮಡಿಕೇರಿಯ ತೋಟದ ಮನೆಯಲ್ಲಿ ಅಡಗಿಸಿ ಇಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯ ಫಾರ್ಮ್ಹೌಸ್ ನ ಮಾಹಿತಿ ಮೇರೆಗೆ ಮಡಿಕೇರಿಯಲ್ಲಿ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಮತ್ತೊಂದೆಡೆ ರೇವಣ್ಣ ವಿರುದ್ಧ ದಾಖಲಾಗಿದ್ದಂತ ಕಿಡ್ನ್ಯಾಪ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಎಸ್ಐಟಿ ಪರ ಎಸ್ ಪಿಪಿಯ ವಾದ, ಹೆಚ್ ಡಿ ರೇವಣ್ಣ ಪರ ವಕೀಲರ…
ಶಿವಮೊಗ್ಗ : 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾಗಿ ಕರೆಯಲಾಗುವುದು. ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್,…
ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ನಡೆದಂತ ಭೀಕರ ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಚಿಂತಾಜನಕ ಎಂಬುದಾಗಿ ಹೇಳಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರಸ್ವಾಮೀಜಿ ಅವರ ಕಾರು, ಅಮಿನಗಢ ಬಳಿಯಲ್ಲಿ ಇಂದು ಟಿಪ್ಪರ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ, ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಿವಕುಮಾರಸ್ವಾಮೀಜಿಯವರ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದಿದ್ದು, ಕೋಮಾದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವಂತ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಯವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಶಿವಕುಮಾರಸ್ವಾಮೀಜಿಯವರ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/anticipatory-bail-plea-of-former-minister-hd-revanna-adjourned-for-some-time/ https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದಂತ ಕಿಡ್ನ್ಯಾಪ್ ಕೇಸ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಈ ಮೂಲಕ ಇಂದು ಕೂಡ ನಿರೀಕ್ಷಣಾ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಸಂತೋಷ ಗಜಾನನ ಭಟ್ ನಿನ್ನೆ ನಡೆಸಿದರು. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ ಪ್ರಕರಣದ ಮೇಲೆಯೇ ಸಂಪೂರ್ಣ ವಾದ…
ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅಲ್ಲದೇ ಮಹಿಳೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದಂತ ಮಧ್ಯಂತರ ಜಾಮೀನು ಮಂಜೂರಾತಿಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ನಿರಾಕರಿಸಿದೆ. ಆದ್ರೇ ಇಂದಿಗೆ ವಿಚಾರಣೆ ಮುಂದೂಡಿದ್ದು, ವಾದ ಆಲಿಸಿದ ನಂತ್ರ ಆದೇಶ ನೀಡುವುದಾಗಿ ಹೇಳಿತ್ತು. ಅದರಂತೆ ಇಂದು ವಾದ, ಪ್ರತಿವಾದ ಆಲಿಸಿದ ನಂತ್ರ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಕೆಲ ಕಾಲ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಸಂಜೆಯ ವೇಳೆಗೆ ತೀರ್ಪು ನೀಡುವ ಸಾಧ್ಯತೆ ಇದೆ. ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಸಂತೋಷ ಗಜಾನನ ಭಟ್ ನಿನ್ನೆ ನಡೆಸಿದರು. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ…
ಬೆಂಗಳೂರು: ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ ಬಗ್ಗೆ ಮಾಹಿತಿ ಇದೆ. ಲಸಿಕೆ ಎಂದ ಮೇಲೆ ಸಣ್ಣ ಪ್ರಮಾಣದ ಸೈಡ್ ಎಫೆಕ್ಟ್ ಇರುತ್ತೆ. ಆದರೆ ಜನರು ಏನೋ ಆಗಿಬಿಡುತ್ತೆ ಎಂದು ಭಯಪಡಬಾರದು ಎಂದು ಹೇಳಿದರು. ಕರ್ನಾಟಕದಲ್ಲಿ ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಬರಳಣಿಕೆಯಷ್ಟು ಜನರಿಗೆ ಮಾತ್ರ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ. ನಾಲ್ಕು ಐದು ಜನರಿಗೆ ವ್ಯಾಕ್ಸಿನ್ ಪಡೆದ ಬಳಿಕ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿರುವ ಬಗ್ಗೆ ಮಾಹಿತಿ ಇದೆ. ಆದರೆ ಇದು ಲಸಿಕೆಯಿಂದಲೇ ಆಗಿದೆಯಾ ಅಥವಾ ಬೇರೆ ಅರೋಗ್ಯದ ಸಮಸ್ಯೆಗಳು ಕೂಡ ಕಾರಣವಾ ಎಂಬುದನ್ನ ನೋಡಬೇಕು ಎಂದರು. ಕೋವಿಡ್ ಶೀಲ್ಡ್ ವಾಕ್ಸಿನ್ ಪಡೆದವರೆಲ್ಲರಿಗೂ ಆರೋಗ್ಯ ತೊಂದರೆಗಳಾಗುತ್ತವೆ ಎಂದು…
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ವಿರುದ್ಧದ ಕಿಡ್ನ್ಯಾಪ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ವೇಳೆಯಲ್ಲಿ, ಕೋರ್ಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ಬಗ್ಗೆ ಮೆಮೋ ಸಲ್ಲಿಸಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ. ಈ ವೇಳೆಯಲ್ಲಿ ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯಕ್ ಅವರು, ಉಪ ಮುಖ್ಯಮಂತ್ರಿ ಹೇಳಿಕೆ ಉಲ್ಲೇಖಿಸಿದರು. ಡಿಕೆ ಶಿವಕುಮಾರ್ ಅವರು 2 ತಿಂಗಳು ಕಸ್ಟಡಿಯಲ್ಲಿ ಇರಿಸಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದು ತನಿಖೆಯ ಧಿಕ್ಕು ತಪ್ಪಿಸುತ್ತದೆ. ಇದರ ಹಿಂದಿನ ಉದ್ದೇಶವೇನು ಎಂಬುದಾಗಿ ಪ್ರಶ್ನಿಸಿದಂತ ಅವರು, ಡಿಸಿಎಂ ಡಿಕೆಶಿ ಹೇಳಿಕೆಯ ಬಗ್ಗೆ ಎಸ್ ಪಿಪಿ, ಕೋರ್ಟ್ ಗೆ ಮೆಮೋ ಸಲ್ಲಿಸಿದರು. ಅಲ್ಲದೇ ನಿರೀಕ್ಷಣಾ ಜಾಮೀನು ನೀಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗಲಿದ್ದಾರೆ. ರಾಜಕೀಯ ಉದ್ದೇಶಕ್ಕಾಗಿ ಪ್ರಕರಣ ಬಳಸಿಕೊಳ್ಳುತ್ತಿರುವಾಗ ಹೇಗೆ ನಿರೀಕ್ಷಣಾ ಜಾಮೀನು…
ಬೆಂಗಳೂರು: 2024-25ನೇ ಸಾಲಿನ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ ದಿನಚರಿಗಳನ್ನು ಬ್ಲಾಕ್ ಹಂತದಿಂದ ಶಾಲಾ ಹಂತಕ್ಕೆ ವಿತರಣೆ ಬಗ್ಗೆ ಕರ್ನಾಟಕ ಪಠ್ಯಪುಸ್ತಕ ಸಂಘ ಸೂಚಿಸಿದೆ. ಈ ಮೂಲಕ ಶಾಲಾ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕರ ಸಿಗೋ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಜ್ಞಾಪನ ಪತ್ರವನ್ನು ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ ದಿನಚರಿಗಳ ನಿರ್ವಹಣೆ ಕುರಿತು ಈಗಾಗಲೇ ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಲಭ್ಯಗೊಳಿಸಬೇಕಾಗಿರುವುದರಿಂದ ಈಗಾಗಲೇ ಬ್ಲ್ಯಾಕ್ ಹಂತಕ್ಕೆ ಸರಬರಾಜು ಆಗಿರುವ ಎಲ್ಲಾ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ ದಿನಚರಿಗಳನ್ನು ಆಯಾ ಶಾಲಾ ಬೇಡಿಕೆಗೆ ಅನುಗುಣವಾಗಿ ದಿನಾಂಕ:13.05.2024 ರಿಂದ ಆಯಾ ಶಾಲೆಗಳಿಗೆ ಸಾಗಾಣಿಕೆ ಮಾಡಿ ನಿಯಮಾನುಸಾರ ವಿತರಿಸಲು ಕ್ರಮವಹಿಸಲು ತಿಳಿಸಿದೆ. ಮುಂದುವರೆದು, ಮಾರಾಟ ಪಠ್ಯಪುಸ್ತಕಗಳನ್ನು ಆಯಾ ಶಾಲೆಗಳ ಬೇಡಿಕೆಯನ್ವಯ ಶೇ.10 ರಷ್ಟು ಮುಂಗಡ ಹಣ…
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಆರೋಪಿಯಾಗಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿ, ದುಬೈ ಬಳಿಕ ಈಗ ಮತ್ತೊಂದು ದೇಶಕ್ಕೆ ಹಾರಿರೋದಾಗಿ ಹೇಳಲಾಗುತ್ತಿದೆ. ತಮ್ಮ ವಿರುದ್ಧದ ಅಶ್ಲೀಲ ವೀಡಿಯೋ ವೈರಲ್ ಆಗುತ್ತಿದ್ದಂತೆ ಜರ್ಮನಿಗೆ ಸಂಸದ ಪ್ರಜ್ವಲ್ ರೇವಣ್ಣ ತೆರಳಿದ್ದರು. ಆ ನಂತ್ರ ದುಬೈಗೆ ಹಾರಿದ್ದರು. ಈಗ ಮತ್ತೊಂದು ದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಅವರು ಹಂಗೇರಿಯದ ಬುಡಾಪೆಸ್ಟ್ ಗೆ ತೆರಳಿ ತಂಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಅಂದಹಾಗೇ ಈ ಎಲ್ಲಾ ಮಾಹಿತಿ ಪ್ರಜ್ವಲ್ ರೇವಣ್ಣ ಕುರಿತು ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳಿಗೆ ಅವರ ಪಾಸ್ ಪೋರ್ಟ್ ಎಂಟ್ರಿ ಮಾಹಿತಿಯ ಮೇರೆಗೆ ಸುಳಿವು ಸಿಕ್ಕಿರೋದಾಗಿ ಹೇಳಲಾಗುತ್ತಿದೆ. ಪಾಸ್ ಪೋರ್ಟ್ ನಲ್ಲಿ ದಾಖಲಾಗಿರುವಂತ ಎಂಟ್ರಿಯ ಆಧಾರದ ಮೇಲೆ ಅವರೀಗ ಜರ್ಮನಿಯ ಬಳಿಕ ಹಂಗೇರಿಯಾದ ಬುಡಾಪೆಸ್ಟ್ ನಲ್ಲಿ ತಂಗಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧದ ಕಿಡ್ನ್ಯಾಪ್ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸುತ್ತಿದೆ. ಹೆಚ್ ಡಿ…